Connect with us

LATEST NEWS

ನನ್ನ ಮಗಳು ಹಣಕ್ಕೆ ಆಸೆ ಪಟ್ಟವಳಲ್ಲ- ಚೈತ್ರಾ ತಾಯಿ ಪ್ರತಿಕ್ರಿಯೆ

Published

on

ಬಹುಕೋಟಿ ವಂಚಕಿ ಚೈತ್ರ ಕುಂದಾಪುರ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಇನ್ನೂ ಹಲವು ನಿಗೂಢ ಸತ್ಯಗಳನ್ನು ಹೊರತೆಗೆಯಲು ಪೊಲೀಸರು ಯತ್ನ ಮುಂದುವರಿಸಿದ್ದಾರೆ.

ಉಡುಪಿ: ಬಹುಕೋಟಿ ವಂಚಕಿ ಚೈತ್ರ ಕುಂದಾಪುರ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಇನ್ನೂ ಹಲವು ನಿಗೂಢ ಸತ್ಯಗಳನ್ನು ಹೊರತೆಗೆಯಲು ಪೊಲೀಸರು ಯತ್ನ ಮುಂದುವರಿಸಿದ್ದಾರೆ.

ಈ ನಡುವೆ ಚೈತ್ರಾ ಕುಂದಾಪುರ ಅವರ ತಾಯಿ ರೋಹಿಣಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಗಳನ್ನ ವಶಕ್ಕೆ ಪಡೆದ ದಿನವೇ ಪೊಲೀಸರು ಕರೆ ಮಾಡಿದ್ದಾರೆ.

ಆಕೆಯನ್ನು ವಶಕ್ಕೆ ಪಡೆಯುವ ಮಾಹಿತಿ ಜೊತೆಗೆ ಮಗಳೊಂದಿಗೆ ಫೋನ್ ನಲ್ಲೇ ಮಾತನಾಡಿಸಿದ್ದಾರೆ.

ಫೋನ್ ನಲ್ಲಿ ಮಾತನಾಡುತ್ತಾ ಧೈರ್ಯ ತೆಗೆದುಕೊಳ್ಳುವಂತೆ ಹೇಳಿದ್ದಳು.

ನಾನು ಎಲ್ಲಾ ನೋಡಿಕೊಳ್ಳುತ್ತೇನೆ ಎಂದು ನನಗೆ ಧೈರ್ಯ ಹೇಳಿದ್ದಾಳೆ ಎಂದರು.

ನನಗೆ ಮಗಳ ಸ್ಥಿತಿ ಕಂಡು ಬಹಳ ಬೇಸರ ಆಗುತ್ತೆ.

ನನ್ನ ಮಗಳನ್ನ ಬಳಸಿಕೊಂಡು ಅವಳನ್ನ ಈ ಸ್ಥಿತಿಗೆ ತರಲಾಗಿದೆ.

ತನ್ನ ಕೈಯಿಂದ ಹಣ ಹೋದರೂ ಪರವಾಗಿಲ್ಲ ಬೇರೊಬ್ಬರ ಹಣಕ್ಕೆ ಆಕೆ ಎಂದೂ ಆಸೆ ಪಟ್ಟವಳಲ್ಲ.

ಏನೂ ಮಾಡದಿರುವ ತಪ್ಪಿಗೆ ನನ್ನ ಮಗಳು ಗುರಿಯಾಗಿದ್ದಾಳೆ.

ನಮಗೆ ಯಾವ ಚಿಂತೆಯೂ ಆಕೆ ಕೊಡಲ್ಲ ಅವಳೇ ಎಲ್ಲ ನಿಭಾಯಿಸುತ್ತಿದ್ದಳು ಎಂದು ತಾಯಿ ರೋಹಿಣಿ ಹೇಳಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಖಾವಿ ವೇಷದಲ್ಲಿ ಮನೆಗೆ ಬರ್ತಾರೆ, ಭಸ್ಮ ಹಾಕ್ತಾರೆ-ಇಂಥವರನ್ನು ಕಂಡ್ರೆ ಹುಷಾರಾಗಿರಿ..!

Published

on

ಕಾರ್ಕಳ: ಸ್ವಾಮೀಜಿಗಳ ವೇಷದಲ್ಲಿ ಕೆಲವರು ವಾಹನವೊಂದರಲ್ಲಿ ಮನೆ ಮನೆಗೆ ತೆರಳುತ್ತಿರುವ ಕುರಿತಂತೆ ಫೋಟೊ ಮತ್ತು ಎಚ್ಚರಿಕೆಯ ಸಂದೇಶ ನೀಡುವ ಆಡಿಯೋವೊಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಈ  ಸ್ವಾಮೀಜಿ ವೇಷಧಾರಿಗಳು ಕಾರ್ಕಳದ ಮಿಯ್ಯಾರ್ ಪರಿಸರದಲ್ಲಿ ರಿಕ್ಷಾ ಟೆಂಪೊ ಮಾದರಿಯ ವಾಹನದಲ್ಲಿ ಪ್ರಯಾಣಿಸುತ್ತಾ ಮನೆ ಮನೆಗೆ ತೆರಳುತ್ತಿದ್ದಾರೆ.

ಮನೆಯೊಂದಕ್ಕೆ ತೆರಳಿ ಅಲ್ಲಿದ್ದ ಮಹಿಳೆಗೆ ಭಸ್ಮ ಹಾಕಿರುವುದು ಮತ್ತು ಪರಿಸರದ ಜನರು ಬಂದು ಈ ವೇಷಧಾರಿಗಳನ್ನು ಅಲ್ಲಿಂದ ಓಡಿಸಿದ್ದಾರೆ ಎಂದು ವ್ಯಕ್ತಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಇಂತಹ ಕಪಟ  ಸ್ವಾಮೀಜಿ ವೇಷಧಾರಿಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಬೇಕೆಂಬ ಎಚ್ಚರಿಕೆಯ ಸಂದೇಶವನ್ನು ಆಡಿಯೋದಲ್ಲಿ ಉಲ್ಲೇಖಿಸಲಾಗಿದೆ.

ಇವರು ಎಂಎಚ್‌ ರಿಜಿಸ್ಟ್ರೇಷನ್‌ ಹೊಂದಿರುವ ವಾಹನದಲ್ಲಿ  ಆಗಮಿಸಿದ್ದು ಉತ್ತರ ಭಾರತದಿಂದ ಬಂದ ಕಪಟರಾಗಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುವ ಇಂತಹ ಸ್ವಾಮೀಜಿಗಳ ಬಗ್ಗೆ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.

 

Continue Reading

DAKSHINA KANNADA

ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ, ಸಾಂಸ್ಕೃತಿಕ ವೈಭವ

Published

on

ಮಂಗಳೂರು: ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಸ ಕ್ರೀಡೆ, ನೃತ್ಯ, ಸಂಗೀತ ಇವೆಲ್ಲವುಗಳನ್ನೊಳಗೊಂಡ ಹೊನಲು ಬೆಳಕಿನ ಕ್ರೀಡೋತ್ಸವ ಡಿ7ರ ಭಾನುವಾರದದಂದು ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹೇಳಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಬಾರಿಯ ಕ್ರೀಡೋತ್ಸವ ಸಮಾರಂಭವನ್ನು ಮೈಸೂರಿನ ಸಂಸದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಲಿದ್ದಾರೆ. ಸಾಹಸ ಕ್ರೀಡೆ, ಸಾಂಸ್ಕೃತಿಕ ಪ್ರದರ್ಶನದಲ್ಲಿ ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಮೀರ್ ಪುರಾಣಿಕ್ ಮಾತನಾಡಿ 4ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಈ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಕಂಬ, ಫೈರ್ ಜಂಪ್, ಯೋಗಾಸನ ಸೇರಿದಂತೆ ಪಿರಮಿಡ್ ರಚನೆಯ ಕ್ರೀಡಾ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: WATCH : ಉಡುಪಿ: ಶಾಲೆಯ ರೋಡ್ ಸರಿ ಇಲ್ಲ…ನಗರಸಭೆ ಆಯುಕ್ತರಿಗೆ ದೂರು ಕೊಟ್ಟ ಪುಟ್ಟ ವಿದ್ಯಾರ್ಥಿ

ಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲ್ ಶೋಭಾಯಾತ್ರೆಯಲ್ಲಿ ಒಡೆಯರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಈ ಕ್ರೀಡೋತ್ಸವಕ್ಕೆ ಮಕ್ಕಳನ್ನು ತಯಾರು ಮಾಡಲು ಯಾವುದೇ ತರಬೇತುದಾರರಿಲ್ಲ. ಶಾರದಾ ಕುಟುಂಬ ಜೊತೆಯಾಗಿ ಸೇರಿಕೊಂಡೇ ಮಕ್ಕಳನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿ ಸುಧಾಕರ್ ಪೇಜಾವರ, ಶಾರದಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

Continue Reading

LATEST NEWS

ತನ್ನ ಮೂರು ವರ್ಷದ ಮಗು ಸೇರಿ ನಾಲ್ಕು ಮಕ್ಕಳನ್ನು ಹತ್ಯೆ ಮಾಡಿದ ಮಹಿಳೆ; ಕಾರಣ ಕೇಳಿದ್ರೆ ಶಾಕ್ ಆಗ್ತಿರಾ!

Published

on

ಪಾಣಿಪತ್: ಹರಿಯಾಣದ ಪಾಣಿಪತ್‌ನಲ್ಲಿ ನಡೆದ ಸರಣಿ ಕೊಲೆ ಪ್ರಕರಣವೂ ಜನರನ್ನು ಬೆಚ್ಚಿಬೀಳಿಸಿದೆ. ಕೆಟ್ಟ ಮಕ್ಕಳಿದ್ದರೂ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎಂಬ ಮಾತನ್ನು ಈ ಘಟನೆ ಸುಳ್ಳು ಮಾಡಿದೆ. ಇಲ್ಲೊಬ್ಬ ತಾಯಿ ತನ್ನ ಸ್ವಂತ ಮಗುವನ್ನು ಸೇರಿ ಸಂಬಂಧಿಕರ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.


ನೌಲ್ತಾ ಗ್ರಾಮದ ಪೂನಂ(32) ಕೃತ್ಯ ಎಸಗಿದ ತಾಯಿ.

ಪೂನಂ ಕಳೆದ ಎರಡು ವರ್ಷಗಳಲ್ಲಿ, ತನ್ನ ಮೂರು ವರ್ಷದ ಮಗು ಸೇರಿದಂತೆ ನಾಲ್ಕು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮದುವೆ ಮನೆಯಲ್ಲಿ ರಾದ್ಧಾಂತ ಮಾಡಿದ ವರನ ಕುಟುಂಬ; ಕಾರಣ ಏನು ಗೊತ್ತಾ?

ನಾಲ್ಕು ಮಕ್ಕಳ ಕೊಲೆ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆಯ ರಹಸ್ಯ ಬಯಲಾಗಿದ್ದು, ಮಕ್ಕಳ ಸೌಂದರ್ಯದ ಬಗ್ಗೆ ಆಕೆಗಿದ್ದ ಅತಿಯಾದ ಅಸೂಯೆಯೇ ಈ ಕೊಲೆಗಳಿಗೆ ಕಾರಣ ಎಂದು ತಿಳಿದುಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page