Connect with us

LATEST NEWS

ಮೈಸೂರು: ಬಸ್, ಕಾರು ಡಿಕ್ಕಿ- ಗ್ರಾ.ಪಂ. ಸದಸ್ಯ ಮೃತ್ಯು..!

Published

on

ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.

ಮೈಸೂರು: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.

ಕಾರಿನಲ್ಲಿದ್ದ ಭಾಸ್ಕರ್ ಮೃತ ರ್ದುದೈವಿ.

ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತರಾಗಿ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದರು.

ಈ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಬಸ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾಸ್ಕರ್ ಅವರ ಪತ್ನಿ, ತಾಯಿ ಮಗನಿಗೆ ತೀವ್ರಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಅಪಘಾತದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.

ಸ್ಥಳಕ್ಕೆ ಹುಣಸೂರು ಬಸ್ ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಪ್ರಕರಣ ಬಿಳಿಕೆರೆ ಠಾಣೆಯಲ್ಲಿ ದಾಖಲಾಗಿದೆ.

DAKSHINA KANNADA

ಗುಂಡ್ಯದಲ್ಲಿ ಮತ್ತೆ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಅಪಘಾತ

Published

on

ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಜಾವ ನಡೆದಿದೆ.

ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಆತಂಕಕಾರಿ ಸಂಗತಿಯೆಂದರೆ ಎರಡು ದಿನಗಳ ಹಿಂದೆಯಷ್ಟೇ (ಮೇ.18) ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಎರಡೂ ವಾಹನಗಳ ಚಾಲಕರು ಸೇರಿ ನಾಲ್ವರು ವ್ಯಕ್ತಿಗಳು ಗಾಯಗೊಂಡ ಘಟನೆ ನಡೆದಿತ್ತು. ಇದೀಗ ಅದೇ ಜಾಗದಲ್ಲಿ ಮತ್ತೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆಯ ಆರ್ಭಟ; ಮಂಗಳೂರು ನಿವಾಸಿ ಸಹಿತ ಇಬ್ಬರ ಸಾವು

ಈ 2 ಅಪಘಾತಗಳು ಸಾರ್ವಜನಿಕರಲ್ಲಿ ತೀವ್ರ ಕಳವಳ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವುದರ ಜೊತೆಗೆ, ಚಾಲಕರಿಗೆ ಸೂಕ್ತ ತರಬೇತಿ ಮತ್ತು ಎಚ್ಚರಿಕೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Continue Reading

LATEST NEWS

ಉತ್ತರಪ್ರದೇಶದಲ್ಲಿ ಎರಡು ರೈಲುಗಳ  ಹಳಿ ತಪ್ಪಿಸುವ ಯತ್ನ

Published

on

ಮಂಗಳೂರು/ಹರ್ದೋಗ್ : ಎರಡು ರೈಲುಗಳ  ಹಳಿತಪ್ಪಿಸುವ ಯತ್ನ ಉತ್ತರ ಪ್ರದೇಶದ ಹರ್ದೋಮ್ ಜಿಲ್ಲೆಯಲ್ಲಿ ನಡೆದಿದೆ. ಲೋಕೋ ಪೈಲಟ್‌ಗಳ ಸಮಯಪ್ರಜ್ಞೆಯಿಂದಾಗಿ ಹಳಿ ತಪ್ಪಿಸುವ ಯತ್ನ ವಿಫಲಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸೋಮವಾರ(ಮೇ 19) ಸಂಜೆ, ದಲೇಲ್‌ನಗರ ಮತ್ತು ಉಮರ್ತಾಲಿ ನಿಲ್ದಾಣಗಳ ನಡುವಿನ ಕಿ.ಮೀ ಮಾರ್ಕರ್ 1129/14 ಬಳಿ ದು*ಷ್ಕರ್ಮಿಗಳು ಕೃ*ತ್ಯ ಎಸಗಿದ್ದಾರೆ. ಮರದ ದಿಮ್ಮಿಗಳನ್ನು ಅರ್ಥಿಂಗ್ ವೈರ್ ಬಳಸಿ ಹಳಿಗೆ ಕಿಡಿಗೇಡಿಗಳು ಕಟ್ಟಿದ್ದರು ಎಂದು ತಿಳಿದುಬಂದಿದೆ.

ಲಖನೌ ಕಡೆಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ (20504) ನ ಲೋಕೋ ಪೈಲಟ್ ಅಡಚಣೆಯನ್ನು ಗಮನಿಸಿ ತುರ್ತು ಬ್ರೇಕ್ ಹಾಕಿದರು. ಮರದ ದಿಮ್ಮಿ ತೆರವು ಮಾಡಿ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ : ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

ರಾಜಧಾನಿ ಎಕ್ಸ್‌ಪ್ರೆಸ್ ಬಳಿಕ ಕಠೋಡಮ್ ಎಕ್ಸ್‌ಪ್ರೆಸ್ (15044) ನ  ಹಳಿತಪ್ಪಿಸಲು ಎರಡನೇ ಪ್ರಯತ್ನ ಮಾಡಲಾಗಿದೆ. ಲೋಕೊ ಪೈಲಟ್‌ ಸಮಯಪ್ರಜ್ಞೆಯಿಂದ ದುರಂ*ತ ತಪ್ಪಿದೆ.  ರೈಲ್ವೆ ಪೊಲೀಸ್, ರೈಲ್ವೆ ರಕ್ಷಣಾ ಪಡೆ ಮತ್ತು ಸ್ಥಳೀಯ ಪೊಲೀಸರ ತಂಡಗಳು  ದು*ಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಉಳ್ಳಾಲ: ತಾನು ಕಲಿತ ಶಾಲೆಯಲ್ಲೇ ನೇಣುಹಾಕಿಕೊಂಡು ಯುವಕ ಆತ್ಮಹ*ತ್ಯೆ

Published

on

ಉಳ್ಳಾಲ: ಯುವಕನೋರ್ವ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾದ ಘಟನೆ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೇ 19ರಂದು ನಡೆದಿದೆ.

ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.

ವೃತ್ತಿಯಲ್ಲಿ ಪೇಂಟರ್‌ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕಿಕೊಂಡು ಹೋದಾಗ ಮನೆಯ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು.

ಬಳಿಕ ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹ*ತ್ಯೆ

ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತನ್ನ ಕಿಡ್ನಿ ದಾನ ಮಾಡುವಂತೆ ಹಾಗೂ ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸದಂತೆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಘಟನೆ ಸಂಬಂಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page