Connect with us

LATEST NEWS

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ದೇಶದ ಗೌರವಕ್ಕೆ ಧಕ್ಕೆ: ರಮಾನಾಥ ರೈ

Published

on

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳೂರು: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು.

ಜಾತ್ಯಾತೀತ ಪಕ್ಷಗಳು ಮತ್ತು ಸಂಘಟನೆಗಳ ಜಂಟಿ ವೇದಿಕೆಯ ಅಧ್ಯಕ್ಷ ಮಾಜಿ ಸಚಿವ ಬಿ ರಮಾನಾಥ ರೈ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ, ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗ ದ್ವೇಷದ ಗಲಭೆಯಿಂದ ದೇಶದ ಗೌರವಕ್ಕೆ ಧಕ್ಕೆಯಾಗಿದೆ.

ಮತೀಯ ದ್ವೇಷವನ್ನು ಜನರ ತಲೆಗೆ ವ್ಯವಸ್ಥಿತವಾಗಿ ತುಂಬಿಸಿದರ ಪರಿಣಾಮ ಇಂದು ದೇಶದಲ್ಲಿ ಕಾಣಿಸುತ್ತಿದೆ.

ಗುಜರಾತ್ ನಲ್ಲಿ ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೋದಿ ಸರಕಾರ ನಿರ್ಲಜ್ಜವಾಗಿ ನಡೆದುಕೊಂಡಿತ್ತು.

ಈಗ ಮಣಿಪುರದಲ್ಲಿ ಅದು ಮರುಕಳಿಸಿದೆ. ಮಣಿಪುರದ ಜನತೆಗೆ ನ್ಯಾಯ ಒದಗಿಸಲು, ಶಾಂತಿ ನೆಲೆಗೊಳಿಸಲು ಎಲ್ಲರೂ ಒಂದಾಗಿ ನಿಲ್ಲಬೇಕಿದೆ.

ಕರ್ನಾಟಕದಲ್ಲಿ ಬಿಜೆಪಿ ಸರಕಾರವನ್ನು ಸೋಲಿಸಿದಂತೆ ಲೋಕಸಭೆ ಚುನಾವಣೆಯಲ್ಲಿಯೂ ನರೇಂದ್ರ ಮೋದಿ ಸರಕಾರವನ್ನು ಸೋಲಿಸಿ ಸರಿಯಾದ ಪಾಠ ಕಲಿಸಬೇಕಿದೆ ಎಂದರು.

ಮದರ್ ಥೆರೆಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರಾಯ್ ಕ್ಯಾಸ್ಟಲಿನೋ ಮಾತನಾಡಿ, ಮಹಿಳೆಯರ ಬೆತ್ತಲೆ ಮೆರವಣಿಗೆಯಿಂದ ನಾವೆಲ್ಲರೂ ನಾಚಿ ತಲೆತಗ್ಗಿಸುವಂತಾಗಿದೆ.

ಗಲಭೆ ಶುರುವಾಗಿ ಎಪ್ಪತ್ತಾರು ದಿನಗಳಾದರೂ ಪ್ರಧಾನಿಗಳು ಬಾಯಿ ಬಿಚ್ಚಿರಲಿಲ್ಲ.

ಈಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಮೇಲೆ, ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಮೇಲೆ ಮೂವತ್ತು ಸೆಕೆಂಡ್ ನ ಪ್ರತಿಕ್ರಿಯೆ ನೀಡಿ ಮೊಸಳೆ ಕಣ್ಣೀರು ಸುರಿಸಿದ್ದಾರೆ.

ದೇಶದ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ರೈತ ಸಂಘದ ಸನ್ನಿ ಡಿಸೋಜ, ಕೆಥೋಲಿಕ್ ವುಮನ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಗ್ರೆಟ್ಟಾ ಪಿಂಟೊ, ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಪುರುಷೋತ್ತಮ ಚಿತ್ರಾಪುರ, ಕವಿತಾ ಸನಿಲ್, ಅಪ್ಪಿ,ಕವಿತಾ ವಾಸು, ಸಿಪಿಐಎಂ ಮುಖಂಡರಾದ ಕೆ ಯಾದವ ಶೆಟ್ಟಿ,ಸುಕುಮಾರ್, ಸಿಪಿಐ ನಾಯಕರಾದ ಸೀತಾರಾಮ ಬೇರಿಂಜಾ, ವಿ.ಕುಕ್ಯಾನ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ವಸಂತ ಆಚಾರಿ, ಜೆ.ಬಾಲಕೃಷ್ಣ ಶೆಟ್ಟಿ, ಯೋಗೀಶ್ ಜಪ್ಪಿನಮೋಗರು, ರೋಹಿದಾಸ್ ತೊಕ್ಕೊಟ್ಟು, ತಿಮ್ಮಪ್ಪ ಕಾವೂರು, ಯುವಜನ ಮುಖಂಡರಾದ ಮನೋಜ್ ವಾಮಂಜೂರು ಮುಂತಾದವರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು.

LATEST NEWS

ಚೀನಾ: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 20 ಜನ ಸಾವು

Published

on

ಚೀನಾ: ರೆಸ್ಟೋರೆಂಟ್‌ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 20 ಮಂದಿ ಸಾವನ್ನಪ್ಪಿದ್ದು, 3 ಮಂದಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚೀನಾದ ಉತ್ತರ ನಗರ ಲೀಯಾವೊಯಾಂಗ್‌ನ ಚುನಿಯಾಂಗ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬೈರನ್ ವಾನ್ ಎನ್ನುವ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ 43 ಸೆಕೆಂಡುಗಳ ವಿಡಿಯೋದಲ್ಲಿ ಅಗ್ನಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮುತ್ತಿರುವುದನ್ನು ಕಾಣಬಹುದು.

ಅಗ್ನಿ ವ್ಯಾಪಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಜನರು ಕಾಲ್ಕಿತ್ತಿದ್ದಾರೆ. ಇನ್ನೂ ಕೆಲವರು ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿಯುವಲ್ಲಿ ನಿರತರಾಗಿದ್ದರು.

ಪ್ರಾಥಮಿಕ ಮೂಲಗಳ ಪ್ರಕಾರ ಮೊದಲು ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ರೆಸ್ಟೋರೆಂಟ್‌ಗೆ ವ್ಯಾಪಿಸಿದೆ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ.

Continue Reading

LATEST NEWS

ಅಮೆರಿಕದ ದೇಗುಲದಲ್ಲಿ ಪ್ರಧಾನಿ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಅಣ್ಣಾಮಲೈ

Published

on

ಮಂಗಳೂರು : ಅಮೆರಿಕದ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಗಿದೆ. ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಈ ಪೂಜೆ ನೆರವೇರಿಸಿದ್ದು, ಪ್ರಧಾನಿ ಹಾಗೂ ಸೈನ್ಯಕ್ಕೆ ಶಕ್ತಿ ತುಂಬುವಂತೆ ಕೃಷ್ಣನಲ್ಲಿ ಪ್ರಾರ್ಥಿಸಿದ್ದಾರೆ.

ಅಮೆರಿಕದ ಫೀನಿಕ್ಸ್ ಮಹಾನಗರದಲ್ಲಿ ಇರುವ ಕೃಷ್ಣ ಮಂದಿರಲ್ಲಿ ಈ ಪೂಜೆ ಸಲ್ಲಿಸಿದ್ದಾರೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ, ಉಡುಪಿ ಪುತ್ತಿಗೆ ಮಠಕ್ಕೆ ಸೇರಿದ ಕೃಷ್ಣ ಮಂದಿರದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

 

 

Continue Reading

LATEST NEWS

ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

Published

on

ಮಂಗಳೂರು/ಮಂಜೇಶ್ವರ : ಹಿಂದೂ ಮುಸ್ಲಿಂ ಗಲಾಟೆ ಆದ್ರೆ ಹಿಂದೂಗಳು ಓಡುವ ಕಾಲ ಒಂದು ಇತ್ತು. ಈಗ ಕೈ ತೋರಿಸಿದ್ರೆ ಮುಸ್ಲಿಮರು ಓಡಿ ಹೋಗ್ತಾರೆ. ಹೀಗಾಗಿ ನಿಮ್ಮ ಮನೆಯಲ್ಲಿ ಒಂದು ತಲ್ವಾರ್ ಯಾವಾಗಲೂ ಇಟ್ಟುಕೊಳ್ಳಿ ಮತ್ತು ಮಹಿಳೆಯರು ಚೂರಿ ಇಟ್ಟುಕೊಳ್ಳಿ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪೆಹಲ್ಗಾಮ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಅಲ್ಲಿ ಉಗ್ರರಿಗೆ ತಲ್ವಾರ್ ತೋರಿಸಿದ್ರೂ ಸಾಕಿತ್ತು ಓಡಿ ಹೋಗ್ತಾ ಇದ್ರು. ಮಹಿಳೆಯರು ತಮ್ಮ ಬ್ಯಾಗಿನಲ್ಲಿ ಸ್ನೋ ಪೌಡರ್ ಬಾಚಣಿಗೆ ಜೊತೆಯಲ್ಲಿ ಆರು ಇಂಚಿನ ಚೂರಿ ಇಟ್ಟುಕೊಳ್ಳಿ, ಅದಕ್ಕೆ ಲೈಸೆನ್ಸ್ ಬೇಡ.

ಇದನ್ನೂ ಓದಿ : ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಮೈಸೂರು ಉದ್ಯಮಿ

ಸಂಜೆ ಆರು, ಏಳು ಗಂಟೆ ಬಳಿಕ ನಿಮ್ಮ ಮೇಲೆ ಆಕ್ರಮಣ ಮಾಡುತ್ತಾರೆ. ಆವಾಗ ಕೈ ಮುಗಿದು ಬೇಡಿಕೊಳ್ಳದೆ ಚೂರಿ ತೆಗೆದು ತೋರಿಸಿ ಎಂದು ಪ್ರಭಾಕರ್ ಭಟ್ ಕರೆ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page