Connect with us

LATEST NEWS

 ಕೃಷ್ಣಾನುಗ್ರಹದಿಂದ ಪ್ರಜ್ವಲಿಸುತ್ತಿರುವ ಎಳೆ ಕಂದಮ್ಮ ಪ್ರಜ್ವಲಾಳಿಗೆ  ನಾಮಕರಣದ ಸಂಭ್ರಮ 

Published

on

ಕೃಷ್ಣಾನುಗ್ರಹದಿಂದ ಪ್ರಜ್ವಲಿಸುತ್ತಿರುವ ಎಳೆ ಕಂದಮ್ಮ ಪ್ರಜ್ವಲಾಳಿಗೆ  ನಾಮಕರಣದ ಸಂಭ್ರಮ 

ಉಡುಪಿ: ಎಲ್ಲ ಮಕ್ಕಳಿಗೂ ನಾಮಕರಣ ಸಂಭ್ರಮ ಸಾಮಾನ್ಯ ಆದ್ರೆ ಈ ಪುಟಾಣಿ ಕಂದಮ್ಮನಿಗೆ ನಾಮಕರಣ ಸಂಭ್ರಮ ವಿಶೇಷತೆಯೇ ಸರಿ ಯಾಕಂತೀರಾ… ಈ ಮುದ್ದು ಕಂದಮ್ಮನಿಗೆ ಹೆತ್ತವರ ಆಸರೆಯಿಲ್ಲ.

ಆಸರೆಯಿಲ್ಲ ಅನ್ನೋದು ಒಂದೆಡೆಯಾದರೆ ಹೆತ್ತಬ್ಬೆ ಹೆತ್ತು ಕಸದ ತೊಟ್ಬಿಗೆ ಬಿಸಾಕಿದ  ಹೃದಯ ವಿದ್ರಾವಕ ಘಟನೆ  ಮೂರು ತಿಂಗಳ ಹಿಂದೆ ನಡೆದಿತ್ತು.

ಈ ಮುದ್ದಾದ ಪುಟಾಣಿ ಕಂದಮ್ಮ   ಕಸದ ತೊಟ್ಟಿಯಲ್ಲಿ ಹಸಿವಿನಿಂದ ಅಮ್ಮನ ಎದೆಹಾಲಿಗಾಗಿ ರೋಧಿಸುತ್ತಿತ್ತು. ಬೆಳಗ್ಗೆ ಕಸ ಗುಡಿಸುವಾತ ಬಂದಾಗ ಮಗುವಿನ ಅಳು ಕೇಳಿ ನೋಡಿ ದಂಗಾಗಿದ್ದ!  ಬಳಿಕ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಇವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.  ಆ ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಅಲ್ಲಿಗೆ ಬಂದು  ಮಗುವನ್ನು ಎತ್ತಿ  ಆಸ್ಪತ್ರೆಯಲ್ಲಿ   ಪ್ರಥಮ ಚಿಕಿತ್ಸೆ ಕೊಡಿಸಿ, ಉಡುಪಿ ಸಮೀಪದಲ್ಲೇ ಇರುವ ಕೃಷ್ಣಾನುಗ್ರಹ ದತ್ತು ಸ್ವೀಕಾರ ಆಶ್ರಮಕ್ಕೆ ದಾಖಲಿಸಿದರು. ಅಲ್ಲಿ ಆ ಮಗು ಉಳಿದ ಮಕ್ಕಳೊಂದಿಗೆ ಮುದ್ದಾಗಿ ಬೆಳೆಯುತ್ತಿದೆ. ಇದೀಗ  ಈ ಎಳೆ ಕಂದಮ್ಮನಿಗೆ  ಮೂರು ತಿಂಗಳಾಗಿದೆ. ಇದೀಗ ಈ ಮಗುವಿಗೆ ನಾಮಕರಣ ಶಾಸ್ತ್ರ ಹಾಗೂ ತೊಟ್ಟಿಲು ಶಾಸ್ತ್ರವನ್ನು   ಸ್ಥಳೀಯರು ಸೇರಿದಂತೆ ವಿವಿಧ ಸಹಕಾರ ಸಂಸ್ಥೆಗಳ  ಸಹಕಾರದಿಂದ ಅದ್ದೂರಿಯಾಗಿ ನೆರವೇರಿಸಲಾಯಿತು.

ಇದೀಗ ಮುದ್ದು ಮುದ್ದಾಗಿರುವ ಈ ಹಸುಗೂಸು ಸೂರ್ಯನ ಕಿರಣಗಳಂತೆ ಪ್ರಜ್ವಲಿಸಲಿ ಎಂದು ಹಾರೈಸಿ ಪ್ರಜ್ವಲಾ ಎಂದು ನಾಮಕರಣ ಮಾಡಿದ್ದಾರೆ. ತನ್ನವರಿಗೆ ಬೇಡವಾದ್ರೂ ಇದೀಗ ಕೃಷ್ಣನ ಅನುಗ್ರಹದಂತೆ ಅನಾಥಾಶ್ರಮದಲ್ಲಿ ಬೆಳೆಯುತ್ತಿರುವ ಈ ಪುಟ್ಟ ಕಂದಮ್ಮನ ಬಾಳು ಬಂಗಾರವಾಗಲಿ, ವಿದ್ಯಾವಂತಳಾಗಿ ಪ್ರಜ್ವಲಿಸಲಿ ಅನ್ನೋದೆ ಎಲ್ಲರ ಹಾರೈಕೆ.

bangalore

ಬೆಂಗಳೂರಲ್ಲಿ ಜ್ಯೂ. ಎನ್‌ಟಿಆರ್ ಕ್ರೇಜ್: ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರಿಂದ ಲಾಠಿಚಾರ್ಜ್‌

Published

on

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕಿಮ್ಸ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಜ್ಯೂ. ಎನ್‌ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.


ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಲು ಅಭಿಮಾನಿಗಳು ಮುಗಿಬಿದ್ದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ನಿಯಂತ್ರಣಕ್ಕೆ ಬರದಿದ್ದಾಗ, ಲಘು ಲಾಠಿ ಪ್ರಹಾರ ಮಾಡಿ ಜನರನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಇದನ್ನೂ ಓದಿ: ಒಂದೇ ದಿನ 3 ಕಡೆ ಸರಗಳ್ಳತನ ಮಾಡಿದ್ದ ಖದೀಮರ ಬಂಧನ

ನೂಕುನುಗ್ಗಲಿದ್ದರಿಂದ ಎಸ್ಕಲೇಟರ್ ಮುರಿದು ಹೋಗಿದೆ. ಈ ನಡುವೆಯೂ ಜ್ಯೂ. ಎನ್‌ಟಿಆರ್ ಅವರು ಅಭಿಮಾನಿಗಳಿಗೆ ಕೈಬೀಸಿ ವಂದಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Continue Reading

LATEST NEWS

ಒಂದೇ ದಿನ 3 ಕಡೆ ಸರಗಳ್ಳತನ ಮಾಡಿದ್ದ ಖದೀಮರ ಬಂಧನ

Published

on

ರಾಮನಗರ: ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಎಸಗಿದ್ದ ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಪ್ರಭು(39), ವಸಂತಿ(37) ಮತ್ತು ಜ್ಯೋತಿ(32) ಬಂಧಿತ ಆರೋಪಿಗಳು.


ಮಾ.3ರಂದು ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಮೂವರು ಕಾರಿನಲ್ಲಿ ಬಂದು ವಿಳಾಸ ಕೇಳುತ್ತಾ ಚೈನ್ ಕದ್ದು ಎಸ್ಕೇಪ್ ಆಗಿದ್ದರು. ಮುನೇಶ್ವರ ಸ್ವಾಮಿ ರಥೋತ್ಸವಕ್ಕೆ ಹೋಗ್ತಿದ್ದ ಭಕ್ತರ ಬಳಿ, ದೇವಸ್ಥಾನಕ್ಕೆ ಹೋಗುವ ದಾರಿ ಕೇಳಿ ಅವರ ಸರಗಳನ್ನೇ ಕದ್ದು ಪರಾರಿಯಾಗಿದ್ದರು.

ಈ ಕುರಿತು ಸಾರ್ವಜನಿಕರು ನೀಡಿದ ದೂರಿನ ಅನ್ವಯ ಕಾರ್ಯಚರಣೆ ನಡೆಸಿದ ಪೊಲೀಸರು ಕೇವಲ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮನೆಯಲ್ಲೇ ಹರಿಯಿತು ರಕ್ತದೋಕುಳಿ: ಅವಳಿ ಸಹೋದರಿಯ ಮೇಲೆ 40ಕ್ಕೂ ಹೆಚ್ಚು ಬಾರಿ ಇರಿದ ಕಿರಾತಕ ಸಹೋದರ!

ಬಂಧಿತರಿಂದ 112 ಗ್ರಾಂ ತೂಕದ ಮೂರು ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಒಂದು ವ್ಯಾಗನಾರ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಈ ಗ್ಯಾಂಗ್‌ ಒಟ್ಟು 7 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿತ್ತು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

LATEST NEWS

ಮನೆಯಲ್ಲೇ ಹರಿಯಿತು ರಕ್ತದೋಕುಳಿ: ಅವಳಿ ಸಹೋದರಿಯ ಮೇಲೆ 40ಕ್ಕೂ ಹೆಚ್ಚು ಬಾರಿ ಇರಿದ ಕಿರಾತಕ ಸಹೋದರ!

Published

on

ಮೊರಾದಾಬಾದ್: ಬ್ರೇಕಪ್ ಬಳಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಅವಳಿ ಸಹೋದರಿಯರಿಗೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.


ಮೊರಾದಾಬಾದ್‌ನ ಮಜೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ಧಿ ವಿಹಾರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹಾರ್ದಿಕ್, ತನ್ನ ಅವಳಿ ಸಹೋದರಿ ಹಿಮಶಿಖಾಳನ್ನು 40ಕ್ಕೂ ಹೆಚ್ಚು ಬಾರಿ ಇರಿದು ಹತ್ಯೆ ಮಾಡಿದ್ದಾನೆ ಇಬ್ಬರೂ ಗುರುಗ್ರಾಮದಲ್ಲಿ ಕೆಲಸ ಮಾಡುತ್ತಿದ್ದು, ಹೋಳಿ ಆಚರಿಸಲು ಮನೆಗೆ ಬಂದಿದ್ದರು.

ಇತ್ತೀಚೆಗೆ ಹಾರ್ದಿಕ್ ತನ್ನ ಗೆಳತಿಯೊಂದಿಗೆ ಬ್ರೇಕ್ಅಪ್ ಮಾಡಿಕೊಂಡಿದ್ದನು. ತನ್ನ ಪ್ರೀತಿ ವಿಫಲವಾಗಲು ತನ್ನ ತಾಯಿ ಮತ್ತು ಸಹೋದರಿಯೇ ಕಾರಣ ಎಂದು ಆತ ನಂಬಿದ್ದನು. ಈ ದ್ವೇಷ ಹಾಗೂ ಬ್ರೇಕ್ಅಪ್‌ನಿಂದ ಉಂಟಾದ ಖಿನ್ನತೆಯಿಂದಾಗಿ ಆತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಮನೆಯ ಬೆಡ್‌ರೂಮ್‌ನಿಂದ ಅಡುಗೆ ಮನೆಯವರೆಗೆ ರಕ್ತದ ಕಲೆಗಳು ಹರಡಿಕೊಂಡಿದ್ದವು. ಹಾರ್ದಿಕ್ ತನ್ನ ತಾಯಿಯ ಮೇಲೆಯೂ ಮಾರಣಾಂತಿಕ ದಾಳಿ ಮಾಡಿದ್ದು, ತಾಯಿಯ ಕಿರುಚಾಟ ಕೇಳಿ ಪಕ್ಕದ ಮನೆಯವರು ಒಳಗೆ ಓಡಿ ಬಂದು ದೃಶ್ಯ ನೋಡಿ ದಿಗ್ಭ್ರಮೆಗೊಂಡರು.

ಇದನ್ನೂ ಓದಿ: ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್: ಲಿಂಗಸೂಗೂರು ನ್ಯಾಯಾಲಯದಿಂದ ಆರೋಪಿಗೆ ಜೀವಾವಧಿ ಶಿಕ್ಷೆ

ತಕ್ಷಣವೇ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹಿಮ್ಶಿಖಾ ದಾರಿ ಮಧ್ಯೆಯೇ ಮೃತಪಟ್ಟಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಶನಿವಾರದಂದು(ಮಾ.7) ಬಂಧಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page