Connect with us

LATEST NEWS

ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ: ಸುಳ್ಳು ವದಂತಿ ನಂಬಬೇಡಿ ಎಂದ ಸಚಿವ ಕೋಟ

Published

on

ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.


ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರನ್ನು ಈ ಕುರಿತು ಭೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ.

ಸಾರ್ವಜನಿಕರು ಸುಳ್ಳು ವದಂತಿಗಳನ್ನ ನಂಬಬಾರದು. ವಿರೋಧ ಪಕ್ಷಗಳು ಸಹ ಇಂತಹ ವದಂತಿ ಹರಡಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

DAKSHINA KANNADA

ಪುತ್ತೂರು: ರೈಲಿನಿಂದ ಜಾರಿ 25 ಅಡಿ ಆಳಕ್ಕೆ ಬಿದ್ದ ಯುವಕ

Published

on

ಪುತ್ತೂರು: ರೈಲಿನಿಂದ ಜಾರಿ ಯುವಕನೊಬ್ಬ 25 ಅಡಿ ಆಳಕ್ಕೆ ಬಿದ್ದು ಬಳಿಕ ಪವಾಡ ಸದೃಶವಾಗಿ ಬದುಕುಳಿದ ಘಟನೆ ಕಡಬದ ಸವಣೂರು ಎಂಬಲ್ಲಿ ನಡೆದಿದೆ.

ಉದಯ್ ಕುಮಾರ್ ರೈಲಿನಿಂದ ಬಿದ್ದ ಯುವಕ. ಈತ ಮಂಗಳೂರಿನಿಂದ ಬೆಂಗಳೂರು ಕಡೆಗೆ ರೈಲಿನಲ್ಲಿ ಹೊರಟಿದ್ದನು. ಆದರೆ ಬಾಗಿಲ ಬಳಿ ನಿಂತಿದ್ದರಿಂದ ಆಕಸ್ಮತ್‌ ಆಗಿ ರೈಲಿನಿಂದ 25 ಅಡಿ ಆಳಕ್ಕೆ ಜಾರಿ ಮೋರಿ ಬಳಿ ಬಿದ್ದಿದ್ದ. ರಾತ್ರಿ ವೇಳೆ ಈತ ಬಿದ್ದಿದ್ದರಿಂದ ಸಹ ಪ್ರಯಾಣಿಕರಿಗೆ ಮಾತ್ರ ತಿಳಿದಿತ್ತು.

ನಂತರ ರೈಲು ಮುಂದಿನ ನಿಲ್ದಾಣ ತಲುಪಿದಾಗ ರೈಲ್ವೇ ಮಾಸ್ಟರ್ಗೆ ವಿಷಯವನ್ನು ತಿಳಿಸಿದರು. ಆದರೆ ಯುವಕ ಎಲ್ಲಿ ಬಿದ್ದ ಎಂಬುದಾಗಿ ಯಾರಿಗೂ ತಿಳಿದಿರಲಿಲ್ಲ. ರಾತ್ರಿಯಾದ್ದರಿಂದ ಹುಡುಕಲು ಸಹ ಸಾಧ್ಯವಾಗಲಿಲ್ಲ.

ಆದರೆ ಮರುದಿನ ಬೆಳಗ್ಗೆ ಯುವಕ ಮೋರಿಯ ಬಳಿ ನರಳಾಡುವುದನ್ನು ಸ್ಥಳೀಯರು ಗಮನಿಸಿ ಕೂಡಲೇ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಮುಖ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಹೀಗೆ 15 ಗಂಟೆಯ ಬಳಿಕ ಈತ ಪತ್ತೆಯಾಗಿರುವುದು ವಿಶೇಷವೇ ಸರಿ.

Continue Reading

LATEST NEWS

ದೇಶದಲ್ಲಿ ಸಹಕಾರ ಟ್ಯಾಕ್ಸಿ ಸೇವೆ ಆರಂಭ: ಅಮಿತ್ ಶಾ ಘೋಷಣೆ

Published

on

ಮಂಗಳೂರು/ನವದೆಹಲಿ: ಓಲಾ ಮತ್ತು ಊಬರ್ ರೀತಿ ಸಹಕಾರಿ ಟ್ಯಾಕ್ಸಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ್ದಾರೆ.


ಈ ಹೊಸ ಸೇವೆಯು ಓಲಾ, ಊಬರ್ ರೀತಿಯಲ್ಲಿ ಕೆಲಸ ಮಾಡಲಿದ್ದು ಇದರ ಎಲ್ಲಾ ಬೆನಿಫಿಟ್‌ಗಳು ನೇರವಾಗಿ ಚಾಲಕರಿಗೆ ಸಿಗಲಿದೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಟ್ಯಾಕ್ಸಿ ಚಾಲಕರಿಗಾಗಿ ರಾಷ್ಟ್ರೀಯ ಮಟ್ಟದ ಸಹಕಾರಿ ಸಂಘಟನೆಯನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಓಲಾ ಮತ್ತು ಉಬರ್‌ ನಂತಹ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ಗಳ ಮಾದರಿಯನ್ನು ಅನುಸರಿಸಿ ಚಾಲಕರಿಗೆ ಉತ್ತಮ ಉದ್ಯೋಗ ಭದ್ರತೆ, ನ್ಯಾಯಯುತ ವೇತನ ಮತ್ತು ರಚನಾತ್ಮಕ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಈ ಉಪಕ್ರಮ ಹೊಂದಿದೆ.

ಜೊತೆಗೆ ಭಾರತದ ಮೊದಲ ಸಹಕಾರಿ ವಿಶ್ವವಿದ್ಯಾಲಯವನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಟ್ಯಾಕ್ಸಿ ಸೇವೆಯ ಲಾಭ ನೇರವಾಗಿ ಚಾಲಕರಿಗೆ ಹೋಗುತ್ತದೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸಹಕಾರಿ ವಿಮಾ ಕಂಪನಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಲು ಮತ್ತು ನೀರಿನ ದರ ಏರಿಕೆ ಬಗ್ಗೆ ಇಂದು ಸಂಪುಟ ನಿರ್ಧಾರ

ಸಹಕಾರಿ ಚೌಕಟ್ಟನ್ನು ಬಳಸಿಕೊಳ್ಳುವ ಮೂಲಕ, ಈ ಸಂಸ್ಥೆಯು ಭಾರತದಾದ್ಯಂತ ಚಾಲಕರಿಗೆ ಹೆಚ್ಚಿನ ಆರ್ಥಿಕ ಸ್ಥಿರತೆ ಮತ್ತು ಕಲ್ಯಾಣವನ್ನು ಖಚಿತಪಡಿಸುತ್ತದೆ. ಸಹಕಾರಿ ವಲಯವನ್ನು ವಿವಿಧ ಅಗತ್ಯ ಸೇವೆಗಳಾಗಿ ವಿಸ್ತರಿಸುವ ಸರ್ಕಾರದ ಬದ್ದತೆಯನ್ನು ಅಮಿತ್ ಶಾ ಒತ್ತಿ ಹೇಳಿದ್ದಾರೆ. ಇದರಲ್ಲಿ ಪೆಟ್ರೋಲ್ ಪಂಪ್‌ಗಳು, ಅನಿಲ ವಿತರಣೆ, ಪಡಿತರ ಅಂಗಡಿಗಳು, ಔಷಧ ಅಂಗಡಿಗಳು, ಗೋದಾಮುಗಳು, ನೀರಿನ ನಿರ್ವಹಣೆ, ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಯು ಸೇರಿವೆ.

Continue Reading

FILM

ರನ್ಯಾ ರಾವ್ ಪ್ರಕರಣದಲ್ಲಿ ಮತ್ತೊಬ್ಬ ಅರೆಸ್ಟ್; ಚಿನ್ನ ಸಾಗಣೆಯಲ್ಲಿ ಈತನ ಪಾತ್ರವೇನು?

Published

on

ಮಂಗಳೂರು/ಬೆಂಗಳೂರು : ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣದ ತನಿಖೆ ತೀವ್ರವಾಗಿದ್ದು, ಇದೀಗ ಮತ್ತೊಬ್ಬನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಬಳ್ಳಾರಿ ಮೂಲದ ಸಾಹಿಲ್ ಸಕಾರಿಯಾ ಜೈನ್ ಬಂಧಿತ ಆರೋಪಿ.

ಈತನ ಪಾತ್ರವೇನು?

ಬಂಧಿತ ಸಾಹಿಲ್ ಸಕಾರಿಯಾ  ಜೈನ್ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ. ಈತ ವಿದೇಶದಿಂದ ಕಳ್ಳ ಸಾಗಣೆ ಮಾಡಿದ ಚಿನ್ನವನ್ನು ಮಾರಾಟ ಮಾಡುವ ಹವಾಲಾ ವಹಿವಾಟುಗಳಿಗೆ ಅನುಕೂಲ ಮಾಡಿಕೊಡುವ ಕೆಲಸದಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಕೇಳಿ ಬಂದಿದೆ.

ವಿದೇಶದಿಂದ ಕಳ್ಳ ಸಾಗಣೆ ಮೂಲಕ ತಂದ ಚಿನ್ನವನ್ನು ಮಾರಾಟ ಮಾಡಲು ಆತ ಸಹಕರಿಸಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಡಿಜಿಟಲ್ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ನಟಿ ಅಪ್ಸರಾ ಕೊ*ಲೆ ಪ್ರಕರಣ : ದೇವಸ್ಥಾನದ ಅರ್ಚಕನಿಗೆ ಜೀ*ವಾವಧಿ ಶಿಕ್ಷೆ..!

ರನ್ಯಾ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಮಾರಾಟ ಮಾಡಲು ಹಲವು ಬಾರಿ ಸಹಾಯ ಮಾಡಿದ್ದ ಎಂದು ತಿಳಿದುಬಂದಿದೆ. ದುಬೈನಿಂದ ಕಳ್ಳಸಾಗಣೆ ಮೂಲಕ ಚಿನ್ನ ತರುವ ವೇಳೆ ರನ್ಯಾ ದುಬೈ ಸಂಖ್ಯೆಯ ಮೂಲಕ ಸಾಹಿಲ್‌ನನ್ನು ಸಂಪರ್ಕಿಸಿದ್ದಾಳೆ. ಈ ಸಂಭಾಷಣೆ ಅಧಿಕಾರಿಗಳಿಗೆ ಸಿಕ್ಕಿದೆ. ಈ ಆಧಾರದಲ್ಲಿ ಆತನನ್ನು ಬಂಧಿಸಿ, ವಿಶೇಷ ನ್ಯಾಯಾಲದ ಮುಂದೆ ಹಾಜರು ಪಡಿಸಿದ್ದು, ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page