Connect with us

LATEST NEWS

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು; ನಕ್ಸಲ್ ನಾಯಕ‌ ವಿಕ್ರಂ ಗೌಡ ಎನ್ ಕೌಂಟರ್ ಗೆ‌ ಬ*ಲಿ

Published

on

ಹೆಬ್ರಿ : ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ  ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ನೇತ್ರಾವತಿ ದಳದ ವಿಕ್ರಂ ಗೌಡನನ್ನು ಎನ್ ಕೌಂಟರ್ ಮಾಡಲಾಗಿದೆ. ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು   ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ  ಪಶ್ಚಿಮಘಟ್ಟ ಕಾಡಿನಲ್ಲಿ  ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್ ಕೌಂಟರ್ ಮೂಲಕ ಈತನ ಹತ್ಯೆ ಮಾಡಲಾಗದೆ. ಉಡುಪಿ ಜಿಲ್ಲೆಯ ಪೀತಬೈಲ್ ಅರಣ್ಯದಲ್ಲಿ ವಿಕ್ರಂ ಗೌಡ ಹತ್ಯೆ ಮಾಡಲಾಗಿದೆ. ಮೂವರು ನಕ್ಸಲರು ಎಸ್ಕೇಪ್ ಆಗಿದ್ದು, ಅವರಿಗಾಗಿ ಹುಡುಕಾಟ ತೀವ್ರಗೊಂಡಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಿಂದ ನಕ್ಸಲ್ ಚಳುವಳಿಗೆ ಧುಮುಕಿದ್ದ ವಿಕ್ರಂ ಗೌಡ ಕರಾವಳಿ ಭಾಗದಲ್ಲಿ ವಿಕ್ರಂ ಟೀಮ್, ಮಲೆನಾಡು ಭಾಗದಲ್ಲಿ ಮುಂಡಗಾರು ಲತಾ‌ ಟೀಮ್ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿತ್ತು.

ಕೇರಳದಿಂದ ಕಳೆ‌ದ ಎರಡು ತಿಂಗಳ ಹಿಂದೆ ಕರ್ನಾಟಕಕ್ಕೆ ‌ಆಗಮಿಸಿದ್ದ ನಕ್ಸಲರು, ಕೇರಳದಲ್ಲಿ ‌ ನಕ್ಸಲ್ ಕಾರ್ಯಚರಣೆ ಚುರುಕು ಪಡೆದ ಬೆನ್ನಲೇ ಕರ್ನಾಟಕ್ಕೆ ವಾಪಾಸ್ ಬಂದಿತ್ತು. ಕಸ್ತೂರಿ ರಂಗನ್ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ಸಂಬಂಧಿಸಿದಂತೆ ಸಭೆ ನಡೆಸುತ್ತಿದ್ದ ನಕ್ಸಲರು ಚಿಕ್ಕಮಗಳೂರು ಜಿಲ್ಲೆಯ ದಟ್ಟ ಕಾನನದಲ್ಲಿ ಬೀಡು ಬಿಟ್ಟಿದ್ದರೆನ್ನಲಾಗಿದೆ.

 

LATEST NEWS

ಚೀನಾ: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 20 ಜನ ಸಾವು

Published

on

ಚೀನಾ: ರೆಸ್ಟೋರೆಂಟ್‌ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 20 ಮಂದಿ ಸಾವನ್ನಪ್ಪಿದ್ದು, 3 ಮಂದಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚೀನಾದ ಉತ್ತರ ನಗರ ಲೀಯಾವೊಯಾಂಗ್‌ನ ಚುನಿಯಾಂಗ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬೈರನ್ ವಾನ್ ಎನ್ನುವ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ 43 ಸೆಕೆಂಡುಗಳ ವಿಡಿಯೋದಲ್ಲಿ ಅಗ್ನಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮುತ್ತಿರುವುದನ್ನು ಕಾಣಬಹುದು.

ಅಗ್ನಿ ವ್ಯಾಪಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಜನರು ಕಾಲ್ಕಿತ್ತಿದ್ದಾರೆ. ಇನ್ನೂ ಕೆಲವರು ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿಯುವಲ್ಲಿ ನಿರತರಾಗಿದ್ದರು.

ಪ್ರಾಥಮಿಕ ಮೂಲಗಳ ಪ್ರಕಾರ ಮೊದಲು ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ರೆಸ್ಟೋರೆಂಟ್‌ಗೆ ವ್ಯಾಪಿಸಿದೆ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ.

Continue Reading

LATEST NEWS

ಅಮೆರಿಕದ ದೇಗುಲದಲ್ಲಿ ಪ್ರಧಾನಿ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಅಣ್ಣಾಮಲೈ

Published

on

ಮಂಗಳೂರು : ಅಮೆರಿಕದ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಗಿದೆ. ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಈ ಪೂಜೆ ನೆರವೇರಿಸಿದ್ದು, ಪ್ರಧಾನಿ ಹಾಗೂ ಸೈನ್ಯಕ್ಕೆ ಶಕ್ತಿ ತುಂಬುವಂತೆ ಕೃಷ್ಣನಲ್ಲಿ ಪ್ರಾರ್ಥಿಸಿದ್ದಾರೆ.

ಅಮೆರಿಕದ ಫೀನಿಕ್ಸ್ ಮಹಾನಗರದಲ್ಲಿ ಇರುವ ಕೃಷ್ಣ ಮಂದಿರಲ್ಲಿ ಈ ಪೂಜೆ ಸಲ್ಲಿಸಿದ್ದಾರೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ, ಉಡುಪಿ ಪುತ್ತಿಗೆ ಮಠಕ್ಕೆ ಸೇರಿದ ಕೃಷ್ಣ ಮಂದಿರದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

 

 

Continue Reading

LATEST NEWS

ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

Published

on

ಮಂಗಳೂರು/ಮಂಜೇಶ್ವರ : ಹಿಂದೂ ಮುಸ್ಲಿಂ ಗಲಾಟೆ ಆದ್ರೆ ಹಿಂದೂಗಳು ಓಡುವ ಕಾಲ ಒಂದು ಇತ್ತು. ಈಗ ಕೈ ತೋರಿಸಿದ್ರೆ ಮುಸ್ಲಿಮರು ಓಡಿ ಹೋಗ್ತಾರೆ. ಹೀಗಾಗಿ ನಿಮ್ಮ ಮನೆಯಲ್ಲಿ ಒಂದು ತಲ್ವಾರ್ ಯಾವಾಗಲೂ ಇಟ್ಟುಕೊಳ್ಳಿ ಮತ್ತು ಮಹಿಳೆಯರು ಚೂರಿ ಇಟ್ಟುಕೊಳ್ಳಿ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪೆಹಲ್ಗಾಮ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಅಲ್ಲಿ ಉಗ್ರರಿಗೆ ತಲ್ವಾರ್ ತೋರಿಸಿದ್ರೂ ಸಾಕಿತ್ತು ಓಡಿ ಹೋಗ್ತಾ ಇದ್ರು. ಮಹಿಳೆಯರು ತಮ್ಮ ಬ್ಯಾಗಿನಲ್ಲಿ ಸ್ನೋ ಪೌಡರ್ ಬಾಚಣಿಗೆ ಜೊತೆಯಲ್ಲಿ ಆರು ಇಂಚಿನ ಚೂರಿ ಇಟ್ಟುಕೊಳ್ಳಿ, ಅದಕ್ಕೆ ಲೈಸೆನ್ಸ್ ಬೇಡ.

ಇದನ್ನೂ ಓದಿ : ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಮೈಸೂರು ಉದ್ಯಮಿ

ಸಂಜೆ ಆರು, ಏಳು ಗಂಟೆ ಬಳಿಕ ನಿಮ್ಮ ಮೇಲೆ ಆಕ್ರಮಣ ಮಾಡುತ್ತಾರೆ. ಆವಾಗ ಕೈ ಮುಗಿದು ಬೇಡಿಕೊಳ್ಳದೆ ಚೂರಿ ತೆಗೆದು ತೋರಿಸಿ ಎಂದು ಪ್ರಭಾಕರ್ ಭಟ್ ಕರೆ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page