Connect with us

LATEST NEWS

ಸೆ.15ರಿಂದ ದೇಶಾದ್ಯಂತ ವಾಹನಗಳಿಗೆ ಏಕರೂಪದ ನಂಬರ್‌ ಪ್ಲೇಟ್‌ ಜಾರಿ

Published

on

ನವದೆಹಲಿ: ದೇಶದಲ್ಲಿ ಹೊಸ ವಾಹನಗಳಿಗೆ ಭಾರತ್‌ ಸೀರೀಸ್‌(ಬಿಎಚ್‌-ಸೀರೀಸ್‌) ಎಂಬ ಹೊಸ ನೋಂದಣಿ ಗುರುತು ಪರಿಚಯಿಸಿರುವುದಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಶನಿವಾರ ಪ್ರಕಟಿಸಿದೆ.

ಬಿಎಚ್‌ ಗುರುತು ಹೊಂದಿರುವ ವಾಹನಗಳ ಮಾಲಕರು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಾಸ್ತವ್ಯ ಬದಲಾಯಿಸಿದ ಸಂದರ್ಭದಲ್ಲಿ ಹೊಸದಾಗಿ ನೋಂದಣಿ ಮಾಡಿಸಿ ಕೊಳ್ಳಬೇಕಾಗಿಲ್ಲ. ಯೋಧರು, ಕೇಂದ್ರ ರಾಜ್ಯ ಸರಕಾರಿ ಉದ್ಯೋಗಿ ಗಳು, ಸರಕಾರಿ ಸ್ವಾಮ್ಯದ ಉದ್ದಿಮೆಗಳ ಉದ್ಯೋಗಿಗಳು ಹಾಗೂ 4 ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಕಚೇರಿ ಇರುವ ಖಾಸಗಿ ಸಂಸ್ಥೆಗಳ ಉದ್ಯೋಗಿಗಳು ಇದನ್ನು ಐಚ್ಛಿಕವಾಗಿ ಪಡೆಯಬಹುದು ಎಂದು ಇಲಾಖೆ ತಿಳಿಸಿದೆ.
ವಿಶೇಷ ನಿಯಮ
ಇದು ಪ್ರತ್ಯೇಕ ಮತ್ತು ವಿಶೇಷ ವಾಹನ ನೋಂದಣಿ ನಿಯಮ. ಇದೇ ವರ್ಷದ ಸೆಪ್ಟಂಬರ್‌ 15ರಿಂದ ಜಾರಿಗೆ ಬರಲಿದೆ ಎಂದು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ.

ಇದರಡಿ ಮರುನೋಂದಣಿ ಸಂದರ್ಭ ಮೂಲ ರಾಜ್ಯದಿಂದ ನಿರಾಕ್ಷೇಪಣ ಪತ್ರ ಪಡೆಯುವ ಅಗತ್ಯ ಇಲ್ಲ. ಅಲ್ಲದೆ, ಮರು ನೋಂದಣಿಯನ್ನು ಆನ್‌ಲೈನ್‌ನಲ್ಲೇ ಮಾಡಿಕೊಳ್ಳಬಹುದು.
ಇದರ ವಿಶೇಷವೇನು?
ಈ ವಿವಿಧ ಸಿಬ್ಬಂದಿಗೆ ಪದೇಪದೆ ಒಂದು ರಾಜ್ಯದಿಂದ ಮತ್ತೂಂದು ರಾಜ್ಯಕ್ಕೆ ವರ್ಗಾವಣೆಯಾಗುವ ಸಾಧ್ಯತೆ ಇರುತ್ತವೆ.

ಅಂಥವರು ತಮ್ಮ ವಾಹನಗಳನ್ನು ಬಿಎಚ್‌ ಸೀರೀಸ್‌ನಡಿ ನೋಂದಣಿ ಮಾಡಿಸಿದ್ದರೆ, ಬೇರೆಡೆ ವರ್ಗವಾದಾಗ ತಮ್ಮ ವಾಹನಗಳನ್ನು ಅಲ್ಲಿ ಮರು ನೋಂದಣಿ ಮಾಡಿಸುವ ಆವಶ್ಯಕತೆ ಇರುವುದಿಲ್ಲ.

ಪ್ರಸ್ತುತ ಇರುವ ನಿಯಮದಂತೆ ಒಂದು ರಾಜ್ಯದಿಂದ ಮತ್ತೂಂದು ರಾಜ್ಯಕ್ಕೆ ಹೋದರೆ ಅಲ್ಲಿ 12 ತಿಂಗಳು ಮಾತ್ರ ವಾಹನ ಓಡಿಸಬಹುದು.

ಬಳಿಕ ಮರು ನೋಂದಣಿ ಕಡ್ಡಾಯ. ಆದರೆ ಬಿಎಚ್‌ ಸೀರೀಸ್‌ ನೋಂದಣಿ ಹೊಂದಿರುವ ವಾಹನಗಳ ಮರುನೋಂದಣಿ ಅಗತ್ಯವಿಲ್ಲ.

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading

hasana

ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Published

on

ಹಾಸನ: ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕ (29) ಎಂಬುವವರು ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ಆಗಮಿಸಿದ್ದರು. ಫೆಬ್ರವರಿ 12 ರಂದು ರಾತ್ರಿ 7-30 ರ ಸುಮಾರಿಗೆ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕ ತಮಗೆ ಯಾರೋ ಪರಿಚಯದವರು ಸಿಕ್ಕಿರುವುದಾಗಿ ತಿಳಿಸಿದ್ದರು. ಆ ಮಾತು ಮುಗಿಯುತ್ತಿದ್ದಂತೆಯೇ ಫೋನ್‌ ಸ್ವಿಚ್‌ ಆಫ್‌ ಆಗಿದೆ.

ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರೂ ಸಹ ಸ್ಪಂದಿಸಿದ ಅರೆಹಳ್ಳಿ ಮತ್ತು ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಮಹಿಳೆಯ ಬ್ಯಾಗ್, ಚಪ್ಪಲಿ ಹಾಗೂ ಒಳ ಉಡುಪುಗಳು ಪತ್ತೆಯಾಗಿರುವುದು ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಮಹಿಳೆಯು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಒಡವೆಗಾಗಿ ದುಷ್ಕರ್ಮಿಗಳು ಮಹಿಳೆಯನ್ನ ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page