Connect with us

LATEST NEWS

ದಿಲ್ಲಿ ಗದ್ದುಗೆಗೆ ಹೊಸ ಮುಖ; ಸಿಎಂ ಸ್ಥಾನಕ್ಕೆ ಏರುವವರು ಯಾರು?

Published

on

ಮಂಗಳೂರು/ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರ ರಾಜಧಾನಿಯ ಆಡಳಿತದಿಂದ ಹೊರಗೆಹಾಕುವ ಮೂಲಕ ಬಿಜೆಪಿ, ಎರಡೂವರೆ ದಶಕದ ಬಳಿಕ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದೆ.

70 ಸಂಖ್ಯಾಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 2015ರಲ್ಲಿ ಮೂರು ಮತ್ತು 2020ರಲ್ಲಿ ಎಂಟು ಸ್ಥಾನಗಳಲ್ಲಷ್ಟೇ ಗೆದ್ದಿತ್ತು. ಆದರೆ ಈ ಭಾರಿ, 48 ಕ್ಷೇತ್ರಗಳನ್ನು ಜಯಿಸಿ ಭಾರಿ ಬಹುಮತ ಸಾಧಿಸಿದೆ. ಕಳೆದೆರಡು ಚುನಾವಣೆಗಳಲ್ಲಿ ಕ್ರಮವಾಗಿ 67 ಹಾಗೂ 62 ಸ್ಥಾನಗಳಲ್ಲಿ ವಿಜಯದ ಹಾರ ಹಾಕಿಸಿಕೊಂಡಿದ್ದ ಎಎಪಿಗೆ, ಈ ಸಲ ಕೇವಲ 22 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

ದಿಲ್ಲಿಯಲ್ಲಿ ಬಿಜೆಪಿ ಸರಕಾರ ರಚಿಸುವ ನಿಟ್ಟಿನಲ್ಲಿಪಕ್ಷದ ವರಿಷ್ಠರು ರವಿವಾರ ಸಮಾಲೋಚನೆ ಆರಂಭಿಸಿದ್ದಾರೆ. ಬಹು ನಿರೀಕ್ಷಿತ ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದೇ ಈಗ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 27 ವರ್ಷಗಳ ಬಳಿಕ ದೆಹಲಿಯಲ್ಲಿ ಅರಳಿದ ಕಮಲ; ದಿಲ್ಲಿಯ ದಿಲ್ ಗೆದ್ದ ಬಿಜೆಪಿ

ಸಿಎಂ ರೇಸ್‌ನಲ್ಲಿರುವ ಸಂಭಾವ್ಯ ನಾಯಕರು

ಪರ್ವೇಶ್ ವರ್ಮಾ : ಮಾಜಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ದ ನವದೆಹಲಿ ಕ್ಷೇತ್ರದಲ್ಲಿ 4,089 ಮತಗಳ ಅಂತರದಿಂದ ಮಣಿಸಿರುವ ಪರ್ವೇಶ್ ವರ್ಮಾ ಇದೀಗ ಕೇಂದ್ರಬಿಂದುವಾಗಿದ್ದಾರೆ. ಈ ವರ್ಷ ದೆಹಲಿ ಚುನಾವಣೆಯ ಮ್ಯಾನ್ ಆಫ್ ದಿ ಮ್ಯಾಚ್ ಎಂದೇ ಕರೆಸಿಕೊಳ್ಳುತ್ತಿರುವ ಪರ್ವೇಶ್ ವರ್ಮಾ ದೆಹಲಿ ಮುಖ್ಯಮಂತ್ರಿಗಳ ರೇಸ್‌ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 2014-2024ರವರೆಗೆ ಸಂಸದರಾಗಿದ್ದ ಪರ್ವೇಶ್, ದೆಹಲಿಯ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ.

ವಿಜೇಂದರ್ ಗುಪ್ತಾ : ದೆಹಲಿ ಬಿಜೆಪಿಯ ಮಾಜಿ ಮುಖ್ಯಸ್ಥರಾಗಿರುವ ಅವರು, ಎಎಪಿ ಪ್ರಾಬಲ್ಯದ ಹೊರತಾಗಿಯೂ 2015 ಮತ್ತು 2020 ಎರಡರಲ್ಲೂ ರೋಹಿಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಗುಪ್ತಾ ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ವೀರೇಂದ್ರ ಗುಪ್ತಾ ರೋಹಿಣಿ ಕ್ಷೇತ್ರದ ‘ಹ್ಯಾಟ್ರಿಕ್’ ಶಾಸಕ. ಇಲ್ಲಿ 37,816 ಮತಗಳಿಂದ ಜಯ ಗಳಿಸಿದ್ದಾರೆ.

ಆಶಿಷ್ ಸೂದ್ : ಜನಕಪುರಿ ಕ್ಷೇತ್ರದಲ್ಲಿ 18,766 ಮತಗಳಿಂದ ಗೆಲುವು ಸಾಧಿಸಿರುವ ಆಶಿಷ್ ಸೂದ್, ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಆಡಳಿತ ನಡೆಸಿದ ಅನುಭವ ಹೊಂದಿದ್ದಾರೆ. ಸದ್ಯ ಗೋವಾದಲ್ಲಿ ಬಿಜೆಪಿ ಉಸ್ತುವಾರಿ ಹಾಗೂ ಕಾಶ್ಮೀರದಲ್ಲಿ ಸಹ ಉಸ್ತುವಾರಿಯಾಗಿರುವುದು ಇವರಿಗೆ ಪ್ಲಸ್ ಪಾಯಿಂಟ್ ಆಗಿದೆ.

ರೇಖಾ ಗುಪ್ತಾ : ಶಾಲಿಮಾರ್ ಬಾಗ್ ಕ್ಷೇತ್ರದಲ್ಲಿ 29,000ಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ ರೇಖಾ ಗುಪ್ತಾ. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ರೇಖಾ, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ಸತೀಶ್ ಉಪಾದ್ಯಾಯ: ನವದೆಹಲಿ ನಗರ ಪಾಲಿಕೆಯ ಮಾಜಿ ಉಪಾಧ್ಯಕ್ಷ ಸತೀಶ್ ಉಪಾದ್ಯಾಯ, ಆರ್‌ಎಸ್‌ಎಸ್ ನಾಯಕತ್ವದೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಮಧ್ಯಪ್ರದೇಶದಲ್ಲಿ ಬಿಜೆಪಿಯ ಸಹ ಉಸ್ತುವಾರಿ ಆಗಿರುವ ಸತೀಶ್, ಮಾಳವಯಾ ನಗರ ಕ್ಷೇತ್ರದಲ್ಲಿ ಎಎಪಿಯ ಪ್ರಮುಖ ನಾಯಕ ಸೋಮನಾಥ್ ಭಾರ್ತಿ ಎದುರು 2,131 ಮತಗಳ ಅಂತರದಿಂದ ಗೆದ್ದಿದ್ದಾರೆ.

ಶಿಖಾ ರಾಯ್: ಗ್ರೇಟರ್ ಕೈಲಾಶ್ ಕ್ಷೇತ್ರದಲ್ಲಿ ಎಎಪಿಯ ಪ್ರಮುಖ ನಾಯಕ ಸೌರಭ್ ಭಾರದ್ವಾಜ್ ಎದುರು 3,188 ಮತಗಳ ಅಂತರದಿಂದ ಬಿಜೆಪಿಯ ಶಿಖಾ ರಾಯ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಮಹಿಳಾ ಅಭ್ಯರ್ಥಿಗೆ ಅವಕಾಶ ನೀಡಲು ನಿರ್ಧರಿಸಿದರೆ, ಶಿಖಾಗೆ ಅದೃಷ್ಟ ಒಲಿಯಬಹುದು ಎಂದು ಹೇಳಲಾಗುತ್ತಿದೆ.

ಸೋಲಿನೊಂದಿಗೆ ಕನಸು ಭಗ್ನ

ರಮೇಶ್ ಬಿಧುರಿ : ಬಿಜೆಪಿಯ ಸಿಎಂ ಫೇಸ್ ಎಂದು ರಮೇಶ್ ಬಿಧುರಿಯನ್ನು ಎಎಪಿ ಹೇಳಿತ್ತು. ಹಾಗೆಂದು ಚುನಾವಣಾ ಪ್ರಚಾರದ ಸಮಯದಲ್ಲಿ ಅವರನ್ನು ಚರ್ಚೆಗೂ ಆಹ್ವಾನಿಸಿತ್ತು. ಆದರೆ ಮಾತೃ ಪಕ್ಷ ಸಿಎಂ ಫೇಸ್ ಅನ್ನು ನಿರ್ಧರಿಸಲಾಗಿಲ್ಲ ಎಂದಿತ್ತು. ದೆಹಲಿ ಸಿಎಂ ಅತಿಶಿ ವಿರುದ್ದ ಬಿಧುರಿ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

 

 

DAKSHINA KANNADA

ಹಳೆ ಮೀಸಲು ಪಟ್ಟಿಯಂತೆ ಪಾಲಿಕೆ ಚುನಾವಣೆ ..!? ಶೀಘೃವೇ ಆಗಲಿದೆ ಘೋಷಣೆ..!

Published

on

ಮಂಗಳೂರು / ಮೈಸೂರು: ಮಂಗಳೂರು ಸೇರಿದಂತೆ ರಾಜ್ಯದ ಐದು ಮಹಾನಗರ ಪಾಲಿಕೆಗೆ ಈ ವರ್ಷದಲ್ಲೇ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಸರ್ಕಾರದಿಂದ ಈ ಐದೂ ಮಹಾನಗರ ಪಾಲಿಕೆಗಳ ಮೀಸಲು ಪಟ್ಟಿ ನೀಡಿದ್ರೆ ಅದರಂತೆ ಚುನಾವಣೆ ನಡೆಯಲಿದೆ. ಇಲ್ಲವಾದಲ್ಲಿ ಹೈ ಕೋರ್ಟ್ ಮೊರೆ ಹೋಗಿ ಹಳೆ ಮೀಸಲು ಪಟ್ಟಿಯಂತೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.


ಮಂಗಳೂರು ಸೇರಿದಂತೆ ಮೈಸೂರು, ಶಿವಮೊಗ್ಗ, ದಾವರಣಗೆರೆ, ತುಮಕೂರು ಈ ಐದು ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿದಿಗಳ ಅವದಿ ಮುಕ್ತಾಯಗೊಂಡಿದೆ. ಈ ಐದೂ ಮಹಾನಗರ ಪಾಲಿಕೆಯಲ್ಲಿ ಚುನಾವಣೆ ನಡೆಸಬೇಕಾಗಿದ್ದು, ಚುನಾವಣಾ ಆಯೋಗ ರಾಜ್ಯ ಸರ್ಕಾರದ ಬಳಿ ಮೀಸಲು ಪಟ್ಟಿ ನೀಡಲು ಮನವಿ ಮಾಡಿದೆ. ನಿಯಮಾನುಸಾರ ಸರ್ಕಾರ ಮೀಸಲು ಪಟ್ಟಿ ಕೊಟ್ಟ ಬಳಿಕ ಅದರಂತೆ ಚುನಾವಣೆ ನಡೆಸಲಾಗುತ್ತದೆ. ಆದ್ರೆ ಸರ್ಕಾರ ಇನ್ನೂ ಮೀಸಲು ಪಟ್ಟಿ ನೀಡುವ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗೊಂದು ವೇಳೆ ಮೀಸಲು ಪಟ್ಟಿ ನೀಡದೇ ಇದ್ರೆ ಈ ಹಿಂದಿನ ಮೀಸಲು ಪಟ್ಟಿಯ ಆಧಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣ ಆಯಕ್ತು ಜಿ.ಎಸ್. ಸಂಗ್ರೇಶಿ ಮಾಹಿತಿ ನೀಡಿದ್ದಾರೆ. ಮತದಾರರ ಪಟ್ಟಿ ಸಿದ್ಧವಾಗಿದೆಯಾದ್ರೂ ಮೀಸಲು ಪಟ್ಟಿಗಾಗಿ ಮಾತ್ರ ಕಾಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BIG BOSS

ರೀಲ್ಸ್‌ ಮಾಡಿ ಅರೆಸ್ಟ್ ಆಗಿದ್ದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌, ರಜತ್‌ ಮಧ್ಯರಾತ್ರಿಯೇ ರಿಲೀಸ್‌

Published

on

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿ ಅರೆಸ್ಟ್ ಆಗಿದ್ದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌ ಮತ್ತು ರಜತ್‌ ಕೇಸ್‌ಗೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.

ಬಸವೇಶ್ವರ ನಗರ ಪೊಲೀಸರು ನಿನ್ನೆ ಮಧ್ಯರಾತ್ರಿಯೇ ಅವರನ್ನು ಬಿಡುಗಡೆ ಮಾಡಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಲಾಂಗ್‌ ಹಿಡಿದು 18 ಸೆಕೆಂಡ್‌ಗಳ ಕಾಲ ರೀಲ್ಸ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಹಾಗೂ ವಿನಯ್ ಇವರನ್ನು ನಿನ್ನೆ ಮಧ್ಯಾಹ್ನ ಬಂಧಿಸಿದ್ದರು. ಆದರೆ ಮಧ್ಯರಾತ್ರಿಯೇ ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದಾರೆ.

ಶಸ್ತ್ರಾಸ್ತ್ರ ಕಾಯ್ದೆಯಡಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. ಆದರೆ, ತಾವು ರೀಲ್ಸ್‌ಗೆ ಬಳಸಿರುವುದು ಫೈಬರ್‌ ಮಚ್ಚು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ರೀಲ್ಸ್‌ನಲ್ಲಿ ಬಳಸಿದ್ದ ಮಚ್ಚನ್ನು ಆರೋಪಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳ ಮಾತನ್ನೇ ನಂಬಿ ಫೈಬರ್ ಮಚ್ಚು ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ.

ಬೆಳಗ್ಗೆ 10:30 ಕ್ಕೆ ಬರುವಂತೆ ನೋಟಿಸ್ ನೀಡಿ ಆರೋಪಿಗಳನ್ನು ಪೊಲೀಸರು ಕಳುಹಿಸಿದ್ದರು. ಸಾಮಾನ್ಯ ಜನರು ಇದ್ದಿದ್ದರೆ ಇದೇ ರೀತಿ ಮಾಡುತ್ತಿದ್ದರಾ ಪೊಲೀಸರು ಎಂಬ ಪ್ರಶ್ನೆ ವ್ಯಕ್ತವಾಗಿದೆ.

Continue Reading

DAKSHINA KANNADA

ಜಸ್ಟ್ ಪಾಸ್ ಮಾಡಲು ದೈವಕ್ಕೆ ಮನವಿ ಸಲ್ಲಿಸಿದ ವಿದ್ಯಾರ್ಥಿ..! ಹುಂಡಿಯಲ್ಲಿ ಪತ್ತೆಯಾದ ಚೀಟಿ..!

Published

on

ಉಡುಪಿ :  ವಿದ್ಯಾರ್ಥಿಯೊಬ್ಬ ದೈವಕ್ಕೆ ಚೀಟಿ ಬರೆದು ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್ ಮಾಡಿಸು ಅಂತ ಕೋರಿಕೊಂಡ ಪತ್ರವೊಂದು ವೈರಲ್ ಆಗಿದೆ.

ಪರೀಕ್ಷೆ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಅದೊಂದು ರೀತಿಯ ಟೆನ್ಷನ್ ಇದ್ದೇ ಇರುತ್ತದೆ. ಟಾಪರ್ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಗಿಂತ ಅಂಕ ಕಡಿಮೆ ಬಾರದಿರಲಿ ಅನ್ನೋ ಟೆನ್ಷನ್ ಇದ್ರೆ, ಸಾಮಾನ್ಯ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಹೇಗಾದ್ರೂ ಹೆಚ್ಚಿನ ಅಂಕ ಗಳಿಸಬೇಕು ಅನ್ನೋ ಚ್ಯಾಲೆಂಜ್ ಇರುತ್ತದೆ. ಆದ್ರೆ ಕಲಿಕೆಯಲ್ಲಿ ತೀರಾ ಹಿಂದೆ ಉಳಿದ ವಿದ್ಯಾರ್ಥಿಗಳು ಜಸ್ಟ್ ಪಾಸ್ ಆದ್ರೆ ಸಾಕು ಅಂತಿರ್ತಾರೆ. ಅಂತಹ ಒಬ್ಬ ವಿದ್ಯಾರ್ಥಿ ದೈವದ ಹುಂಡಿಯಲ್ಲಿ ಚೀಟಿ ಬರೆದು ಅಂಕಗಳ ಆಪ್ಷನ್ ಕೊಟ್ಟು ಇಷ್ಟಾದ್ರೂ ಕೊಡಿಸು ದೇವರೆ ಅಂತ ಬೇಡಿಕೊಂಡಿದ್ದಾನೆ.

ಕುಂದಾಪುರ ಹೊಳ ಮಗ್ಗಿ ಹೊರ ಬೊಬ್ಬರ್ಯ ದೇವಸ್ಥಾನದ ಕಾಣಿಕೆ ಹುಂಡಿಯ ಲೆಕ್ಕಚಾರ ನಡೆಯುವಾಗ ಈ ಪತ್ರ ಲಭ್ಯವಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಯ ಬದ್ಧತೆಯ ಬಗ್ಗೆ ಚರ್ಚೆ ನಡೆದಿದೆ. ಜಸ್ಟ್ ಪಾಸ್ ಮಾಡುವ ಅಂಕ ನೀಡು ಅಂತ ದೈವದ ಬಳಿ ಕೋರಿಕೆ ಇಟ್ಟಿರುವ ವಿದ್ಯಾರ್ಥಿ ಅಂಕಗಳ ಅಪ್ಷನ್ ನೀಡಿದ್ದಾನೆ. ಪ್ರತಿಯೊಂದು ಸಬ್ಜೆಕ್ಟ್‌ ಗೆ ಎಷ್ಟು ಎಷ್ಟು ಸಿಗಬೇಕು ಎಂದು ದೈವದ ಬಳಿ ಕೋರಿಕೆ ಇಟ್ಟಿದ್ದಾನೆ. ಇದಕ್ಕಿಂತ ಕಡಿಮೆ ಬೇಡವೇ ಬೇಡ ದೇವರೆ ಅಂತ ಹೊರ ಬೊಬ್ಬರ್ಯ ದೈವಕ್ಕೆ ಮನವಿ ಮಾಡಿಕೊಂಡಿದ್ದಾನೆ.

Continue Reading
Advertisement

Trending

Copyright © 2025 Namma Kudla News

You cannot copy content of this page