Connect with us

ಟಾಸ್ಕ್ ಫೋರ್ಸ್-ಟೆಲಿಮೆಡಿಸಿನ್ ಜೊತೆ ಕೊರೊನಾ ಮುಕ್ತ ಹೋರಾಟಕ್ಕೆ ಸಜ್ಜಾದ ಜಸ್ಟೀಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆ..

Published

on

ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯಲ್ಲಿ ನೂತನ ಕೋವಿಡ್ ಪರೀಕ್ಷಾ ಲ್ಯಾಬೋರೆಟರಿ ಆರಂಭ..!

ಉಳ್ಳಾಲ: ಕೋವಿಡ್ 19 ತುರ್ತು ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ರಚನೆಯೊಂದಿಗೆ, ಟೆಲಿಮೆಡಿಸಿನ್ ಸೇವೆಯನ್ನು ಆರಂಭಿಸುವ ಮೂಲಕ,

ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಸಮುದಾಯದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೈಗೊಂಡ ತ್ವರಿತ ನಿರ್ಧಾರಗಳು ಶ್ಲಾಘನೀಯ.

ಕೋವಿಡ್-19 ಪರೀಕ್ಷೆಗೆ ಲ್ಯಾಬ್ ಸ್ಥಾಪನೆಯೊಂದಿಗೆ ಕೋವಿಡ್ ಮುಕ್ತ ಹೋರಾಟಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ನಿಟ್ಟೆ (ಪರಿಗಣಿತ) ವಿಶ್ವವಿದ್ಯಾನಿಲಯ ಅಧೀನದ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ ಭೇಟಿ ನೀಡಿ,

ವಿವಿ ಅಧಿಕಾರಿಗಳೊಂದಿಗೆ ಮತ್ತು ವೈದ್ಯಕೀಯ ವಿಭಾಗದೊಂದಿಗೆ ಚರ್ಚೆ ನಡೆಸಿ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಿದ ಕೋವಿಡ್ ಪರೀಕ್ಷಾ ಲ್ಯಾಬೋರೆಟರಿ ಪರಿಶೀಲನೆ ನಡೆಸಿ ಮಾತನಾಡಿದರು.

ಕೊವಿಡ್ ನಿರ್ಮೂಲನಕ್ಕೆ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಪಾತ್ರ ಮಹತ್ವದಾಗಿದ್ದು, ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಬೇಕು.

ಈ ನಿಟ್ಟಿನಲ್ಲಿ ನಿಟ್ಟೆ ವಿವಿ ಅಧೀನದ ವೈದ್ಯಕೀಯ ಕಾಲೇಜು ಆಸ್ಪತ್ರೆ ಗಂಟಲು ದ್ರವ ಪರೀಕ್ಷಾ ಕೇಂದ್ರ ಆರಂಭಿಸುವುದರೊಂದಿಗೆ ಸೋಂಕಿತ ಮಗುವಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ| ಶಾಂತಾರಾಮ ಶೆಟ್ಟಿ, ಆಡಳಿತ ವಿಭಾಗದ ಸಹ ಕುಲಾಧಿಪತಿ ಎನ್ ವಿಶಾಲ್ ಹೆಗ್ಡೆ, ಕುಲಪತಿ ಡಾ| ಸತೀಶ್ ಭಂಡಾರಿ,

ಸಹ ಕುಲಪತಿ ಡಾ| ಎಂ.ಎಸ್. ಮೂಡಿತ್ತಾಯ, ಕುಲಸಚಿವೆ ಅಲ್ಕಾ ಕುಲಕರ್ಣಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್  ಹೀರೆಮಠ್,

ಕ್ಷೇಮ ಡೀನ್ ಡಾ| ಪಿ.ಎಸ್. ಪ್ರಕಾಶ್, ವೈಸ್ ಡೀನ್ ಗಳಾದ ಡಾ| ಜಯಪ್ರಕಾಶ್ ಶೆಟ್ಟಿ, ಡಾ| ಅಮೃತ್ ಮಿರಾಜ್ಕರ್, ಎ.ಬಿ. ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಯು. ಎಸ್.ಕೃಷ್ಣ ನಾಯಕ್ ಉಪಸ್ಥಿತರಿದ್ದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading

hasana

ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Published

on

ಹಾಸನ: ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕ (29) ಎಂಬುವವರು ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ಆಗಮಿಸಿದ್ದರು. ಫೆಬ್ರವರಿ 12 ರಂದು ರಾತ್ರಿ 7-30 ರ ಸುಮಾರಿಗೆ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕ ತಮಗೆ ಯಾರೋ ಪರಿಚಯದವರು ಸಿಕ್ಕಿರುವುದಾಗಿ ತಿಳಿಸಿದ್ದರು. ಆ ಮಾತು ಮುಗಿಯುತ್ತಿದ್ದಂತೆಯೇ ಫೋನ್‌ ಸ್ವಿಚ್‌ ಆಫ್‌ ಆಗಿದೆ.

ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರೂ ಸಹ ಸ್ಪಂದಿಸಿದ ಅರೆಹಳ್ಳಿ ಮತ್ತು ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಮಹಿಳೆಯ ಬ್ಯಾಗ್, ಚಪ್ಪಲಿ ಹಾಗೂ ಒಳ ಉಡುಪುಗಳು ಪತ್ತೆಯಾಗಿರುವುದು ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಮಹಿಳೆಯು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಒಡವೆಗಾಗಿ ದುಷ್ಕರ್ಮಿಗಳು ಮಹಿಳೆಯನ್ನ ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page