Connect with us

LATEST NEWS

ಸಾವಿನ ದಾರಿ ಹಿಡಿದ ನವವಿವಾಹಿತೆ; ಆಡಿಯೋ ಮೆಸೇಜ್‌ನಲ್ಲಿತ್ತು ನೋವಿನ ಕತೆ!

Published

on

ಮಂಗಳೂರು/ತಿರುಪ್ಪೂರು : ನವವಿವಾಹಿತೆಯೊಬ್ಬಳು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ತವಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ನಡೆದಿದೆ. ರಿಧನ್ಯಾ(27) ಆತ್ಮಹ*ತ್ಯೆ ಮಾಡಿಕೊಂಡ ನವವಿವಾಹಿತೆ.

ಈ ವರ್ಷದ ಏಪ್ರಿಲ್​​ನಲ್ಲಿ ಕವಿನ್ ಕುಮಾರ್ ಜೊತೆಗೆ ರಿಧಾನ್ಯಾ ವಿವಾಹ ನಡೆದಿತ್ತು. ಮದುವೆ ಸಂದರ್ಭ ವರನ ಕಡೆಯವರಿಗೆ 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು, 800 ಗ್ರಾಂ ಚಿನ್ನವನ್ನು ವರದಕ್ಷಿಣೆ ಆಗಿ ರಿಧನ್ಯಾ ತಂದೆ ಅಣ್ಣಾದೊರೈ ಕೊಟ್ಟಿದ್ದರು. ಆದರೂ ಗಂಡನ ಮನೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಲಾಗಿದೆ. ಹೀಗಾಗಿ ರಿಧನ್ಯಾ ದೇವಸ್ಥಾನಕ್ಕೆ ಹೋಗುತ್ತೇನೆಂದು ಹೇಳಿ ಕಾರಿನಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ

ತಂದೆಗೆ ಆಡಿಯೋ ಮೆಸೇಜ್ ಮಾಡಿದ್ದ ರಿಧನ್ಯಾ :

ಆತ್ಮಹ*ತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ರಿಧನ್ಯಾ ತನ್ನ ತಂದೆ ಅಣ್ಣಾದೊರೈಗೆ 8 ವಾಯ್ಸ್ ಮೆಸೇಜ್ ಕಳಿಸಿದ್ದರು. ಅದರಲ್ಲಿ ತನ್ನ ಗಂಡನ ಮನೆಯವರ ಕಾಟದ ಬಗ್ಗೆ ಬಿಚ್ಚಿಟ್ಟಿದ್ದಾರೆ. ನನ್ನ ಈ ನಿರ್ಧಾರಕ್ಕಾಗಿ ಕ್ಷಮಿಸಿ. ಗಂಡ ಹಾಗೂ ಅತ್ತೆ, ಮಾವ ಕೊಡುತ್ತಿದ್ದ ಕಿರು*ಕುಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ಗೊತ್ತಾಗುತ್ತಿಲ್ಲ.

ನನ್ನ ಮಾತು ಕೇಳಿದವರು, ಜೀವನ ಅಂದ್ರೆ ಹೀಗೆ ಇರುತ್ತೆ, ಜೀವನದಲ್ಲಿ ಇವುಗಳ ಬಗ್ಗೆ ರಾಜೀ ಮಾಡಿಕೊಳ್ಳಬೇಕು ಎನ್ನುತ್ತಾರೆ. ಅವರಿಗೆ ನನ್ನ ನೋ*ವು ಅರ್ಥವಾಗಲ್ಲ. ನೀವು ನನ್ನ ಬಗ್ಗೆ ಅನುಮಾನ ಪಡಬಹುದು. ಆದರೇ, ನಾನು ಸುಳ್ಳು ಹೇಳುತ್ತಿಲ್ಲ. ಎಲ್ಲರೂ ನಾಟಕವಾಡುತ್ತಿದ್ದಾರೆ, ಅದಕ್ಕಾಗಿ ನಾನು ಮೌನವಾಗಿದ್ದೇನೆ. ಇದೆಲ್ಲವನ್ನು ನೋಡುತ್ತಾ ನನಗೆ ಬದುಕಲು ಸಾಧ್ಯವಿಲ್ಲ ಅಪ್ಪ.

ಈ ನರಕವನ್ನು ಬಿಟ್ಟು ನಿಮ್ಮ ಬಳಿ ಬರಬೇಕೆಂದುಕೊಂಡರೂ  ನನ್ನ ಜೀವನ ಪೂರ್ತಿ ನಾನು ನಿಮಗೆ ಹೊರೆಯಾಗಿರಲು ಇಷ್ಟ ಪಡಲ್ಲ. ನಾನು  ಯಾವುದೇ ತಪ್ಪು ಮಾಡಿಲ್ಲ. ಈ ಜೀವನವನ್ನು ನಾನು ಇಷ್ಟಪಡಲ್ಲ. ಗಂಡ ಕವಿನ್ ಕುಮಾರ್ ದೈಹಿಕವಾಗಿ, ಅತ್ತೆ, ಮಾವ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ರಿಧನ್ಯಾ ವಾಯ್ಸ್ ಮೆಸೇಜ್‌ನಲ್ಲಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಫೇಸ್ ಬುಕ್ ಲವ್…ರಿಲೇಷನ್ ಶಿಪ್…ಎರಡು ಶಿಶುಗಳ ಹ*ತ್ಯೆಗೈದ ಪಾಪಿಗಳು ಅಂದರ್

ಸದ್ಯ ಪೊಲೀಸರು ರಿಧನ್ಯಾರ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page