Connect with us

DAKSHINA KANNADA

ಮಂಗಳೂರು: PFI & SDPI ಸಂಘಟನೆ ನಾಯಕರ ಮನೆ ಕಚೇರಿಗಳ ಮೇಲೆ ಬೆಳ್ಳಂಬೆಳಗ್ಗೆ NIA ರೇಡ್..!

Published

on

ಮಂಗಳೂರು: ಇಂದು ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಎನ್‌ಐಎ ದಾಳಿ ನಡೆದಿದೆ. ಮಂಗಳೂರಿನ ಪಿಎಫ್ಐ ಮತ್ತು ಎಸ್ ಡಿಪಿಐ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ನಗರದ ನೆಲ್ಲಿಕಾಯಿ ರಸ್ತೆಯ ಪಿಎಫ್ ಐ ಮತ್ತು ಎಸ್ ಡಿಪಿಐ ಜಿಲ್ಲಾ ಕಚೇರಿ ಮೇಲೆ ದಾಳಿ ನಡೆದಿದೆ.

ಅಲ್ಲದೆ ಬಜಪೆ, ಜೋಕಟ್ಟೆ ಸೇರಿ ಹಲವೆಡೆ ಇರುವ ನಾಯಕರ ಮನೆಗಳ ಮೇಲೆ ದಾಳಿ ನಡೆದಿದೆ. ಎನ್‌ಐಎ ದಾಳಿ ನಡೆಸುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಎನ್ ಐಎ ಗೋ ಬ್ಯಾಕ್ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಕುಳಾಯಿ, ಕಾವೂರು, ಜೋಕಟ್ಟೆ, ಬಜಪೆಯ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಮನೆಗಳ ಮೇಲೂ ದಾಳಿ ನಡೆದಿದ್ದು, ಘಟನಾ ಸ್ಥಳದಲ್ಲಿ ಸಿಆರ್ ಪಿಎಫ್ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಇನ್ನು ಕಾರ್ಯಕರ್ತರು ವಿಚಾರ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಂತೆ ನೆಲ್ಲಿಕಾಯಿ ರಸ್ತೆ ಸಂಚಾರವನ್ನು ಪೊಲೀಸರು ಬಂದ್ ಮಾಡಿದ್ದಾರೆ. ಅಲ್ಲದೆ ಅರೆಮೀಸಲು ಪಡೆಯಿಂದ ಭಾರೀ ಕಟ್ಟೆಚ್ಚರವನ್ನೂ ವಹಿಸಲಾಗಿದೆ.

ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳು ಸುಮಾರು 8 ಕಡೆಗಳಲ್ಲಿ ಇರುವ ಪಿಎಫ್ಐ, ಎಸ್ ಡಿಪಿಐ ಮುಖಂಡರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಸುಕಿನ ಜಾವ ಸುಮಾರು 3.30ರಿಂದ 8.30ರವರೆಗೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಧಿಕ್ಕಾರ ಕೂಗುತ್ತಿದ್ದ ಎಸ್‌ಡಿಪಿಐ ಬೆಂಬಲಿಗರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ. ಇನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುವ ಸುದ್ದಿಗಳನ್ನು ಯಾರೂ ನಂಬಬಾರದು.

ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ನಾವೆಲ್ಲ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್ ತಿಳಿಸಿದ್ದಾರೆ.

ಎಸ್‌ಡಿಪಿಐ ಪಕ್ಷವನ್ನು ಎದುರಿಸಲಾಗದ ಬಿಜೆಪಿ ಸರಕಾರ ಎನ್‌ಐಎಯನ್ನು ಮುಂದಿಟ್ಟುಕೊಂಡು ರಾಜಕೀಯ ಪಕ್ಷದ ಕಚೇರಿಗೆ ದಾಳಿ ನಡೆಸಿದೆ. ಇದು ಖಂಡನೀಯ ಎಂದು ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

 

 

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

READ IN ENGLISH : https://www.nammakudlaenglish.com/entry-to-tourist-spots-in-belthangady-banned-from-today/

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page