Connect with us

DAKSHINA KANNADA

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಖಾಸಗಿ ಬಸ್‌ ಪಲ್ಟಿಯಾಗಿ ಓರ್ವ ಸಾವು, 12 ಮಂದಿಗೆ ಗಾಯ

Published

on

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಇಂದು (ಏ.4) ಮುಂಜಾನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ.

ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆಗೆ ಈ ದುರಂತ ಸಂಭವಿಸಿದ್ದು,  ಬೆಂಗಳೂರು, ಯಡಿಯೂರು ನಿವಾಸಿ ಹರ್ಷ (24) ಮೃತ ಪ್ರಯಾಣಿಕ. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ  ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

DAKSHINA KANNADA

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಎರಡನೇ ದಿನವಾದ ಇಂದು ಕೂಡಾ ಮುಂದುವರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ನೆರೆ ರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಮಳೆ ತೀವ್ರವಾಗಿದೆ. ಹವಾಮಾನ ಇಲಾಖೆಯು ನಾಲ್ಕೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ. ರಸ್ತೆ ಕಾಮಗಾರಿ, ಅವೈಜ್ಙಾನಿಕ ಚರಂಡಿ ಕೆಲಸ ಇತ್ಯಾದಿ ಕಾರಣಗಳಿಂದಾಗಿ ಮಳೆ ನೀರು ಸರಾಗವಾಗಿ ಹರಿಯದೆ ಕೃತಕ ನೆರೆ ಬಂದು ಅನೇಕ ಕಡೆಗಳಲ್ಲಿ ನಾಶ ನಷ್ಟ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

ಗಾಳಿ ಮಳೆಗೆ ಮರಗಳು ಬಿದ್ದು ವಿದ್ಯುತ್‌ ಸಂಪರ್ಕ ಹಲವಾರು ಕಡೆಗಳಲ್ಲಿ ಕಡಿತಗೊಂಡಿದೆ. ಮಂಗಳೂರು ನಗರ, ಉಡುಪಿ ನಗರ, ಮಣಿಪಾಲಗಳಲ್ಲಿ ಅಲ್ಲಲ್ಲಿ ಕೃತಕ ನೆರೆಯಿಂದ ಹಾನಿ ಸಂಭವಿಸಿದೆ. ಇಂದು ಮುಂಜಾನೆಯಿಂದ ಬಿಟ್ಟು ಬಿಟ್ಟು ಭಾರೀ ಮಳೆ ಬರುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Continue Reading

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page