Connect with us

DAKSHINA KANNADA

ಮಂಗಳೂರು ಬೆಳವಣಿಗೆಗೆ ನೂತನ ಕೊಡುಗೆ ‘ಪಡೀಲ್‌ಗೇಟ್‌’: ಶಾಸಕ ಕಾಮತ್

Published

on

ಮಂಗಳೂರು: ನಗರದ ಪಡೀಲ್‌ ಬಳಿ ನೂತನವಾಗಿ ನಿರ್ಮಾಣಗೊಂಡ ‘ಪಡೀಲ್ ಗೇಟ್’ ಕಮರ್ಷಿಯಲ್ ಸೆಂಟರ್ ನ ಉದ್ಘಾಟನೆ ಹಾಗೂ ಇಲ್ಲಿ ಆಯೋಜಿಸಲಾಗಿರುವ ಡಿಸ್ಕೌಂಟ್ ಮೇಳದ ಉದ್ಘಾಟನೆ ಶುಕ್ರವಾರ ನೆರವೇರಿತು.


ಪಡೀಲ್ ಗೇಟ್ ಕಮರ್ಷಿಯಲ್ ಸೆಂಟರನ್ನು ಮಂಗಳೂರು ಮೇಯರ್ ಜಯಾನಂದ ಅಂಚನ್ ಉದ್ಘಾಟಿಸಿದರು. ಈ ಸೆಂಟರ್ ನಲ್ಲಿ ಆಯೋಜಿಸಲಾಗಿರುವ ‘ಮಂಗಳೂರು ಕಾರ್ನಿವಲ್’ ವಸ್ತು ಪ್ರದರ್ಶನ ಮೇಳವನ್ನು ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿ, ವೇಗವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಹಾಗೂ ವಿಸ್ತಾರವಾಗುತ್ತಿರುವ ಮಂಗಳೂರು ನಗರದ ಬೆಳವಣಿಗೆ ಪಡಿಲ್ ಗೇಟ್ ಕಮರ್ಷಿಯಲ್ ಸೆಂಟರ್ ದೊಡ್ಡ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಮಾಜಿ ಶಾಸಕ ಜೆ.ಆರ್.ಲೊಬೋ ಅವರು ಮಾತನಾಡಿ, ಹೊಸ ಜಿಲ್ಲಾಧಿಕಾರಿ ಕಚೇರಿಗೆ ಸನಿಹದಲ್ಲೇ ನಿರ್ಮಾಣಗೊಂಡ ಪಡೀಲ್ ಗೇಟ್ ಈ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.

ಕ್ರೆಡೈ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರು ಮಾತನಾಡಿ, ಸ್ಮಾರ್ಟ್ ಸಿಟಿ ಮಂಗಳೂರು ಅಭಿವೃದ್ಧಿಗೆ ಪೂರಕವಾಗುವಂತೆ ಉದ್ದಿಮೆದಾರರು , ಬಿಲ್ಡರ್ ಗಳು ಯೋಜನೆಯನ್ನು ರೂಪಿಸಬೇಕು , ಇದಕ್ಕೆ ಪೂರಕವಾಗಿ ಆಡಳಿತ ವ್ಯವಸ್ಥೆ ಸ್ಪಂದಿಸಬೇಕು ಎಂದು ಆಶಯ ವ್ಯಕ್ತ ಪಡಿಸಿದರು.

ಕಾರ್ಯಕ್ರಮಕ್ಕೆ ಮಾಜಿ ಸಚಿವ ರಮಾನಾಥ ರೈ , ಕಾರ್ಪೊರೇಟರ್ ರೂಪಶ್ರೀ ಪೂಜಾರಿ , ಮನೋಹರ್ ಕದ್ರಿ ಶುಭ ಕೋರಿದರು.

ಸ್ಥಳದ ಮಾಲೀಕರಾದ ಸತೀಶ್ ಶೆಟ್ಟಿ, ಬಾವ ಬಿಲ್ಡರ್ಸ್ ನ ಪ್ರವರ್ತಕ ಅಬ್ದುಲ್ ಖಾದರ್, ಹೈಲ್ಯಾಂಡ್ ಬಿಲ್ಡರ್ಸ್ ಪಾಲುದಾರರಾದ ಮುಬಾರಕ್ ಸುಲೈಮಾನ್ , ಕೆ.ಎ.ಇಬ್ರಾಹಿಂ ಉಪಸ್ಥಿತರಿದ್ದರು.

ಡಿಂಕಿ ಡೈನ್ ಮಾಲಕ ಸ್ವರ್ಣ ಸುಂದರ್ ಸ್ವಾಗತಿಸಿದರು. ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ವಂದಿಸಿದರು.

ಪಡೀಲ್ ಗೇಟ್ ನಲ್ಲಿ ಆಯೋಜಿಸಲಾಗಿರುವ ಡಿಸ್ಕೌಂಟ್ ಮೇಳ ಜನವರಿ 4ರ ತನಕ ನಡೆಯಲಿದೆ. ವೈವಿಧ್ಯಮಯ ಉತ್ಪನ್ನಗಳು ವಿಶೇಷ ರಿಯಾಯಿತಿಯಲ್ಲಿ ಈ ಮೇಳದಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page