Connect with us

DAKSHINA KANNADA

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ನೇಮಕ..!

Published

on

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.

ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು.

ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಹೊಂದಿರದ, ಕನಿಷ್ಠ ಟಿಕೆಟ್‌ಗಾಗಿ ಅರ್ಜಿಯನ್ನೂ ಸಲ್ಲಿಸದ ಇವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಬಂಡಾಯವೇಳ ಬಹುದು ಎನ್ನುವ ಕಾರಣಕ್ಕೆ ಇವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗಿತ್ತು.

ಇದೀಗ ಚುನಾವಣಾ ಹೊತ್ತಿನಲ್ಲೇ ಆರ್‌ ಪದ್ಮರಾಜ್‌ ಅವರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page