Connect with us

LATEST NEWS

ಮಂಗಳೂರು: ಹೆತ್ತ ತಂದೆ-ತಾಯಿಯನ್ನೇ ಮುಗಿಸಿದ ಪಾಪಿ ಮಗ…!

Published

on

ಮಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ತಂದೆ, ತಾಯಿಯನ್ನು ರಾಡ್​ನಿಂದ ಹೊಡೆದು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಂಗಳವಾರ ನಡೆದಿದೆ.

ಕೊಲೆಯಾದ ತಂದೆಯನ್ನು ಮಂಗಳೂರು ಮೂಲದ ಭಾಸ್ಕರ್(64) ಹಾಗೂ ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿ ಶಾಂತಾ(60) ಎಂದು ಗುರುತಿಸಲಾಗಿದೆ.

 

 ಆರೋಪಿ ಶರತ್

ಮಂಗಳೂರು ಮೂಲದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದು ಹಿರಿಯ ಮಗ ಖಾಸಗಿ ಕಂಪನಿಯನ್ನು ಉದ್ಯೋಗ ಮಾಡಿಕೊಂಡಿದ್ದಾನೆ. 2ನೇಯವನು ಆರೋಪಿ ಶರತ್ (27) ಎಂದು ಗುರುತಿಸಲಾಗಿದೆ. ಘಟನೆಯ ನಂತರ ಆರೋಪಿ ಶರತ್ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಮುಂದುವರೆದಿದೆ.

ಇಂದು ಬೆಳಗ್ಗೆ ಉದ್ಯೋಗಕ್ಕೆ ತೆರಳಿದ್ದ ಹಿರಿಯ ಮಗ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಯಾರೂ ಫೋನ್ ರಿಸೀವ್ ಮಾಡದಿದ್ದಾಗ ಪಕ್ಕದ್ಮನೆಯವರಿಗೆ ಕರೆ ಮಾಡಿ ಪೋಷಕರ ಬಗ್ಗೆ ವಿಚಾರಿಸಿದ್ದಾನೆ. ಪಕ್ಕದ ಮನೆಯವರು ಬಂದು ನೋಡಿದಾಗ ಕೊಲೆ ನಡೆದಿರೋದು ಬೆಳಕಿಗೆ ಬಂದಿದೆ.

  ಕೊಲೆಯಾದ ದಂಪತಿ

ಶರತ್ ಮಾನಸಿಕವಾಗಿ ನೊಂದಿದ್ದು, ಪೋಷಕರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ. 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಶರತ್‌ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದನು. ಕೆಲಸವಿಲ್ಲದೇ ಮನೆಯಲ್ಲಿರುತ್ತಿದ್ದ ಶರತ್ ವರ್ತನೆ ಸೈಕೋ ರೀತಿಯಲ್ಲಿತ್ತು ಎಂದು ತಿಳಿದು ಬಂದಿದೆ.

LATEST NEWS

ಅಹಮದಾಬಾದ್ ವಿಮಾನ ಪತನ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ನಿಧ*ನ

Published

on

ಮಂಗಳೂರು/ಅಹಮದಾಬಾದ್: ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ವಿಮಾನ ದುರಂತದಲ್ಲಿ ಮೃ*ತಪಟ್ಟಿದ್ದಾರೆ.


ಏರ್ ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಈ ದುರಂತದಲ್ಲಿ ಮೃ*ತಪಟ್ಟಿರುವುದು ದೃಢವಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತದ ಸಾ*ವಿಗೆ ಸಂತಾಪ ಸೂಚಿಸಿದ್ದಾರೆ.

 

Continue Reading

LATEST NEWS

ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

Published

on

ಗುಜರಾತ್​​ನ ಅಹಮದಾಬಾದ್​ನಲ್ಲಿ ಲಂಡನ್​​ಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ.


ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಏರ್ ಇಂಡಿಯಾ ವಿಮಾನ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಲಂಡನ್ ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನ ನಿಲ್ದಾಣದ ಪರಿಧಿಯ ಬಳಿ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಯಾವುದೇ ವಿಮಾನ/ ಹೆಲಿಕಾಪ್ಟರ್‌ ಪತನವಾದರೂ ಪತನದ ತನಿಖೆಯಲ್ಲಿ ಪ್ರಮುಖ ಪಾತ್ರವಹಿಸುವುದು ಬ್ಲ್ಯಾಕ್‌ ಬಾಕ್ಸ್‌.

ಬ್ಲಾಕ್ ಬಾಕ್ಸ್‌ ಅಂದರೆ ಏನು?
ಬ್ಲಾಕ್ ಬಾಕ್ಸ್‌ ಅಂದರೆ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಎರಡು ದೊಡ್ಡ ಲೋಹದ ಪಟ್ಟಿಗೆಗಳಾಗಿದ್ದು, ಹೆಚ್ಚಿನ ವಿಮಾನಗಳಲ್ಲಿ ಒಂದನ್ನು ಮುಂಭಾಗದಲ್ಲಿ ಮತ್ತು ಇನ್ನೊಂದು ಹಿಂಭಾಗದಲ್ಲಿ ಇರಿಸಬೇಕಾಗುತ್ತದೆ. ಈ ರೆಕಾರ್ಡರ್‌ಗಳು ವಿಮಾನ ಹಾರಾಟದ ಬಗ್ಗೆ ಮಾಹಿತಿಯನ್ನು ದಾಖಲಿಸುತ್ತವೆ ಮತ್ತು ವಿಮಾನ ಅಪಘಾತಕ್ಕೆ ಕಾರಣವಾಗುವ ಘಟನೆಗಳನ್ನು ಪುನರ್‌ನಿರ್ಮಿಸಲು ಸಹಕಾರಿಯಾಗುತ್ತವೆ.

ಸಾಮಾನ್ಯವಾಗಿ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿರುತ್ತದೆ.

ಇದನ್ನೂ ಓದಿ: ಅಹಮದಾಬಾದ್: ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ

ಬ್ಲ್ಯಾಕ್ ಬಾಕ್ಸ್ ಹೆಸರು; ಬಣ್ಣ ಕಿತ್ತಳೆ
ವಿಮಾನದಲ್ಲಿ ಇರಿಸಿರುವ ಈ ಪೆಟ್ಟಿಗೆಗಳನ್ನು ಬ್ಲ್ಯಾಕ್‌ ಬಾಕ್ಸ್ ಎಂದು ಕರೆದರೂ ಸಹ ಇದು ಕಪ್ಪಗೆ ಇರುವುದಿಲ್ಲ. ಈ ಕಪ್ಪು ಪೆಟ್ಟಿಗೆಗಳು ಜ್ವಲಂತ, ಹೆಚ್ಚಿನ ಗೋಚರತೆಗಾಗಿ ಕಿತ್ತಳೆ ಬಣ್ಣದ್ದಾಗಿರುತ್ತವೆ. ಇದರಿಂದಾಗಿ ಕ್ರ್ಯಾಶ್ ಸೈಟ್‌ನಲ್ಲಿ ಅವುಗಳನ್ನು ಹುಡುಕುವ ಸಿಬ್ಬಂದಿಗಳು ಅವುಗಳನ್ನು ಹುಡುಕಲು ಸುಲಭವಾಗಿರುತ್ತದೆ.

ಬ್ಲ್ಯಾಕ್ ಬಾಕ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ ?
ಇದು ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲ್ಯಾಕ್‌ ಬಾಕ್ಸ್‌ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್‌ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್‌ ಹೊರ ಸೂಸುತ್ತಿರುತ್ತದೆ.

ಡೇಟಾ ರಿಕವರ್ ಮಾಡುವುದು ಹೇಗೆ?
ಕಪ್ಪು ಪೆಟ್ಟಿಗೆಗಳಿಂದ ರಿಕವರ್‌ ಆದ ಡೇಟಾವನ್ನು ವಿಶ್ಲೇಷಿಸಲು ಸಾಮಾನ್ಯವಾಗಿ 10-15 ದಿನಗಳನ್ನು ತೆಗೆದುಕೊಳ್ಳುತ್ತದೆ. ಈ ಮಧ್ಯೆ, ತನಿಖಾಧಿಕಾರಿಗಳು ಏರ್ ಟ್ರಾಫಿಕ್ ಕಂಟ್ರೋಲ್ ಸಿಬ್ಬಂದಿಯಿಂದ ಹೇಳಿಕೆ ಪಡೆಯುವುದು ಮತ್ತು ಎಟಿಸಿ ಹಾಗೂ ಪೈಲಟ್‌ಗಳ ನಡುವಿನ ಸಂಭಾಷಣೆಯ ರೆಕಾರ್ಡಿಂಗ್‌ಗಳಂತಹ ಇತರ ಸುಳಿವುಗಳಿಗಾಗಿಯೂ ನೋಡುತ್ತಾರೆ ಎಂದು ತಿಳಿದುಬಂದಿದೆ.

Continue Reading

LATEST NEWS

ಏರ್‌ ಇಂಡಿಯಾ ವಿಮಾನ ದುರಂತ; ಪ್ರಧಾನಿ ಮೋದಿ ಸಂತಾಪ

Published

on

ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್‌’ನಲ್ಲಿ ನಡೆದ ಈ ದುರಂತವು “ಪದಗಳಿಗೆ ಮೀರಿದ ಹೃದಯವಿದ್ರಾವಕ” ಎಂದು ಪ್ರಧಾನಿ ಹೇಳಿದರು. ಅಲ್ಲದೇ ಈ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ ಎಂದು ಪ್ರಧಾನಿ ಮೋದಿ X ನಲ್ಲಿ ಬರೆದಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page