Connect with us

ಲಾಕ್ ಡೌನ್ ಆದೇಶ ಗಾಳಿಗೆ ತೂರಿ ಸೈಂಟ್ ಮೆರೀಸ್ ದ್ವೀಪದಲ್ಲಿ ಪಾರ್ಟಿ ಮಾಡಿದ್ರಾ.??

Published

on

ಲಾಕ್ ಡೌನ್ ಆದೇಶ ಗಾಳಿಗೆ ತೂರಿ ಸೈಂಟ್ ಮೆರೀಸ್ ದ್ವೀಪದಲ್ಲಿ ಪಾರ್ಟಿ ಮಾಡಿದ್ರಾ.??

ಉಡುಪಿ: ಕೊರೊನಾ ಮಹಾಮಾರಿ ಭೀತಿಯಿಂದ ಸಾರ್ವಜನಿಕ ಸ‍್ಥಳಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ವಿಧಿಸಿದ್ದರೂ ಅಲ್ಲಲ್ಲಿ ಈ ನಿಯಮಾವಳಿಗಳನ್ನು ಮುರಿಯುವ ಘಟನಾವಳಿಗಳು ನಡೆಯುತ್ತಲೇ ಇದೆ.

ಇದೀಗ ಉಡುಪಿಯ ಮಲ್ಪೆಯಲ್ಲಿರುವ ಸೈಂಟ್ ಮೆರೀಸ್ ದ್ವೀಪದಲ್ಲಿ ಲಾಕ್ ಡೌನ್ ನಿಯಮಗಳನ್ನು ಗಾಳಿಗೆ ತೂರಿದ ಘಟನೆ ನಡೆದಿದೆ.

ಸದ್ಯ ಸೈಂಟ್ ಮೆರೀಸ್ ದ್ವೀಪದಲ್ಲಿ ಗುಂಡು ಪಾರ್ಟಿ ನಡೆಸಿದ ಆರೋಪ ಕೇಳಿ ಬರುತ್ತಿದೆ.

ದ್ವೀಪದಲ್ಲಿ ನಿನ್ನೆ ರಾತ್ರಿ 9.30ಕ್ಕೆ ದೀಪದ ಬೆಳಕು ಕಂಡಿದ್ದು, ಸ್ಥಳೀಯರು ಈ ಬಗ್ಗೆ ಮಲ್ಪೆ ಹಾಗೂ ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಪೊಲೀಸರು ಅಲರ್ಟ್ ಆಗುತ್ತಿದ್ದಂತೆ ದ್ವೀಪದಲ್ಲಿ ಲೈಟ್ ಬಂದ್ ಆಗಿದ್ದು, ವಿಚಾರಿಸಿದಾಗ ಸೈಂಟ್ ಮೆರೀಸ್ ದ್ವೀಪದ ನಿರ್ವಾಹಕರ ಕಾರು ಸ್ಥಳದಲ್ಲಿದ್ದದ್ದು ಕಂಡುಬಂದಿದೆ.

ಪ್ರವಾಸಿ ಬೋಟ್ ಜಟ್ಟಿಯ ಸಮೀಪ ಬೀಚ್ ನಿರ್ವಾಹಕ ಸುದೇಶ್ ಶೆಟ್ಟಿ ಹಾಗೂ ನಿರ್ಮಿತಿ ಕೇಂದ್ರ ಸಿಬ್ಬಂದಿಯು ಕಾರು ನಿಲ್ಲಿಸಿದ್ದು,

ದ್ವೀಪದ ನಿರ್ವಾಹಕ ಸುದೇಶ್ ಶೆಟ್ಟಿ ತನ್ನ ಕಾರು ಇರುವುದನ್ನು ಒಪ್ಪಿಕೊಂಡಿದ್ದಾರೆ.

ದ್ವೀಪದಲ್ಲಿ ಪರಿಕರಗಳ ಸಾಗಾಟಕ್ಕೆ ಬಂದಿರುವುದಾಗಿ, ಹೈಟೈಟ್ ಇರುವ ಕಾರಣ ತೀರ ಪ್ರದೇಶಕ್ಕೆ ಬರಲಾಗಲಿಲ್ಲ ಎಂದು ಹೇಳಿದ ಸುದೇಶ್ ಶೆಟ್ಟಿ ಮತ್ತು ಅವರ ಸ್ನೇಹಿತರು ರಾತ್ರಿ ಒಂದು ಗಂಟೆಗೆ ದ್ವೀಪದಿಂದ ವಾಪಾಸಾಗಿದ್ದಾರೆ.

ಸ್ಥಳೀಯ ಚುನಾಯಿತ ನಗರಸಭಾ ಸದಸ್ಯ ಯೋಗೀಶ ಅವರು ಈ ಬಗ್ಗೆ ದೂರು ನೀಡಿದ್ದು, ಕರಾವಳಿ ಕಾವಲು ಪಡೆ ಪೊಲೀಸರಿಂದ ವಿಚಾರಣೆ ನಡೆಸಿದ್ದಾರೆ.

ಇನ್ನು ಈ ಲಾಕ್ ಡೌನ್ ನಿಷೇಧಿತ ಅವಧಿಯಲ್ಲಿ ದ್ವೀಪಕ್ಕೆ ತೆರಳಿದ ಬಗ್ಗೆ ಸ್ಥಳೀಯರ ಆಕ್ಷೇಪ ವ್ಯಕ್ತಪಡಿಸಿದ್ದು, ದ್ವೀಪದಲ್ಲಿ ಪಾರ್ಟಿ ನಡೆಸಿದ ಬಗ್ಗೆ ಕರಾವಳಿ ಕಾವಲು ಪಡೆಗೆ ದೂರು ನೀಡಿದ್ದಾರೆ.

ದ್ವೀಪಕ್ಕೆ ರಾತ್ರಿ ಹೊತ್ತು ಯಾರೂ ತೆರಳುವಂತಿಲ್ಲ. ಈ ಹಿನ್ನೆಲೆ ವಿಚಾರಣೆ ನಡೆಸಿ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿಗೆ ವರದಿ ನೀಡೋದಾಗಿ ಕರಾವಳಿ ಕಾವಲು ಪಡೆ ಪೊಲೀಸರು ಹೇಳಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಇವನೆಂಥಾ ಸೈಕೋ ಕಾಮಿ..! ಪಬ್ಲಿಕ್ ಟಾಯ್ಲೆಟ್ ನಲ್ಲಿ ನಾಯಿ ಮರಿಯ ಮೇಲೆ ಅತ್ಯಾಚಾರ..!

Published

on

ಮುಂಬೈ: ಇವನೆಂಥಾ ಕಾಮ ಪಿಶಾಚಿ. ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಈ ಕಾಮುಕನೊಬ್ಬ ಸಾರ್ವಜನಿಕ ಶೌಚಾಲಯದಲ್ಲಿ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ ಆರೋಪಿಯನ್ನು  ವಶಕ್ಕೆ ತೆಗೆದುಕೊಳ್ಳಲಾಗಿದೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ವೀಡಿಯೋದಲ್ಲಿ ಆ ವ್ಯಕ್ತಿ ಆರಂಭದಲ್ಲಿ ಬಾಗಿಲು ತೆರೆಯಲು ನಿರಾಕರಿಸುವುದನ್ನು ಕಾಣಬಹುದು. ನಂತರ ಪೊಲೀಸರು ಬಲವಂತವಾಗಿ ಒಳಗೆ ಪ್ರವೇಶಿಸಿ ಆತನನ್ನು ವಶಕ್ಕೆ ಪಡೆದರು.

ನಾಯಿಮರಿಯನ್ನು ತಕ್ಷಣವೇ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ನಾಯಿಮರಿ ಈಗ ವೈದ್ಯಕೀಯ ಆರೈಕೆಯಲ್ಲಿದೆ ಮತ್ತು ಗಂಭೀರ ಸ್ಥಿತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

Continue Reading

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವೀಡಿಯೊ ನೋಡಿ:

 

Continue Reading
Advertisement

Trending

Copyright © 2025 Namma Kudla News

You cannot copy content of this page