Connect with us

LATEST NEWS

ಇಂಡಿಗೋ ವಿಮಾನದಲ್ಲಿ “ಮೇಡೇ” ಘೋಷಿಸಿದ ಪೈಲಟ್; ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

Published

on

ಬೆಂಗಳೂರು: ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೂ ವಿಮಾನದಲ್ಲಿ ಇಂಧನದ ಕೊರತೆಯಿಂದಾಗಿ ಪೈಲಟ್ ‘ಮೇ ಡೇ’ ಘೋಷಿಸಿದ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ ಎಂದು ಮೂಲಗಳು ತಿಳಿಸಿವೆ.

6ಇ6764 ಸಂಖ್ಯೆಯ ವಿಮಾನವು ನಿಗದಿಯಂತೆ ಗುವಾಹಟಿಯಿಂದ 168 ಪ್ರಯಾಣಿಕರನ್ನು ಹೊತ್ತು ಚೆನ್ನೈಗೆ ಹೊರಟಿತ್ತು. ಆದರೆ ಇಂಧನದ ಸಮಸ್ಯೆಯಿಂದಾಗಿ ಚೆನ್ನೈನಲ್ಲಿ ಇಳಿಯಲು ಸಾಧ್ಯವಾಗದ ಕಾರಣ ರಾತ್ರಿ 8.11ಕ್ಕೆ ಪೈಲಟ್ ಬೆಂಗಳೂರು ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ನಲ್ಲಿ “ಮೇಡೇ” ಘೋಷಿಸಿದರು.

ಇದನ್ನೂ ಓದಿ: ಇಸ್ರೇಲ್-ಇರಾನ್ ಯುದ್ದದಲ್ಲಿ ಬಹಿರಂಗವಾಗಿ ಸೇರಿಕೊಂಡ ಅಮೆರಿಕ; ದಾಳಿಯ ಬೆನ್ನಲ್ಲೇ ಪ್ರತಿಕ್ರಿಯಿಸಿದ ಇರಾನ್

ವಿಮಾನ ನಿಲ್ದಾಣದಲ್ಲಿ ದಟ್ಟಣೆಯಿಂದಾಗಿ ಪೈಲಟ್ ಚೆನ್ನೈನಲ್ಲಿ ಇಳಿಯಲು ಅನುಮತಿ ಪಡೆದಿಲ್ಲ. ಅಂತಿಮವಾಗಿ ಬೆಂಗಳೂರು ವಿಮಾನ ನಿಲ್ದಾಣದ ಕಡೆಗೆ ಹೋಗಲು ನಿರ್ಧರಿಸಿದರು ಎಂದು ಮೂಲಗಳು ತಿಳಿಸಿವೆ.

ರಾತ್ರಿ 8.15ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಅವಕಾಶ ನೀಡಲಾಯಿತು. ನಂತರ ವಿಮಾನಕ್ಕೆ ಇಂಧನ ತುಂಬಿಸಲಾಯಿತು ಮತ್ತು ಪ್ರಯಾಣಿಕರಿಗೆ ಅಲ್ಲಿಯೇ ಉಪಹಾರವನ್ನು ನೀಡಲಾಯಿತು. ನಂತರ ವಿಮಾನವು ಇಂಧನ ತುಂಬಿದ ನಂತರ ರಾತ್ರಿ 10.24 ಕ್ಕೆ ಚನ್ನೈಗೆ ಹೊರಟು ಸಾಮಾನ್ಯವಾಗಿ ಅಲ್ಲಿ ಲ್ಯಾಂಡ್ ಆಯಿತು.

DAKSHINA KANNADA

72ನೇ ಅಖಿಲ ಭಾರತ ಸಹಕಾರ ಸಪ್ತಾಹ : ಆಕರ್ಷಕ ಮೆರವಣಿಗೆ

Published

on

ಮಂಗಳೂರು : ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’  ಎಂಬ ಧ್ಯೇಯ ವಾಕ್ಯದೊಂದಿಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಇಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಮೊದಲು ಕೊಡಿಯಾಲ್‌ ಬೈಲಿನ  ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಿಂದ ಕರಾವಳಿ ಉತ್ಸವ ಮೈದಾನ ತನಕ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆಗೆ  ರಾಜ್ಯ ವಿಧಾನ ಸಭೆಯ ಸ್ಪೀಕರ್‌ ಯು.ಟಿ. ಖಾದರ್ ಚಾಲನೆ ನೀಡಿದರು.

ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್ .ರಾಜೇಂದ್ರ ಕುಮಾರ್, ಸಹಕಾರಿ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ನಬಾರ್ಡ್ ಜನರಲ್ ಮ್ಯಾನೇಜರ್ ಡಾ. ಸುರೇಂದ್ರ ಬಾಬು ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ 45ಕ್ಕೂ ಅಧಿಕ ಟ್ಯಾಬ್ಲೋ, ಡೊಳ್ಳು, ಕುಣಿತ, ಕಂಗೀಲು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕಲಾ ತಂಡಗಳು ಭಾಗವಹಿಸಿದ್ದವು.

ಸಹಕಾರ ಬಂಧುಗಳು ಹಾಗೂ ಸ್ವಸಹಾಯ ಗುಂಪಿನ ಸದಸ್ಯರು ಪಾಲ್ಗೊಂಡಿದ್ದರು. ಸಹಕಾರ ರಥ, ಘಟೋತ್ಕಜ, ಚೆಂಡೆ, ಕೊಂಬು, ಸಹಕಾರಿ ಬಣ್ಣದ ಕೊಡೆಗಳು, ಭುವನೇಶ್ವರಿ ದೇವಿಯ ಸ್ತಬ್ಧಚಿತ್ರ, ಪುರುಷರ ಹಾಗೂ ಮಹಿಳೆಯರ ಡೊಳ್ಳು ಕುಣಿತ, ಮೊಳಹಳ್ಳಿ ಶಿವರಾವ್ ಸ್ತಬ್ಧಚಿತ್ರ, ಮಹಿಳೆಯರ ವೀರಗಾಸೆ, ಹೈನುಗಾರಿಕೆ ಸ್ತಬ್ಧಚಿತ್ರ, ಮೀನುಗಾರಿಕೆ ಸ್ತಬ್ಧಚಿತ್ರ, ಹೊನ್ನಾವರ ಬ್ಯಾಂಡ್ , ಕೆಎಂಎಫ್ – ನಂದಿನಿ ಆನ್ ವ್ಹೀಲ್ ಸ್ತಬ್ಧಚಿತ್ರ, ಸುಗ್ಗಿ ಕುಣಿತ, ತುಳುನಾಡು ವೈಭವ ಸ್ತಬ್ಧಚಿತ್ರ, ನವೋದಯ ಪ್ರಚಾರ ವಾಹನ, ಪುರವಂತಿಗೆ, ಗ್ರಾಮೀಣ ಬ್ಯಾಂಕಿಂಗ್ ಚಟುವಟಿಕೆಯ ಸ್ತಬ್ಧಚಿತ್ರ, ಚೆಂಡೆ ವಾಹನ, ಸೋಮನ ಕುಣಿತ, ಪಟ್ಟದ ಕುಣಿತ, ಶಿವನ ಮೂರ್ತಿಯ ಸ್ತಬ್ಧಚಿತ್ರ, ನವೋದಯ ಗುಂಪಿನ ಸಭೆ ನಡೆಸುವ ಸ್ತಬ್ಧಚಿತ್ರ, ಗೊರವರ ಕುಣಿತ, ಪ್ರಾಥಮಿಕ ಪತ್ತಿನ ಸಂಘದ ಸ್ತಬ್ಧಚಿತ್ರ, ಕೃಷಿ ಚಟುವಟಿಕೆಯ ಸ್ತಬ್ಧಚಿತ್ರ, ಉಳುಮೆ ಮಾಡುವ ರೈತನ ಸ್ತಬ್ಧಚಿತ್ರ, ಎಸ್ ಸಿಡಿಸಿಸಿ ಬ್ಯಾಂಕ್ ನ ಮೊಬೈಲ್ ಬ್ಯಾಂಕ್ ವಾಹನ ಮತ್ತಿತರ ಸ್ತಬ್ಧಚಿತ್ರಗಳು ಮೆರವಣಿಗೆಗೆ ಮೆರುಗು ನೀಡಿದವು.

Continue Reading

LATEST NEWS

ಬಿಜೆಪಿ ಟಿಕೆಟ್ ನಿರಾಕರಣೆ; ಆತ್ಮಹತ್ಯೆ ಮಾಡಿಕೊಂಡ ಆರ್‌ಎಸ್‌ಎಸ್ ಕಾರ್ಯಕರ್ತ

Published

on

ಮಂಗಳೂರು/ತಿರುವನಂತಪುರಂ : ಕೇರಳದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ತಿರುವನಂತಪುರಂ ಕಾರ್ಪೊರೇಷನ್‌ನ ತೃಕ್ಕಣ್ಣಪುರಂ ವಾರ್ಡ್‌ನಲ್ಲಿ ಈ ಘಟನೆ ನಡೆದಿದೆ.

ಆನಂದ್ ಕೆ ಥಂಪಿ ಆತ್ಮಹತ್ಯೆ ಮಾಡಿಕೊಂಡವರು. ಆನಂದ್ ಅವರನ್ನು ವಾರ್ಡ್‌ಗೆ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಎಂದು ಹೇಳಲಾಗಿತ್ತು, ಆದರೆ ಅಂತಿಮ ಪಟ್ಟಿಯಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು ಎನ್ನಲಾಗಿತ್ತು. ಹೀಗಾಗಿ ಆನಂದ್ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಹೆಚ್ಚು ಮಾರ್ಕ್ಸ್ ಕೊಡುತ್ತೇನೆಂದು ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ವಿದ್ಯಾರ್ಥಿನಿ ಏನ್ಮಾಡಿದ್ಲು?

ಆ*ತ್ಮಹ*ತ್ಯೆ ಮಾಡಿಕೊಳ್ಳುವ ಮೊದಲು ಆನಂದ್ ವಾಟ್ಸ್ಯಾಪ್ ಮೂಲಕ ಸ್ನೇಹಿತರಿಗೆ ಮೆಸೇಜ್ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ. ಅದರಲ್ಲಿ ಆನಂದ್, ಬಿಜೆಪಿ ಮತ್ತು ಆರ್‌ ಎಸ್‌ ಎಸ್ ನಾಯಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.  ಬಿಜೆಪಿ ಮತ್ತು ಆರ್‌ ಎಸ್‌ ಎಸ್ ನಾಯಕರು ಮರಳು ಮಾಫಿಯಾ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

ಹೆಚ್ಚು ಮಾರ್ಕ್ಸ್ ಕೊಡುತ್ತೇನೆಂದು ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ವಿದ್ಯಾರ್ಥಿನಿ ಏನ್ಮಾಡಿದ್ಲು?

Published

on

ಮಂಗಳೂರು/ಮೈಸೂರು : ವಿದ್ಯಾರ್ಥಿಗಳೇ ಚೆನ್ನಾಗಿ ಓದಿ, ವಿದ್ಯಾವಂತರಾಗಿ, ನಿಮ್ಮ ಕಾಲ ಮೇಲೆ ನೀವು ನಿಲ್ಲುವಂತೆ ಆಗಬೇಕು ಎಂದೆಲ್ಲಾ ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ನೀತಿ ಹೇಳ್ತಾರೆ. ಆದ್ರೆ, ಇಲ್ಲೊಬ್ಬ ಉಪನ್ಯಾಸಕ, ಹೆಚ್ಚು ಮಾರ್ಕ್ಸ್ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸ್ತೇನೆ. ಹೊರಗೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಅಂತ ಕರೆದಿದ್ದಾನಂತೆ. ಆತನ ಉಪಟಳ ತಾಳಲಾರದೆ ವಿದ್ಯಾರ್ಥಿನಿ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಈ ಘಟನೆ ನಡೆದಿರೋದು ಮೈಸೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ. ಉಪನ್ಯಾಸಕ ಭರತ್ ಭಾರ್ಗವ ಮೇಲೆ ಈ ಒಂದು ಗಂ*ಭೀರ ಆರೋಪ ಕೇಳಿ ಬಂದಿದೆ.

ಭರತ್‌ ನ ಅಸಭ್ಯ ವರ್ತನೆ ಬಗ್ಗೆ ವಿದ್ಯಾರ್ಥಿನಿ ಮಹಿಳಾ ಉಪನ್ಯಾಸಕರಿಗೆ ದೂರು ನೀಡಿದ್ದಕ್ಕೆ ಕರೆ ಮಾಡಿ ಬೆದರಿಕೆ ಬೇರೆ ಹಾಕಿದ್ದಾನಂತೆ. ಖಾಸಗಿ ಅಂಗಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದಾನೆ. ತಾನು ಹೇಳಿದಂತೆ ಕೇಳದಿದ್ರೆ ಫೇಲ್ ಮಾಡೋದಾಗಿ ಬೆ*ದರಿಕೆ ಕೂಡ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕಾರಿನ ಮೇಲೆ ಬಿದ್ದ ಕಾಡಾನೆ ; ಆಮೇಲೇನಾಯ್ತು?

ವಿದ್ಯಾರ್ಥಿನಿ ಕಾ*ಮುಕ ಉಪನ್ಯಾಸಕನಿಗೆ ಶಿಕ್ಷೆ ಆಗಬೇಕು ಎಂದು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,  ಎಫ್‌ಐಆ‌ರ್ ದಾಖಲಾಗಿದೆ

Continue Reading
Advertisement

Trending

Copyright © 2025 Namma Kudla News

You cannot copy content of this page