Connect with us

LATEST NEWS

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್‌ ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟ

Published

on

ಮಂಗಳೂರು/ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯ ಲೀಡ್ಸ್‌ನ ಹೆಡಿಂಗ್ಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.


ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಈಗಾಗಲೇ ತನ್ನ ಪ್ಲೇಯಿಂಗ್ ಹನ್ನೊಂದರ ತಂಡವನ್ನು ಘೋಷಿಸಿದೆ. ಇದೀಗ, ಭಾರತ ತಂಡ ಪ್ಲೇಯಿಂಗ್ 11 ಪ್ರಕಟಿಸಿದ್ದು, ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ.
ಸರಣಿಯ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.

ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ತಮಿಳುನಾಡು ಬ್ಯಾಟರ್ ಸಾಯಿ ಸುದರ್ಶನ್ ಅವರು ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದಾರೆ. ಚೇತೇಶ್ವರ ಪೂಜಾರ ಅವರು ಸುದರ್ಶನ್ ಗೆ ಕ್ಯಾಪ್ ನೀಡಿದರು. ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಹಲವು ಸಮಯದಲ್ಲಿ ಬೆಂಚ್ ಕಾಯುತ್ತಿರುವ ಅಭಿಮನ್ಯು ಈಶ್ವರನ್ ಅವರು ಮತ್ತೆ ಕಾಯಬೇಕಾಗಿದೆ.

ಮತ್ತೊಂದೆಡೆ ವಿರಾಟ್, ರೋಹಿತ್ ಅನುಪಸ್ಥಿತಿಯಲ್ಲಿ ನೂತನ ನಾಯಕ ಶುಭಮನ್ ಗಿಲ್ ನಾಯಕತ್ವದಲ್ಲಿ ಮೊದಲ ಸರಣಿಯನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್​ ಕ್ರೇತ್ರದಲ್ಲಿ ತೃತೀಯ ಲಿಂಗಿ ಆಟಗಾರರಿಗೂ ಅವಕಾಶ ಕೊಡಿ; ತೃತೀಯ ಲಿಂಗಿ ಆಗಿದ್ದ ಮಾಜಿ ಕ್ರಿಕೆಟರ್​ನ ಮಗನ ಒತ್ತಾಯ

ಮೂವರು ಕನ್ನಡಿಗರಿಗೆ ಸ್ಥಾನ
ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಎಂಟು ವರ್ಷಗಳ ಬಳಿಕ ರಾಷ್ಟ್ರೀಯ ತಂಡದಲ್ಲಿ ಪಾಲು ಪಡೆದಿದ್ದಾರೆ. ಮತ್ತೊಂದೆಡೆ ಎರಡು ದಶಕದ ಬಳಿಕ ಟೆಸ್ಟ್ ತಂಡದಲ್ಲಿ ಮೂವರು ಕನ್ನಡಿಗರು ಆಡುತ್ತಿದ್ದಾರೆ.

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯಕ್ಕೆ ತಂಡಗಳು
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಟ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ

ಇಂಗ್ಲೆಂಡ್: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್ ಬೈಡನ್ ಕಾರ್ಸ್, ಜೋಶ್ ಟಂಗ್, ಶೋಯೆಬ್ ಬಶೀರ್.

 

 

DAKSHINA KANNADA

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ನವ ವಿವಾಹಿತ ಸಾ*ವು

Published

on

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃ*ತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ 32 ವರ್ಷದ ಭರತ್ ಎಂದು ತಿಳಿದುಬಂದಿದೆ.

ನಗರದ ಮಾಲ್ ಒಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಕಳೆದ ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃ*ತ ಯುವಕ ಭರತ್ ತಾಯಿ, ಪತ್ನಿ ಹಾಗೂ ಮೂವರು ಸೋದರಿಯರು ಅಗಲಿದ್ದಾರೆ.

Continue Reading

LATEST NEWS

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆಯ ಪ್ರಬಲ ಭೂಕಂಪನ

Published

on

ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದ ಘಟನೆ ಇಂದು (ಜು. 10) ಮುಂಜಾನೆ ನಡೆದಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ತಿಳಿಸಿದ್ದು, ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಹೇಳಿದೆ.1 ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

Continue Reading

DAKSHINA KANNADA

ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

Published

on

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Continue Reading
Advertisement

Trending

Copyright © 2025 Namma Kudla News

You cannot copy content of this page