Connect with us

ಕೊರೊನಾದಿಂದ ತತ್ತರಿಸಿದ ದೇಶಕ್ಕೆ ಪ್ರಧಾನಿ ನೀಡಿದ ಬಂಪರ್ ಬಹುಮಾನ.!

Published

on

ಕೊರೊನಾದಿಂದ ತತ್ತರಿಸಿದ ದೇಶಕ್ಕೆ ಪ್ರಧಾನಿ ನೀಡಿದ ಬಂಪರ್ ಬಹುಮಾನ.!

ನವದೆಹಲಿ: ಕೋವಿಡ್‌-19 ಪಿಡುಗಿನಿಂದ ತತ್ತರಿಸಿರುವ ಭಾರತದ ಅರ್ಥ ವ್ಯವಸ್ಥೆಗೆ ಚೈತನ್ಯ ತುಂಬುವಂತಹ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಪ್ರಕಟಿಸಿದ್ದಾರೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ ಈವರೆಗೆ ಪ್ರಕಟಿಸಿರುವ ಉಪಕ್ರಮಗಳು ಸೇರಿ ಸುಮಾರು ರೂ.20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್‌ ನೀಡಲಾಗುವುದು.

ಇದು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ.10 ರಷ್ಟಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹಿಂದೆಂದೂ ಇಲ್ಲದಂತಹ ಬಿಕ್ಕಟ್ಟನ್ನು ಈಗ ಭಾರತವು ಎದುರಿಸುತ್ತಿದೆ. ಕೊರೊನಾ ವೈರಾಣು ವಿರುದ್ಧದ ಹೋರಾಟದಲ್ಲಿ ಭಾರತವು ದಣಿಯುವುದಿಲ್ಲ ಅಥವಾ ಕೈ ಚೆಲ್ಲೋದಿಲ್ಲ.

ನಾವು ನಮ್ಮನ್ನು ರಕ್ಷಿಸಿಕೊಳ್ಳಬೇಕು ಮಾತ್ರವಲ್ಲ ಮುಂದಕ್ಕೂ ಸಾಗಬೇಕು ಎಂದು ದೇಶವನ್ನು ಉದ್ದೇಶಿಸಿ ಮಂಗಳವಾರ (ಮೇ 12) ರಾತ್ರಿ ಎಂಟು ಗಂಟೆಗೆ ಮಾಡಿದ ಭಾಷಣದಲ್ಲಿ ಪ್ರಧಾನಿ ಹೇಳಿದ್ದಾರೆ.

ದೊಡ್ಡ ಮಟ್ಟದ ಆರ್ಥಿಕ ಸುಧಾರಣಾ ಕ್ರಮಗಳೂ ಜಾರಿಯಾಗಲಿವೆ ಎಂಬ ಸುಳಿವನ್ನು ಅವರು ನೀಡಿದ್ದಾರೆ.

ಈಗಿನ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಮಾನವ ಕುಲದ ಪ್ರಗತಿಗೆ ಭಾರತವು ಬಹುದೊಡ್ಡ ಕೊಡುಗೆ ನೀಡಬೇಕು ಎಂದು ಇಡೀ ಜಗತ್ತು ಬಯಸುತ್ತಿದೆ.

ಆದರೆ, ಹೇಗೆ ಎಂಬ ಪ್ರಶ್ನೆ ನಮ್ಮ ಮುಂದೆ ಇದೆ. 130 ಕೋಟಿ ಭಾರತೀಯರು ದೇಶವನ್ನು ಸ್ವಾವಲಂಬಿಯಾಗಿಸುವ ಮೂಲಕ ಇದು ಸಾಧ್ಯ.

ನಮ್ಮಲ್ಲಿ ಸಂಪನ್ಮೂಲ, ಸಾಮರ್ಥ್ಯ, ಜಗತ್ತಿನ ಅತ್ಯುತ್ತಮ ಪ್ರತಿಭೆ ಎಲ್ಲವೂ ಇವೆ. ಅತ್ಯುತ್ತಮ ವಸ್ತುಗಳನ್ನು ನಾವು ತಯಾರಿಸಬೇಕು.

ನಮ್ಮ ಪೂರೈಕೆ ವ್ಯವಸ್ಥೆಯನ್ನು ಆಧುನಿಕಗೊಳಿಸಿ ಸರಪಣಿಯನ್ನು ಉತ್ತಮಪಡಿಸಬೇಕು. ನಮಗಿದು ಸಾಧ್ಯ, ನಾವಿದನ್ನು ಮಾಡಿಯೇ ತೀರುತ್ತೇವೆ’ ಎಂಬ ಆಶಾಭಾವವನ್ನು ಮೋದಿ ವ್ಯಕ್ತಪಡಿಸಿದ್ದಾರೆ.

ಈಗ ನಮ್ಮ ಮುಂದೆ ಇರುವ ದುರಂತವು ಒಂದು ಸೂಚನೆಯನ್ನು, ಒಂದು ಸಂದೇಶವನ್ನು, ಒಂದು ಅವಕಾಶವನ್ನು ಕೊಟ್ಟಿದೆ.

ಕೊರೊನಾ ವೈರಾಣು ಸಮಸ್ಯೆ ಆರಂಭವಾದ ಹೊತ್ತಿನಲ್ಲಿ ಭಾರತವು ವೈಯಕ್ತಿಕ ಸುರಕ್ಷತಾ ಕಿಟ್‌ಗಳನ್ನು (ಪಿ‍ಪಿಇ) ತಯಾರಿಸುತ್ತಿರಲಿಲ್ಲ.

ಎನ್‌-95 ಮಾಸ್ಕ್‌ಗಳ ತಯಾರಿಕೆ ನಗಣ್ಯವಾಗಿತ್ತು. ಆದರೆ, ಈಗ ಪ್ರತಿದಿನ ಎರಡು ಲಕ್ಷ ಪಿಪಿಇ ಕಿಟ್‌ಗಳು ಮತ್ತು ಎರಡು ಲಕ್ಷ ಎನ್‌-95 ಮಾಸ್ಕ್‌ಗಳನ್ನು ತಯಾರಿಸುತ್ತಿದೆ ಎಂದವರು ನುಡಿದರು.

ಒಂದು ವೈರಸ್‌ ಜಗತ್ತನ್ನು ವಿನಾಶದತ್ತ ತಳ್ಳಿದೆ. ಜೀವ ಉಳಿಸಿಕೊಳ್ಳುವುದಕ್ಕಾಗಿ ಇಡೀ ಜಗತ್ತು ಯುದ್ಧದಲ್ಲಿ ತೊಡಗಿದೆ.

ಇಂತಹ ಸಮಸ್ಯೆಯನ್ನು ನಾವು ಹಿಂದೆಂದೂ ನೋಡಿರಲಿಲ್ಲ, ಕೇಳಿರಲಿಲ್ಲ. ಭಾರತವು ಸ್ವಾವಲಂಬಿಯಾಗಬೇಕಾದ ಮಹತ್ವವನ್ನು ಈ ಬಿಕ್ಕಟ್ಟು ತೋರಿಸಿಕೊಟ್ಟಿದೆ. ಅದೊಂದೇ ದೇಶದ ಮುಂದಿರುವ ದಾರಿ ಎಂದು ಪ್ರಧಾನಿ ವಿವರಿಸಿದ್ದಾರೆ.

ಪ್ಯಾಕೇಜ್‌ ಯಾರಿಗೆ.??:

ಕಾರ್ಮಿಕರು, ರೈತರು, ಪ್ರಾಮಾಣಿಕ ತೆರಿಗೆ ಪಾವತಿದಾರರು, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳು, ಗುಡಿ ಕೈಗಾರಿಕೆಗಳಲ್ಲಿ ತೊಡಗಿರುವ ಎಲ್ಲರಿಗೂ ಈ ಪ್ಯಾಕೇಜ್‌ನಲ್ಲಿ ಪಾಲು ಇದೆ ಎಂದು ಪ್ರಧಾನಿ ಹೇಳಿದ್ದಾರೆ.

ಲಾಕ್‌ಡೌನ್‌ 4.0 ಆರಂಭ.??:

ದೇಶವ್ಯಾಪಿ ಹೇರಲಾಗಿರುವ ಲಾಕ್‌ ಡೌನ್‌ ನ ಮೂರನೇ ವಿಸ್ತರಣೆಯು ಇದೇ 17ಕ್ಕೆ ಕೊನೆಯಾಗಲಿದೆ. ಆದರೆ ನಾಲ್ಕನೇ ಹಂತದ ದಿಗ್ಬಂಧನ ಆರಂಭವಾಗಲಿದೆ.

ಈ ಹಂತದ ನಿರ್ಬಂಧಗಳು ಹಿಂದಿನ ಅವಧಿಗಳಿಗಿಂತ ಭಿನ್ನವಾಗಿರಲಿವೆ. ಈ ಬಗೆಗಿನ ಮಾಹಿತಿಯನ್ನು ಇದೇ 18ರೊಳಗೆ ಜನರಿಗೆ ನೀಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.

ರಾಜ್ಯಗಳು ನೀಡಿದ ಸಲಹೆಗಳ ಆಧಾರದಲ್ಲಿ ನಾಲ್ಕನೇ ಹಂತದ ಲಾಕ್‌ಡೌನ್‌ನ ನಿಯಮಗಳು ರೂಪುಗೊಳ್ಳಲಿವೆ

ಕೊರೊನಾ ವೈರಾಣು ಬಹು ದೀರ್ಘ ಕಾಲದವರೆಗೆ ನಮ್ಮ ಜೊತೆಗೆ ಇರಲಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

ಆದರೆ, ನಮ್ಮ ಜೀವನವು ಕೊರೊನಾ ಸುತ್ತಲೇ ಗಿರಕಿ ಹೊಡೆಯಲು ಬಿಡಬಾರದು. ಮಾಸ್ಕ್ ಧರಿಸೋಣ, ಅಂತರ ಕಾಯ್ದುಕೊಳ್ಳೋಣ, ಈ ಸೋಂಕು ನಮ್ಮನ್ನು ಬಾಧಿಸದಂತೆ ನೋಡಿಕೊಳ್ಳೋಣ ಎಂದು ಮೋದಿ ಕರೆ ಕೊಟ್ಟಿದ್ದಾರೆ.

ಲಾಕ್‌ಡೌನ್‌ ತೆರವಿಗೆ ಒತ್ತಡ:

ದೇಶವ್ಯಾಪಿ ಇರುವ ಲಾಕ್‌ಡೌನ್‌ ಅನ್ನು ತೆರವು ಮಾಡಬೇಕು ಎಂದು ಕೈಗಾರಿಕಾ ವಲಯದ ಪ್ರಮುಖರು, ಕಾರ್ಮಿಕರು ಮತ್ತು ರಾಜಕೀಯ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ದಿಗ್ಬಂಧನ ಮುಂದುವರಿದರೆ ಅರ್ಥ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಆಗಲಿದೆ ಮತ್ತು ಜನರು ಜೀವನೋಪಾಯ ಕಳೆದುಕೊಳ್ಳಲಿದ್ದಾರೆ ಎಂಬುದು ಈ ಗುಂಪಿನ ವಾದ.

ಪ್ರಧಾನಿಯವರು ಮುಖ್ಯಮಂತ್ರಿಗಳ ಜೊತೆಗೆ ಸೋಮವಾರ (ಮೇ 11) ವಿಡಿಯೋ ಸಂವಾದ ನಡೆಸಿದ್ದರು. ಸುಮಾರು ಆರು ತಾಸುಗಳ ಕಾಲ ಈ ಸಂವಾದ ನಡೆದಿತ್ತು.

ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್‌ ಡೌನ್‌ ಮುಂದುವರಿಸಬೇಕು ಎಂದು ಪ್ರಧಾನಿಯನ್ನು ಕೋರಿದ್ದರು.

ಆದರೆ, ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಆರ್ಥಿಕ ಚಟುವಟಿಕೆ ಆರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಬೇಕು ಎಂದು ಒತ್ತಾಯಿಸಿದ್ದರು.

ಸಣ್ಣ ಮತ್ತು ಉದ್ಯಮ ವಲಯಕ್ಕೆ 5.91 ಲಕ್ಷ ಕೋಟಿ ರೂಪಾಯಿ ಸಾಲ:

ಇನ್ನು ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮದ್ಯಮ ಉದ್ಯಮಗಳಿಗೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು 5.95 ಲಕ್ಷ ಕೋಟಿ ರೂ ಸಾಲ ಮಂಜೂರು ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮಾರ್ಚ್ 1 ರಿಂದ ಮೇ 8ರ ವರೆಗೆ ಕಂಪೆನಿ ಕಾಯ್ದೆಯಡಿ ನೋಂದಣಿಯಾಗಿರುವ ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳು ಸಹ 1.18 ಲಕ್ಷ ಕೋಟಿ ರೂಪಾಯಿ ಸಾಲ ಒದಗಿಸಿವೆ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಿರ್ಮಲಾ ಸೀತಾರಾಮನ್, ಶೇ 97 ರಷ್ಟು ಅರ್ಹ ಸಾಲಗಾರರಿಗೆ 65 ಸಾವಿರದ 879 ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಮತ್ತು ದುಡಿಯುವ ಬಂಡವಾಳ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಕೇಂದ್ರ ಹಣಕಾಸು ಸಚಿವಾಲಯ 14 ರಾಜ್ಯಗಳಿಗೆ 15ನೇ ಹಣಕಾಸು ಆಯೋಗದಡಿ 6 ಸಾವಿರದ 195 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಕುರಿತು ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಲಿದ್ದಾರೆ.

ಜೊತೆಗೆ ಲಾಕ್ ಡೌನ್ 4.0 ವಿಸ್ತರಣೆಯ ಬಗ್ಗೆ ವಿವರಣೆ ನೀಡಲಿದ್ದಾರೆ ಎನ್ನಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page