Connect with us

FILM

ಮದುವೆಯಾದ ಹತ್ತೇ ದಿನಕ್ಕೆ ಗಂಡನನ್ನು ಜೈಲಿಗಟ್ಟಿದ ಪೂನಂ ಪಾಂಡೆ…!

Published

on

ಗೋವಾ : ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. 10 ದಿನಗಳ ಹಿಂದೆಯಷ್ಟೇ ಮದುವೆಯಾದ ಪೂನಂ ಪಾಂಡೆ ಪತಿ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಗೆ ದೂರು ನೀಡಿದ್ದು, ಪೂನಂ ಪಾಂಡೆ ನೀಡಿದ ದೂರಿನ ಆಧಾರದ ಮೇಲೆ ಆಕೆಯ ಪತಿ ಸ್ಯಾಮ್​ ಬಾಂಬೆ ಅವರನ್ನು ಗೋವಾದಲ್ಲಿ ಮಂಗಳವಾರ ಬಂಧಿಸಲಾಗಿದೆ.


ಸೆಪ್ಟೆಂಬರ್ 11 ರಂದು ಸಾಮಾಜಿಕ ಜಾಲತಾಣದಲ್ಲಿ ಹಾಟ್ ನಟಿ ತನ್ನ ಬಹುದಿನದ ಗೆಳೆಯ ಸ್ಯಾಮ್ ಬಾಂಬೆಯನ್ನು ಮದುವೆಯಾಗಿರುವುದಾಗಿ ಘೋಷಿಸಿಕೊಂಡಿದ್ದರು. ನಂತರ ಇಬ್ಬರು ಕಳೆದ ವಾರ ಹನಿಮೂನ್ ಗೆ ತೆರಳಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹಸಿ ಬಿಸಿ ಪೋಟೋ ಶೇರ್ ಮಾಡಿಕೊಂಡಿದ್ದರು.


ಪೂನಂ ಪಾಂಡೆ ಪ್ರಸ್ತುತ ಶೂಟಿಂಗ್​ಗಾಗಿ ಗೋವಾದ ಕ್ಯಾನಕೋನಾ ಗ್ರಾಮದಲ್ಲಿದ್ದು, ಸೋಮವಾರ ರಾತ್ರಿ ನನ್ನ ಪತಿ ಕಿರುಕುಳ ನೀಡಿದರು. ಅಲ್ಲದೆ, ಹಲ್ಲೆ ಮಾಡಿ ಪ್ರಾಣ ಬೆದರಿಕೆ ಕೂಡ ಹಾಕಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಯಾಮ್​ ಬಾಂಬೆಯನ್ನು ಬಂಧಿಸಿರುವುದಾಗಿ ಕ್ಯಾನಕೋನಾ ಠಾಣಾ ಇನ್ಸ್​ಪೆಕ್ಟರ್ ತುಕರಾಮ್​ ಚಾವಣ್​ ಮಾಹಿತಿ ನೀಡಿದ್ದಾರೆ.​

FILM

ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!

Published

on

ಕರಾವಳಿ ಮೂಲದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ. ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಬೇಸರದ ಮುಖ ಭಾವವಿರುವ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮತ್ತು ಕುತೂಹಲ ಅಭಿಮಾನಿಗಳದ್ದು.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಮುರಿದು ಬಿದ್ದಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ ನಟ ವಿಜಯ ದೇವರಕೊಂಡ ಅವರ ಕೈ ಹಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲ ಅವರ ವಿವಾಹದ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಬೇಸರದಲ್ಲಿರೋ ಫೋಟೋನೇ ಪೋಸ್ಟ್ ಮಾಡಿದ್ದು ಅಚ್ಚರಿ ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಇವರ ಪೋಸ್ಟ್ ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ಸ್ ಗಳನ್ನು ಹಾಕಿದ್ದಾರೆ. ‘ಹಳೆಯದನ್ನು ಮರೆತು ಮುಂದೆ ಸಾಗಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಕಂಬ್ಯಾಕ್ ಬೇರೆಯವರಿಗೆ ಸ್ಲಿಪ್ಪರ್ ಶಾಟ್ ಆಗಬೇಕು’ ಎಂದು ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಇದ್ದಿದ್ದು ಕಡಿಮೆ. ಆದರೆ ಏಕಾಏಕಿ ಚಾರ್ಲಿ ಸಿನಿಮಾದ ಈ ಫೋಟೋ ಪೋಸ್ಟ್ ಮಾಡಿದ್ದು ಯಾಕೆ ಎಂಬ ಕ್ಯೂರಾಸಿಟಿ ಮಾತ್ರ ಜಾಸ್ತಿಯಾಗಿದೆ.

Continue Reading

FILM

ವೈವಾಹಿಕ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ನಟ

Published

on

ಮಂಗಳೂರು/ಬೆಂಗಳೂರು : ಶ್ರೀರಸ್ತು ಶುಭಮಸ್ತು ಜನಮೆಚ್ಚುಗೆ ಗಳಿಸಿದ್ದ ಧಾರಾವಾಹಿ. ಧಾರಾವಾಹಿಯ ಪಾತ್ರಗಳು, ಪಾತ್ರಕ್ಕೆ ಜೀವ ತುಂಬಿದ್ದ ನಟ, ನಟಿಯರು ಕೂಡ ಗಮನ ಸೆಳೆದಿದ್ದರು. ಇದೀಗ ಈ ಧಾರಾವಾಹಿಯಲ್ಲಿ ನಟಿಸಿದ್ದ ನಟನೊಬ್ಬ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ತುಳಸಿ ಮಗನಾಗಿ ಸಮರ್ಥ್ ಪಾತ್ರದಲ್ಲಿ ನಟಿಸಿದ್ದ ದರ್ಶಿತ್ ಗೌಡ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ದರ್ಶಿತ್ ಗೌಡ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ವಿವಾಹ ಸಮಾರಂಭಕ್ಕೆ ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದ ಕಲಾವಿದರು ಆಗಮಿಸಿ, ಶುಭ ಹಾರೈಸಿದ್ದಾರೆ.

ಇದನ್ನೂ ಓದಿ : ಗಂಡ ಸತ್ತ ಇಪ್ಪತ್ತೇ ದಿನಕ್ಕೆ ಎರಡನೇ ಮದುವೆಯಾದ ಹೆಂಡ್ತಿ…ತನಿಖೆ ವೇಳೆ ಬಯಲಾಯ್ತು ಸತ್ಯ!

ನಟಿ ಸುಧಾರಾಣಿ, ನಕುಲ್ ಶರ್ಮಾ, ದೀಪಾ ಕಟ್ಟೆ, ಅಜಿತ್ ಹಂಡೆ, ಅರ್ಫತ್ ಶರೀಫ್, ಲಾವಣ್ಯ ಸೇರಿದಂತೆ ಹಲವು ನಟ, ನಟಿಯರು ಭಾಗಿಯಾಗಿದ್ದರು.

Continue Reading

FILM

ಸಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ರಶ್ಮಿಕಾ-ವಿಜಯ್; ಆರತಕ್ಷತೆಯಲ್ಲಿ ಭಾಗಿಯಾಗಿ ಹರಸಿದ ಡಿ.ಕೆ.ಶಿ.

Published

on

‘ನ್ಯಾಷನಲ್ ಕ್ರಷ್’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ಅದ್ಧೂರಿ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದ್ದಾರೆ.


ರಶ್ಮಿಕಾ ಮಂದಣ್ಣ ಅವರು ಕರ್ನಾಟಕದ ಸಾಂಪ್ರದಾಯಿಕ ಮತ್ತು ಹೆಮ್ಮೆಯ ಕೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ ಧರಿಸಿ ಎಲ್ಲರ ಗಮನ ಸೆಳೆದರು. ಈ ಸೀರೆಯ ಪಲ್ಲುವಿನಲ್ಲಿ ಕರ್ನಾಟಕದ ರಾಜ್ಯ ಲಾಂಛನವಾದ ‘ಗಂಡಭೇರುಂಡ’ ಪಕ್ಷಿಯ ವಿನ್ಯಾಸವನ್ನು ಬಂಗಾರ ಮತ್ತು ಬೆಳ್ಳಿಯ ಎಳೆಗಳಿಂದ ನೆಯ್ಯಲಾಗಿತ್ತು.

ರಶ್ಮಿಕಾ ನಮ್ಮ ಕರ್ನಾಟಕದ ಹೆಮ್ಮೆಯಾದ ‘ಕೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ’ಯುಟ್ಟು ಮಿರಮಿರನೆ ಮಿಂಚಿದ್ದಾರೆ. ಇತ್ತ ವಿಜಯ್ ಅವರು ಬಿಳಿ ಬಣ್ಣದ ಸಿಲ್ಕ್ ಕುರ್ತಾ ಮತ್ತು ಸಾಂಪ್ರದಾಯಿಕ ಪಂಚೆ ಹಾಗೂ ಶಲ್ಯ ಧರಿಸಿ ಅಪ್ಪಟ ದೇಸಿ ಲುಕ್‌ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: ಮದುವೆ ಸಂಭ್ರಮದಲ್ಲೂ ಅಭಿಮಾನಿಗಳನ್ನ ಮರೆಯದ ರಶ್ಮಿಕಾ-ವಿಜಯ್: ಸೌಹಾರ್ದತೆಗೆ ಸಾಕ್ಷಿಯಾದ ಸ್ಟಾರ್ ದಂಪತಿ!

ಹೈದರಾಬಾದ್‌ನ ಐಷಾರಾಮಿ ತಾಜ್ ಕೃಷ್ಣ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲದೆ, ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಹಾಗೂ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page