Connect with us

DAKSHINA KANNADA

ಹೀಮೋಫೀಲಿಯಾ ಬಾಧಿತ ಗರ್ಭಿಣಿಗೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಯಶಸ್ವೀ ಶಸ್ತ್ರಚಿಕಿತ್ಸೆ

Published

on

ಮಂಗಳೂರು: 175 ವರ್ಷಗಳ ಇತಿಹಾಸವನ್ನು ಹೊಂದಿ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕ ರೋಗ ಹೀಮೋಫೀಲಿಯಾ ಬಾಧಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆಯನ್ನುladygoschen hospital ಯಶಸ್ವಿಯಾಗಿ ನಿರ್ವಹಿಸಿ, ತಾಯಿ ಮಗುವಿನ ಪ್ರಾಣ ಸಂರಕ್ಷಣೆಯನ್ನು ಮಾಡಿ ದಾಖಲೆ ನಿರ್ಮಿಸಿದೆ.

ಹುಟ್ಟಿನಿಂದ ರಕ್ತಸಂಬಂಧಿತ ಕಾಯಿಲೆಯಾದ ಹೀಮೋಫೀಲಿಯಾವನ್ನು ಬಳುವಳಿಯಾಗಿ ಪಡೆದುಕೊಂಡು ಬಂದಿದ್ದ ಆಕೆ ಬಾಲ್ಯದಿಂದಲೇ ಇದಕ್ಕೆ ಸಂಬಂಧಿತ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಯಿಂದ ಪಡೆದುಕೊಂಡು ಬರುತ್ತಿದ್ದರು. ವೈವಾಹಿಕ ಜೀವನವನ್ನು ಪ್ರಾರಂಭಿಸಿದ ಬಳಿಕ ಸಹಜವಾಗಿ ಗರ್ಭವತಿಯಾದ ಆಕೆ ರಕ್ತ ಸ್ರಾವದ ಭೀತಿ ಇದ್ದರೂ ಮಗುವಿನ ತಾಯಿಯಾಗಲೇ ಬೇಕೆಂಬ ತೀರ್ಮಾನಕ್ಕೆ ಬದ್ಧರಾಗಿದ್ದರು.

ಆಕೆಯ ಸಂಬಂಧಿಕರು ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ಡಾ. ಶರತ್ ಅವರನ್ನು ಭೇಟಿಯಾಗಿ ಹೀಮೋಫೀಲಿಯಾ ರೋಗದ ಚಿಕಿತ್ಸೆಗೆ ಅಗತ್ಯವಾಗಿ ಬೇಕಾಗಿರುವ ಫ್ಯಾಕ್ಟರ್ 8 ಇಂಜೆಕ್ಷನ್‌ ಗಳ ಪೂರೈಕೆಯ ಮನವಿ ಮಾಡಿದ್ದರು. ಬಳಿಕ ಲೇಡಿಗೋಷನ್‌ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್.ಎಂ.ಆರ್.ಅವರು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಬೆಂಬಲ ಮತ್ತು ಅನುಮತಿಯನ್ನು ಪಡೆದು ಸರಕಾರದ ವತಿಯಿಂದ ಮಹಿಳೆಗೆ ವಾರಕ್ಕೆ ಒಂದಾವರ್ತಿ ಅಗತ್ಯತೆಯ ಇಂಜೆಕ್ಷನ್ ನ್ನು ಗರ್ಭಾವಸ್ಥೆಯ ಪೂರ್ಣ ಅವಧಿಯವರೆಗೂ ನೀಡಲು ವ್ಯವಸ್ಥೆ ಮಾಡಿದರು.

ಹೆರಿಗೆಗೆ ಇಪ್ಪತ್ತು ದಿನಗಳ ಮುಂಚಿತವಾಗಿ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿತ್ತು. ವೈದ್ಯರ ತಂಡವು ಫ್ಯಾಕ್ಟರ್ 8 ಇಂಜೆಕ್ಷನ್‌ ಗಳ ಪೂರೈಕೆಯನ್ನು ಖಾತರಿಪಡಿಸಿಕೊಂಡು ಸರ್ವ ವ್ಯವಸ್ಥೆ ಮತ್ತು ಸಿದ್ಧತೆಗಳೊಂದಿಗೆ ಸುರಕ್ಷಿತವಾಗಿ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ನಡೆಸಿಕೊಟ್ಟಿತು. ಕೆ.ಎಂ.ಸಿ.ಯ ತಜ್ಞ ವೈದ್ಯರು ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಅನುಪಮಾ ರಾವ್, ಡಾ. ಸಿರಿಗಣೇಶ್, ಡಾ. ನಮಿತಾ, ಅರಿವಳಿಕೆ ತಜ್ಞರಾದ ಡಾ..ಸುಮೇಶ್ ರಾವ್,.ಡಾ. ರಂಜನ್ ಅವರ ತಂಡ ಇದರಲ್ಲಿ ಪಾಲ್ಗೊಂಡಿತ್ತು.

ಲೇಡಿಗೋಷನ್ ಆಸ್ಪತ್ರೆಯ ಶುಶ್ರೂಷಕ ವೃಂದದವರು ಸಹಕರಿಸಿದ್ದರು. ಸಂಪೂರ್ಣ ಗರ್ಭಿಣಿ ಆರೈಕೆಯ ಅವಧಿಯಲ್ಲಿ ಲಕ್ಷಾಂತರ ರೂಪಾಯಿ ಬೆಲೆಯ 25000 ಯೂನಿಟ್ ನ ಅಪರೂಪದ ಇಂಜೆಕ್ಷನನ್ನು ಸರಕಾರದ ವತಿಯಿಂದ ನೀಡಲಾಗಿರುವುದು ಇಲ್ಲಿ ವಿಶೇಷ. ಹೆರಿಗೆಯ ಬಳಿಕ ಹತ್ತು ದಿನಗಳ ಆಸ್ಪತ್ರೆ ಆರೈಕೆಯ ಬಳಿಕ ಮಹಿಳೆ ತನ್ನ ಮಗುವಿನೊಂದಿಗೆ ಸುಖಕರವಾಗಿ ಮನೆ ಸೇರಿದ್ದಾರೆ.

DAKSHINA KANNADA

ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಬಿಜೆಪಿ ಮುಖಂಡನ ಉಚ್ಚಾಟನೆ

Published

on

ವಿಟ್ಲ : ರಸ್ತೆ ವಿಚಾರವಾಗಿ ನಡೆದ ಜಗಳದ ವೇಳೆ ಮಹಿಳೆಗೆ ಗುಪ್ತಾಂ*ಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿದ್ದ. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಅಸಭ್ಯ ವರ್ತನೆ ತೋರಿದ ಪದ್ಮನಾಭ ಸಫಲ್ಯ ವಿರುದ್ಧ  ಬಿಜೆಪಿ ಕ್ರಮ ಕೈಗೊಂಡಿದೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಿರುವ ಬಗ್ಗೆ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ತಿಳಿಸಿದೆ. ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಪದ್ಮನಾಭ ಸಪಲ್ಯನನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೆ ಪಂಚಾಯತ್‌ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ಪುತ್ತೂರು ಗ್ರಾಮಾಂತರ ಮಂಡಲ  ಅಧ್ಯಕ್ಷ ದಯಾನಂದ ಶೆಟ್ಟಿ ಸೂಚಿಸಿದ್ದಾರೆ.

ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿಧ್ಯ ಕೊಡುವ ಪಾರ್ಟಿಯಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆ, ಗೌರವ ಹಾಗೂ ವರ್ಚಸ್ಸಿಗೆ ಘಾಸಿಯುಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪದ್ಮನಾಭ ಸಫಲ್ಯ ಹಾಗೂ ಮನೆ ಸಮೀಪದ‌ ಮಹಿಳೆಗೂ ರಸ್ತೆ ವಿಚಾರದಲ್ಲಿ ವಿವಾದ ಇತ್ತು. ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ಮನೆ ದಾರಿಗೆ ಗೇಟು ಅಳವಡಿಸಿದ್ದ. ಇದನ್ನು ಪ್ರಶ್ನಿಸಿದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಸಂಬಂಧ ಮಹಿಳೆ ಪದ್ಮನಾಭ ಸಫಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : ಪೆಹಲ್ಗಾಮ್ ದಾಳಿ : ಮೂವರು ಉಗ್ರರ ಫೋಟೋ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ!

ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಲಾಗಿದೆ.  ಪದ್ಮನಾಭ ಸಫಲ್ಯನ ಅಸಭ್ಯ ವರ್ತನೆಯ ವೀಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

Continue Reading

DAKSHINA KANNADA

ಮಂಗಳೂರು : ಟಿಂಟೆಡ್ ಗ್ಲಾಸ್‌ ಅಳವಡಿಸಿದ್ದ ಕಾರುಗಳ ಮೇಲೆ ಬಿತ್ತು ಕೇಸ್

Published

on

ಮಂಗಳೂರು : ಬ್ಲಾಕ್ ಫಿಲ್ಮ್, ಸನ್ ಫಿಲ್ಮ್ ಅಥವಾ ಟಿಂಟೆಡ್ ಗ್ಲಾಸ್‌ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಮಂಗಳೂರು ನಗರ ಪೊಲೀಸರು ಪತ್ತೆ ಹಚ್ಚಿ ಕಾರುಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

10 ದಿನದಲ್ಲಿ 500ಕ್ಕೂ ಅಧಿಕ ಕಾರುಗಳ ವಿರುದ್ಧ ಕೇಸ್ :

ಮೇ 2 ರಿಂದ 11 ವರೆಗೆ ಒಟ್ಟು 504 ಕಾರುಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ರೂ.2,53,000 ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್‌ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಪೊಲೀಸರು ಸೂಕ್ತ ತಿಳುವಳಿಕೆಯನ್ನು ನೀಡಿದರು.

ಇದನ್ನೂ ಓದಿ : ಉಡುಪಿ : ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು

ಸರ್ವೋಚ್ಚ ನ್ಯಾಯಾಲಯದ ಆದೇಶ :

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳ ಪರಿಶೀಲನೆಯನ್ನು ನಡೆಸಲಾಯಿತು. ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದ್ದು, ಸಾರ್ವಜನಿಕರು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ತಿಳುವಳಿಕೆ ನೀಡಲಾಯಿತು.

ವಿಡಿಯೋ ನೋಡಿ :

Continue Reading

BELTHANGADY

ನಿದ್ದೆ ಮಾತ್ರೆ ಸೇವನೆ ತಾಯಿ ಮಗ ಆತ್ಮಹತ್ಯೆ ಯತ್ನ ; ಡೆತ್‌ನೋಟ್‌ನಲ್ಲಿ ಏನಿದೆ ..?

Published

on

ಬೆಳ್ತಂಗಡಿ : ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ (ಮೇ.12) ಸಂಭವಿಸಿದೆ.

ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ| ಕುಂಞರಾಮನ್ ನಾಯ‌ರ್ ಅವರ ಪತ್ನಿ ಕಲ್ಯಾಣಿ (96) ಸಾವನ್ನಪ್ಪಿದರೆ, ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ. (58) ಅವರು ಗಂಭೀರಾವಸ್ಥೆಯಲ್ಲಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯವೇ ಈ ದುರ್ಘಟನೆಗೆ ಮುಕ್ಯ ಕಾರಣ ಎನ್ನಲಾಗಿದೆ.

ಮಲಗಿದ ಸ್ಥಿತಿಯಲ್ಲಿ ತಾಯಿ- ಮಗ :

ಕಲ್ಯಾಣಿ ಮತ್ತು ಜಯರಾಂ ಅವರ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು ಗಮನಿಸಿ ನೆರೆ ಹೊರೆಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಊರವರು ಸೇರಿ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಡೆತ್‌ನೋಟ್‌ನಲ್ಲಿ ಏನಿದೆ ..?

ತೀವ್ರ ನಿಗಾ ಘಟಕದಲ್ಲಿದ್ದ ತಾಯಿ ಕಲ್ಯಾಣಿ ಅವರು ಮೇ 12ರಂದು ಸಂಜೆ ಕೊನೆಯುಸಿರೆಳೆದರು. ಮಗ ಜಯರಾಂ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ.

ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು. ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ತಾಯಿಗೆ ಅವರು ಮೊದಲು ಮಾತ್ರೆ ನೀಡಿ ಬಳಿಕ ಮಾತ್ರೆ ಸೇವಿಸಿದರೇ ಅಥವಾ ಇಬ್ಬರೂ ಜತೆಗೆ ಮಾತ್ರೆ ಸೇವಿಸಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page