Connect with us

DAKSHINA KANNADA

ಸದನದಲ್ಲಿ ಶಾಸಕ, ಸಚಿವರಿಂದ ಪೂರ್ವಯೋಜಿತ ಸುಳ್ಳು: ಮಾಜಿ ಶಾಸಕ ಮೊಯ್ದಿನ್ ಬಾವ

Published

on

ಮಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಜೂರಾದ ಸುರತ್ಕಲ್‌ ಮಾರುಕಟ್ಟೆಗೆ ಮೊದಲ ಹಂತದಲ್ಲಿ 61 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 14 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ನಡೆದಿತ್ತು. ಆದರೆ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ಕಳೆದ 3 ವರ್ಷದಿಂದ ಮಾರುಕಟ್ಟೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಚುನಾವಣೆ ಹತ್ತಿರ ಬರುವಾಗ ಶಾಸಕರಿಗೆ ಮಾರುಕಟ್ಟೆಯ ನೆನಪಾಗಿದೆ ಎಂದು ಮಾಜಿ ಶಾಸಕ ಮೊಯ್ದೀನ್‌ ಬಾವ ಹೇಳಿದ್ದಾರೆ.


ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಧಾನಸಭಾ ಕಲಾಪದಲ್ಲಿ ಸುರತ್ಕಲ್‌ ಮಾರುಕಟ್ಟೆಯ ಬಗ್ಗೆ ಶಾಸಕ ಭರತ್‌ ಶೆಟ್ಟಿ ಕೇಳಿರುವುದು ಹಾಗೂ ಅದಕ್ಕೆ ಸಚಿವ ಭೈರತಿ ಬಸವರಾಜ್‌ ಉತ್ತರ ನೀಡಿರುವುದು ಎಲ್ಲವೂ ಪೂರ್ವಯೋಜಿತವಾಗಿದೆ. ಇವರಿಬ್ಬರೂ ಬಹಿರಂಗವಾಗಿ ಸುಳ್ಳು ಹೇಳಿದ್ದಾರೆ.

ಮಾರುಕಟ್ಟೆಗೆ ಮಂಜೂರಾದ ಜಾಗದ ಸಮಸ್ಯೆಯನ್ನು ಇತ್ಯರ್ಥ ಮಾಡಲಾಗಿದೆ. ಶಾಸಕ ಅಧಿವೇಶನದಲ್ಲಿ ಪ್ರಶ್ನೆ ಕೇಳಿರುವುದು ಚುನಾವಣಾ ಸಂದರ್ಭ ಮತದಾರರನ್ನು ಕಣ್ಣೊರೆಸುವ ತಂತ್ರವಾಗಿದೆ ಎಂದರು.

ಮಾರುಕಟ್ಟೆ ನಿರ್ಮಾಣದಲ್ಲಿ ಸರಕಾರದ ವೈಫಲ್ಯವನ್ನು ಖಂಡಿಸಿ ಡಿಸೆಂಬರ್ 31ರಂದು ಪಾದಯಾತ್ರೆ ನಡೆಸಲಾಗುವುದು. ಶಾಸಕರು ಕ್ಷೇತ್ರದಲ್ಲಿ 1800 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿ ನಡೆಸಿವುದಾಗಿ ಸುಳ್ಳು ಹೇಳಿದ್ದು, ಈ ಬಗ್ಗೆ ಬಹಿರಂಗವಾಗಿ ಚರ್ಚೆಗೆ ಬರಲಿ. ಮಾರುಕಟ್ಟೆ ವಿಚಾರದಲ್ಲಿ ಅವರು ಹೇಳಿರುವ ಸುಳ್ಳಿನ ವಿಚಾರವನ್ನೂ ಜನತೆ ಮುಂದಿಡಲಿದ್ದೇವೆ ಎಂದರು.

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

DAKSHINA KANNADA

ಮಂಗಳೂರು : ಆಟೋ ಚಾಲಕ ನಾಪತ್ತೆ

Published

on

ಮಂಗಳೂರು : ಆರ್‌ಟಿಒ ಕಚೇರಿಗೆ ಹೋಗುವುದಾಗಿ ಮನೆಯಿಂದ ಹೋದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಕಾಟಿಪಳ್ಳ ನಿವಾಸಿ, ವಿಘ್ನೇಶ್(40) ನಾಪತ್ತೆಯಾಗಿರುವ ಆಟೋ ಚಾಲಕ.

ಚಿಲಿಂಬಿಯ ವ್ಯಕ್ತಿಯೊಬ್ಬರಿಂದ ವಿಘ್ನೇಶ್ ಸಾಲ ಪಡೆದಿದ್ದರು. ಸಾಲ ಮರುಪಾವತಿಗಾಗಿ ವ್ಯಕ್ತಿ ವಿಘ್ನೇಶ್‌ಗೆ ಪದೇ ಪದೇ ಫೋನ್ ಮಾಡುತ್ತಿದ್ದರು ಎನ್ನಲಾಗಿದೆ.

ಫೆ.7ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿಗೆ ಬಾಡಿಗೆ ಆಟೋ ತರಲು ಹಾಗೂ ಪರವಾನಿಗೆ ಪಡೆಯಲು ಆರ್‌ಟಿಓ ಕಚೇರಿಗೆ ಹೋಗುವುದಾಗಿ ತಿಳಿಸಿ ಹೋದವರು ಮನೆಗೆ ಹಿಂದಿರುಗದೆ, ಸಂಬಂಧಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ ಎಂಬುದಾಗಿ ವಿಘ್ನೇಶ್ ಪತ್ನಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ :ಗುದ್ದಲಿ ಪೂಜೆ ಮಾಡಿಸಿದ್ರು… ಲಾಡು ತಿಂದ್ರು… ರಾಜಕಾರಣಿಗಳಿಗೆ ಧಿಕ್ಕಾರ ಅಂದ್ರು ವಾಲ್ತಾಜೆ ಗ್ರಾಮಸ್ಥರು 

ಚಹರೆ ಹೀಗಿದೆ :

ಎತ್ತರ 5′ 2″, ಗೋಧಿ ಮೈ ಬಣ್ಣ, ತೆಳು ಶರೀರ, ಗಡ್ಡ ಮೀಸೆ ಬಿಟ್ಟಿರುತ್ತಾರೆ. ಕಪ್ಪು ತಲೆ ಕೂದಲು, ಕನ್ನಡ, ತೆಲುಗು, ತುಳು, ಹಿಂದಿ, ಬ್ಯಾರಿ ಭಾಷೆ ಮಾತನಾಡಲು ಹಾಗೂ ಕನ್ನಡ ಭಾಷೆ ಬರೆಯಲು ಬರುತ್ತದೆ. ಮನೆಯಿಂದ ಹೋಗುವಾಗ ಖಾಕಿ ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಶೂ ಧರಿಸಿರುತ್ತಾರೆ. ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಖ್ಯೆ 0824-2220540, 9480805360, 9480802345 ನಂಬರ್ ಅಥವಾ 0824-2220800 ಕ್ಕೆ ಕರೆ ಮಾಡಿ ಮಾಹಿತಿಯನ್ನು ನೀಡುವಂತೆ ಮನವಿ ಮಾಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page