Connect with us

LATEST NEWS

ಇಂದಿನಿಂದ ಮಾರುತಿ ಸುಜುಕಿ ಕಾರು ಬೆಲೆ ಹೆಚ್ಚಳ

Published

on

ನವದೆಹಲಿ: ಜನಪ್ರಿಯ ಮಾರುತಿ ಸುಜುಕಿ ಕಾರು ಉತ್ಪಾದಕ ಸಂಸ್ಥೆ ವಾಹನಗಳ ಮೇಲಿನ ಬೆಲೆಯನ್ನು ಇಂದಿನಿಂದ (ಆ.6) ಹೆಚ್ಚಿಸುವುದಾಗಿ ತಿಳಿಸಿದೆ. ಆಗಸ್ಟ್​ 30ರಂದು ತಿಳಿಸಿದಂತೆ, ಸೆಪ್ಟೆಂಬರ್​ ತಿಂಗಳಿನಲ್ಲಿ ವಾಹನ ಬೆಲೆಯನ್ನು ಜಾಸ್ತಿ ಮಾಡುವುದಾಗಿ ಹೇಳಿಕೊಂಡಿತ್ತು, ಅದರೆ ದಿನಾಂಕವನ್ನು ಬಹಿರಂಗ ಪಡಿಸಿರಲಿಲ್ಲ, ಇದೀಗ ಇಂದಿನಿಂದ ಬೆಲೆಯನ್ನು ಏರಿಕೆ ಮಾಡುವುದಾಗಿ ಅಧಿಕೃತವಾಗಿ ಹೇಳಿದೆ.


ಮಾರುತಿ ಸುಜುಕಿ ಉತ್ಪಾದಿಸುವ ಎಲ್ಲಾ ಮಾದರಿಗಳ ಸರಾಸರಿ ಶೇ. 1.9ರಷ್ಟು ಬೆಲೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿತ್ತು.

ಆಗಸ್ಟ್​​ 30 ರಂದು ನಮ್ಮ ಹಿಂದಿನ ಸಂವಹನದ ಮುಂದುವರಿಕೆಯಾಗಿ, ಇಂದಿನಿಂದ ಅನ್ವಯವಾಗುವಂತೆ ಕಂಪನಿಯು ಆಯ್ದ ಮಾದರಿಗಳಿಗೆ ಬೆಲೆ ಬದಲಾವಣೆಯನ್ನು ಘೋಷಿಸಿತು. ಆಯ್ದ ಮಾದರಿಗಳಲ್ಲಿ ಎಕ್ಸ್ ಶೋ ರೂಂ ಬೆಲೆಗಳಲ್ಲಿ ಶೇಕಡಾ 1.9ರಷ್ಟು ಸರಾಸರಿ ಬೆಲೆ ಏರಿಕೆ ಮಾಡಿದೆ.


ಆಟೋ ದೈತ್ಯ ಆಗಸ್ಟ್​ ತಿಂಗಳಿನಲ್ಲಿ ವಿವಿಧ ಇನ್​ಪುಟ್ ವೆಚ್ಚಗಳ ಹೆಚ್ಚಳದಿಂದಾಗಿ ಕಳೆದ ವರ್ಷದಲ್ಲಿ ಕಂಪನಿಯ ವಾಹನಗಳ ವೆಚ್ಚವು ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹೇಳಿತ್ತು.

ಆ ಮೂಲಕ ಬೆಲೆ ಏರಿಕೆ ಮಾಡಿ ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸುವುದು ಅನಿವಾರ್ಯವಾಗಿದೆ. ಸೆಪ್ಟೆಂಬರ್ 2021 ರಿಂದ ಎಲ್ಲಾ ಮಾದರಿಗಳ ಬೆಲೆ ಏರಿಕೆ ಮಾಡಿದೆ.
ಮಾರುತಿ ಸುಜುಕಿ ಕಂಪನಿಯು ಕಳೆದ ಜನವರಿ ಮತ್ತು ಏಪ್ರಿಲ್ನಲ್ಲಿ ಕಾರಿನ ಬೆಲೆಯನ್ನು ಕೊಂಚ ಹೆಚ್ಚಿಸಿತ್ತು.

ಏಪ್ರಿಲ್‌ನಲ್ಲಿ ಶೇ. 1.6ರಷ್ಟು ಎಕ್ಸ್ ಶೋರೂಂನ ಬೆಲೆ ಏರಿಕೆ ಮಾಡಿದ್ದು, ಜನವರಿಯಲ್ಲಿ ಆಯ್ದ ಮಾದರಿಗಳಲ್ಲಿ ಬೆಲೆ 34,000 ರೂ. ಹೆಚ್ಚಳವಾಯಿತು.
ಇನ್ನು ಮಾರುತಿ ಸುಜುಕಿ (Marut i Suzuki) 1,81,754 ಯುನಿಟ್ ಪೆಟ್ರೋಲ್ ಕಾರ್​ಗಳಾದ ಸಿಯಾಜ್, ಎರ್ಟಿಗಾ, ವಿಟಾರಾ ಬ್ರಿಜಾ, ಎಸ್-ಕ್ರಾಸ್, ಮತ್ತು ಎಕ್ಸ್ ಎಲ್ 6 ಗಳನ್ನು (Ciaz, Ertiga, Vitara Brezza, S-Cross, and XL6) ಮೋಟಾರ್ ಜನರೇಟರ್ ಗಳನ್ನು ಉಚಿತವಾಗಿ ಪರೀಕ್ಷಿಸಿ ಬದಲಿಸಲು ಮತ್ತು ಹಿಂಪಡೆಯುವುದಾಗಿ ಘೋಷಿಸಿದೆ.

ಮೇ 4, 2018 ರಿಂದ ಅಕ್ಟೋಬರ್ 27, 2020 ರ ನಡುವೆ ತಯಾರಿಸಲಾದ ವಾಹನಗಳ ಹಾನಿಗೊಳಗಾದ ಭಾಗವನ್ನು ಬದಲಾಯಿಸಲಾಗುವುದು ಎಂದು ಕಂಪನಿ ಹೇಳಿದೆ. 2021 ರ ನವೆಂಬರ್ ಮೊದಲ ವಾರದಿಂದ ಈ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ತಿಳಿಸಿದೆ.

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page