Connect with us

LATEST NEWS

ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ : ಬಡವರಿಗೆ ಪ್ರಧಾನಿ ಮಂತ್ರಿ ಗರೀಬ್​ ಕಲ್ಯಾಣ ಯೋಜನೆ ಅಡಿ ನವೆಂಬರ್​ವರೆಗೂ ಉಚಿತ ರೇಷನ್

Published

on

ನವದೆಹಲಿ :  ಕೋವಿಡ್​ ಸೋಂಕಿನ ವಿರುದ್ಧ ವಿಶ್ವದ ಪ್ರಮುಖ ದೇಶಗಳು ಹೋರಾಡುತ್ತಿದ್ದು, ಭಾರತ ಕೂಡ ಈ ಹೋರಾಟದಿಂದ ಹಿಂದೆ ಉಳಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೋಂಕಿನ ವಿರುದ್ಧ ಹೋರಾಟಕ್ಕೆ ಕಳೆದ ಒಂದೂವರೆ ವರ್ಷಗಳಲ್ಲಿ ಹೊಸ ಆರೋಗ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿದೆ.

ದೇಶದಲ್ಲಿ ವಿವಿಧ ಕಂಪನಿಗಳು ಲಸಿಕೆಗಳನ್ನು ಉತ್ಪಾದಿಸಲು ಆರಂಭಿಸಲಿದೆ. ಇದರ ಜೊತೆಗೆ ಬೇರೆ ದೇಶಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಗೆ ಹೆಚ್ಚು ಒತ್ತು ನೀಡಲಾಗಿತ್ತು. ಲಸಿಕೆಗಳು ಪಡೆದ ಕಾರಣದಿಂದಲೇ ಆರೋಗ್ಯ ಕಾರ್ಯಕರ್ತರು ಜನರ ಜೀವ ಉಳಿಸಲು ಸಾಧ್ಯವಾಯಿತು. ವಿಶ್ವಾಸದಿಂದಲೇ ಸಿದ್ಧಿ ಎಂಬ ಮೂಲಕ ಮಂತ್ರವನ್ನು ಜಪಿಸಿ ಈಗಾಗಲೇ ದೇಶದ 23 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ ಎಂದರು.

ದೇಶದಲ್ಲಿ ಎಲ್ಲರಿಗೂ ಉಚಿತ ಲಸಿಕೆ ಕೊಡುವ ನಿಟ್ಟಿನಲ್ಲಿ ಕಾರ್ಯ ನಡೆಸಲಾಗುತ್ತಿದ್ದು, ಜನರು ಕೂಡ ಅವರ ಸರದಿ ಬಂದಾಗ ಲಸಿಕೆ ಹಾಕಿಕೊಳ್ಳಬೇಕು. ಇದೇ ಕಾರಣದಿಂದ ಲಸಿಕೆ ವಿತರಣೆ ವೇಗವನ್ನು ಹೆಚ್ಚಸಿಲಾಗುವುದು.ಲಸಿಕೆ ಲಭ್ಯತೆ ಹೆಚ್ಚಿಸಲು ವಿದೇಶದಿಂದ ಕೂಡಲ ಲಸಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ.

ಮಕ್ಕಳಿಗೂ ಲಸಿಕೆ ನೀಡುವ ಬಗ್ಗೆ ಕಳವಳ ವ್ಯಕ್ತಪಡಿಸಲಾಗುತ್ತಿದೆ. ಮಕ್ಕಳಿಗಾಗಿ ಎರಡಯ ಲಸಿಕೆಗಳ ಪ್ರಯೋಗ ನಡೆಯುತ್ತಿದೆ, ಇದರಲ್ಲಿ ಇಂದು ಮೂಗಿನ ದ್ರೌಷಧವಾಗಿದೆ ಎಂದರು.

ಬಡವರ ಜೊತೆಗೆ ಸರ್ಕಾರ ಇದೆ. ಇದೇ ಹಿನ್ನಲೆ ನವೆಂಬರ್​ ವರೆಗೂ ಬಡ ಸಹೋದರ-ಸಹೋದರಿಯರು ಹೊಟ್ಟೆ ಹಸಿವಿನಿಂದ ಬಳಲಬಾರದು. ಇದೇ ಕಾರಣದಿಂದ ನವೆಂಬರ್​ವರೆಗೂ ಪ್ರಧಾನಿ ಮಂತ್ರಿ ಗರೀಬ್​ ಕಲ್ಯಾಣ ಯೋಜನೆ ಅಡಿ ನವೆಂಬರ್​ವರೆಗೂ ಉಚಿತ ರೇಷನ್​ ನೀಡಲಾಗುವುದು. ಇದರಿಂದ 80 ಕೋಟಿ ಜನರು ಲಾಭಾ ಪಡೆಯಲಿದ್ದಾರೆ ಎಂದು ಘೋಷಿಸಿದರು.

ವರ್ಷದೊಳಗೆ ಭಾರತದಲ್ಲಿ ಎರಡು ಲಸಿಕೆಗಳು ತಯಾರಾದವು. ಲಸಿಕೆ ಕುರಿತು ಅನೇಕ ರಾಜಕಾರಣಗಳು ನಡೆದವು. ಲಸಿಕೆ ಬಗ್ಗೆ ಜನರಲ್ಲಿ ಅನುಮಾನ ಮೂಡುವಂತೆ ಮಾಡಿ ಜನರ ಜೀವನದ ಜೊತೆ ಆಟವಾಡಿದರು. ಇದೇ ಲಸಿಕೆ ಪಡೆದ ಕಾರಣದಿಂದಲೇ ವೈದ್ಯರು, ನರ್ಸ್​ ಆರೋಗ್ಯ ಸಿಬ್ಬಂದಿಗಳು ಜನರ ಜೀವ ರಕ್ಷಣೆಗೆ ಹೋರಾಡಿದರು. ಇದೇ ಕಾರಣದಿಂದಲೇ ಜನರಲ್ಲಿ ಮನವಿ ಮಾಡುತ್ತೇನೆ. ಜನರು ಹೋಗಿ ಲಸಿಕೆ ಪಡೆಯಬೇಕು, ಯುವ ಜನರು ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿ. ಜನರು ತಪ್ಪದೇ ಮಾಸ್ಕ್​ ಧರಸಿಬೇಕು. ಸಾಮಾಜಿಕ ಅಂತರ ಕಾಡಬೇಕು, ಕೊರೋನಾ ಕರ್ಫ್ಯೂ ಸಡಿಲಿಸಿದ ಮಾತ್ರಕ್ಕೆ ಸೋಂಕು ಇಲ್ಲ ಎಂದು ತಿಳಿಯದೇ ಎಚ್ಚರವಹಿಸಬೇಕು. ನಾವೆಲ್ಲರೂ ಸೋಂಕಿನ ವಿರುದ್ಧ ಈ ಹೋರಾಟದಲ್ಲಿ ಜಯಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page