Connect with us

ಬಂಟ್ವಾಳ ಸಜಿಪನಡು ಕಂಚಿನಡ್ಕದ ತ್ಯಾಜ್ಯವಿಲೇವಾರಿ ಘಟಕಕ್ಕೆ ವಿರೋಧ: ಇಂದು ಬಂದ್ ಆಚರಣೆ

Published

on

ಬಂಟ್ವಾಳ ಸಜಿಪನಡು ಕಂಚಿನಡ್ಕದ ತ್ಯಾಜ್ಯವಿಲೇವಾರಿ ಘಟಕಕ್ಕೆ ವಿರೋಧ: ಇಂದು ಬಂದ್ ಆಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕದಲ್ಲಿ ಬಂಟ್ವಾಳ ಪುರಸಭೆ ನಿರ್ಮಿಸಿರುವ ಸುಮಾರು 1.40 ಕೋಟಿ ರೂಪಾಯಿ ವೆಚ್ಚದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ.

ಮಂಗಳೂರು ಸಹಾಯಕ ಆಯುಕ್ತರ ಆದೇಶದ ಮೇರೆಗೆ ನಿನ್ನೆ (ಮಾರ್ಚ್ 18) ತ್ಯಾಜ್ಯ ಘಟಕಕ್ಕೆ ತ್ಯಾಜ್ಯ ವಿಲೇವಾರಿಗೆ ಪುರಸಭೆಯ ಸಿಬ್ಬಂದಿಗಳು ತೆರಳಿದ ಸಂದರ್ಭದಲ್ಲಿ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತೆರಳುವುದನ್ನು ಮನಗಂಡು ಬಂಟ್ವಾಳ ಪೊಲೀಸರು ಪ್ರತಿಭಟನಾ ನಿರತ ಕೆಲವರನ್ನು ಬಂಧಿಸಿದ್ದಾರೆ.

ಪೊಲೀಸ್ ಸರ್ಪಗಾವಲಿನಲ್ಲಿ ಸಿಬ್ಬಂದಿಗಳು ತ್ಯಾಜ್ಯವನ್ನು ವಿಲೇವಾರಿ ಘಟಕಕ್ಕೆ ಹಾಕುವಂತಹ ಸ್ಥಿತಿ ಇಲ್ಲಿ ನಿರ್ಮಾಣವಾಗಿತ್ತು.

ಇದೀಗ ಬಂಟ್ವಾಳ ಪುರಸಭಾ ಅಧಿಕಾರಿಗಳ ದಬ್ಭಾಳಿಕೆ ಮತ್ತು ಪೋಲಿಸ್ ದೌರ್ಜನ್ಯದ ವಿರುದ್ಧ ಸಜೀಪ ನಾಗರೀಕರು ಇಂದು ಸಜೀಪ ಬಂದ್ ಗೆ ಕರೆ ಕೊಟ್ಟಿದ್ದಾರೆ.

ಸಜಿಪ ನಡು ಡಂಪಿಂಗ್ ಯಾರ್ಡ್ ವಿರೋಧ ವ್ಯಕ್ತಪಡಿಸಿದ ಪಂಚಾಯತ್ ಅಧ್ಯಕ್ಷರ ಮತ್ತು ನಾಗರಿಕರನ್ನು ಅಮಾನುಷವಾಗಿ ಬಂಧಿಸಿದ ಪೋಲೀಸರ ನಡೆ ಖಂಡನೀಯ ಎಂದು ಎಸ್.ಡಿ.ಪಿ.ಐ ಕೂಡ ಆಕ್ರೋಶ ವ್ಯಕ್ತಪಡಿಸಿದೆ.

ಎಸ್.ಡಿ.ಪಿ.ಐ ಪ್ರಕಟಣೆ:

ಬಂಟ್ವಾಳ ಪುರಸಭೆಯಿಂದ ಕಂಚಿನಡ್ಕ ಪದವಿನಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ತ್ಯಾಜ್ಯ ಸಂಸ್ಕರಣೆಯ ಡಂಪಿಂಗ್ ಯಾರ್ಡ್ ಬಳಿ ಸ್ಥಳೀಯ ಮನೆಗಳನ್ನು ಅಂಗನವಾಡಿಗಳನ್ನು ಬೇರೆಡೆಗೆ ಸ್ಥಳಾಂತರಿಸದೆ ಮತ್ತು ಪುನರ್ವಸತಿ ಕಲ್ಪಿಸದೇ ಪುರಸಭೆಯಿಂದ ತ್ಯಾಜ್ಯ ಹಾಕಿದ್ದನ್ನು ವಿರೋಧಿಸಿದ ಪಂಚಾಯತ್ ಅದ್ಯಕ್ಷರನ್ನು ಸೇರಿದಂತೆ ಗ್ರಾಮದ ಜನರನ್ನು ಪೋಲಿಸರು ಬಂಧಿಸಿರುವ ಕ್ರಮವು ಖಂಡನೀಯವಾಗಿದೆ.

ಡಂಪಿಂಗ್ ಯಾರ್ಡ್ ಗೆ ಗ್ರಾಮಸ್ಥರ ವಿರೋಧದ ನಡುವೆಯೂ ಮಂಗಳೂರು ಸಹಾಯಕ ಆಯುಕ್ತರ ಆದೇಶದ ಮೇರೆಗೆ ಬಲವಂತವಾಗಿ ಡಂಪಿಂಗ್ ಯಾರ್ಡ್ ನಲ್ಲಿ ತ್ಯಾಜ್ಯ ಹಾಕಿದ್ದಾರೆ.

ಅಲ್ಲದೇ ಇದರ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದ ಪಂಚಾಯತ್ ಅದ್ಯಕ್ಷರಿಗೆ, ಸದಸ್ಯರಿಗೆ ಮತ್ತು ಗ್ರಾಮಸ್ಥ ಮಹಿಳೆಯರಿಗೆ ಮಾತಾನಾಡಲು ಕೂಡ ಅವಕಾಶ ನೀಡದೇ ಅವರ ಹೋರಾಟವನ್ನು ಬಲವಂತವಾಗಿ ಹತ್ತಿಕ್ಕಿರುವ ಜಿಲ್ಲಾಡಳಿತದ ಸರ್ವಾಧಿಕಾರಿ ಧೋರಣೆಯನ್ನು ಸಹಿಸಲು ಖಂಡಿತವಾಗಿಯು ಸಾಧ್ಯವಿಲ್ಲ.

ಇಂದು ಇಡೀ ದೇಶದಲ್ಲಿ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕೊರೊನ ವೈರಸ್ ನಿಂದ ಸಂಕಷ್ಟದಲ್ಲಿ ಇರುವಾಗ ಗ್ರಾಮಸ್ಥರು ವಾಸಿಸುವ ಸ್ಥಳದಲ್ಲೇ ತ್ಯಾಜ್ಯವನ್ನು ಹಾಕಿರುವುದು ವಿಪರ್ಯಾಸ.

ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸದೇ ಪುರಸಭೆಯು ತ್ಯಾಜ್ಯವನ್ನು ಹಾಕಿದ್ದಲ್ಲಿ ತೀವ್ರ ಹೋರಾಟವನ್ನು ನಡೆಸಲಾಗುವುದೆಂದು ಎಸ್.ಡಿ.ಪಿ.ಐ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದೀಗ ಬಂಟ್ವಾಳದ ಸಜೀಪ ಬಂದ್ ಆಗಿದ್ದು, ಅಂಗಡಿಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಬಂದ್ ಯಶಸ್ವಿಯಾಗಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page