Connect with us

DAKSHINA KANNADA

ಸುಳ್ಯ ಹಾಸ್ಟೆಲಿನಲ್ಲಿ ಪಿಯುಸಿ ವಿದ್ಯಾರ್ಥಿನಿಯಿಂದ ಜೀವಾಂತ್ಯ..!

Published

on

ಸುಳ್ಯ: ವಿದ್ಯಾರ್ಥಿನಿಯೊಬ್ಬಳು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡದ ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಈಕೆ ಬೆಂಗಳೂರು ರಾಮನಾಥ ಪುರದ, ಕೋರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು.

ಮದ್ಯಾಹ್ನ ಆಕೆಯ ರೂಂ ನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಂ ಗೆ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ತಟ್ಟಿದ್ದರೂ ಬಾಗಿಲು ತೆರೆದಿರಲಿಲ್ಲ,

ಆಕೆ ಮಲಗಿರಬಹುದು ಎಂದು ಭಾವಿಸಿ ಗೆಳತಿಯ ತಟ್ಟೆಯಲ್ಲಿ ಊಟ ಮುಗಿಸಿ ಮತ್ತೆ ರೂಮಿಗೆ ಬಂದಾಗಲೂ ಬಾಗಿಲು ತೆರೆಯದೇ ಇದ್ದ ಕಾರಣ ಸಂಶಯಗೊಂಡ ವಿದ್ಯಾರ್ಥಿನಿ ವಾರ್ಡನ್ ಗೆ ಮಾಹಿತಿ ನೀಡಿದ್ದು, ಇಲಾಖೆಯ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೋಲಿಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್ ಐ ದಿಲೀಪ್ ಕುಮಾರ್ , ಮೊದಲಾದವರು ಆಗಮಿಸಿದ್ದು ವಿದ್ಯಾರ್ಥಿನಿ ಮೃತದೇಹವನ್ನು ಮಹಜರಿಗೆ ಸಾಗಿಸಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಬಿಜೆಪಿ ಮಡಿಲಿಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್

Published

on

ಕಿನ್ನಿಗೋಳಿ: ಕಟೀಲು, ಕಿನ್ನಿಗೋಳಿ ಮತ್ತು ಮೆನ್ನಬೆಟ್ಟು ಪಂಚಾಯತ್ ಗಳು ಸೇರಿ ಮೇಲ್ದರ್ಜೆಗೇರಿದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನ ಮೊದಲ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಿಜೆಪಿ ಮಡಿಲಿಗೆ ಸೇರಿದೆ ಹಿನ್ನೆಲೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ನರೇಂದ್ರ ಮೋದಿಯವರ ಕಲ್ಪನೆಯಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಒಂಭತ್ತು ವರ್ಷಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ; ನಾಳೆ ಮಂಗಳೂರಿನ ಮಹಾವೀರ ವೃತ್ತದ ನವೀಕೃತ ಕಲಶ ಲೋಕಾರ್ಪಣೆ

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಕಿನ್ನಿಗೋಳಿ ಮತ್ತು ಬಜಪೆಯನ್ನು ಅಭಿವೃದ್ದಿಪಡಿದಬೇಕು ಎಂಬ ಉದ್ದೇಶದಿಂದ ಎರಡೂ ಪಂಚಾಯತ್ ಗಳನ್ನು ಮೇಲ್ದರ್ಜೆಗೇರಿಸಿದ್ದೇವೆ, ಈ ಮೂಲಕ ಎರಡೂ ಪಂಚಾಯತ್ ಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು. ಈ ಸಂದರ್ಭ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Continue Reading

DAKSHINA KANNADA

ಒಂಭತ್ತು ವರ್ಷಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ; ನಾಳೆ ಮಂಗಳೂರಿನ ಮಹಾವೀರ ವೃತ್ತದ ನವೀಕೃತ ಕಲಶ ಲೋಕಾರ್ಪಣೆ

Published

on

ಮಂಗಳೂರು: ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ ಜಂಕ್ಷನಿನ ಮಹಾವೀರ ವೃತ್ತದಲ್ಲಿ ಕಲಶ ಪುನರ್ ನಿರ್ಮಾಣ ಕಾಮಗಾರಿ ಪೂಣಗೊಂಡಿದ್ದು, ನಾಳೆ (ಜ. 24) ಸಂಜೆ 5.30 ಕ್ಕೆ ಲೋಕಾರ್ಪಣೆ ಆಗಲಿದೆ. ಇದರೊಂದಿಗೆ 9 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಬೀಳಲಿದೆ.

ಮಂಗಳೂರು ಜೈನ ಸೊಸೈಟಿಯ ಮುಂದಾಳತ್ವದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಬೃಹತ್ ಕಲಶ ಮತ್ತು ವೃತ್ತ ನಿರ್ಮಾಣಗೊಂಡಿದೆ.

ಮಂಗಳೂರು ಜೈನ ಸೊಸೈಟಿಯ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಲೋಕಾರ್ಪಣೆ ನೆರವೇರಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಧಾನ ಸಭಾಧ್ಯಕ್ಷ ಡಾ. ಯು.ಟಿ. ಖಾದರ್ ನಾಮಫಲಕ ಅನಾವರಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬೃಜೇಶ್‌ಚೌಟ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮೂಡಾ ಮಾಜಿ ಅಧ್ಯಕ್ಷ ಕೆ. ಸುರೇಶ್ ಬಲ್ಲಾಳ್ ಹಾಗೂ ಸ್ಥಳೀಯ ಮಾಜಿ ಕಾರ್ಪೊರೇಟರ್ ಸಂದೀಪ್ ಗರೋಡಿ ಭಾಗವಹಿಸಲಿದ್ದಾರೆ ಎಂದರು.

ಇದನ್ನೂ ಓದಿ: ಪ್ರಧಾನಿ ಹುದ್ದೆಯ ನಂತರ ಭಾರತದಲ್ಲಿ ಅತ್ಯಂತ ಕಠಿಣ ಕೆಲಸ ಮಾಡುವ ವ್ಯಕ್ತಿ ಇವರಂತೆ: ಶಶಿ ತರೂರ್‌ ಹೇಳಿದ್ಯಾರನ್ನ?

ಮಂಗಳೂರಿನ ಹೆಬ್ಬಾಗಿಲು ಎಂದೆನಿಸಿರುವ ಪಂಪ್‌ವೆಲ್‌ಜಂಕ್ಷನ್‌ನಲ್ಲಿ 2016 ರಲ್ಲಿ ಮೇಲ್ಸೇತುವೆ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಾಂತರಗೊಂಡಿದ್ದ ಈ ಕಲಶ ಇದೀಗ ವಿಶಿಷ್ಟ ವೈಭವದೊಂದಿಗೆ ಮರು ನಿರ್ಮಾಣಗೊಂಡಿದೆ. ವೃತ್ತದ ಸುತ್ತ ರೇಲಿಂಗ್, ಅಲಂಕಾರಿಕ ದೀಪಗಳನ್ನು ಮತ್ತು ಗ್ರಾನೈಟ್ ಅಳವಡಿಸಲಾಗಿದ್ದು, ಹೊಸ ಕಾಂತಿಯೊಂದಿಗೆ ಕಂಗೊಳಿಸುತ್ತಿದೆ. ರಾತ್ರಿ ವೇಳೆ ಕಲರ್‌ಫುಲ್ ಆಗಿ ಗೋಚರಿಸುತ್ತಿದೆ. ಪ್ರವಾಸಿಗರಿಗೆ ಮತ್ತು ದೂರದ ಊರುಗಳಿಂದ ಬರುವವರಿಗೆ ಮಹಾವೀರ ವೃತ್ತದ ಈ ಕಲಶ ಕಾಣಿಸಿದೊಡನೆ ‘ಮಂಗಳೂರು ಬಂದಿದೆ’ ಎಂಬ ಅನುಭವ ಮೂಡಿಸಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಢಿಯಲ್ಲಿ ಕಾರ್ಯದರ್ಶಿ ಸಚಿನ್ ಕುಮಾರ್ ಜೈನ್, ಕೋಶಾಧಿಕಾರಿ ಕೆ. ವಿಜೇಶ್ ವಿದ್ಯಾಧರ್ ಮುಂತಾದವರು ಇದ್ದರು.

Continue Reading

DAKSHINA KANNADA

ದೇವಸ್ಥಾನದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾಕಬಾರದೆಂಬ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ

Published

on

ಬಂಟ್ವಾಳ: ಉಡುಪಿ ಜಿಲ್ಲಾಧಿಕಾರಿಗಳು ದೇವಸ್ಥಾನದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿದ್ದಕ್ಕೆ ಉಡುಪಿಯಲ್ಲಿ ಕೆಲವರಿಂದ ಟೀಕೆಗಳು ಬಂತು. ಅದರ ಮುಂದುವರಿದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯಾಗಿದ್ದವರು ಕೇಸರಿ ಧ್ವಜವನ್ನು ಮತ್ತು ಇತರೆ ಯಾವುದೇ ಧರ್ಮದ ಧ್ವಜವನ್ನು ಹಾಕಬಾರದು ಎನ್ನುವ ಹೇಳಿಕೆ ಕೊಟ್ಟಿದ್ದೆ. ಆದರೆ ಅದು, ಮಾಧ್ಯಮದಲ್ಲಿ ನಾನು ದೇವಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾಕಬಾರದೆಂದು ಹೇಳಿದೆ ಎಂದು ಬಿಂಬಿಸಲಾಗಿದೆ. ನಾನು ಹೇಳಿರುವುದು ಒಂದು ನಿರ್ದಿಷ್ಟ ವಿಷಯದ ಬಗ್ಗೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಇದೀಗ ಸ್ಪಷ್ಟನೆ ನೀಡಿದ್ದಾರೆ.


ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈಗ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ಜಿಲ್ಲಾಧಿಕಾರಿಗಳು ಧಾರ್ಮಿಕ ಧ್ವಜವನ್ನು ಹಾಕಬಾರದು ಎನ್ನುವ ನಾನು ಹೇಳಿಕೆ ನೀಡಿದ ವಿಚಾರಕ್ಕೆ ಈಗಲೂ ಬದ್ಧನಾಗಿದ್ದೇನೆ.

ಅದರಲ್ಲೂ ಸರಕಾರಿ ನೌಕರರು, ಹಿರಿಯ ಅಧಿಕಾರಿಗಳು ಒಂದು ಧರ್ಮಕ್ಕೆ ಸೀಮಿತವಾದ ಬಾವುಟಗಳನ್ನು ಹಾಕಬಾರದು ಎನ್ನುವುದನ್ನ ಹೇಳಿದ್ದೇನೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬಾರದು ಎಂದು ರಮಾನಾಥ ರೈ ಮತ್ತೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ದೇಗುಲಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ರಮಾನಾಥ ರೈ; ಮಾಜಿ ಸಚಿವರ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರು ಮಾತನಾಡುತ್ತಾ ಹಿಂದೂ ದೇವಾಲಯಗಳಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದು ಹೇಳಿದ್ದಾರೆ ಎಂದು ಬಿಜೆಪಿ ನಾಯಕರು, ಕಾರ್ಯಕರ್ತರು ರೈಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page