Connect with us

DAKSHINA KANNADA

ಪುತ್ತೂರು : ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ 78 ನೇ ಜಯಂತ್ಯೋತ್ಸವ ಸಂಸ್ಕರಣೆ ಕಾರ್ಯಕ್ರಮಕ್ಕೆ ಭರದ ಸಿದ್ದತೆ..!

Published

on

ಪುತ್ತೂರು: ಜ.22ರಂದು ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಜರುಗಲಿರುವ ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆ, ಗ್ರಂಥಲೋಕಾರ್ಪಣೆ, ಗುರುವಂದನೆ, ರಜತ ತಲಾಭಾರ ಕಾರ್ಯಕ್ರಮದ ಸಿದ್ಧತೆಗಾಗಿ ಈಗಾಗಲೇ ಭರದ ಸಿದ್ಧತೆ ನಡೆಯುತ್ತಿದ್ದು, ಸುಮಾರು 86 ಸಾವಿರ ಚದರ ಅಡಿಗೂ ಮಿಕ್ಕಿ ಸಭಾಂಗಣ ನಿರ್ಮಾಣ ಮಾಡಲಾಗುತ್ತಿದೆ.

 ದೇವಳದ ಗದ್ದೆಯ ತುದಿಯಲ್ಲಿರುವ ಧ್ಯಾನರೂಢ ಶಿವನ ಪ್ರತಿಮೆಯ ಬಳಿಯಿಂದ ಹಿಡಿದು ದೇವಳದ ಬಳಿಯ ಶ್ರೀ ಅಯ್ಯಪ್ಪ ಸನ್ನಿಧಿಯ ತನಕ ಶೀಟ್ ಹಾಸು ಮತ್ತು ಪೆಂಡಾಲ್ ಅಳವಡಿಸಲಾಗುತ್ತಿದೆ.

ಸುಮಾರು 120 ಚದರಅಡಿ ಅಗಲ ಮತ್ತು 40 ಚ.ಅಡಿ ಉದ್ದದ ವೇದಿಕೆ ನಿರ್ಮಾಣಗೊಂಡಿದೆ.

ಅಲ್ಲಿಂದ 400 ಮೀಟರ್ ಉದ್ದಕ್ಕೂ 300ಮೀಟರ್ ಅಗಲದ ಶೀಟ್ ಅಳವಡಿಕೆಯ ಪೆಂಡಾಲ್, ಬಳಿಕ ದೇವಳದ ಬಳಿಯ ತನಕವೂ ಶಾಮೀಯಾನದ ಪೆಂಡಾಲ್ ಅಳವಡಿಸಲಾಗಿದೆ.

ಪೆಂಡಾಲ್ ಪೂರ್ಣ ನೆಲಕ್ಕೆ ಧೂಳು ಬಾರದಂತೆ ನೈಲಾನ್ ಶೇಡ್ ನೆಟ್‌ ಹೊದಿಕೆ ಹಾಕಲಾಗಿದೆ.

ಈ ಹಿಂದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶದ ಸಂದರ್ಭದಲ್ಲಿ ಪಾಕಶಾಲೆ ಮಾಡುತ್ತಿದ್ದ ಸ್ಥಳದಲ್ಲೇ ಪಾಕಶಾಲೆ ನಿರ್ಮಾಣ ಮಾಡಲಾಗಿದೆ.

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಕರಣೆ ಕಾರ್ಯಕ್ರಮದ ಆಮಂತ್ರಣವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಸಂಸ್ಕರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಅವರು ಸಂಸ್ಥಾನದಲ್ಲಿ ನೀಡಿದರು.

ಜ. ೨೨ರಂದು ನಡೆಯುವ ಕಾರ್ಯಕ್ರಮಕ್ಕೆ ಮೊದಲನೆ ದಿನ ಆಗಮಿಸಲಿರುವ ಶ್ರೀಗಳು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ.

ಮರುದಿನ ಬೆಳಗ್ಗೆಯಿಂದಲೇ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ.

ಸಂಸ್ಕರಣಾ ಸಮಿತಿಯ ಅರ್ಥಿಕ ಸಮಿತಿ ಸಂಚಾಲಕ ಯು.ಪಿ ರಾಮಕೃಷ್ಣ ಗೌಡ, ಬೆಂಗಳೂರು ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ಲಕ್ಷ್ಮೀ ನಾರಾಯಣ ಗೌಡ ಐವರ್ನಾಡು, ದಕ್ಷಿಣ ಕನ್ನಡ ಕೊಡಗು ಗೌಡ ಸಂಘದ ಕಾರ್ಯದರ್ಶಿ ನಾಗೇಶ್ ಕುಮಾರ್ ಕಲಮೋಟ್ಟು ಹಾಗೂ ಯೋಗೀಶ್ ಉಪಸ್ಥಿತರಿದ್ದರು.

1979ರಲ್ಲಿ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದು ಒಕ್ಕಲುತನ ಮಾಡುವ ಬಂಧುಗಳ ಮನೆಯಲ್ಲಿ ನಿಂತು ಶ್ರೀ ಮಠದ ಬಗ್ಗೆ ಇಲ್ಲಿನ ಭಕ್ತರನ್ನು ಸಂಘಟಿಸುವ ಕೆಲಸ ಮಾಡಿದ್ದಾರೆ. 1958ರಲ್ಲಿ ಅವರಿಗೆ ಬೆಳ್ಳಿಯ ತುಲಾಭಾರ ಮಂಗಳೂರಿನಲ್ಲಿ ಮಾಡಲಾಗಿತ್ತು.

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ..

68ನೇ ಜಯಂತ್ಯೋತ್ಸವವು ಮಂಗಳೂರಿನಲ್ಲಿ ನಡೆಯಿತು.

ಅವರು ಭೈರವೈಕ್ಯರಾದ ಬಳಿಕವೂ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾಡಲಾಗುತ್ತಿದೆ.

ಈ ಮೂಲಕ ಶ್ರೀಗಳ ಕಾರ್ಯವನ್ನು ಮತ್ತೊಮ್ಮೆ ಸಮಾಜಕ್ಕೆ ನೆನಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

DAKSHINA KANNADA

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

Published

on

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದು ಚೂರಿ ಇರಿತ ಸಂಭವಿಸಿದ ಘಟನೆ ವಿಟ್ಲದ ಖಾಸಗಿ ಐಟಿಐ ಕಾಲೇಜೊಂದರಲ್ಲಿ ಇಂದು ನಡೆದಿದೆ.


ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ವಿದ್ಯಾರ್ಥಿಗಳ ನಡುವೆ ಚೂರಿ ಇರಿತ ನಡೆದಿದೆ. ಆರಂಭದಲ್ಲಿ ಇಬ್ಬರ ಮಧ್ಯೆ ವಾಗ್ವಾದ ನಡೆದು ಬಳಿಕ ಚೂರಿ ಇರಿತ ಸಂಭವಿಸಿದ್ದು, ಘಟನೆಯಿಂದಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜೋರಾಗಿ ಕೆಮ್ಮಿದ ಎಂಬ ಕಾರಣಕ್ಕೆ ನೆರೆಮನೆಯವರಿಂದಲೇ ಯುವಕನ ಕೊಲೆ

ಇದೇ ವೇಳೆ ಗಲಾಟೆ ಬಿಡಿಸಲು ಹೋದ ವಿದ್ಯಾರ್ಥಿಗೂ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

Continue Reading

DAKSHINA KANNADA

ಪುತ್ತೂರು: ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Published

on

ಪುತ್ತೂರು: ಉಪ್ಪಿನಂಗಡಿ ಗ್ರಾಮದ ಪಂಜಳ ಎಂಬಲ್ಲಿ ಮಾದಕ ದ್ರವ್ಯ ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಮೂರು ಸಾವಿರ ರೂಪಾಯಿ ಮೌಲ್ಯದ 2.16 ಗ್ರಾಂ ಎಂ.ಡಿ.ಎಂ.ಎ., 45 ಸಾವಿರ ರೂಪಾಯಿ ಮೌಲ್ಯದ ಐಪೋನ್ ಮತ್ತು ಒಂದು ಸಾವಿರ ರೂಪಾಯಿ ಮೌಲ್ಯದ ಸ್ಯಾಮ್ಸಂಗ್ ಕೀ-ಪ್ಯಾಡ್ ಮೊಬೈಲ್ ಸೇರಿದಂತೆ ಒಟ್ಟು 49 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಕೊಕ್ಕಡ ನಿವಾಸಿ ಯಾಹ್ಯಾ (48) ಬಂಧಿತ ಆರೋಪಿಯಾಗಿದ್ದಾನೆ. ಉಪ್ಪಿನಂಗಡಿ ಪೊಲೀಸರು ಪಂಜಳ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ಕಂಡು ಬಂದಿದ್ದ ಯಾಹ್ಯಾ ಕೊಕ್ಕಡನನ್ನು ವಿಚಾರಿಸಿದಾಗ ಆತ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜೋರಾಗಿ ಕೆಮ್ಮಿದ ಎಂಬ ಕಾರಣಕ್ಕೆ ನೆರೆಮನೆಯವರಿಂದಲೇ ಯುವಕನ ಕೊಲೆ

ಉಪ್ಪಿನಂಗಡಿ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಫೆ.11-14: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ-ಕುಂಭ ಮಹೋತ್ಸವ

Published

on

ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಕುಂಭ ಮಹೋತ್ಸವ ಫೆ.11ರಿಂದ ಆರಂಭಗೊಂಡು ಫೆ.14ರವರೆಗೆ ಜರುಗಲಿದೆ.

ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ಇವರ ಆಶೀರ್ವಾದದೊಂದಿಗೆ ಕ್ಷೇತ್ರದ ತಂತ್ರಿ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಜನಾರ್ದನ ಭಟ್ಟರ ಉಪಸ್ಥಿತಿಯಲ್ಲಿ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು.

ಫೆ.11ರಂದು ದೀಪಪ್ರಜ್ವಲನೆ ಮೂಲಕ ಭಜನಾ ಸಂಕೀರ್ತಣೆ ಸಂಜೆ 3 ಗಂಟೆಗೆ ಆರಂಭಗೊಳ್ಳಲಿದೆ. ಫೆ.12ರಂದು ಬೆಳಿಗ್ಗೆ ಗಣಪತಿ ಹೋಮ, ಕಲಶಾಭಿಷೇಕ ಇತ್ಯಾದಿ ನಡೆದು ಮಧ್ಯಾಹ್ನ ಮಹಾರಥೋತ್ಸವ ಬಳಿಕ ಮಹಾಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ ಆಯೋಜನೆ ಮಾಡಲಾಗಿದೆ. 

6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಭಾಗವಹಿಸಲಿದ್ದು, ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಆಗಮಿಸಲಿರುವರು ಎಂದು ಕ್ಷೇತ್ರದ ಆಡಳಿತ ಸಮಿತಿ ಪ್ರಕಟಣೆ ತಿಳಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page