Connect with us

LATEST NEWS

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ನಸುಕಿನ ಜಾವ ಬೃಹತ್ ಗುಡ್ಡ ಕುಸಿತ: ಮಾಣಿ-ಮೈಸೂರು ಹೈವೇ ಬ್ಲಾಕ್

Published

on

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಪುತ್ತೂರು ಪೇಟೆ ಮೂಲಕ ವಾಹನ ಸಂಚರಿಸಲು ಅವಕಾಶ ನೀಡಲಾಗಿದೆ.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಕಳೆದ ಕೆಲ ದಿನಗಳಿಂದ ಆಗಾಗ ಗುಡ್ಡ ಕುಸಿಯುತ್ತಲೇ ಇದ್ದು ಇದೀಗ ಭಾರೀ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ.

ಮಣ್ಣು ತೆರವು ಕಾರ್ಯಾಚರಣೆ ಬರದಿಂದ ಸಾಗುತ್ತಿದ್ದು, ಬೃಹತ್ ಗುಡ್ಡವಾಗಿರುವುದರಿಂದ ಇನ್ನಷ್ಟು ಜರಿಯುವ ಸಾಧ್ಯತೆಯಿದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

Published

on

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂ*ಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾ*ವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮನೋಜ್ ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿದ್ದರು. ರಾತ್ರಿ ವೇಳೆ ವಾಪಸ್ ಆಗುತ್ತಿದ್ದಾಗ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ.

ಇದನ್ನೂ ಓದಿ: WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

ಇದರಿಂದ ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂ*ಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

Continue Reading

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page