Connect with us

DAKSHINA KANNADA

ಪುತ್ತೂರು: ಲಂಚ ಸ್ವೀಕಾರ ಆರೋಪ; ಲೋಕಾಯುಕ್ತರ ಬಲೆಗೆ ಬಿದ್ದ ಕೇಸ್ ವರ್ಕರ್

Published

on

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ನಿನ್ನೆ ಸಂಜೆ ನಡೆದಿದೆ.

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಹಶೀಲ್ದಾರ್ ಪರಾರಿಯಾಗಿದ್ದು, ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಸ್ತೆಗೆ ಅಡ್ಡಲಾಗಿ ಮರ ಬೀಳಿಸಿ ವಾಹನ ಸವಾರರನ್ನು ತಡೆದ ಆನೆ

ದೂರುದಾರನ ಚಿಕ್ಕಪ್ಪಗೆ ಸೇರಿದ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ಮಂಜೂರಾಗಿದ್ದು, ನಂತರ ಅವರು ವೀಲುನಾಮೆ ಮೂಲಕ ದೂರುದಾರನಿಗೆ ಹಕ್ಕು ಬರೆಸಿಕೊಟ್ಟಿದ್ದರು. ಜಾಗವನ್ನು ಪರಭಾರೆ ಮಾಡಲು ತಹಶೀಲ್ದಾರ್ ನಿರಾಕ್ಷೇಪಣಾ ಪತ್ರ ಅವಶ್ಯಕವಾಗಿದ್ದರಿಂದ, 2024ರ ಡಿಸೆಂಬರ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಬಾಕಿ ಇರುವುದರಿಂದ ವಿಚಾರಿಸಿದಾಗ, ಕೇಸ್ ವರ್ಕರ್ (ಎಫ್.ಡಿ.ಎ) ಸುನೀಲ್ ತಹಶೀಲ್ದಾರ್‌ ಸಹಿಗೆ ಲಂಚ ಅವಶ್ಯಕ ಎಂದು ಹೇಳಿ ಹಣ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಅವರು ಮಂಗಳೂರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸುನೀಲ್ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ಕುಡಲಗಿ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಆತನ ಪಾತ್ರದ ಕುರಿತು ತನಿಖೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಸ್ತೆಗೆ ಅಡ್ಡಲಾಗಿ ಮರ ಬೀಳಿಸಿ ವಾಹನ ಸವಾರರನ್ನು ತಡೆದ ಆನೆ

ಲೋಕಾಯುಕ್ತ ಕಾರ್ಯಾಚರಣೆಯ ತಂಡದಲ್ಲಿ ಲೋಕಾಯುಕ್ತ ಎಸ್ಪಿ (ಪ್ರಭಾರ) ಕುಮಾರ್ ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಡಾ. ಗಾನ.ಪಿ. ಕುಮಾರ್, ಇನ್ಸ್ಪೆಕ್ಟರ್‌ಗಳು ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವರ್ ಹಾಗೂ ಸಿಬ್ಬಂದಿ ಮಹೇಶ್, ರಾಜಪ್ಪ, ರಾಧಾಕೃಷ್ಣ, ಅದರ್ಶ, ವಿವೇಕ್, ವಿನಾಯಕ, ಪ್ರವೀಣ್, ಗಂಗಣ್ಣ, ನಾಗಪ್ಪ, ಮಾಹದೇವ, ಪವಿತ್ರ, ದುಂಡಪ್ಪ, ರುದ್ರಗೌಡ, ರಾಜಶೇಖರ್ ಪಾಲ್ಗೊಂಡಿದ್ದರು.

DAKSHINA KANNADA

ಮಂಗಳೂರು: ವಿಚ್ಛೇದನಕ್ಕೆ ಬಂದ ಎರಡು ಜೋಡಿಗಳು-ಸಂಧಾನ ಮಾಡಿ ಒಂದಾಗಿಸಿದ ಲೋಕ್ ಅದಾಲತ್

Published

on

ಮಂಗಳೂರು: ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳು ಮತ್ತೆ ಒಂದಾದ ವಿಶೇಷ ಹಾಗೂ ಹೃದಯಸ್ಪರ್ಶಿ ವಿದ್ಯಮಾನಕ್ಕೆ ಶನಿವಾರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ಬೈಠಕ್‌ ಸಾಕ್ಷಿಯಾಯಿತು.

ಈ ಎರಡು ಜೋಡಿಗಳ ದಾಂಪತ್ಯ ಜೀವನದಲ್ಲಿ ಯಾವುದೋ ಕಾರಣಕ್ಕೆ ಮನಸ್ತಾಪ ಉಂಟಾಗಿದ್ದ ಕಾರಣ ದಂಪತಿಗಳು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ವಿಚಾರಣೆ ವೇಳೆ ಈ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನ ನಡೆಯಿತು. ಪತಿ ಮತ್ತು ಪತ್ನಿಯ ಮಧ್ಯೆ ಸಂಧಾನ ಏರ್ಪಡಿಸಿ ಮತ್ತೆ ಒಂದುಗೂಡಿ ದಾಂಪತ್ಯ ಜೀವನ ಮುಂದುವರಿಸುವ ಬಗ್ಗೆ ಉಭಯೇತರರಿಗೂ ಮನವರಿಕೆ ಮಾಡಲಾಗಿತ್ತು.

ಸಂಧಾನದ ವೇಳೆ ದಂಪತಿಗಳು ಮತ್ತೆ ಒಂದುಗೂಡಿ ಜೀವನ ಮುಂದುವರಿಸಲು ಒಪ್ಪಿದ್ದರು. ಅದರಂತೆ ಶನಿವಾರ ಲೋಕ ಅದಾಲತ್ ಗೆ ಆಗಮಿಸಿದ್ದ ಎರಡೂ ಜೋಡಿಗಳು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಲಕ್ಷ್ಮೀ ನಾರಾಯಣ ಭಟ್‌ ಕೆ.  ಅವರ ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮುಖೇನ  ಒಂದಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ವಕೀಲರು ಉಪಸ್ಥಿತರಿದ್ದು, ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.  ಲೋಕ ಅದಾಲತ್ ಅಧಿವೇಶನದಲ್ಲಿ ಭಾಗವಹಿಸಿದ್ದ ಎರಡೂ ಜೋಡಿಗಳು ಮತ್ತೆ ಒಂದಾಗುವ ಮೂಲಕ ತಮ್ಮ ವಿಚ್ಛೇದನದ ಹೋರಾಟವನ್ನು ಕೊನೆಗೊಳಿಸಿದ ಈ ವಿದ್ಯಮಾನ ಮಾದರಿಯಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಅವರು ತಿಳಿಸಿದ್ದಾರೆ.

Continue Reading

DAKSHINA KANNADA

ಕರಾವಳಿಯಲ್ಲಿ ‘ಸಿಲ್ವರ್ ವುಡ್’ ಮರಗಳ ಹೊಸ ಪ್ರಯೋಗ!

Published

on

ಪುತ್ತೂರು: ಕೊಡಗು ಮತ್ತು ಚಿಕ್ಕಮಗಳೂರಿನಂತಹ ತಂಪಾದ ಹವಾಗುಣದಲ್ಲಿ ಬೆಳೆಯುವ ಸಿಲ್ವರ್ ವುಡ್ ಮರಗಳನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳೆಸಲು ನಡೆಸಿದ ಮೊದಲ ಪ್ರಯತ್ನ ಯಶಸ್ವಿಯಾಗಿದೆ.


ಫ್ಲೈವುಡ್ ಮತ್ತು ಇತರ ಪೀಠೋಪಕರಣಗಳ ತಯಾರಿಕೆಗಾಗಿ ಬಳಸುವ ಈ ಮರಗಳನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಪುತ್ತೂರಿನ ಕೃಷಿಕರೊಬ್ಬರು ಮುಂದಾಗಿದ್ದು, ದಾರಂದಕುಕ್ಕ ಕಾಯರ್ತಡಿ ನಿವಾಸಿ ಅಜಿತಪ್ರಸಾದ್ ರೈ ತಮ್ಮ ಬಳಿ ಇರುವ ಸುಮರು 20 ಎಕರೆ ಕೃಷಿಭೂಮಿಯಲ್ಲಿ ಈ ಸಿಲ್ವರ್ ವುಡ್ ಬೆಳೆಯಲು ನಿರ್ಧರಿಸಿದ್ದರು.

ಉಷ್ಣಾಂಶ ಹೆಚ್ಚಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಾತಾವರಣದಲ್ಲಿ ಈ ಮರಗಳು ಉಳಿಯುತ್ತದೋ ಎನ್ನುವ ಪ್ರಶ್ನೆಗಳ ಮಧ್ಯೆ ಸುಮಾರು 3 ಸಾವಿರದಷ್ಟು ಸಿಲ್ವರ್ ವುಡ್ ಸಸಿಗಳನ್ನು ನಾಟಿ ಮಾಡಿದ್ದಾರೆ. ಗಿಡಗಳನ್ನು ನಾಟಿ ಮಾಡಿ ಎರಡು ವರ್ಷಗಳಾಗುತ್ತಿದ್ದಂತೆ ಉತ್ತಮ ರೀತಿಯಲ್ಲಿ ಬೆಳೆದು ನಿಂತಿವೆ.

ಇದನ್ನೂ ಓದಿ: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕಾಗಮಿಸಿದ ಆದಿ ಯೋಗಿ ರಥದ ಶಿವ ಯಾತ್ರೆ

ಜಿಲ್ಲೆಯ ಹವಾಗುಣದಲ್ಲೂ ಸಿಲ್ವರ್ ವುಡ್ ಮರಗಳನ್ನು ಬೆಳೆಸಬಹುದು ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಸಿಲ್ವರ್ ವುಡ್ ಮರದಿಂದ ಎರಡು ಆದಾಯವನ್ನು ಪಡೆದುಕೊಳ್ಳುತ್ತಿದ್ದಾರೆ. ಗಿಡ ಬೆಳೆಯುತ್ತಿದ್ದಂತೆ ಈ ಗಿಡಗಳಿಗೆ ಕಾಳುಮೆಣಸಿನ ಬಳ್ಳಿಯನ್ನು ಬಿಡುತ್ತಿದ್ದು, ಈ ಬಳ್ಳಿಗಳಿಗೆ ಈ ಗಿಡಗಳು ಉತ್ತಮ ರೀತಿಯ ಆಸರೆಯನ್ನು ನೀಡುವ ಹಿನ್ನಲೆಯಲ್ಲಿ ಕಾಳುಮೆಣಸಿನ‌ ಗಿಡಗಳಲ್ಲೂ ಉತ್ತಮ‌ ಬೆಳೆ ಪಡೆಯುತ್ತಿದ್ದಾರೆ.

ನೇರವಾಗಿ, ಎತ್ತರವಾಗಿ‌ ಬೆಳೆಯವ ಈ ಮರಕ್ಕೆ ಭಾರೀ ಬೇಡಿಕೆಯೂ ಇದೆ. ಹೆಚ್ಚಾಗಿ ಪ್ಲೈವುಡ್ ತಯಾರಿಕೆಗೆ, ಪೀಠೋಪಕರಣಗಳ ತಯಾರಿಕೆಯಲ್ಲೂ ಈ ಮರವನ್ಮು ಬಳಸುತ್ತಾರೆ. ಎಲ್ಲಾ ಸಿಲ್ವರ್ ವುಡ್ ಮರಗಳು ಹುಲುಸಾಗಿ ಬೆಳೆಯುತ್ತಿದ್ದು, ಮುಂದಿನ ಎರಡು-ಮೂರು ವರ್ಷದ ಒಳಗೆ ಕಟಾವು ಮಾಡಿದಲ್ಲಿ, ಮರದಿಂದ ಉತ್ತಮ ಆದಾಯ ಬರುವ ನಿರೀಕ್ಷೆಯಿದೆ.

Continue Reading

DAKSHINA KANNADA

ತಾವರೆ ಬೆಳೆದ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾ*ವು

Published

on

ಪುತ್ತೂರು : ಮಕ್ಕಳ ವಿಚಾರದಲ್ಲಿ ಎಷ್ಟು ಜಾಗೃತೆ ವಹಿಸಿದರೂ ಸಾಲದು. ಪುಟ್ಟ ಮಕ್ಕಳ ಬಗ್ಗೆ ಸದಾ ಕಣ್ಣಿಡುವುದು ಅತೀ ಅಗತ್ಯ. ಇಲ್ಲವಾದಲ್ಲಿ ಅನಾಹುತವೇ ಸಂಭವಿಸಬಹುದು. ಇದೀಗ ಪುತ್ತೂರಿನಲ್ಲಿ ದುರಂ*ತ ಸಂಭವಿಸಿದೆ.

ತಾವರೆ ಬೆಳೆದ ನೀರಿನ ಟ್ಯಾಂಕ್‌ಗೆ ಒಂದೂವರೆ ವರ್ಷದ ಮಗು ಬಿದ್ದು ಸಾ*ವನ್ನಪ್ಪಿದೆ. ಪುತ್ತೂರಿನ ಬನ್ನೂರು ನೀರ್ಪಾಜೆಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಸುದೀಪ್ ಸಿನಿಮಾದಲ್ಲಿದ್ದಾರೆ ದಕ್ಷಿಣ ಭಾರತದ ಖ್ಯಾತ ನಟರು! ಪೋಸ್ಟರ್ ಬಿಡುಗಡೆ

ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿದೆ. ಹುಡುಕಾಡಿದಾಗ ಮನೆಯಂಗಳದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಮಗು ಮೃ*ತಪಟ್ಟಿದೆ ಎಂದು ತಿಳಿದುಬಂದಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page