Connect with us

ಕ್ವಾರಂಟೈನ್ ವ್ಯವಸ್ಥೆ ನೋಡಿಕೊಳ್ಳಬೇಕಿದ್ದ ಅಧಿಕಾರಿ ಬೇಜವಾಬ್ದಾರಿಯಿಂದ ಬೀದಿಯಲ್ಲಿದ್ದ ಕೊರೊನಾ ಠಾಣೆಗೆ.!

Published

on

ಕ್ವಾರಂಟೈನ್ ವ್ಯವಸ್ಥೆ ನೋಡಿಕೊಳ್ಳಬೇಕಿದ್ದ ಅಧಿಕಾರಿ ಬೇಜವಾಬ್ದಾರಿಯಿಂದ ಬೀದಿಯಲ್ಲಿದ್ದ ಕೊರೊನಾ ಠಾಣೆಗೆ.!

ಬಂಟ್ವಾಳ: ಕ್ವಾರಂಟೈನ್ ಕೇಂದ್ರದ ವ್ಯವಸ್ಥೆಯನ್ನು ನೋಡಿಕೊಳ್ಳಬೇಕಾದ ಅಧಿಕಾರಿಯೋರ್ವರ ಬೇಜವಾಬ್ದಾರಿತನದಿಂದ ಬೀದಿಯಲ್ಲಿದ್ದ ಕೊರೊನಾ,

ವಿಟ್ಲ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಲು ಮೂಲ ಕಾರಣವೆಂಬ ಆರೋಪಗಳು ಇದೀಗ ಕೇಳಿ ಬರುತ್ತಿದೆ.

ಮೇ 15 ರಂದು ಬೆಳಗ್ಗಿನ ಜಾವ ವಿಟ್ಲಕ್ಕೆ ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿದ ವ್ಯಕ್ತಿಯನ್ನು ನೇರವಾಗಿ ಕ್ವಾರಂಟೈನ್ ಮಾಡುವ ಬದಲು,

ವಿಟ್ಲದಲ್ಲಿ ಆತನಿಗೆ ಓಡಾಡುವ ಹಾಗೆ ಮಾಡಲಾಗಿದ್ದು, ಇದೇ ವಿಚಾರ ಇದೀಗ ಮುಳುವಾಗಿದೆ.

ಕ್ವಾರಂಟೈನ್‌ ಗಾಗಿ ನಿಗದಿಪಡಿಸಲಾಗಿದ್ದ ಕೇಂದ್ರದ ಜವಾಬ್ದಾರಿ ಹೊಂದಿರುವ ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿರಲಿಲ್ಲ.

ಕ್ವಾರೆಂಟೈನ್‌ ಗಾಗಿ ನಿಗದಿಪಡಿಸಲಾಗಿದ್ದ ಕೇಂದ್ರಕ್ಕೆ ಬೀಗ ಹಾಕಿರುವುದು ಮಾತ್ರವಲ್ಲದೆ, ಸಂಬಂಧಪಟ್ಟ ಅಧಿಕಾರಿಗಳು ದೂರವಾಣಿ ಕರೆಯನ್ನು ಸ್ವೀಕರಿಸದೇ ಕರ್ತವ್ಯ ಲೋಪ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಅನಿವಾರ್ಯ ಸ್ಥಿತಿಯಲ್ಲಿ ಆ ವ್ಯಕ್ತಿ ಪೊಲೀಸ್ ಠಾಣೆಗೆ ಬಂದಿದ್ದು ಬಳಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಗೆ ವ್ಯವಸ್ಥೆ ಮಾಡಲಾಗಿತ್ತು.

ಇದೀಗ ಠಾಣೆಯ ಎಸ್‌ ಐ ಸಹಿತ 13 ಸಿಬ್ಬಂದಿ ಸೇರಿ ಸಂಪರ್ಕದಲ್ಲಿದ್ದ 20 ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ.

ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 42 ವರ್ಷ ವಯಸ್ಸಿನ ಹೆಡ್‌ ಕಾನ್‌ ಸ್ಟೇಬಲ್ ಓರ್ವರಿಗೆ ಕೊರೊನಾ ಸೋಂಕು ತಗುಲಿರುವುದು ಮೇ 24ರಂದು ದೃಢಪಟ್ಟಿದೆ.

ಇವರಿಗೆ ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ಕರೋಪಾಡಿಯ ವ್ಯಕ್ತಿಯೋರ್ವರ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ವರದಿಯಾಗಿದ್ದು,

ಠಾಣೆಯ ಹೆಡ್‌ ಕಾನ್‌ ಸ್ಟೇಬಲ್‌ ಗೆ ಕೊರೊನಾ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಠಾಣಾ ಎಸ್.ಐ.ಸಹಿತ 13 ಮಂದಿ ಸಿಬ್ಬಂದಿ

ಹಾಗೂ ಇವರ ನೇರ ಸಂಪರ್ಕಕ್ಕೆ ಬಂದಿದ್ದ 7 ಮಂದಿ ಸೇರಿ ಒಟ್ಟು 20 ಮಂದಿಯನ್ನು ಕ್ವಾರಂಟೈನ್‌ ಗೆ ಒಳಪಡಿಸಲಾಗಿದೆ.

ಠಾಣಾ ಹೆಡ್‌ ಕಾನ್‌ ಸ್ಟೇಬಲ್‌ ಗೆ ಕೊರೊನಾ ಸೋಂಕು ಇರುವುದು ದೃಢಗೊಳ್ಳುತ್ತಿದ್ದಂತೆ, ಎಚ್ಚೆತ್ತುಕೊಂಡಿರುವ ಅಧಿಕಾರಿಗಳು,

ಅವರ ಸಂಪರ್ಕದಲ್ಲಿದ್ದ ಠಾಣಾ ಎಸ್‌.ಐ, ಸಿಬ್ಬಂದಿಗಳು ಸೇರಿದಂತೆ ಒಟ್ಟು 20 ಮಂದಿಯನ್ನು ಕ್ವಾರಂಟೈನ್‌ ಗೆ ಒಳಪಡಿಸಿದ್ದಾರೆ.

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವೇದಾವತಿಯವರ ನೇತೃತ್ವದ ತಂಡ ಠಾಣೆಯ ಎಸ್.ಐ.ಸಹಿತ

13 ಮಂದಿ ಸಿಬ್ಬಂದಿ ಹಾಗೂ ಇವರ ನೇರ ಸಂಪರ್ಕದಲ್ಲಿದ್ದ 7 ಮಂದಿ ಸೇರಿ ಒಟ್ಟು 20 ಮಂದಿಯನ್ನು ಕ್ವಾರಂಟೈನ್‌ ಗೆ ಒಳಪಡಿಸಿದೆ.

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ರವರ ಸೂಚನೆ ಮೇರೆಗೆ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ,

ಗ್ರಾಮಕರಣಿಕ ಪ್ರಕಾಶ್, ಸಿಬ್ಬಂದಿ ಚಂದ್ರಶೇಖರ ವರ್ಮರವರ ತಂಡ ಕಾರ್ಯಾಚರಣೆ ನಡೆಸಿದೆ.

ವಿಟ್ಲ ಸಿ.ಪಿ.ಸಿ.ಆರ್‌.ಐ.ನಲ್ಲಿರುವ ಅತಿಥಿ ಗೃಹ, ಪೊಲೀಸ್ ವಸತಿ ಸಮುಚ್ಚಯ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೊಲೀಸರನ್ನು ಹಾಗೂ ಅವರ ನೇರ ಸಂಪರ್ಕಕ್ಕೆ ಬಂದವರನ್ನು ನಿಗಾದಲ್ಲಿ ಇಡಲಾಗುತ್ತಿದೆ.

ಹೊಸ ಮಾರ್ಗ ಸೂಚಿಯಂತೆ ವಿಟ್ಲ ಸೀಲ್‌ ಡೌನ್ ಮಾಡುತ್ತಿಲ್ಲ ಎಂದು ವರದಿಯಾಗಿದೆ.

ಮೇ 21 ರಂದು ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಠಾಣಾ ಎಸ್.ಐ.ಯವರ ನೇತೃತ್ವದ ತಂಡ ದಾಳಿ ನಡೆಸಿತ್ತು.

ಈ ದಾಳಿಯ ತಂಡದಲ್ಲಿ ಇದೀಗ ಕೊರೊನಾ ಪಾಸಿಟೀವ್ ಆಗಿರುವ ಹೆಡ್‌ ಕಾನ್‌ ಸ್ಟೇಬಲ್ ಕೂಡ ಭಾಗಿಯಾಗಿದ್ದರು.

ಈ ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಪೊಲೀಸರ ಜೊತೆಗೆ ತಾಲೂಕು ಮಟ್ಟದ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.

ಬಳಿಕ ವಿಟ್ಲ ಠಾಣೆಗೆ ತನಿಖೆಗಾಗಿ ಜಿಲ್ಲಾಮಟ್ಟದ ಉನ್ನತ ಪೊಲೀಸ್ ಅಧಿಕಾರಿಗಳೂ ಆಗಮಿಸಿದ್ದರು.

ಈ ವೇಳೆ ಸಿಬ್ಬಂದಿ ಅಧಿಕಾರಿಗಳ ಸಹಿತ ಸಾರ್ವಜನಿಕವಾಗಿ ಹಲವರೊಂದಿಗೆ ಬೆರೆತಿರುವುದಾಗಿ ಹೇಳಲಾಗಿದೆ.

ಈ ಹಿನ್ನಲೆಯಲ್ಲಿ ಕೊರೊನಾ ಸೋಂಕಿತ ಸಿಬ್ಬಂದಿಯ ಟ್ರಾವೆಲಿಂಗ್ ಹಿಸ್ಟರಿ ಎಲ್ಲರಲ್ಲೂ ಆತಂಕಕ್ಕೂ ಕಾರಣವಾಗಿದೆ.

ಕೊರೊನಾ ಸೋಂಕು ದೃಢಪಟ್ಟ ಹೆಡ್‌ ಕಾನ್‌ ಸ್ಟೇಬಲ್ ಯಾರೊಂದಿಗೆ ಪ್ರಾಥಮಿಕ ಸಂಪರ್ಕವನ್ನು ಹೊಂದಿದ್ದಾರೆ ಅನ್ನೋ ಕುರಿತು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ವಿಟ್ಲ ಠಾಣಾ ಎಸ್.ಐ. ಸಹಿತ ಠಾಣೆಯ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಇನ್ನು ಪೊಲೀಸ್ ಠಾಣೆಗೆ ಬಂದು ಹೋಗಿರುವವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಹೆಡ್‌ ಕಾನ್ ಸ್ಟೇಬಲ್‌ ಅವರು ಸಾರ್ವಜನಿಕರ ಜೊತೆಗೆ ನೇರ ಸಂಪರ್ಕವನ್ನು ಹೊಂದಿರುವ ಸಾಧ್ಯತೆಯಿದ್ದು, ವಿಟ್ಲ ಸುತ್ತಮುತ್ತಲ ಪ್ರದೇಶದ ಜನರಿಗೆ ಕೊರೊನಾ ಆತಂಕ ಶುರುವಾಗಿದೆ.

ಠಾಣಾ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯನ್ನು ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿಯವರ ನೇತೃತ್ವದ ತಂಡ ಸ್ಯಾನಿಟೈಸ್ ಮಾಡಿದೆ.

ಮುಂದಿನ 48 ಗಂಟೆಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಪಕ್ಕದ ಕೊಠಡಿಯೊಂದರಲ್ಲಿ ಕೆಲಸ ಕಾರ್ಯಗಳು ನಡೆಯಲಿದ್ದು, ಜನರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಠಾಣಾ ಎಸ್.ಐ. ಸೇರಿ 12 ಮಂದಿ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ಕ್ವಾರಂಟೈನ್‌ ನಲ್ಲಿರುವ ಸಿಬ್ಬಂದಿಗಳು ಮರಳಿ ಬರುವ ತನಕ ಬಂಟ್ವಾಳ ನಗರ, ಗ್ರಾಮಾಂತರ ಹಾಗೂ ಸಂಚಾರಿ ಠಾಣಾ ಪೊಲೀಸರು ವಿಟ್ಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವೀಡಿಯೊ ನೋಡಿ:

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page