Connect with us

LATEST NEWS

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲ 6 ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ..!

Published

on

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್‌ಪಿ ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್‌ಪಿ ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ..

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಅವರು ಅವಧಿಪೂರ್ವ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಈ ಮುನ್ನ ಮುಂದೂಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ, ಸಂತನ್, ಮುರುಗನ್, ಎಜಿ ಪೆರಾರಿವಾಲನ್, ರಾಬರ್ಟ್ ಪಯಸ್, ಜಯಕುಮಾರ್ ಮತ್ತು ರವಿಚಂದ್ರನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, 23 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ.

ಈ ವರ್ಷದ ಆರಂಭದಲ್ಲಿ, ಸುಪ್ರೀಂ ಕೋರ್ಟ್ ಪೆರಾರಿವೆಲನ್ ಅವರನ್ನು ಬಿಡುಗಡೆ ಮಾಡಲು ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಬಳಸಿತ್ತು.

ಕಳೆದ ತಿಂಗಳು ತಮಿಳುನಾಡು ಸರ್ಕಾರವು ಶ್ರೀಹರನ್ ಮತ್ತು ರವಿಚಂದ್ರನ್ ಅವರ ಅವಧಿಪೂರ್ವ ಬಿಡುಗಡೆಗೆ ಒಲವು ತೋರಿತ್ತು. ಅವರ ಜೀವಾವಧಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ 2018 ರ ತನ್ನ ಸಲಹೆಯನ್ನು ಪಾಲಿಸಲು ರಾಜ್ಯಪಾಲರು ಬದ್ಧರು ಎಂದು ಸರ್ಕಾರ ಹೇಳಿತ್ತು.

ನಳಿನಿ ಮತ್ತು ರವಿಚಂದ್ರನ್ ಇಬ್ಬರೂ ಡಿಸೆಂಬರ್ 27, 2021 ರಿಂದ ಇಲ್ಲಿಯವರೆಗೆ ತಮಿಳುನಾಡು ಸಸ್ಪೆನ್ಷನ್ ಆಫ್ ಸೆಂಟೆನ್ಸ್ ರೂಲ್ಸ್, 1982 ರ ಅಡಿಯಲ್ಲಿ ತಮಿಳುನಾಡು ಸರ್ಕಾರವು ಮಂಜೂರು ಮಾಡಿದ ಆದೇಶದಂತೆ ಪೆರೋಲ್​​ನಲ್ಲಿದ್ದಾರೆ.

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading

DAKSHINA KANNADA

ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

Published

on

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ 20 ರಂದು ಮತ್ತೆ ಕೈದಿಗಳ ನಡುವೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.

ಅಡುಗೆ ಕೆಲಸ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್ ಹೊಡೆದಿದ್ದಾನೆ. ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು.

ಇದನ್ನೂ ಓದಿ: ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ.

ಬರ್ಕೆ ಪೊಲೀಸರು ಜೈಲು ಆವರಣಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರಸ್ತುತ ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page