Connect with us

LATEST NEWS

‘ಅದನ್ನೆ ಅನುಕರಣೆ ಮಾಡೋ ಪ್ರಯತ್ನ ಮಾಡಿದ್ದೇನೆ’ ಎಂದು ಹೇಳಿ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

Published

on

ಮುಂಬೈ: ಇತ್ತೀಚೆಗೆ ಗೋವಾದಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವ (ಐಎಫ್ಎಫ್ಐ) 2025ರ ಸಮಾರಂಭದಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಪ್ರಮುಖ ದೃಶ್ಯವೊಂದನ್ನು ವ್ಯಂಗ್ಯವಾಗಿ ಅಭಿನಯಿಸಿ ತೋರುವ ಮೂಲಕ ರಾಷ್ಟ್ರವ್ಯಾಪಿ ಟೀಕೆಗೊಳಗಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ವರ್ತನೆಗೆ ಕ್ಷಮೆ ಕೋರಿದ್ದಾರೆ.

ರಣವೀರ್ ಸಿಂಗ್ ವರ್ತನೆ ಮತ್ತು ನಡೆಯನ್ನು ಅನೇಕರು ಟೀಕಿಸಿದ್ದರು. ಸ್ವತಃ ರಿಷಬ್ ಶೆಟ್ಟಿ ಕೂಡ ಈ ರೀತಿ ಮಾಡ್ಬೇಡಿ ಅಂತಲೂ ಹೇಳಿದ್ದರು. ಆದರೂ ರಣವೀರ್ ಸಿಂಗ್ ಕೆಟ್ಟದಾಗಿಯೇ ಅನುಕರಣೆ ಮಾಡಿದ್ದರು. ದೈವವನ್ನ ದೆವ್ವ ಎಂದು ಹೇಳಿದ್ದರು. ಇದರಿಂದ ಅನೇಕರು ಬೇಸರ ಪಟ್ಟರು. ಟೀಕೆಗಳೂ ಜಾಸ್ತಿನೇ ಬಂದವು. ಆದರೆ, ಈ ಟೀಕೆಯ ನಂತರ ರಣವೀರ್ ಸಿಂಗ್ ಕ್ಷಮೆ ಕೇಳಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಇಂಗ್ಲೀಷ್ ಅಲ್ಲಿ ಬರೆದುಕೊಂಡಿದ್ದಾರೆ.

ರಣವೀರ್ ಸಿಂಗ್ ಪೋಸ್ಟ್‌ನಲ್ಲಿ ಹೇಳಿದ್ದೇನು?

ರಿಷಬ್ ಶೆಟ್ಟಿ ಅವರ ಶ್ರಮವನ್ನ ಮೆಚ್ಚಿಕೊಂಡಿದ್ದೇನೆ. ಅದನ್ನೆ ಹೇಳುವ ಪ್ರಯತ್ನ ಮಾಡಿದ್ದೇನೆ. ಯಾವುದೇ ದೈವವನ್ನ ಇಲ್ಲವೆ ಸಂಸ್ಕೃತಿಯನ್ನ ನಿಂದಿಸುವ ಉದ್ದೇಶ ಇರಲಿಲ್ಲ.
ಚಿತ್ರದಲ್ಲಿರೋ ರಿಷಬ್ ಶೆಟ್ಟಿ ಅವರ ಅದ್ಭುತ ಅಭಿನಯವನ್ನ ಹೈಲೈಟ್ ಮಾಡೋದೇ ಆಗಿತ್ತು. ಇಂತಹ ಒಂದು ದೃಶ್ಯವನ್ನ ಮಾಡಲು ಅದೆಷ್ಟು ಕಷ್ಟ ಅನ್ನೋದು ನನಗೆ ಗೊತ್ತಿದೆ. ಅದು ನನಗೆ ತುಂಬಾನೆ ಇಷ್ಟ ಆಯಿತು. ಅದನ್ನೆ ಅನುಕರಣೆ ಮಾಡೋ ಪ್ರಯತ್ನ ಮಾಡಿದ್ದೇನೆ.

ನಮ್ಮ ದೇಶದಲ್ಲಿರೋ ಸಂಸ್ಕೃತಿ ಮತ್ತು ಸಂಪ್ರದಾಯವನ್ನ ನಾನು ತುಂಬಾನೆ ಗೌರವಿಸುತ್ತೇನೆ. ನನ್ನ ಈ ವರ್ತನೆಯಿಂದ ಯಾರ ಭಾವನೆಗೆ ಧಕ್ಕೆ ತರುವ ಉದ್ದೇಶ ಇರಲಿಲ್ಲ. ಆದರೂ ನಾನು ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಅಂತಲೇ ರಣವೀರ್ ಸಿಂಗ್ ಕೇಳಿಕೊಂಡಿದ್ದಾರೆ.

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page