Connect with us

LATEST NEWS

ಡಬ್ಲ್ಯೂಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ; ಆಸ್ಟ್ರೇಲಿಯಾ ಸರಣಿಗೆ ಆರ್‌ಸಿಬಿ ಸ್ಟಾರ್‌ ಆಲ್‌ರೌಂಡರ್‌ ಆಯ್ಕೆ!

Published

on

ಬೆಂಗಳೂರು: ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ವೈಟ್‌-ಬಾಲ್‌ ತಂಡಗಳನ್ನು ಘೋಷಿಸಲಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ಆಲ್‌ರೌಂಡರ್‌ ಮತ್ತೆ ಭಾರತ ತಂಡದ ಕರೆ ಪಡೆದಿದ್ದಾರೆ.


ಹೌದು, ಮಹಿಳಾ ಪ್ರೀಮಿಯರ್ ಲೀಗ್‌ ಆದ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದಲ್ಲಿ ಭಾರತ ತಂಡ ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಡಲಿದೆ. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದ್ದ ಹರ್ಮನ್ ಪ್ರೀತ್ ಕೌರ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಹರ್ಮನ್‌ ಪಡೆ ಆಸ್ಟ್ರೇಲಿಯಾದಲ್ಲಿ ಸರಣಿ ಗೆಲುವಿನ ಕನಸು ಕಾಣುತ್ತಿದೆ.

ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಸ್ಥಾನ ಪಡೆದಿದ್ದ ಉಮಾ ಛೆಟ್ರಿ, ಯಸ್ತಿಕಾ ಭಾಟಿಯಾ ಮತ್ತು ಪ್ರತಿಕಾ ರಾವಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇವರ ಬದಲಿಗೆ ವೈಷ್ಣವಿ ಶರ್ಮಾ, ಜಿ ಕಮಲಿನಿ ಮತ್ತು ಕಾಶ್ವಿ ಗೌತಮ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಈ ಆಟಗಾರ್ತಿಯರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ.

ಟಿ20 ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆರ್‌ಸಿಬಿ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ಕನ್ನಡತಿ ಶ್ರೇಯಾಂಕ ಪಾಟೀಲ್‌ ಚುಟುಕು ಫಾರ್ಮೆಟ್‌ಗೆ ಕಂ ಬ್ಯಾಕ್ ಮಾಡಿದ್ದಾರೆ. ಇವರು ಗಾಯದಿಂದ ಚೇತರಿಸಿಕೊಂಡಿದ್ದು, ತಂಡಕ್ಕೆ ಮರಳಿದ್ದಾರೆ. ಉಳಿದಂತೆ ಹರ್ಲಿನ್ ಡಿಯೋಲ್‌ ಬದಲಿಗೆ ಭಾರತಿ ಫುಲ್ಮಾಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಫುಲ್ಮಾಲಿ 2019ರಲ್ಲಿ ಭಾರತದ ಪರ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಈಗ ಇವರು ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ.

ಫೆಬ್ರವರಿ 15ರಂದು ಮೊದಲ ಟಿ20ಐನೊಂದಿಗೆ ಎಸ್‌ಸಿಜಿಯಲ್ಲಿ ಪ್ರಾರಂಭವಾಗಲಿದ್ದು, ಮುಂದಿನ ಎರಡು ಪಂದ್ಯಗಳು ಫೆಬ್ರವರಿ 19 ಮತ್ತು 21ರಂದು ಕ್ರಮವಾಗಿ ಮನುಕಾ ಓವಲ್‌ ಮತ್ತು ಅಡಿಲೇಡ್‌ ಓವಲ್‌ನಲ್ಲಿ ನಡೆಯಲಿದೆ. ಫೆಬ್ರವರಿ 24ರಂದು ಬ್ರಿಸ್ಬೇನ್‌ ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಉಳಿದೆರಡು ಏಕದಿನ ಪಂದ್ಯಗಳು ಫೆಬ್ರವರಿ 27 ಮತ್ತು ಮಾರ್ಚ್‌ 1ರಂದು ಹೋಬಾರ್ಟ್‌ನ ಬೆಲ್ಲೆರಿವ್‌ ಓವಲ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: ‘ನನಗೆ ಕೆಲ ದಿನಗಳ ಹಿಂದೆಯಷ್ಟೇ ಕನಸೊಂದು ಬಿದ್ದಿತ್ತು’ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ ಫಸ್ಟ್ ರಿಯಾಕ್ಷನ್

ಭಾರತದ ಟಿ20ಐ ತಂಡ: ಹರ್ಮನ್‌ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್.

ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್‌ಕೀಪರ್), ಜಿ ಕಮಾಲಿನಿ, ಕಾಶವಿ ಗೌತಮ್, ಅಮನ್‌ಜೋತ್‌ ಕೌರ್, ಜೆಮಿಮಾ ರೊಡ್ರಿಗಸ್‌, ಹರ್ಲಿನ್ ಡಿಯೋಲ್‌, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ,

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page