Connect with us

bangalore

RCB vs DC ಸಮರ ..! ಗೆದ್ದವರು ನಂಬರ್ 1 ..! ಯಾವಾಗ ನಡೆಯಲಿದೆ ಈ ರೋಚಕ ಪಂದ್ಯ ..?

Published

on

IPL 2025 : ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಬಹು ನಿರೀಕ್ಷಿತ ಪಂದ್ಯ ಇದಾಗಿದೆ. ಉಭಯ ತಂಡಗಳ ನಡುವೆ ಇದು ಎರಡನೇ ಪಂದ್ಯವಾಗಿದ್ದು, ಆರ್​ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ..? ಎನ್ನುವುದನ್ನು ಕಾದು ನೋಡಬೇಕಷ್ಟೇ. ಈ ಹಿಂದೆ ಉಭಯ ತಂಡಗಳ ನಡುವೆ ನಡೆದಿದ್ದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ತಂಡವನ್ನು ಬೆಂಗಳೂರಿನಲ್ಲಿ ಮಣಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಆರ್​ಸಿಬಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿದೆ.

ಐಪಿಎಲ್ 2025 ರ 46ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಜಟಾಜಟಿ ಸಮರ ಇಂದು (ಏ.27) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ. ಇನ್ನು ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ತನ್ನ ಪ್ಲೇಆಫ್​ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಅಲ್ಲದೆ ಮುಂದಿನ 4 ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಬಹುದು. ಹೀಗಾಗಿ ಇಂದಿನ ಮ್ಯಾಚ್ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ.

ಇದಾಗ್ಯೂ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಕಳೆದ ಪಂದ್ಯದಲ್ಲಿ ರಾಯಲ್ ಪಡೆ ವಿರುದ್ಧ ಪಾರುಪತ್ಯ ಮೆರೆಯುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಡೆಲ್ಲಿ ಬಾಯ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇನ್ನು ಉಭಯ ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19 ಬಾರಿ ಗೆಲುವು ದಾಖಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಸಲ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಆರ್​ಸಿಬಿ ಮೇಲುಗೈ ಹೊಂದಿದ್ದರೂ, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠವಾಗಿದೆ. ಹೀಗಾಗಿ ಈ ಹಿಂದಿನ ಅಂಕಿ ಅಂಶಗಳು ಇಲ್ಲಿ ಗಣನೆಗೆ ಬರುವುದಿಲ್ಲ ಎನ್ನಬಹುದು. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ದೆಹಲಿ ಜೇಟ್ಲಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಡಿಸಿ ನಡುವೆ ಭರ್ಜರಿ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

bangalore

ಮತ್ತೆ ಆವರಿಸುತ್ತಿರುವ ಮುಂಗಾರು ; ಸಿಡಿಲು, ಮಿಂಚು ಸಹಿತ ರಾಜ್ಯಾದ್ಯಂತ ಅಲ್ಲಲ್ಲಿ ಮಳೆ

Published

on

ಬಳ್ಳಾರಿ/ ಬೆಂಗಳೂರು/ದ.ಕ/ಉಡುಪಿ : ಒಂದೊಮ್ಮೆ ಭಾರೀ ಆರ್ಭಟಿಸಿ ಬಳಿಕ ಕೊಂಚ ತಣ್ಣಗಾಗಿದ್ದ ಮುಂಗಾರು ಪೂರ್ವ ಮಳೆ ಮತ್ತೆ ರಾಜ್ಯಾದ್ಯಂತ ಆವರಿಸಿದೆ. ನಿನ್ನೆ (ಮೇ.13) ಒಂದೇ ದಿನ ರಾಜ್ಯಾದ್ಯಂತ ಅಲ್ಲಲ್ಲಿ ಸಿಡಿಲು, ಮಿಂಚು ಸಹಿತ ವರುಣನ ಆರ್ಭಟ ಜೋರಾಗಿಯೇ ಇತ್ತು.

ಬಳ್ಳಾರಿಯಲ್ಲಂತೂ ವರುಣನಾರ್ಭಟ ಜೋರಾಗಿಯೇ ಇತ್ತು ಮಾತ್ರವಲ್ಲದೆ, ಅಪಾರ ಹಾನಿಯೂ ಸಂಭವಿಸಿದೆ. ಮೊದಲೇ ಟ್ರಾಫಿಕ್ ಜಾಮ್ ಹೆಚ್ಚಿರುವ ಬೆಂಗಳೂರಿನಲ್ಲಿ ನಿನ್ನೆ ಮತ್ತೂ ಅಧಿಕ ಹೊತ್ತು ಜಾಮ್ ಆಘಿತ್ತು ಮಾತ್ರವಲ್ಲದೆ, ಬಸ್‌ ಒಳಗೂ ನೀರು ನುಗ್ಗಿ ಪ್ರಯಾಣಕ್ಕೆ ತೊಂದರೆ ನಿಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲೂ ಅಲ್ಲಲ್ಲಿ ಜೋರು ಮಳೆ ಸುರಿದಿದೆ.

ಬಳ್ಳಾರಿಯಲ್ಲಿ ಸಿಡಿಲು ಬಡಿದು ಪ್ರಾಣಹಾನಿ :

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಕುರಿಗಾಹಿಗಳು ಬಲಿಯಾಗಿದ್ದಾರೆ. ಬೀರಪ್ಪ (45), ಸುನೀಲ (26), ವಿನೋದ್ (14) ಮೃತ ದುರ್ದೈವಿಗಳು. ಕುರಿ ಮೇಯಿಸಲು ತೆರಳಿದ್ದಾಗ ಜೋರು ಮಳೆ ಬಂದಿದೆ. ಈ ವೇಳೆ, ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕುಡಪಲಿ ಗ್ರಾಮದ ರೈತ ಸುನೀಲ ಕಾಳೇರ (29), ಹಾನಗಲ್ಲ ತಾಲೂಕಿನ ಕೊಂಡೋಜಿ ಗ್ರಾಮದಲ್ಲಿ ವೃದ್ದೆ ಮರಿಯಮ್ಮ ನಾಯ್ಕ‌ರ್ (60) ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್‌ಜಾಮ್, ಬಸ್‌ ಒಳಗೂ ನೀರು :

ಬೆಂಗಳೂರಿನಲ್ಲಿ ಸುರಿದ ಗುಡುಗು, ಗಾಳಿ ಸಹಿತ ಭಾರಿ ಮಳೆಗೆ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್, ಮೈತ್ರಿ ಸರ್ಕಲ್, ವಿಧಾನಸೌಧ, ಶಿವಾನಂದ ಸರ್ಕಲ್, ಕೆ.ಆ‌ರ್. ಸರ್ಕಲ್ ಸುತ್ತಮುತ್ತ ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮಾನ್ಯತಾ ಟೆಕ್ ಪಾರ್ಕ್‌ ಬಳಿ ಬಿಎಂಟಿಸಿ ಬಸ್ ಒಳಗೆ ಮಳೆ ನೀರು ನುಗ್ಗಿದೆ. ಭಾರಿ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ರಸ್ತೆಯಿಂದ ಬಸ್‌ ಒಳಭಾಗಕ್ಕೆ ಮಳೆ ನೀರು ಹರಿದಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆ :

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಉಡುಪಿ ಜಿಲ್ಲೆಯಲ್ಲೂ ಸಿಡಿಲು, ಮಿಂಚು ಸಹಿತ ಉತ್ತಮ ಮಳೆಯಾಗಿದೆ.

Continue Reading

bangalore

ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ; ತನಿಖೆ ನಡೆಸುವಂತೆ ಸಾರಿಗೆ ಸಚಿವ ಆದೇಶ

Published

on

ಬೆಂಗಳೂರು : ಬಸ್ ತುಂಬಾ ಜನ ಇದ್ದರೂ ಚಾಲಕ​ ಬಸ್​ ನಿಲ್ಲಿಸಿ ಚಾಲಕ​ ನಮಾಜ್ ಮಾಡಿರುವ ಘಟನೆ ರಾಜ್ಯದ ರಾಜಧಾನಿಯಲ್ಲಿ ನಡೆದಿತ್ತು. ಈ ಸನ್ನಿವೇಶವನ್ನು ಮೊಬೈಲ್‌ನಲ್ಲೆ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ವಿಡಿಯೋ ಫುಲ್ ವೈರಲ್ ಆಗಿತ್ತು. ಈ ಘಟನೆ ಕುರಿತು ತನಿಖೆ ನಡೆಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಂಗ ಎಂ. ಗೆ ಸೂಚನೆ ನೀಡಿದ್ದಾರೆ.

ಏನಿದು ಘಟನೆ ?

ಏ.29 ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ.  ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ‍್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ, ಬಸ್‌ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಖಂಡನೀಯ.

‘ಬಸ್‌ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋ ಕುರಿತು ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ‌ ಕ್ರಮ ಜರುಗಿಸಿ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ’ ಎಂದು ಸಾರಿಗೆ ಸಚಿವ ಆದೇಶಿಸಿದ್ದಾರೆ.

Continue Reading

bangalore

ರಸ್ತೆ ಮಧ್ಯೆಯೇ ಕಾಲೇಜು ಪ್ರಾಧ್ಯಪಕನ ಮೇಲೆ ಹಲ್ಲೆ; ಮೂವರು ಅರೆಸ್ಟ್

Published

on

ಮಂಗಳೂರು/ಬೆಂಗಳೂರು : ಎಂಥಾ ವಿಚಿತ್ರ ಜನರಿರುತ್ತಾರೆ ಎಂದು ಹೇಳುವುದೂ ಅಸಾಧ್ಯ. ಇದು ಸರಿಯಲ್ಲ ತಪ್ಪು ಎಂದು ಹೇಳುವ ಹಾಗೆಯೂ ಇಲ್ಲ. ಬಿಸಿ ರಕ್ತ ಕುದಿಯುತ್ತೆ. ಹಲ್ಲೆ ಮಾಡಲು ಸಹ ಹಿಂಜರಿಯುವುದಿಲ್ಲ. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯ ರಾಜಧಾನಿಯಲ್ಲೂ ನಡೆದಿದೆ. ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಎಂಬವರ ಮೇಲೆ ಯುವಕರು ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ರೋಡ್ ರೇಜ್ ಪ್ರಕರಣ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಅದೇ ಸಂದರ್ಭದಲ್ಲೇ ಈ ಘಟನೆಯೂ ನಡೆದಿತ್ತು.

ಅಷ್ಟಕ್ಕೂ ನಡೆದಿದ್ದೇನು ..?

ಕುಮಾರಸ್ವಾಮಿ ಲೇಔಟ್​ನ  ಜೆಹೆಚ್ ಬಿಸಿ ಲೇಔಟ್​ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಏಪ್ರಿಲ್ 21 ರಂದು ಸಂಜೆ 6 ರಿಂದ 7 ಗಂಟೆಯ ಸಮಯದಲ್ಲಿ  ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ : ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ; ಅಂಕಪಟ್ಟಿಯಲ್ಲಿ ನಂ.1

ಸ್ಥಳೀಯರೊಬ್ಬರು ಈ ಅಮಾನುಷ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಬಳಿಕ  ಕೆಎಸ್ ಲೇಔಟ್ ಪೊಲೀರು ಈ ಘಟನೆ ಕುರಿತು ಪ್ರಕರಣ ದಾಖಲಿಸಿ ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page