Connect with us

ಶಾಸಕ ಪೂಂಜಾ ವತಿಯಿಂದ 30,000 ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗೆ ಸಜ್ಜು: ಹೆಗ್ಗಡೆಯವರಿಂದ ಚಾಲನೆ

Published

on

ಶಾಸಕ ಪೂಂಜಾ ವತಿಯಿಂದ 30,000 ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗೆ ಸಜ್ಜು: ಹೆಗ್ಗಡೆಯವರಿಂದ ಚಾಲನೆ

ಬೆಳ್ತಂಗಡಿ: ಕೊರೊನಾ ಹಿನ್ನಲೆ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ತಾಲೂಕಿನ ಸರ್ವಧರ್ಮಿಯರಿಗೆ, ಸುಮಾರು 30,000  ಕುಟುಂಬಗಳಿಗೆ ಆಹಾರ ಸಮಾಗ್ರಿಗಳ ಕಿಟ್ ಶಾಸಕ ಹರೀಶ್ ಪೂಂಜ ಇವರ “ಶ್ರಮಿಕ ನೆರವು” ವತಿಯಿಂದ ವಿತರಿಸಲು ತಯಾರಾಗಿದೆ.

ಉದ್ಯಮಿಗಳಾದ ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ,ಹಾಗೂ ರಾಜೇಶ್ ಪೈ ಸಂದ್ಯಾ ಟ್ರೇಡರ್ಸ್ ಇವರ ಉಸ್ತುವಾರಿಯಲ್ಲಿ,

‘ಬದುಕು ಕಟ್ಟೋಣ ಬನ್ನಿ’ ತಂಡದ ಸದಸ್ಯರ ಸಹಕಾರದಲ್ಲಿ, ಉಜಿರೆಯ ಜನಾರ್ಧನ ಸ್ವಾಮಿ ದೇವಾಸ್ಥಾನದ ಸಭಾ ಭವನದಲ್ಲಿ ಕಿಟ್ ತಯಾರಿ ಕೆಲಸ ತುಂಬಾ ಅಚ್ಚುಕಟ್ಟಾಗಿ ನಡೆದಿತ್ತು.

ಇದೀಗ ಕಿಟ್ ವಿತರಿಸಲು ಸಿದ್ಧವಾಗಿದ್ದು, ನಾಳೆ (ಎಪ್ರಿಲ್ 23) ಗುರುವಾರ ಬೆಳಿಗ್ಗೆ 7 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ  ಸಂಸದ ನಳಿನ್  ಕುಮಾರ್ ಕಟೀಲು, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿ ಜೆ.ಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮತ್ತಿತ್ತರರ ಉಪಸ್ಥಿತಿಯಲ್ಲಿ ಚಾಲನೆ ನೀಡಲಿದ್ದಾರೆ.

ಗೃಹರಕ್ಷಕ ದಳ, ರಿಕ್ಷಾ ಚಾಲಕರಿಗೆ, ಹಾಗೂ ಸಂಕಷ್ಟದಲ್ಲಿರುವ ತಾಲೂಕಿನ  241 ಬೂತ್ ಗೆ ತಲಾ 100 ಕಿಟ್ ಗಳಂತೆ  ವಿತರಣಾ ಕಾರ್ಯಕ್ರಮ ನಡೆಯಲಿದ್ದು,

ಪ್ರತೀ ಬೂತ್ ಮಟ್ಟದಿಂದ ಒಂದು ವಾಹನದಲ್ಲಿ 2 ಜನ  ಸ್ವಯಂಸೇವಕರು ಬಂದು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಕಿಟ್ ಅನ್ನು ಉಜಿರೆಯಿಂದ ಪಡೆದುಕೊಳ್ಳಬಹುದಾಗಿದೆ.

ಬಳಿಕ ತಮ್ಮ ತಮ್ಮ ಬೂತ್ ಗಳಲ್ಲಿ ಈಗಾಗಲೇ ಗುರುತಿಸಿ ಪಟ್ಟಿ ಮಾಡಿರುವ ಅರ್ಹ ಫಲಾನುಭವಿಗಳಿಗೆ ಕಿಟ್ ವಿತರಿಸುವಂತೆ ವ್ಯವಸ್ಥೆಯನ್ನು ಮಾಡಲಾಗಿದೆ.

ವಿತರಣೆಯಲ್ಲಿ ಯಾವುದೆ ಗೊಂದಲ ಆಗದ ರೀತಿಯಲ್ಲಿ ಮುಂಜಾಗರೂಕತೆ ಕ್ರಮ ವಹಿಸಿಕೊಂಡು ವ್ಯವಸ್ಥಿತ ರೀತಿಯಲ್ಲಿ ಈ ಕಿಟ್  ವಿತರಣೆಯಾಗಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page