ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ಉಳ್ಳಾಲ ಕುಂಪಲದ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದೆ.
ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾಗಿದ್ದರು ಅಶ್ವಿನಿ.
ಇದರಿಂದ ಮನನೊಂದ ಅಶ್ವಿನಿ ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ.
ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿನಗರ ನಿವಾಸಿ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೈದ ಯುವತಿ. ದುಬೈನಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಕೆಲ ದಿನಗಳ ಹಿಂದಷ್ಟೇ ಊರಿಗೆ ಆಗಮಿಸಿದ್ದಳು.
ದುಬೈ ಕೆಲ¸ದಲ್ಲಿದ್ದ ಸಂದರ್ಭ ಸಂಗೀತಾ ಎಂಬ ಮಹಿಳೆಯ ಪರಿಚಯವಾಗಿದ್ದು, ಇದರಿಂದ ಸಂಗೀತಾ ಪ್ರಸ್ತಾಪಿಸಿದಂತೆ ಕುಂಪಲ ಚಿತ್ರಾಂಜಲಿನಗರದಲ್ಲಿರುವ ಮನೆಯನ್ನು ಖರೀದಿಸುವುದಾಗಿ ವಿಶ್ವಾಸ ನೀಡಿದ್ದರು.
ಅದರಂತೆ ಬ್ಯಾಂಕ್ ಸಾಲ ಮರುಪಾವತಿಯಾದ ತಕ್ಷಣ ಅಶ್ವಿನಿ ಹೆಸರಿಗೆ ಮನೆಯನ್ನು ನೋಂದಾವಣಿ ಮಾಡಿಕೊಡುವುದಾಗಿಯೂ ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಮನೆಗೆಂದು ಬ್ಯಾಂಕಿನಿಂದ ಸಂಗೀತಾ ರೂ. 18 ಲಕ್ಷ ಮರುಪಾವತಿ ಬಾಕಿಯಿತ್ತು. ಅದಕ್ಕಾಗಿ ಅಶ್ವಿನಿಗೆ ಮನೆ ನೀಡುವುದಾಗಿ ಮುಂಚಿತವಾಗಿ ರೂ. 7 ಲಕ್ಷ ನಗದು ಪಡೆದು, ನಂತರ 8 ತಿಂಗಳ ಕಾಲ ರೂ.17,000 ಇಎಂಐ ಆಕೆಯ ಬಳಿ ಪಾವತಿಸಿದ್ದಳು.
ಜೂ. 5 ರಂದು ಚಿತ್ರಾಂಜಲಿನಗರದಲ್ಲಿ ಸಂಬಂಧಿಕರ, ಗೆಳೆಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ಗೃಹಪ್ರವೇಶ ನಡೆದಿತ್ತು. ನೆಂಟರು ಮನೆಯಲ್ಲಿರುವ ಸಂದರ್ಭ ಸಂಜೆ ವೇಳೆ ಸಂಗೀತಾ ಸಾಲ ಪಡೆದಿದ್ದ ಬ್ಯಾಂಕ್ ಸಿಬ್ಬಂದಿ ಸೀಝರ್ ಗಳು ಮನೆಗೆ ಆಗಮಿಸಿದ್ದು, ಮನೆಮಂದಿಯನ್ನು ಲೋನ್ ಪಾವತಿಸದೇ ಇದ್ದಲ್ಲಿ ಮನೆಯನ್ನು ಹರಾಜು ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ಅಲ್ಲದೆ ಕಳೆದ 1 ವರ್ಷದಿಂದ ಇಎಂಐ ಪಾವತಿಸದೇ ಇರುವುದನ್ನು ತಿಳಿಸಿ ತೆರಳಿದ್ದರು.
ನೆಂಟರ ಮುಂದೆ ತನ್ನ ಸಾಧನೆಯನ್ನು ತೋರಿಸುವ ಹಂತದಲ್ಲಿಯೇ ಮರ್ಯಾದೆ ಹೋಯಿತೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.
ಜೂ.8 ರಂದು ಬ್ಯಾಂಕ್ ಗೆ ಬರುವಂತೆ ಅಶ್ವಿನಿಗೆ ಸಿಬ್ಬಂದಿ ತಿಳಿಸಿ ತೆರಳಿದ್ದರು. ಇದರಿಂದ ಇನ್ನಷ್ಟು ಖಿನ್ನತೆಗೆ ಜಾರಿದ್ದ ಅಶ್ವಿನಿ ಇಂದು ಬ್ಯಾಂಕ್ ಕಚೇರಿಗೆ ತೆರಳಬೇಕು ಅನ್ನುವ ಚಿಂತೆಯಿಂದಲೇ ರಾತ್ರಿಯಿಡೀ ಮನೆಯ ಕೋಣೆಯೊಳಗೆ ಕುಳಿತು 15 ಪುಟಗಳ ಡೆತ್ ನೋಟ್ ಬರೆದಿಟ್ಟು ಫ್ಯಾನಿಗೆ ಕೊರಳೊಡ್ಡಿ ಆತ್ಮಹತ್ಯೆ ನಡೆಸಿಕೊಂಡಿದ್ದಾಳೆ.
ಐ ಲವ್ ಯು ನಿಖಿಲ್ !
ತುಳು ಭಾಷೆಯಲ್ಲಿ ಇಂಗ್ಲೀಷ್ ಪದಗಳ ಮೂಲಕ ಬರೆದಿಟ್ಟಿರುವ ಡೆತ್‍ನೋಟ್‍ನಲ್ಲಿ ತನ್ನ ಸಾವಿಗೆ ತಾನೇ ಕಾರಣ , ಡೆತ್ ನೋಟ್ ಪೊಲೀಸರು ಕೇವಲ ಓದಿದರೆ ಸಾಕು ತನಿಖೆ ನಡೆಸಬೇಕಿಲ್ಲ.
ಸಂಗೀತಾ ಅನ್ನುವ ಮಹಿಳೆಯಿಂದ ವಂಚನೆಗೊಳಗಾದ ಕುರಿತು ಉಲ್ಲೇಖಿಸಿದ್ದು, ನಿಖಿಲ್ ಐ ಲವ್ ಯೂ, ತನ್ನ ಬಳಿಯಿರುವ ಐಫೋನ್ ಅನ್ನು ಆತನಿಗೆ ನೀಡಿ ಎಂದು ಕೊನೆಯಲ್ಲಿ ಬರೆದಿಟ್ಟುಕೊಂಡಿದ್ದಾಳೆ.
ಸ್ನೇಹಿತರೇ ಆಕೆಯನ್ನು ಕೊಂದರು..!
ಮಗಳ ಸಾವಿನಿಂದ ನೊಂದಿರುವ ತಾಯಿ ದೇವಕಿ, ಮಗಳ ಸಾವಿಗೆ ಆಕೆಯ ಸ್ನೇಹಿತರೇ ಕಾರಣ ಎಂದು ಮಾಧ್ಯಮಗಳೊಂದಿಗೆ ತಿಳಿಸಿದ್ದಾರೆ. ಸೋಮೇಶ್ವರ ನಿಖಿಲ್, ಇಬ್ಬರು ಯುವತಿಯರು ಅಶ್ವಿನಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದರು.
ಗೃಹಪ್ರವೇಶ ನಡೆದ ನಂತರವೂ ಮನೆಯ ತಾರಸಿನಲ್ಲಿ ಕುಳಿತು ಸಿಗರೇಟು ಪಾರ್ಟಿ ಮಾಡಿ, ಮಗಳನ್ನೂ ಹಾಳು ಮಾಡುತ್ತಿದ್ದರು. ಸ್ನೇಹಿತರೇ ಆಕೆಗೆ ಮುಖ್ಯವಾಗಿತ್ತು, ತಾಯಿಯ ನೆನಪೇ ಇರಲಿಲ್ಲ.
ದುಬೈಯಿಂದ ಬರುವ ವಿಚಾರವೂ ತನಗೆ ಗೊತ್ತಿರಲಿಲ್ಲ. ಸ್ನೇಹಿತರಿಗೆ ತಿಳಿದಿತ್ತು. ಮನೆ ಖರೀದಿಸಿರುವ ವಿಚಾರವೂ ಗಮನಕ್ಕೆ ಬಂದಿರಲಿಲ್ಲ. ಇದೀಗ ಮನೆಯ ಸಾಲವೇ ಆಕೆಯನ್ನು ಮುಗಿಸಿದ್ದು, ತನ್ನನ್ನು ಅನಾಥಳನ್ನಾಗಿ ಮಾಡಿ ಹೋಗಿದ್ದಾಳೆ ಎಂದಿದ್ದಾರೆ.
ಡೆತ್ ನೋಟಲ್ಲಿ ಇರುವಂತೆ ಯಾರ ವಿರುದ್ಧವೂ ಕ್ರಮಕೈಗೊಳ್ಳುವ ಹಾಗಿಲ್ಲ.
ತಾಯಿ ದೇವಕಿ ಒಂದು ವೇಳೆ ವಂಚಿಸಿದ ಸಂಗೀತಾ ಹಾಗೂ ಗೃಹಪ್ರವೇಶದಂದೇ ಮನೆಗೆ ಬಂದಿದ್ದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು ನೀಡಿದಲ್ಲಿ ಆತ್ಮಹತ್ಯೆ ಪ್ರಚೋದನೆ ದಾಖಲಿಸಬಹುದು.
ಈವರೆಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ ಅನ್ನುವುದನ್ನು ಉಳ್ಳಾಲ ಠಾಣಾಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು : ಮಂಗಳೂರು ನಗರದ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 15 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ.
ದಿವಂಗತ ಜೆ. ಜಯಗಂಗಾಧರ ಶೆಟ್ಟಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥ ನಡೆಯುವ ಕಂಬಳದ ಉದ್ಘಾಟನೆ ಬೆಳಗ್ಗೆ ನೆರವೇರಿತು. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಕಂಬಳಕ್ಕೆ ಪಾಲಿಕೆಯಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.
ಪೊಲೀಸ್ ಅಧಿಕಾರಿ ಟಿ.ಡಿ. ನಾಗರಾಜ್, ಜಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಮತ್ತಿತರ ವಿವಿಧ ಕ್ಷೇತ್ರಗಳ ಪ್ರಮುಖರು ಅತಿಥಿಗಳಾಗಿ ಉಪಸ್ಥಿತರಿದ್ದರು. ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ಕುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್ ಅತಿಕಾರಿ, ಕೋಶಾಧಿಕಾರಿ ಜೆ. ಬಾಲಕೃಷ್ಣ ಶೆಟ್ಟಿ, ಪ್ರಕಾಶ್ ಮೇಲಂಟ, ಶೇಖರ ಕಿಲ್ಲೆ ಪಡುಹಿತ್ಲು, ಗುರುರಾಜ್ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು. ಮನೋಜ್ ಶೆಟ್ಟಿ ವಂದಿಸಿದರು. ಅಭಿಷೇಕ್ ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರು: ಭಾರತದ ಅತ್ಯುತ್ತಮ ಆಹಾರ ಮತ್ತು ಪಾನೀಯಗಳನ್ನು ಗುರುತಿಸುವ *ಫುಡ್ “ಕನೋಸರ್ಸ್ ಇಂಡಿಯಾ ಅವಾರ್ಡ್ಸ್ (FCIA)* ನ ಏಳನೇ ಆವೃತ್ತಿಯಲ್ಲಿ ಮಂಗಳೂರಿನ ಮಾಸ್ಟರ್ ಚೆಫ್ *ಮಹಮ್ಮದ್ ಆಶಿಕ್* ಅವರಿಗೆ *’ಸೌತ್ ಇಂಡಿಯಾ ಯಂಗ್ ಚೆಫ್ ಆಫ್ ದಿ ಇಯರ್’* ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಬೆಂಗಳೂರಿನ *ತಾಜ್ ಯಶವಂತಪುರ ಹೋಟೆಲ್* ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಬಂದ ಅತ್ಯುತ್ತಮ ಶೆಫ್ಗಳು, ರೆಸ್ಟೋರೆಂಟ್ಗಳು ಮತ್ತು ಫುಡ್ ಬ್ರಾಂಡ್ಗಳು ಪಾಲ್ಗೊಂಡಿದ್ದರು. ಮಂಗಳೂರಿನ ಪ್ರತಿಭೆ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಈ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹೆಗ್ಗಳಿಸಿದ್ದಾರೆ.
ಪ್ರಶಸ್ತಿ ಪಡೆದ ನಂತರ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರು ಮಾತನಾಡುತ್ತಾ, “ಈ ಪ್ರಶಸ್ತಿಯನ್ನು ಪ್ರಮುಖವಾಗಿ ಆಹಾರದ ಗುಣಮಟ್ಟ, ಸೃಜನಾತ್ಮಕತೆ ಮತ್ತು ಅನುಭವಗಳನ್ನು ಆಧರಿಸಿ ನೀಡಲಾಗುತ್ತದೆ. ಈ ಬಾರಿ ಕನ್ನಡನಾಡಿನ ಹಲವಾರು ರೆಸ್ಟೋರೆಂಟ್ಗಳು ಮತ್ತು ಶೆಫ್ಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನನಗೆ ಈ ಪ್ರಶಸ್ತಿ ಲಭಿಸಿದ್ದು ಗೌರವದ ಸಂಗತಿ. ಇದು ನನ್ನ ಕುಟುಂಬ, ಸ್ನೇಹಿತರು ಮತ್ತು ಜಿಲ್ಲೆಯ ಜನರ ಸಹಕಾರದ ಫಲವಾಗಿದೆ. ಈ ಪ್ರಶಸ್ತಿ ನನಗೆ ಇನ್ನಷ್ಟು ಸಾಧನೆ ಮಾಡಲು ಸ್ಪೂರ್ತಿ ನೀಡಿದೆ” ಎಂದರು.
ಈ ಕಾರ್ಯಕ್ರಮದ ಮೂಲಕ ಭಾರತದ ವೈವಿಧ್ಯಮಯ ಆಹಾರ ಸಂಸ್ಕೃತಿ ಮತ್ತು ಪ್ರತಿಭಾವಂತ ಶೆಫ್ಗಳ ಸಾಧನೆಗಳನ್ನು ಗುರುತಿಸಲಾಯಿತು. ಮಂಗಳೂರಿನ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರ ಈ ಸಾಧನೆ ಜಿಲ್ಲೆಯ ಆಹಾರ ಕ್ಷೇತ್ರದ ಹೆಮ್ಮೆಯಾಗಿದೆ.