Connect with us

DAKSHINA KANNADA

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಪದಗ್ರಹಣ: ಕಾರ್ಮಿಕರಿಗೆ ಉಚಿತ ಕಾನೂನು ನೆರವು ಘಟಕ ರಚನೆ ಘೋಷಣೆ

Published

on

ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಅವರು ಪದಗ್ರಹಣ ಮಾಡಿದ್ದು, ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ಅಗತ್ಯವಿದ್ದರೆ ಉಚಿತ ಮೊಕದ್ದಮೆ ಸೌಲಭ್ಯ ಒದಗಿಸಲು ಒಂದು ಕಾನೂನು ನೆರವು ಘಟಕವನ್ನು ರೂಪಿಸುವುದಾಗಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಪದಗ್ರಹಣ ಸಮಾರಂಭದ ಬಳಿಕ ಮಾತನಾಡಿದ ಅವರು, ನಾನು ವಕೀಲೆಯಾಗಿರುವ ನಿಟ್ಟಿನಲ್ಲಿ ಕಾರ್ಮಿಕರಿಗೆ ನ್ಯಾಯ ದೊರಕಿಸುವುದು ನನ್ನ ಕರ್ತವ್ಯ ಎಂದು ಒತ್ತಿ ಹೇಳಿದರು.

ಕರೀಷ್ಮಾ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾ, “ಇದು ನನಗೆ ಕೇವಲ ಪದಗ್ರಹಣ ಸಮಾರಂಭವಲ್ಲ; ಇದು ಭಾವನಾತ್ಮಕ ಕ್ಷಣ, ದೊಡ್ಡ ಜವಾಬ್ದಾರಿಯ ಆರಂಭ. ನಮ್ಮ ಕುಟುಂಬ ಕಾಂಗ್ರೆಸ್ ಸಿದ್ಧಾಂತವನ್ನು ಹಲವು ವರ್ಷಗಳಿಂದ ನಂಬಿಕೊಂಡು ದುಡಿದಿದೆ. ಆ ಮೌಲ್ಯಗಳೇ ನನಗೆ ನ್ಯಾಯಕ್ಕಾಗಿ ಹೋರಾಡುವ ಶಕ್ತಿ ನೀಡಿ ಬೆಳೆಸಿವೆ” ಎಂದು ಹೇಳಿದರು.

ಇಂಟಕ್‌ ಅನ್ನು ಸ್ವಾತಂತ್ರ್ಯ ನಂತರ ಗಾಂಧೀಜಿಯ ಆದರ್ಶಗಳು ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನ್ಯಾಯದ ಕಲ್ಪನೆಗಳನ್ನು ಆಧರಿಸಿ ನಿರ್ಮಿಸಲಾಗಿದೆ ಎನ್ನುವುದನ್ನು ಅವರು ನೆನಪಿಸಿದರು. “ನೆಹರೂ ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಯಿಂದ ಹುಟ್ಟಿದ ಇಂಟಕ್ ಇಂದು ದೇಶದ ಕೋಟ್ಯಂತರ ಕಾರ್ಮಿಕರ ಬೆನ್ನೆಲುಬು. ಕಾರ್ಮಿಕರನ್ನು ‘ಓಟ್‌ ಬ್ಯಾಂಕ್’ ಅಲ್ಲ, ರಾಷ್ಟ್ರ ನಿರ್ಮಾಣದ ಅಡಿಪಾಯ ಎಂದು ಪರಿಗಣಿಸುವ ಏಕೈಕ ಸಂಘಟನೆ ನಮ್ಮದು” ಎಂದು ಹೇಳಿದರು.

ಮಹಿಳಾ ಕಾರ್ಮಿಕರು ಎದುರಿಸುತ್ತಿರುವ ಪ್ರಮುಖ ಸವಾಲುಗಳನ್ನು ಲೆಕ್ಕಿಸಿ, ವೇತನ ತಾರತಮ್ಯ, ಸುರಕ್ಷತಾ ಕೊರತೆ, ಕೆಲಸದ ಸ್ಥಳದಲ್ಲಿ ಕಿರುಕುಳ, ಶಿಶುಪಾಲನಾ ಸೌಲಭ್ಯಗಳ ಅಭಾವ ಮುಂತಾದ ಸಮಸ್ಯೆಗಳ ವಿರುದ್ಧ ಹೋರಾಡುವುದಾಗಿ ಅವರು ಸ್ಪಷ್ಟಪಡಿಸಿದರು. ಪ್ರತಿ ಮಹಿಳಾ ಕಾರ್ಮಿಕರೂ ಗೌರವ, ಸಮಾನ ವೇತನ ಮತ್ತು ಸುರಕ್ಷತೆಯೊಂದಿಗೆ ಕೆಲಸ ಮಾಡಬೇಕು. ಶೋಷಣೆಗೆ ಒಳಗಾದ ಪ್ರತಿಯೊಬ್ಬರಿಗೂ ನ್ಯಾಯ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಅವರು ಭರವಸೆ ನೀಡಿದರು.

ತನ್ನ ಅವಧಿಯಲ್ಲಿ ಹೊಸ ಕೈಗಾರಿಕೆಗಳಿಗೆ ಅಗತ್ಯವಾದ ಕೌಶಲ್ಯ ಶಿಬಿರಗಳು, ಅಸಂಘಟಿತ ಕಾರ್ಮಿಕರ-ಬೀದಿ ವ್ಯಾಪಾರಿಗಳು, ಮನೆ ಕೆಲಸದವರು, ಕಟ್ಟಡ ಕಾರ್ಮಿಕರು-ಇಂಟಕ್ ಅಡಿಯಲ್ಲಿ ಸಂಘಟನೆ ಹಾಗೂ ಅವರಿಗೆ ಸರ್ಕಾರದ ಯೋಜನೆಗಳು ತಲುಪುವ ವ್ಯವಸ್ಥೆ ಮಾಡುವುದಾಗಿ ವಾಗ್ದಾನ ಮಾಡಿದ್ದಾರೆ. ಅಲ್ಲದೆ ಕೆಲಸದ ಸ್ಥಳದಲ್ಲಿ ಆರೋಗ್ಯ–ಸುರಕ್ಷತೆ ಕಡ್ಡಾಯಗೊಳಿಸಲು ಅಧಿಕಾರಿಗಳಿಗೆ ಒತ್ತಡ ಹೇರಿ ಇವುಗಳನ್ನು ಸಮರ್ಪಕವಾಗಿ ಜಾರಿಗೆ ತರುವುದಾಗಿ ಹೇಳಿದರು.

ನಾನೊಬ್ಬಳು ವಕೀಲೆಯಾಗಿ ನ್ಯಾಯಕ್ಕಾಗಿ ಹೋರಾಡುತ್ತೇನೆ. ಇಂಟಕ್ ಅಧ್ಯಕ್ಷೆಯಾಗಿ ನಿಮ್ಮ ಪರ ಧ್ವನಿಯಾಗುತ್ತೇನೆ. ಕಾಂಗ್ರೆಸ್ ಕಾರ್ಯಕರ್ತೆಯಾಗಿ ಸತ್ಯ ಮತ್ತು ಸಮಾನತೆ ಪರ ನಿಲ್ಲುತ್ತೇನೆ. ಅನ್ಯಾಯವನ್ನು ಸಹಿಸದಿರೋಣ, ಒಟ್ಟಾಗಿ ಮುನ್ನಡೆಯೋಣ ಎಂದು ಕರೀಷ್ಮಾ ಎಸ್. ಕರೆ ನೀಡಿದ್ದಾರೆ.

DAKSHINA KANNADA

ಡಾ. ಬಿ. ವಿ. ಮಂಜುನಾಥ್ ಅವರಿಗೆ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ

Published

on

ಮಂಗಳೂರು : ಯುನೈಟೆಡ್ ಕಿಂಗ್ಡಮ್‌ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ,  ಮುಖ್ಯಸ್ಥರ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ ಗೌರವಾನ್ವಿತ “ಆನರರಿ FRCP” (ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್) ಪ್ರಶಸ್ತಿಯನ್ನು ಪ್ರದಾನಿಸಿದೆ.

ಡಾ. ಮಂಜುನಾಥ್ ಅವರಿಗೆ 36 ವರ್ಷಗಳಿಗಿಂತ ಹೆಚ್ಚು ಹೃದಯರೋಗ ಚಿಕಿತ್ಸಾ ಅನುಭವವಿದ್ದು, ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ಲೇಖನಗಳು ಮತ್ತು ಪ್ರಸ್ತುತಿಗಳು, ಪಿಎಚ್‌ಡಿ ಮಾರ್ಗದರ್ಶಕರಾಗಿ ಹಾಗೂ ವಿಶ್ವವಿದ್ಯಾಲಯದ ಪರೀಕ್ಷಕರಾಗಿ ಸೇವೆ, ಮತ್ತು ಅನೇಕ ಪದವಿ, ಸ್ನಾತಕೋತ್ತರ ಹಾಗೂ ಡಿಎಂ ಕಾರ್ಡಿಯಾಲಜಿ ಫೆಲೋಶಿಪ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶ್ರೇಷ್ಠ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ, ಅವರು ಹೃದಯ ಕ್ಯಾಥ್ ಲ್ಯಾಬ್‌ನಲ್ಲಿ ಅನೇಕ ಸಂಕೀರ್ಣ ಇಂಟರ್ವೆನ್ಶನಲ್ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಆನರರಿ FRCP ಪದವಿ ಪರೀಕ್ಷಾಧಾರಿತ ಪದವಿಯಿಂದ ಭಿನ್ನವಾಗಿದ್ದು, ಇದು ಅನುಭವಿ ವೈದ್ಯರಿಗೆ ನೀಡಲಾಗುವ ಅತ್ಯಂತ ಅಪರೂಪದ ಹಾಗೂ ಗೌರವಾನ್ವಿತ ಅಂತಾರಾಷ್ಟ್ರೀಯ ಫೆಲೋಶಿಪ್ ಆಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ವೈದ್ಯಕೀಯ, ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದವರಿಗೆ ಈ ಗೌರವ ಲಭಿಸುತ್ತದೆ ಮತ್ತು ಇದು ಅಂತಾರಾಷ್ಟ್ರೀಯ ಮಟ್ಟದ ಸಹೋದ್ಯೋಗಿ ಮಾನ್ಯತೆಯನ್ನು ನೀಡುತ್ತದೆ.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಗೌರವವನ್ನು ವಿಶ್ವದಾದ್ಯಂತ ಆಯ್ಕೆಯಾದ ಕೆಲವೇ ವೈದ್ಯರಿಗೆ (ವಾರ್ಷಿಕವಾಗಿ ಗರಿಷ್ಠ 15 ಜನರಿಗೆ ಮಾತ್ರ) ರಾಯಲ್ ಕಾಲೇಜ್ ಸದಸ್ಯರ ಮತದಾನದ ಮೂಲಕ ಪ್ರದಾನಿಸಲಾಗುತ್ತದೆ.

 

Continue Reading

DAKSHINA KANNADA

ಸಜೀಪ ಮೂಡ ವಲಯ  ಕಾಂಗ್ರೆಸ್ ಸಮಿತಿ :  ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ

Published

on

ಬಂಟ್ವಾಳ : ಪಾಣೆಮಂಗಳೂರು  ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಜೀಪಮೂಡ ವಲಯ  ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸ್ಸಿನ ಮೇರೆಗೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಚಂದ್ರಶೇಖರ ಭಂಡಾರಿ ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ  ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸಜೀಪ ಮೂಡ ವಲಯ ಕಾಂಗ್ರೆಸ್‌ನ ಅಧ್ಯಕ್ಷ ಎನ್.ಕರೀಂ  ಉಪಸ್ಥಿತರಿದ್ದರು.

Continue Reading

DAKSHINA KANNADA

ಮಂಗಳೂರಿಗೆ ಮೊದಲ ‘ಅಮೃತ್ ಭಾರತ್ ಎಕ್ಸ್ ಪ್ರೆಸ್’ ರೈಲು; ಎಲ್ಲಿಂದ ಎಲ್ಲಿಗೆ?

Published

on

ಮಂಗಳೂರು: ತಮಿಳುನಾಡಿನ ನಾಗರಕೋಯಿಲ್ ನಿಂದ ಮಂಗಳೂರಿಗೆ ‘ಅಮೃತ್ ಭಾರತ್ ಎಕ್ಸ್ ಪ್ರೆಸ್’ ಆರಂಭಿಸಲು ರೈಲ್ವೇ ಇಲಾಖೆ ಚಿಂತನೆ ನಡೆಸಿದೆ.

ಈ ರೈಲು ಆರಂಭಗೊಂಡರೆ ಮಂಗಳೂರಿಗೆ ಮೊದಲ ಅಮೃತ ಭಾರತ್ ಎಕ್ಸ್ ಪ್ರೆಸ್ ಲಭ್ಯವಾಗಲಿದೆ ಮತ್ತು ಇದು ತಮಿಳುನಾಡು, ಕೇರಳ ಮತ್ತು ಕರ್ನಾಟಕ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಬಲಗೊಳಿಸಲಿದೆ.

ಈ ಪ್ರಸ್ತಾವಿತ ರೈಲಿನ ಸೇವೆಯನ್ನು ಮಂಗಳೂರು ತನಕ ಮಾತ್ರ ಸೀಮಿತಗೊಳಿಸಿದೆ, ಸುಬ್ರಹ್ಮಣ್ಯ ರೋಡ್ ಅಥವಾ ಕಬಕ ಪುತ್ತೂರು ತನಕ ವಿಸ್ತರಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ಈ ರೈಲು ಸುಬ್ರಹ್ಮಣ್ಯ ತನಕ ಓಡಿಸಿದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಪ್ರಯೋಜನವಾಗಲಿದೆ.

ಪ್ರಸ್ತುತ ಸುಬ್ರಹ್ಮಣ್ಯದಿಂದ ತಿರುವನಂತಪುರ ಮತ್ತು ದಕ್ಷಿಣ ಕೇರಳದ ಕಡೆಗೆ ಯಾವುದೇ ನೇರ ರೈಲು ಸಂಪರ್ಕವಿಲ್ಲ. ಕೇರಳ ಭಾಗಕ್ಕೆ ಬೆಂಗಳೂರು- ಕಣ್ಣೂರು ರೈಲು ಮಾತ್ರವೇ ಸುಬ್ರಹ್ಮಣ್ಯ ರೋಡ್ ಮೂಲಕ ಸಂಚರಿಸುತ್ತಿದೆ.

ಇದನ್ನೂ ಓದಿ: ಬಿಗ್‌ ಬಾಸ್‌ ಫಿನಾಲೆ ವೀಕ್‌ನಲ್ಲಿ ಸ್ಪರ್ಧಿಯಿಂದ ಇದೆಂತಾ ನಿರ್ಧಾರ; ಸಹಸ್ಪರ್ಧಿಗಳಿಗೆ ಬಿಗ್‌ ಶಾಕ್..!

ಹಾಗಾಗಿ ನಾಗರಕೋಯಿಲ್- ಮಂಗಳೂರು ಅಮೃತ್ ಭಾರತ್‌ಎಕ್ಸ್‌ಪ್ರೆಸ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಿಸ ಬೇಕು. ಈ ಬಗ್ಗೆ ಕೇಂದ್ರ ರೈಲ್ವೇ ಸಚಿವರು, ಸಂಸದರ ಗಮನ ಸೆಳೆಯಲಾಗಿದೆ ಎಂದು ರೈಲ್ವೆ ಬಳಕೆದಾರರ ಸಂಘದವರು ಮಾಹಿತಿ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page