Connect with us

DAKSHINA KANNADA

ದ.ಕ ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ-ನೂತನ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಇಂದು ಬೆಳಿಗ್ಗೆ ನಗರದ ನೆಹರೂ ಮೈದಾನದಲ್ಲಿ ನಡೆಯಿತು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್,

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.

DAKSHINA KANNADA

ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮ*ಹತ್ಯೆ

Published

on

ಪುತ್ತೂರು: 7 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಪುತ್ತೂರಿನಲ್ಲಿ ನಡೆದಿದೆ.

 

ರೇಶ್ಮಾ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸುರತ್ಕಲ್ ಮೂಲದ ರೇಶ್ಮಾ ನಾಲ್ಕು ವರ್ಷಗಳ ಹಿಂದೆಯಷ್ಟೇ ಚಿಂತನ್ ಅವರೊಂದಿಗೆ ವಿವಾಹವಾಗಿದ್ದರು. ಅಲ್ಲದೇ ಈ ದಂಪತಿಗೆ ಓರ್ವ ಪುತ್ರಿಯೂ ಇದ್ದಾಳೆ. ಏಳು ತಿಂಗಳ ಗರ್ಭಿಣಿ ಆಗಿದ್ದ ಈಕೆ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಬೈಕಂಪಾಡಿಯಲ್ಲಿ ರಸ್ತೆಗೆ ಉರುಳಿದ ಮರ; ತಪ್ಪಿದ ಅನಾಹುತ

ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Continue Reading

DAKSHINA KANNADA

ದೇರಳಕಟ್ಟೆ: ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ; 147 ವಿದ್ಯಾರ್ಥಿಗಳು ಅಪಾಯದಿಂದ ಪಾರು

Published

on

ದೇರಳಕಟ್ಟೆ: ಕೊಣಾಜೆಯ ದೇರಳಕಟ್ಟೆ ಜಂಕ್ಷನ್‌ ನಲ್ಲಿರುವ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿ, ಕಟ್ಟಡದೊಳಕ್ಕಿದ್ದ 147 ವಿದ್ಯಾರ್ಥಿಗಳು ಯಾವುದೇ ಅಪಾಯವಿಲ್ಲದೆ‌ ಪಾರಾಗಿದ್ದು, ಅವರನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ರವಿವಾರ ರಾತ್ರಿ 8 ಗಂಟೆಯ ಹೊತ್ತಿಗೆ ಕಟ್ಟಡದ ನೆಲಮಹಡಿಯಲ್ಲಿರುವ ಸ್ವಿಚ್ ಬೋರ್ಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಹರಡಲು ಆರಂಭವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯರು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳ ಸಹಾಯದಿಂದ ಬೆಂಕಿ ನಂದಿಸಲು ಆರಂಭಿಸಿದ್ದಾರೆ. ತಕ್ಷಣ ಕಟ್ಟಡದ ಮೇಲಿದ್ದ 147 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮಂಗಳೂರು: ಭಾರೀ ಮಳೆಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ತಡವಾಗಿ ಆಗಮಿಸಿದ್ದು, ಅದಾಗಲೇ ಭಾಗಶ: ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಸಫಲರಾಗಿದ್ದು, ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದೆ. ವೆಂಕಟ್ ರೆಸಿಡೆನ್ಸಿ ಐದು ಮಹಡಿಯ ಕಟ್ಟಡದ ಕೆಳಗಿನ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳಗಿನ ವಿದ್ಯುತ್ ಬೋರ್ಡ್ಗಳೆಲ್ಲವೂ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳೀಯರು ಕಾರ್ಯಾಚರಿಸಿ ಬೆಂಕಿ ನಂದಿಸಿದ್ದಾರೆ.

147ವಿದ್ಯಾರ್ಥಿಗಳನ್ನು ಖಾಸಗಿ ಸಂಸ್ಥೆಯವರೇ ಸ್ಥಳಾಂತರ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಸಹಕರಿಸಿದರು.

Continue Reading

DAKSHINA KANNADA

ಮಂಗಳೂರು: ಭಾರೀ ಮಳೆಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

Published

on

ಮಂಗಳೂರು: ಭಾರೀ ಮಳೆಯಾಗುತ್ತಿದ್ದ ಪರಿಣಾಮ ಕಾರೊಂದು ನಿಯಂತ್ರಣ ಕಳೆದುಕೊಂಡು ಎನ್‌ಐಟಿಕೆ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ ಪ್ರತ್ಯಕ್ಷ ಎಂಬವರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಿಂದ ಅವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

ಪ್ರತ್ಯಕ್ಷ ಅವರು ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿ ಕುಂದಾಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆ ಬಳಿ ಏಕಾಏಕಿ ಬ್ರೇಕ್‌ ಹಾಕಿದ್ದಾರೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ಮೇಲ್ಸೇತುವೆಯಿಂದ ಕೆಳಗಿದ್ದ ಸರ್ವಿಸ್‌ ರಸ್ತೆಗೆ ಹಾರಿ ಮಗುಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page