Connect with us

LATEST NEWS

ದ.ಕೊರಿಯಾದ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೇರಳದ ವಿದ್ಯಾರ್ಥಿನಿ ಸಾವು..!

Published

on

ದ.ಕೊರಿಯಾದ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೇರಳದ ವಿದ್ಯಾರ್ಥಿನಿ ಸಾವು..!

ತಿರುವಂತನಪುರ : ಕೇರಳ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ತಮ್ಮ ಮನೆಗೆ ವಾಪಸ್ ಬರುವ ಮೊದಲೇ ವಿಮಾನ ನಿಲ್ದಾಣದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

28 ವರ್ಷದ ಲೀಜಾ ಜೋಸ್ ಮೃತ ಸಂಶೋಧನಾ ವಿದ್ಯಾರ್ಥಿನಿ. ಇವರು ದಕ್ಷಿಣ ಕೊರಿಯಾದಿಂದ ಕೇರಳದ ಇಡುಕ್ಕಿಯಲ್ಲಿರುವ ತಮ್ಮ ಮನೆಗೆ ವಾಪಸ್ ಬರುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಲೀಜಾ ಜೋಸ್ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇಡುಕ್ಕಿ ಜಿಲ್ಲೆಯ ಚೆರುಥೋನಿ ಮೂಲದ ಲೀಜಾ ಜೋಸ್, ದಕ್ಷಿಣ ಕೊರಿಯಾದ ಪುಸಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದರು. ಮನೆಗೆ ವಾಪಸ್ ಬರಲು ಇಂಚಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿದ್ದಾರೆ.

ಆದರೆ ಇದ್ದಕ್ಕಿದ್ದಂತೆ ವಿಮಾನ ನಿಲ್ದಾಣದಲ್ಲಿ ಕುಸಿದುಬಿದ್ದಿದ್ದಾರೆ. ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿಯೇ ಲೀಜಾ ಜೋಸ್ ಮೃತಪಟ್ಟಿದ್ದರು.

ಆದರೆ ವಿದ್ಯಾರ್ಥಿನಿಯ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕುಟುಂಬದವರು ಆಕೆ ಅನಾರೋಗ್ಯದಿಂದ ಬಳಲುತ್ತಿದ್ದು, ಕಿವಿ ನೋವಿತ್ತು ಎಂದು ಹೇಳಿದ್ದಾರೆ. ಮೃತ ಲೀಜಾ ಜೋಸ್ ದಕ್ಷಿಣ ಕೊರಿಯಾದಲ್ಲಿ ನಾಲ್ಕು ವರ್ಷಗಳಿಂದ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದಾರೆ.

ಫೆಬ್ರವರಿಯಲ್ಲಿ ಕೇರಳಕ್ಕೆ ಬಂದಿದ್ದಾಗ ಲೀಜಾ ಜೋಸ್ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ವೀಸಾ ಅವಧಿ ಮುಗಿಯಲಿದ್ದರಿಂದ ಲೀಜಾ ಮತ್ತೆ ದಕ್ಷಿಣ ಕೊರಿಯಾಕ್ಕೆ ಹೋಗಿದ್ದರು.

ನಾನು ಇಲ್ಲಿಯವರೆಗೆ ಮಾಡಿದ ಪ್ರಾಜೆಕ್ಟ್‌ಗಳನ್ನು ಹಿಂತಿರುಗಿಸದಿದ್ದರೆ ನನ್ನ ಸಂಶೋಧನೆ ವ್ಯರ್ಥವಾಗುತ್ತದೆ ಎಂದು ಪೋಷಕರಿಗೆ ಹೇಳಿದ್ದಳು. ದಕ್ಷಿಣ ಕೊರಿಯಾಕ್ಕೆ ಹಿಂದಿರುಗಿದ ನಂತರ ಲೀಜಾ 14 ದಿನಗಳ ಕಾಲ ಕ್ವಾರಂಟೈನಲ್ಲಿದ್ದರು.

ಈ ಸಮಯದಲ್ಲಿಯೇ ಅವಳಿಗೆ ಕಿವಿ ನೋವು ಕಾಣಿಸಿಕೊಂಡಿದೆ. ಅಲ್ಲದೇ ಕಫ ಕೂಡ ಇತ್ತು. ಆದರೆ ಕೋವಿಡ್ ಟೆಸ್ಟ್ ಮಾಡಿಸಿದಾಗ ವರದಿಯಲ್ಲಿ ನೆಗೆಟಿವ್ ಬಂದಿತ್ತು. ನಂತರ ವೈದ್ಯಕೀಯ ಸಲಹೆ ಮೇರೆಗೆ ಕ್ಯಾರೆಂಟೈನ್ ಅವಧಿ ಮುಗಿದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಳು ಎಂದು ಸಂಬಂಧಿಕರೊಬ್ಬರು ತಿಳಿಸಿದ್ದಾರೆ.

ಲೀಜಾಗೆ ವೈದ್ಯರು ಔಷಧಿ ನೀಡಿದ್ದರು. ಒಂದು ವೇಳೆ ಔಷಧಿಗಳಿಂದ ಗುಣಮುಖವಾಗದಿದ್ದರೆ ಶಸ್ತ್ರಚಿಕಿತ್ಸೆ ಮಾಡಿಸಬೇಕಾಗುತ್ತದೆ ಎಂದು ತಿಳಿಸಿದ್ದರು.

ಲೀಜಾ ಪೋಷಕರು ಮಗಳ ಆರೋಗ್ಯ ಸ್ಥಿತಿಯನ್ನು ತಿಳಿದ ನಂತರ ಶೀಘ್ರದಲ್ಲೇ ಮನೆಗೆ ವಾಪಸ್ ಬರುವಂತೆ ಕೇಳಿಕೊಂಡಿದ್ದರು.

ಪ್ರಸುತ ಲೀಜಾ ಅವರ ಮೃತ ದೇಹ ಇನಾ ವಿಶ್ವವಿದ್ಯಾಲಯದ ಆಸ್ಪತ್ರೆಯಲ್ಲಿಡಲಾಗಿದ್ದು ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page