Connect with us

FILM

ಬಾಲಿವುಡ್ ಭಾರತವನ್ನು ಕೆಟ್ಟದಾಗಿ ತೋರಿಸಿದೆ ಎಂದ ರಿಷಬ್ ಶೆಟ್ಟಿ

Published

on

ಬೆಂಗಳೂರು: ಕಾಂತಾರ ಸಿನೆಮಾದ ಮೂಲಕ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದ ರಿಷಬ್ ಶೆಟ್ಟಿ ತನ್ನ ಅಭಿನಯಕ್ಕಾಗಿ ರಾಷ್ಟ್ರೀಯ ಚಲಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.  ಇದೀಗ ಪ್ರಮೋದ್ ಶೆಟ್ಟಿ ಅಭಿನಯದ ‘ಲಾಫಿಂಗ್ ಬುದ್ಧ’ ಸಿನಿಮಾದ ಪ್ರಚಾರದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಿಷಬ್ ಶೆಟ್ಟಿ ಯೂಟ್ಯೂಬ್ ಚಾನೆಲ್‌ ಸಂದರ್ಶನದಲ್ಲಿ ನೀಡಿದ ಹೇಳಿಕೆಯಿಂದಾಗಿ ಭಾರೀ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಸಿನೆಮಾದ ಕುರಿತು ಹೇಳಿದ ಮಾತು ಇದೀಗ ಭಾರೀ ಸುದ್ದಿಯಾಗಿದೆ.

ರಿಷಬ್ ಶೆಟ್ಟಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾರತ ಸಮಸ್ಯೆಗಳನ್ನು ದೃಶ್ಯೀಕರಿಸುವುದಕ್ಕೆ ಬಾಲಿವುಡ್ ಅನ್ನು ಟೀಕಿಸಿದರು. ಬಾಲಿವುಡ್ ಸಿನಿಮಾ ಮಂದಿ ಜಾಗತಿಕ ವೇದಿಕೆಯಲ್ಲಿ ಭಾರತವನ್ನು ನಕಾರಾತ್ಮಕವಾಗಿ ಚಿತ್ರಿಸುತ್ತಾರೆ ಎಂದು ತಮ್ಮ ಹತಾಶೆ ವ್ಯಕ್ತಪಡಿಸಿದರು. “ಭಾರತೀಯ ಚಲನಚಿತ್ರಗಳು, ವಿಶೇಷವಾಗಿ ಬಾಲಿವುಡ್ ಭಾರತವನ್ನು ಕೆಟ್ಟದಾಗಿ ತೋರಿಸುತ್ತವೆ. ಅಂಥ ಚಲನಚಿತ್ರಗಳನ್ನು ಜಾಗತಿಕ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ ಮತ್ತು ಅವುಗಳಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಗುತ್ತದೆ. ನಮ್ಮ ದೇಶ, ನಮ್ಮ ಭಾಷೆ ನಮ್ಮ ಹೆಮ್ಮೆಯಾಗಿರುತ್ತದೆ. ಇದನ್ನು ಜಾಗತಿಕವಾಗಿ ಸಕಾರಾತ್ಮಕ ತೋರಿಸಬೇಕು. ನಾನು ಅದನ್ನೇ  ಮಾಡಲು ಪ್ರಯತ್ನಿಸುತ್ತೇನೆ ಎಂದು ರಿಷಭ್ ವೀಡಿಯೊದಲ್ಲಿ ಹೇಳುತ್ತಾರೆ.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟಿದ ನಟಿ ಶೃತಿ

ರಿಷಬ್ ಶೆಟ್ಟಿ ಈಗ ತಮ್ಮ ಮಹತ್ವಾಕಾಂಕ್ಷೆಯ ಯೋಜನೆಯಾದ ಕಾಂತಾರ- 2ರಲ್ಲಿ ಬ್ಯುಸಿಯಾಗಿದ್ದಾರೆ. ಅದಕ್ಕೆ ಅಧಿಕೃತವಾಗಿ ಕಾಂತಾರಾ ಚಾಪ್ಟರ್ 1 ಎಂದು ಹೆಸರಿಸಲಾಗಿದೆ. ಬಹು ನಿರೀಕ್ಷಿತ ಚಿತ್ರವು 2025 ರ ಆರಂಭದಲ್ಲಿ ಚಿತ್ರಮಂದಿರಗಳಿಗೆ ಬರುವ ನಿರೀಕ್ಷೆಯಿದೆ. ಚಿತ್ರದ ನಾಲ್ಕನೇ ಹಂತದ ಶೂಟಿಂಗ್ ವೇಳಾಪಟ್ಟಿ ಆಗಸ್ಟ್ ಕೊನೆಯ ವಾರದಲ್ಲಿ ಪ್ರಾರಂಭವಾಗಲಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಇತ್ತೀಚೆಗೆ, ಒಟಿಟಿ ವೇದಿಕಗಳಲ್ಲಿ ಕನ್ನಡ ಸಿನಿಮಾಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡಿದ್ದರು. ಕನ್ನಡ ಚಲನಚಿತ್ರಗಳು ಸೂಕ್ತ ಮಾನ್ಯತೆ ಪಡೆಯಲು ಹೆಣಗಾಡುತ್ತವೆ. ನೇರವಾಗಿ ಯೂಟ್ಯೂಬ್ ಅಥವಾ ಚಲನಚಿತ್ರೋತ್ಸವಗಳ ಮೂಲಕ ಬಿಡುಗಡೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಸವಾಲುಗಳ ನಡುವೆಯೂ ಕನ್ನಡ ಚಿತ್ರರಂಗವನ್ನು ರಾಷ್ಟ್ರದ ಗಮನ ಸೆಳೆದ ಕಾಂತಾರ ಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದರು.

FILM

ಗೀತಾ ಶಿವರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು… ಅಷ್ಟಕ್ಕೂ ಏನಾಯಿತು ಗೊತ್ತಾ..?

Published

on

ಬೆಂಗಳೂರು: ಇತ್ತೀಚಿಗಷ್ಟೇ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ನಟ ಶಿವರಾಜ್‌ಕುಮಾರ್ ಚಿಕಿತ್ಸೆ ಪಡೆದು ಹುಷಾರ್ ಆಗಿ ಅಮೇರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದರು. ಇದೀಗ ಅವರು ಗುಣಮುಖರಾದ ಕೂಡಲೇ ಪತ್ನಿ ಗೀತಾ ಶಿವರಾಜ್‌ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗೀತಾ ಶಿವರಾಜ್‌ಕುಮಾರ್‌ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ವರದಿಯಾಗಿದೆ.

ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಇದು ಆಗಿರಲಿಲ್ಲ. ಈಗ ಅವರಿಗೆ ಕತ್ತಿನ ಭಾಗದಲ್ಲಿ ಸರ್ಜರಿ ನಡೆದಿದೆ. ಅವರು ಬೇಗ ಹುಷಾರ್ ಆಗಿ ಬರಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

Continue Reading

FILM

ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು; ರಕ್ಷಕ್ ಬುಲೆಟ್ ವಿರುದ್ದ ದೂರು ದಾಖಲು ?

Published

on

ಮಂಗಳೂರು/ಬೆಂಗಳೂರು: ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಅವರ ಪುತ್ರ, ಮಾಜಿ ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್‌ ಪ್ರಕಾಶ್, ಇದೀಗ ಏನೋ ಮಾಡಲು ಹೋಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.


ರಕ್ಷಕ್ ಬುಲೆಟ್ ಪ್ರಕಾಶ್ ಸ್ಯಾಂಡಲ್‌ವುಡ್‌ನಲ್ಲಿ ನೆಲೆ ನಿಲ್ಲಲು ಪ್ರಯತ್ನ ಮಾಡುತ್ತಿದ್ದಾರೆ. ಬಿಗ್ ಬಾಸ್ ಬಳಿಕ ಮತ್ತೊಂದು ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದು ಜನರಿಗೆ ಹತ್ತಿರವಾಗಲು ಸರ್ಕಸ್ ಮಾಡುತ್ತಿದ್ದಾರೆ. ದರ್ಶನ್ ಅಭಿಮಾನಿ ಎಂದೇ ಗುರುತಿಸಿಕೊಳ್ಳುವ ಅವರು, ಇದೀಗ ದರ್ಶನ್‌ ಅಭಿನಯದ ಸಿನಿಮಾವೊಂದರ ಡೈಲಾಗ್‌ನಿಂದಲೇ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.

ಏನಿದು ವಿವಾದ ?
ಖಾಸಗಿ ಶೋನಲ್ಲಿ ರಕ್ಷಕ್ ಬುಲೆಟ್ ಅವರು ದರ್ಶನ್ ತೂಗುದೀಪ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಮರುಸೃಷ್ಟಿಸಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ರಮೋಲಾ ಜೊತೆ ಸಿನಿಮಾದ ಡೈಲಾಗ್ ಹೇಳುವಾಗ ಚಾಮುಂಡೇಶ್ವರಿ ತಾಯಿಗೆ ಅವಮಾನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: ಹಬ್ಬಕ್ಕೆಂದು ಊರಿಗೆ ಹೋಗುತ್ತೀರಾ..? ಹಾಗಾದರೆ ಬಸ್ ಟಿಕೆಟ್ ದರ ಎಷ್ಟಿದೆ ನೋಡಿ

ಬುಲ್ ಬುಲ್ ಸಿನಿಮಾದಲ್ಲಿ ದರ್ಶನ್‌ ರಚಿತಾ ರಾಮ್‌ರನ್ನು ಸ್ವಿಟ್ಜರ್ಲೆಂಡ್‌ನಲ್ಲಿ ಭೇಟಿಯಾದಾಗ ಹೊಡೆಯುವ ಡೈಲಾಗ್‌ ಅನ್ನೇ ರಕ್ಷಕ್ ಬುಲೆಟ್ ಹೇಳಿದ್ದಾರೆ ‘ನಿಮ್ಮನ್ನ ನೋಡ್ತಾ ಇದ್ದ ಹಾಗೆಯೇ ಅಂದುಕೊಂಡೆ. ತಾಯಿ ಚಾಮುಂಡೇಶ್ವರಿನೇ ಬೆಟ್ಟದಿಂದ ಇಳಿದು, ಸೀರೆ-ಒಡವೆ ಎಲ್ಲಾ ಬಿಚ್ಚಿಟ್ಟು, ಪ್ಯಾಂಟು-ಶರ್ಟು ಹಾಕಿಕೊಂಡು ಸ್ವಿಜರ್ಲೆಂಡ್‌ನಲ್ಲಿ ಒಳ್ಳೇ ಟ್ರಿಪ್‌ ಹೊಡೀತಾ ಇದ್ದಾರೆ ಅಂತಾ’ ಎನ್ನುವ ಡೈಲಾಗ್‌ ಇದೀಗ ವಿವಾದದ ಕಿಡಿ ಹೊತ್ತಿಸಿದೆ.

ರಕ್ಷಕ್ ಬುಲೆಟ್‌ ಏನೋ ಉತ್ಸಾಹದಲ್ಲೇ ಡೈಲಾಗ್ ಹೊಡೆದಿದ್ದಾರೆ. ಆದರೆ ‘ಚಾಮುಂಡೇಶ್ವರಿ ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟ್ ಹಾಕಿಕೊಂಡು’ ಎನ್ನುವ ಸಾಲುಗಳೇ ವಿವಾದಕ್ಕೆ ಕಾರಣವಾಗಿದೆ.

ರಕ್ಷಕ್ ಬುಲೆಟ್ ವಿರುದ್ದ ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರಿಗೆ ದೂರು ಸಲ್ಲಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Continue Reading

FILM

ಟ್ರೆಂಡ್ ಬದಿಗಿಟ್ಟು ಮಗಳಿಗೆ ಅರ್ಥಗರ್ಭಿತ ಹೆಸರಿಟ್ಟ ನಟಿ ನೇಹಾ ಗೌಡ; ವ್ಹಾವ್ ಅಂದ್ರು ಫ್ಯಾನ್ಸ್!

Published

on

ಮಂಗಳೂರು/ಬೆಂಗಳೂರು : ಲಕ್ಷ್ಮೀ ಬಾರಮ್ಮ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ನಟಿ ನೇಹಾ ಗೌಡ. ಗೊಂಬೆ ಎಂದೇ ಖ್ಯಾತರಾಗಿದ್ದರು ನೇಹಾ. ಅದಾದ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 9 ರ ಶೋ ಮೂಲಕನೂ ಗಮನ ಸೆಳೆದಿದ್ದರು. ಅವರ ಪತಿ ಚಂದನ್ ಕೂಡ ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಮನೆ ಮಾತಾಗಿದ್ದರು. ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ನಾಮಕರಣ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.

ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕಿರುತೆರೆ, ಹಿರಿತೆರೆ ಕಲಾವಿದರು ಆಗಮಿಸಿ ಶುಭ ಹಾರೈಸಿದರು.

ವಿಶೇಷ ಅಂದ್ರೆ ಟ್ರೆಂಡ್ಸ್‌ ಬದಿಗಿಟ್ಟು ನೇಹಾ ದಂಪತಿ ಚಂದದ ಹೆಸರೊಂದನ್ನು ಮಗಳಿಗಿಟ್ಟಿದ್ದಾರೆ. ಇತ್ತೀಚೆಗೆ ವಿಭಿನ್ನ ಹೆಸರುಗಳದೇ ರಾಯಭಾರವಾಗಿರುವಾಗ ನೇಹಾ – ಚಂದನ್ ಮಾತ್ರ ಅರ್ಥಪೂರ್ಣವಾಗಿರುವ ಹೆಸರಿಟ್ಟಿದ್ದಾರೆ.

ಹೌದು, ಈ ದಂಪತಿ ಮಗುವಿಗೆ ಇಟ್ಟಿರುವ ಹೆಸರು ‘ಶಾರದಾ’. ದಂಪತಿ ನಿಲುವಿಗೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಶುಭ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಸಿಕಂದರ್ ಸಿನಿಮಾದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ಒಬ್ಬರೇ ಅಲ್ಲ..! ಟ್ರೈಲರ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಕನ್ನಡಿಗ..?

ಬಾಲ್ಯದಲ್ಲೇ ಪ್ರೀತಿಯಲ್ಲಿ ಬಿದ್ದಿದ್ದ ನೇಹಾ – ಚಂದನ್ 2018ರಲ್ಲಿ ವಿವಾಹವಾಗಿದ್ದರು. ಕಳೆದ ವರ್ಷ ಅಕ್ಟೋಬರ್‌ 29ರಂದು ನೇಹಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page