Connect with us

LATEST NEWS

ಉಡುಪಿಯಲ್ಲಿ ರಸ್ತೆ ಅಗಲೀಕರಣ ಕಾಮಾಗಾರಿ -ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಬಸ್ ಮೇಲೆ ಉರಳಿ ಬಿದ್ದ ಮರ..!

Published

on

ರಸ್ತೆ ಅಗಲೀಕರಣ ವೇಳೆ ಮರ ತೆರವುಗೊಳಿಸುತ್ತಿದ್ದಾಗ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ ಮೇಲೆ ಮರ ಬಿದ್ದ ಆದ ಘಟನೆ ಉಡುಪಿ ಜಿಲ್ಲೆಯ ನೆಲ್ಲಿಕಾರು ಎಂಬಲ್ಲಿ ನಡೆದಿದೆ. 

ಉಡುಪಿ : ರಸ್ತೆ ಅಗಲೀಕರಣ ವೇಳೆ ಮರ ತೆರವುಗೊಳಿಸುತ್ತಿದ್ದಾಗ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ ಮೇಲೆ ಮರ ಬಿದ್ದ ಆದ ಘಟನೆ ಉಡುಪಿ ಜಿಲ್ಲೆಯ ನೆಲ್ಲಿಕಾರು ಎಂಬಲ್ಲಿ ನಡೆದಿದೆ.

ಕಾರ್ಕಳದಿಂದ ನೆಲ್ಲಿಕಾರು ಹೋಗುವ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿ ಇದ್ದ ಮರಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿದ್ದರು.

ಈ ವೇಳೆ ಎರಡು ಕಡೆಗಳಲ್ಲಿ ಬರುತ್ತಿದ್ದ, ವಾಹನಗಳನ್ನು ನಿಲ್ಲಿಸಿದ್ದರು.

ಆದ್ರೆ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇದ್ದ ಕಾರಣ ರಸ್ತೆಯಲ್ಲಿ ನಿಲ್ಲಿಸಿದ್ದ ಸರ್ಕಾರಿ ನರ್ಮ್ ಬಸ್ ಮೇಲೆ ಮರ ಬಿದ್ದಿದೆ.

ಅದೃಷ್ಟವಶಾತ್ ಬಸ್‌ನಲ್ಲಿ ಇದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿ ರಸ್ತೆ ಕಾಮಗಾರಿ ನಡೆಸುತ್ತಿರುವವರ ಅಜಾಗರೂಕತೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LATEST NEWS

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Published

on

ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಇಂದು(ಜ.24) ಬೆಳಗ್ಗೆ ನಡೆದಿದೆ.


ಬಂಡಳ್ಳಿ ಗ್ರಾಮದ ಜಯಲಕ್ಷ್ಮಿ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ.


ಇದನ್ನೂ ಓದಿ: ಕೆಲಸಕ್ಕೆ ಗೈರಾಗಿದ್ದಕ್ಕೆ ಯುವತಿಗೆ ಸಾರ್ವಜನಿಕವಾಗಿ ಅವಮಾನ: ಮಾಲೀಕ ಪೊಲೀಸರ ವಶ

ಅದೃಷ್ಟವಶಾತ್‌, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಆದರೆ ಮನೆ ಸಂಪೂರ್ಣ ಹಾನಿಗೊಳಗಾಗಿದೆ.

Continue Reading

LATEST NEWS

ಜನ್ಮದಿನದ ಪಾರ್ಟಿಗೆ ಕರೆಸಿ ಯುವಕನ ಹ*ತ್ಯೆ

Published

on

ಮಂಗಳೂರು/ರಾಯಚೂರು :  ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಯುವಕನ ಕೊ*ಲೆ ಮಾಡಿರುವ ಘಟನೆ ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ  ನಡೆದಿದೆ.

ಜಹೀರಾಬಾದ್ ಬಡಾವಣೆ ನಿವಾಸಿ, 22 ವರ್ಷದ ವಿಶಾಲ್ ಕೊ*ಲೆಯಾದ ಯುವಕ. 19 ವರ್ಷದ ರಾಜು ಅಲಿಯಾಸ್ ಯೇಸು ಮತ್ತು ಬಸವರಾಜ  ಕೊ*ಲೆಗೈದ ಆರೋಪಿಗಳು.

ಇದನ್ನೂ ಓದಿ : ವಸತಿ ಕಟ್ಟಡದ ಮೇಲೆ ಫೈ*ರಿಂಗ್ ; ಬಾಲಿವುಡ್ ನಟನ ಬಂಧನ

ಬಸವರಾಜ ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ವಿಶಾಲ್ ನನ್ನು ಕರೆಸಿಕೊಂಡಿದ್ದ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಬಳಿಕ ಕೊ*ಲೆಯಲ್ಲಿ ಅಂತ್ಯ ಕಂಡಿದೆ. ಕೊ*ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading

bangalore

ಕೆಲಸಕ್ಕೆ ಗೈರಾಗಿದ್ದಕ್ಕೆ ಯುವತಿಗೆ ಸಾರ್ವಜನಿಕವಾಗಿ ಅವಮಾನ: ಮಾಲೀಕ ಪೊಲೀಸರ ವಶ

Published

on

ಬೆಂಗಳೂರು: ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್‌ ಸೆಂಟರ್‌ ಮಾಲೀಕ ಆಕೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.


ಕಳೆದ ಐದು ವರ್ಷಗಳಿಂದ ಲಕ್ಷ್ಮಿ ಎಂಬ ಯುವತಿ ‘ಮುಸ್ಕಾನ್‌ ಟೈಮ್ಸ್‌’ ಸೈಬರ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಲಕ್ಷ್ಮಿ ವೈಯಕ್ತಿಕ ಕಾರಣದಿಂದ ಗೈರಾಗಿದ್ದರು. ಈ ಕಾರಣಕ್ಕೆ ಕೋಪಗೊಂಡ ಮಾಲೀಕ ಸೈಯದ್‌, ಯುವತಿಯ ವಿರುದ್ಧ ಧ್ವೇಷ ಸಾಧಿಸಲು ಶುರುಮಾಡಿದ್ದ.

ಲಕ್ಷ್ಮಿ ಗುರುವಾರ(ಜ.22) ರಾತ್ರಿ 7.30ರ ಹೊತ್ತಿಗೆ ರಸ್ತೆಯಲ್ಲಿ ಹೋಗುತ್ತಿದ್ದಾಗ, ಸೈಯದ್‌ ಆಕೆಯನ್ನು ಅಡ್ಡಗಟ್ಟಿ ಸಾವರ್ಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಲು ಶುರು ಮಾಡಿದ್ದ. ‘ನಿನಗೆ ಬಟ್ಟೆ ಬಿಚ್ಚಿ ಹೊಡೆಯುತ್ತೇನೆ, ರಸ್ತೆಯಲ್ಲಿಯೇ ಕತ್ತರಿಸಿ ಹಾಕುತ್ತೇನೆ. ನಿನ್ನಿಂದ ನನ್ನ ದುಡ್ಡೆಲ್ಲಾ ಹೋಯಿತು, ನನ್ನ ತಲೆ ಕೆಡಿಸಬೇಡ’ ಎಂದು ಅತೀ ಕೀಳಾಗಿ ಮಾತನಾಡಿದಲ್ಲದೇ, ಅಸಭ್ಯವಾಗಿ ವರ್ತಿಸಿದ್ದ.

ಸೈಯದ್‌ನ ಈ ವರ್ತನೆ ಗಮನಿಸಿದ ಸ್ಥಳೀಯರು ಆತನನ್ನು ಸ್ಥಳದಲ್ಲೇ ಜಮಾಯಿಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಒಂದು ಮಹಿಳೆಯ ಜತೆ ವರ್ತಿಸುವ ರೀತಿ ಇದಲ್ಲ ಎಂದು ಬುದ್ಧಿ ಹೇಳಿದರು. ಬಳಿಕ ಪರಿಸ್ಥಿತಿ ತೀವ್ರ ವೀಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ಕಪಾಳಮೋಕ್ಷಕ್ಕೆ ಬಲಿಯಾಯ್ತು ಗೆಳೆತನ; ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಮಾಡಿ ತಪ್ಪೊಪ್ಪಿಕೊಂಡ ಯುವಕ

ಮಾಹಿತಿ ತಿಳಿದು ಸ್ಥಳಕ್ಕೆ ತಕ್ಷಣ ಧಾವಿಸಿದ ಕೆಂಗೇರಿ ಪೊಲೀಸರು ಯುವತಿಗೆ ಪ್ರಾಣ ಬೆದರಿಕೆ ಮತ್ತು ಮಾನಹಾನಿ ಮಾಡಿದ ಆರೋಪದಡಿ ಪ್ರಕರಣ ದಾಖಲಾಸಿ, ಸೈಯದ್‌ನನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ಈ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page