Connect with us

LATEST NEWS

ನಾಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ; ರಕ್ಷಣಾ ಸಹಕಾರ ಒಪ್ಪಂದದ ನಿರೀಕ್ಷೆ

Published

on

ನವದೆಹಲಿ: ನಾಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತಂತೆ ಮಾತುಕತೆ ನಡೆಸಲಿದ್ದು, ಪ್ರಮುಖ ಒಪ್ಪಂದಗಳಿಗೂ ಬರುವ ಸಾಧ್ಯತೆ ಇದೆ.


ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತದ ಭೇಟಿಗೂ ಮುನ್ನ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ರಷ್ಯಾ ಅಧ್ಯಕ್ಷ ಪುಟಿನ್ ಅವರ ವಾಸ್ತವ್ಯದ ಉದ್ದಕ್ಕೂ ಕಟ್ಟುನಿಟ್ಟಿನ ಸುರಕ್ಷತೆಯನ್ನು ಒದಗಿಸಲು ಅವರ ಭದ್ರತೆಯನ್ನು ಭಾರತ ಮತ್ತು ರಷ್ಯಾದ ಏಜೆನ್ಸಿಗಳು ಜಂಟಿಯಾಗಿ ಸಂಘಟಿಸುತ್ತಿವೆ.

ಪುಟಿನ್ ಡಿಸೆಂಬರ್ 4ರಂದು ದೆಹಲಿಯಲ್ಲಿ ನಡೆಯಲಿರುವ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಮೆರಿಕ ವಿಧಿಸಿರುವ ನಿರ್ಬಂಧಗಳಿಂದ ಭಾರತ-ರಷ್ಯಾ ವ್ಯಾಪಾರವನ್ನು ಪ್ರತ್ಯೇಕ್ಷಿಸುವ ಕ್ರಮಗಳು, ಪರಮಾಣು ಶಕ್ತಿಗಾಗಿ ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಪ್ರಸ್ತಾಪ ಮತ್ತು ರಕ್ಷಣಾ ಸಹಕಾರವನ್ನು ಗಾಢಗೊಳಿಸುವುದು ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ನಡುವಿನ ಶೃಂಗಸಭೆಯ ಕಾರ್ಯಸೂಚಿಯಲ್ಲಿದೆ.

ಇದನ್ನೂ ಓದಿ: ಮಂಗಳೂರು: 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಸುಸಜ್ಜಿತ ಫುಟ್‍ಬಾಲ್ ಕ್ರೀಡಾಂಗಣದ ಉದ್ಘಾಟನೆ

ರಷ್ಯಾ ಇಂಧನ ಮತ್ತು ಮಿಲಿಟರಿ ಉಪಕರಣಗಳ ಖರೀದಿಯನ್ನು ಕಡಿಮೆ ಮಾಡಲು ಅಮೆರಿಕದಿಂದ ಒತ್ತಡದ ಹಿನ್ನೆಲೆಯಲ್ಲಿ, ರಷ್ಯಾದೊಂದಿಗೆ ರಕ್ಷಣಾ ಮತ್ತು ಆರ್ಥಿಕ ಸಂಬಂಧಗಳನ್ನು ಪುನಶ್ಚೇತನಗೊಳಿಸುವ ಮೂಲಕ ಭಾರತವು ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ಒತ್ತಿಹೇಳಲು ಈ ಸಭೆಯನ್ನು ಒಂದು ಅವಕಾಶವೆಂದು ಪರಿಗಣಿಸುತ್ತಿದೆ ಎಂದು ವರದಿ ತಿಳಿಸಿದೆ.

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page