Connect with us

ಪಾರ್ಲರ್, ಹೆಂಗಳೆಯರ ಶಾಪಿಂಗ್ ಸಮಯದಲ್ಲಿ ಮುಂಜಾಗೃತೆ ವಹಿಸಲು ಕುಟುಂಬ ಕಲ್ಯಾಣ ಆಗ್ರಹ

Published

on

ಪಾರ್ಲರ್, ಹೆಂಗಳೆಯರ ಶಾಪಿಂಗ್ ಸಮಯದಲ್ಲಿ ಮುಂಜಾಗೃತೆ ವಹಿಸಲು ಕುಟುಂಬ ಕಲ್ಯಾಣ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಹೇರ್ ಕಟ್ಟಿಂಗ್ ಶಾಪ್‍ಗಳು, ಬ್ಯೂಟಿಪಾರ್ಲರ್‍ ಗಳು, ಸಾರಿ ಸೆಂಟರ್ಸ್ ಮತ್ತು ಇತರೆ ಹೆಚ್ಚು ಜನಸಂದಣಿ ಸೇರುವ ಅಂಗಡಿ ಮುಂಗಟ್ಟುಗಳು,

ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತ ಸೂಚಿಸಿರುವ ಈ ಕೆಳಕಂಡ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

  • ಹೇರ್ ಕಟ್ಟಿಂಗ್ ಶಾಪ್‍ಗಳು ಮತ್ತು ಬ್ಯೂಟಿ ಪಾರ್ಲರ್ ಗಳಲ್ಲಿ ಕಾರ್ಯನಿರ್ವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
  • ಪ್ರತಿಯೊಬ್ಬ ಗ್ರಾಹಕರಿಗೂ ಪ್ರತ್ಯೇಕವಾಗಿ ಬಟ್ಟೆಗಳನ್ನು ಉಪಯೋಗಿಸಬೇಕು.
  • ತಮ್ಮಲ್ಲಿರುವ ಪೀಠೋಪಕರಣಗಳನ್ನು ಆಗಾಗ ಸ್ವಚ್ಛಗೊಳಿಸುತ್ತಿರಬೇಕು.
  • ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಆಗಾಗ್ಗೆ ಸೋಪ್ ಬಳಸಿ ಹ್ಯಾಂಡ್ ವಾಶ್ ಮಾಡಬೇಕು. ಸ್ಯಾನಿಟೈಸರ್ ಬಳಸಬೇಕು.
  • ತಮ್ಮ ಶಾಪ್‍ಗಳಲ್ಲಿ ಹೆಚ್ಚಿನ ಜನಸಂದಣಿ ಸೇರದಂತೆ ನೋಡಿಕೊಳ್ಳಬೇಕು. ಗ್ರಾಹಕರನ್ನು ಮುಟ್ಟಿದ ನಂತರ ಕಣ್ಣು, ಮೂಗು, ಬಾಯಿಯನ್ನು ಮುಟ್ಟಬಾರದು.
  • ಸಾರಿ ಸೆಂಟರ್‍ ಗಳಲ್ಲಿ ಕಾರ್ಯನಿರ್ವಹಿಸುವವರು ಕೂಡ ಮಾಸ್ಕ್ ಧರಿಸಬೇಕು. ಗ್ರಾಹಕರಿಗೆ ಬಟ್ಟೆಯನ್ನು ಮುಟ್ಟುವ ಮೊದಲು ಸ್ಯಾನಿಟೈಸರ್ ಬಳಸಲು ವ್ಯವಸ್ಥೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಮಹಿಳಾ ಸೌಂದರ್ಯ ತಜ್ಞರ ಉಡುಪಿ ಜಿಲ್ಲಾ ಸಂಘ ಬೆಂಬಲ ನೀಡಿದ್ದು, ಜಿಲ್ಲೆಯ ಎಲ್ಲಾ ಬ್ಯೂಟಿಪಾರ್ಲರ್ ಗಳೂ ಮಾರ್ಚ್ 31ರ ವರೆಗೆ ಬಂದ್ ಆಗಲಿದೆ.

ಗ್ರಾಹಕರ ಆರೋಗ್ಯ ಹಿತದೃಷ್ಟಿಯಿಂದ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಮಹಿಳಾ ಸೌಂದರ್ಯ ಸಂಘದ ಜಿಲ್ಲಾಧ್ಯಕ್ಷೆ ವೇದ ಸಂಜೀವ ಸುವರ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

kerala

ಮದ್ವೆಗೆ ಬಲವಂತ ಆರೋಪ-ಠಾಣೆ ಮೆಟ್ಟಿಲೇರಿದ ನೀಲಿ ಕಂಗಳ ಚೆಲುವೆ ಮೊನಾಲಿಸಾ

Published

on

ತಿರುವನಂತಪುರ: 2024ರಲ್ಲಿ ನಡೆದಿದ್ದ ಮಹಾಕುಂಭಮೇಳದಲ್ಲಿ  ರುದ್ರಾಕ್ಷಿ ಮಾರುತ್ತ ತನ್ನ ಸುಂದರ ಕಣ್ಣುಗಳ ಮೂಲಕವೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಹವಾ ಸೃಷ್ಟಿಸಿದ್ದ ಮೊನಾಲಿಸಾ ಬೋಂಸ್ಲೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ತನ್ನ ತಂದೆ ತೋರಿಸಿದ ಹುಡುಗನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮೊನಾಲಿಸಾ ತನ್ನ ಗೆಳೆಯನ ಜೊತೆ ಬಂದು ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ನೀಡಿದ್ದಾರೆ. ಯಾವುದೇ ದೈಹಿಕ ಕಿರುಕುಳ ನಡೆದಿಲ್ಲ. ಪ್ರಾಥಮಿಕವಾಗಿ ಬಲವಂತದ ವಿವಾಹ ಪ್ರಸ್ತಾಪವಾಗಿದೆ. ಮೊನಾಲಿಸಾ ತಂದೆ ತನ್ನ ಮೇಲೆ ಒತ್ತಡ ಹೇರುತ್ತಲೇ ಇದ್ದುದರಿಂದ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಾವು ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ಆದ ಬಳಿಕ ಮೊನಾಲಿಸಾ ಅವರ ಬದುಕೇ ಬದಲಾಗಿದೆ. ಸಾಲು ಸಾಲು ಸಿನಿಮಾ ಆಫರ್ ಗಳು ಬರುತ್ತಿದೆ. ಪ್ರಸ್ತುತ ಶೂಟಿಂಗ್ ಗಾಗಿ ತಿರುವನಂತಪುರಕ್ಕೆ ಬಂದಿದ್ದ ಮೊನಾಲಿಸಾ ಇದೀಗ ಗೆಳೆಯನ ಜೊತೆ ಬಮದು ದೂರನ್ನು ನೀಡಿದ್ದಾರೆ.

Continue Reading

bangalore

6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್

Published

on

ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ  ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ದಂಪತಿ ಅಮೇರಿಕಾದಲ್ಲಿ ಸೆಟಲ್ ಆಗಿರೋದನ್ನು ಖಚಿತಪಡಿಸಿಕೊಂಡು  ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.

ಲಾಕರ್ ಓಪನ್ ಮಾಡಿ 1.8 ಕೆಜಿಯ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಎಲ್ಲವನ್ನು ದೋಚಿಕೊಂಡು ಹೋಗಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ನೇರವಾಗಿ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.

ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲಿಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ ನನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

Published

on

ಹುಬ್ಬಳ್ಳಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು ಎನ್ನಲಾಗಿದೆ.

ಬೇಸಿಗೆಯ ಸೆಕೆ ತಾಳಲಾರದೆ ತಂಪಾಗಲು ಇಬ್ಬರು ಸ್ನೇಹಿತರು ಮನೆ ಸಮೀಪ ಇರುವ ನಿರ್ಮಾಣ ಹಂತದ RNS ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ತೆರಳಿದ್ದರು. ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಮನೆಗೆ ಮರುಳಲಿಲ್ಲ. ಆ ವೇಳೆ ಇಬ್ಬರು ಹೊಂಡದಲ್ಲಿ ಬಿದ್ದಿರೋದನ್ನು ಗಮನಿಸಿದ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನನಾ ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page