Connect with us

LATEST NEWS

ಸೈಬರ್ ವಂಚಕರಿಗೆ ಬಿಸಿ ಮುಟ್ಟಿಸಲು ಮುಂದಾದ ಕೇಂದ್ರ ಸರ್ಕಾರ; ಇನ್ಮುಂದೆ ಮೊಬೈಲ್‌ನಲ್ಲಿ ಈ ಆಪ್ ಕಡ್ಡಾಯ!?

Published

on

ನವದೆಹಲಿ: ದೇಶದಲ್ಲಿ ಸೈಬರ್ ವಂಚಕರ ಜಾಲಕ್ಕೆ ಬಿದ್ದು ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಗಂಭೀರ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರ ಇನ್ಮುಂದೆ ಮೊಬೈಲ್‌ನಲ್ಲಿ ಸರ್ಕಾರದ ವತಿಯಿಂದಲೇ ನಿರ್ಮಾಣ ಮಾಡಿರುವ ಆಪ್‌ವೊಂದನ್ನ ಇನ್‌ಸ್ಟಾಲ್ ಮಾಡುವಂತೆ ಸ್ಮಾರ್ಟ್ ಫೋನ್ ತಯಾರಕರಿಗೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಹೌದು, ಕೇಂದ್ರ ಸಂವಹನ ಸಚಿವಾಲಯವು ಮೊಬೈಲ್ ಹ್ಯಾಂಡ್‌ಸೆಟ್‌ಗಳಲ್ಲಿ ಹೊಸ ಮೊಬೈಲ್ ಅಪ್ಲಿಕೇಶನ್ ಸ್ಥಾಪಿಸಲು ಸಜ್ಜಾಗಿದೆ. ಈ ಆಪ್‌ಗಳು ಸೈಬರ್ ವಂಚನೆ, ಫೇಕ್ ಕಾಲ್‌ಗಳನ್ನು ತಡೆಯುವುದಲ್ಲದೇ ಹಲವು ಸಮಸ್ಯೆಗಳಿಗೆ ಪರಿಹಾರವಾಗಲಿದೆ.

ಭಾರತದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಅಪ್ಲಿಕೇಶನ್‌ಗಳನ್ನು ಕಡ್ಡಾಯವಾಗಿ ಇನ್‌ಸ್ಟಾಲ್ ಮಾಡಬೇಕೆಂದು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್ ತಯಾರಿಕರಿಗೆ ಸೂಚಿಸಿದೆ. ಈ ಆ್ಯಪ್ ಅನ್ನ ಇನ್‌ಸ್ಟಾಲ್ ಮಾಡಲು 90 ದಿನಗಳನ್ನು ನೀಡಲಾಗಿದ್ದು, ಅದನ್ನು ಅನ್ ಇನ್‌ಸ್ಟಾಲ್ ಮಾಡುವ ಆಯ್ಕೆ ನೀಡಬಾರದು ಎಂದು ಸಚಿವಾಲಯ ಆದೇಶದಲ್ಲಿ ಹೇಳಿದೆ.

ಅದರಲ್ಲೂ ಈಗಾಗಲೇ ಬಳಕೆಯಲ್ಲಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಈ ಆಪ್ ಲಭ್ಯವಾಗುವಂತೆ ಮಾಡಬೇಕು ಎಂದು ಸೂಚನೆ ನೀಡಿದೆ. ಈ ಆದೇಶವನ್ನು ಬಹಿರಂಗಗೊಳಿಸದೆ, ಸ್ಮಾರ್ಟ್‌ಫೋನ್ ತಯಾರಕರಿಗೆ ಖಾಸಗಿಯಾಗಿ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಏನಿದು ಸಂಚಾರ್ ಸಾಥಿ ಆ್ಯಪ್?
ಮೇ. 2023ರಲ್ಲಿ ‘ಸಂಚಾರ್ ಸಾಥಿ’ ಪೋರ್ಟಲ್ ತೆರೆಯಲಾಗಿದ್ದು, ಅದರ ಮುಂದುವರಿದ ಭಾಗವಾಗಿ ಈ ಆಪ್ ಅಭಿವೃದ್ದಿಪಡಿಸಲಾಗಿದೆ. ಈ ವರ್ಷದ ಜನವರಿಯಲ್ಲಿ ದೂರಸಂಪರ್ಕ ಇಲಾಖೆಯು ಆಂಡ್ರಾಯ್ಡ್ ಹಾಗೂ ಐಒಎಸ್ ಬಳಕೆದಾರರಿಗೆ ಈ ಆಪ್ ಬಿಡುಗಡೆ ಮಾಡಿದೆ.

ಈ ಆಪ್‌ನ ಉಪಯೋಗಗಳು?

  • ಈ ಆಪ್‌ನ್ನು ಇನ್‌ಸ್ಟಾಲ್ ಮಾಡಿದ ಬಳಿಕ ಮೊಬೈಲ್ ಕಳ್ಳತನವಾದರೆ ಅಥವಾ ಕಳೆದುಹೋದರೆ ಬ್ಲಾಕ್ ಮಾಡಬಹುದು. ಅಷ್ಟೇ ಅಲ್ಲದೇ ಈ ಫೋನ್ ದೇಶದ ಬೇರೆ ಕಡೆ ಬಳಕೆಯಾಗುತ್ತಿದ್ದರೂ ಕಾನೂನು ಸಂಸ್ಥೆಗಳಿಗೆ ಎಲ್ಲಿ ಈ ಫೋನ್ ಸಕ್ರಿಯವಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ.
  • ಸೈಬರ್ ಅಪರಾಧ, ನಕಲಿ ಐಇಎಂಐ ಸಂಖ್ಯೆ ಬಳಸಿ ನಡೆಸುವ ಕೃತ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಆ್ಯಪ್ ಇನ್‌ಸ್ಟಾಲ್ ಮಾಡಲು ಕಡ್ಡಾಯ ಮಾಡಿದೆ.
  • ಈ ಆಪ್‌ನಲ್ಲಿ ‘ಚಕಾಸು’ (ವಂಚನೆ ಎಂದು ಬಳಕೆದಾರರಿಗೆ ತಿಳಿದು ಬಂದರೆ ರಿಪೋರ್ಟ್ ಮಾಡುವ ವ್ಯವಸ್ಥೆ) ಸೌಲಭ್ಯವಿದ್ದು ವಂಚನೆ ಕರೆ, ಸಂದೇಶ ಹಾಗೂ ವಾಟ್ಸ್ಆಪ್ ಸಂದೇಶಗಳನ್ನ ಕೂಡ ಬ್ಲಾಕ್ ಮಾಡಬಹುದು.
  • ನಿಮ್ಮ ಹೆಸರಿನಲ್ಲಿ ನೋಂದಣಿಯಾಗಿರುವ ಸಂಖ್ಯೆಗಳನ್ನೂ ಇದರಲ್ಲಿ ಪರಿಶೀಲನೆ ಮಾಡಬಹುದು. ಅನಧೀಕೃತ ನೋಂದಣಿ ಬಗ್ಗೆ ವರದಿ ಮಾಡಬಹುದು.
  • ಇದರಲ್ಲಿ ನೊ ಯುವರ್ ಮೊಬೈಲ್ (ಕೆವೈಎಂ) ಎನ್ನುವ ಆಯ್ಕೆ ಕೂಡ ಇದ್ದು, ಬಳಕೆದಾರರು ತಮ್ಮ ಸ್ಮಾರ್ಟ್ ಫೋನ್‌ಗಳ ಅಧಿಕೃತತೆಯನ್ನು ಪರಿಶೀಲಿಸಬಹುದು.
  • ಈ ಆ್ಯಪ್ 50 ಲಕ್ಷಕ್ಕೂ ಅಧಿಕ ಡೌನ್‌ಲೋಡ್ ಆಗಿದ್ದು, 37 ಲಕ್ಷಕ್ಕೂ ಅಧಿಕ ಕಳ್ಳತನ ಅಥವಾ ಕಳೆದುಹೋದ ಮೊಬೈಲ್ ಪತ್ತೆಗೆ ಹಾಗೂ 3 ಕೋಟಿಗೂ ಅಧಿಕ ನಕಲಿ ನೋಂದಣಿಯನ್ನು ರದ್ದು ಮಾಡಲು ಸಹಾಯಕವಾಗಿದೆ.

ಇದನ್ನೂ ಓದಿ: ಬೆಂಗಳೂರನ್ನು ಭಾರತದಲ್ಲೇ ಅತ್ಯುತ್ತಮ ಆಹಾರ ನಗರ ಎಂದ ವಿದೇಶಿಗ!

ಆಪ್ ಬಳಕೆಗೆ ವಿರೋಧವೇಕೆ?
ಬಳಕೆದಾರರ ಅನುಮತಿಯಿಲ್ಲದೇ ಸರ್ಕಾರವೊಂದರ ಆ್ಯಪನ್ನು ಇನ್‌ಸ್ಟಾಲ್ ಮಾಡುವುದು ಖಾಸಗಿ ಹಕ್ಕು ಉಲ್ಲಂಘನೆ ಮಾಡಿದಂತೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್ ಈ ನಡೆಯನ್ನ ಟೀಕಿಸಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನನ್ನು ಮೇಲ್ವಿಚಾರಣೆ ಮಾಡುವ ಒಂದು ಡಿಸ್ಟೋಪಿನಿಯನ್ ಕಣ್ಗಾವಲು ಎಂದು ಹೇಳುವ ಮೂಲಕ ಆಪ್‌ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

 

 

 

 

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page