Connect with us

bangalore

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!

Published

on

ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ರಿಲೀಸ್​ ಆಗಲಿದೆ.

 

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.

ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.

ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.

ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.

ಹೌದು ..ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ರಿಲೀಸ್​ ಆಗಲಿದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.

ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.

 

bangalore

ಮತ್ತೆ ಆವರಿಸುತ್ತಿರುವ ಮುಂಗಾರು ; ಸಿಡಿಲು, ಮಿಂಚು ಸಹಿತ ರಾಜ್ಯಾದ್ಯಂತ ಅಲ್ಲಲ್ಲಿ ಮಳೆ

Published

on

ಬಳ್ಳಾರಿ/ ಬೆಂಗಳೂರು/ದ.ಕ/ಉಡುಪಿ : ಒಂದೊಮ್ಮೆ ಭಾರೀ ಆರ್ಭಟಿಸಿ ಬಳಿಕ ಕೊಂಚ ತಣ್ಣಗಾಗಿದ್ದ ಮುಂಗಾರು ಪೂರ್ವ ಮಳೆ ಮತ್ತೆ ರಾಜ್ಯಾದ್ಯಂತ ಆವರಿಸಿದೆ. ನಿನ್ನೆ (ಮೇ.13) ಒಂದೇ ದಿನ ರಾಜ್ಯಾದ್ಯಂತ ಅಲ್ಲಲ್ಲಿ ಸಿಡಿಲು, ಮಿಂಚು ಸಹಿತ ವರುಣನ ಆರ್ಭಟ ಜೋರಾಗಿಯೇ ಇತ್ತು.

ಬಳ್ಳಾರಿಯಲ್ಲಂತೂ ವರುಣನಾರ್ಭಟ ಜೋರಾಗಿಯೇ ಇತ್ತು ಮಾತ್ರವಲ್ಲದೆ, ಅಪಾರ ಹಾನಿಯೂ ಸಂಭವಿಸಿದೆ. ಮೊದಲೇ ಟ್ರಾಫಿಕ್ ಜಾಮ್ ಹೆಚ್ಚಿರುವ ಬೆಂಗಳೂರಿನಲ್ಲಿ ನಿನ್ನೆ ಮತ್ತೂ ಅಧಿಕ ಹೊತ್ತು ಜಾಮ್ ಆಘಿತ್ತು ಮಾತ್ರವಲ್ಲದೆ, ಬಸ್‌ ಒಳಗೂ ನೀರು ನುಗ್ಗಿ ಪ್ರಯಾಣಕ್ಕೆ ತೊಂದರೆ ನಿಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲೂ ಅಲ್ಲಲ್ಲಿ ಜೋರು ಮಳೆ ಸುರಿದಿದೆ.

ಬಳ್ಳಾರಿಯಲ್ಲಿ ಸಿಡಿಲು ಬಡಿದು ಪ್ರಾಣಹಾನಿ :

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಕುರಿಗಾಹಿಗಳು ಬಲಿಯಾಗಿದ್ದಾರೆ. ಬೀರಪ್ಪ (45), ಸುನೀಲ (26), ವಿನೋದ್ (14) ಮೃತ ದುರ್ದೈವಿಗಳು. ಕುರಿ ಮೇಯಿಸಲು ತೆರಳಿದ್ದಾಗ ಜೋರು ಮಳೆ ಬಂದಿದೆ. ಈ ವೇಳೆ, ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕುಡಪಲಿ ಗ್ರಾಮದ ರೈತ ಸುನೀಲ ಕಾಳೇರ (29), ಹಾನಗಲ್ಲ ತಾಲೂಕಿನ ಕೊಂಡೋಜಿ ಗ್ರಾಮದಲ್ಲಿ ವೃದ್ದೆ ಮರಿಯಮ್ಮ ನಾಯ್ಕ‌ರ್ (60) ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್‌ಜಾಮ್, ಬಸ್‌ ಒಳಗೂ ನೀರು :

ಬೆಂಗಳೂರಿನಲ್ಲಿ ಸುರಿದ ಗುಡುಗು, ಗಾಳಿ ಸಹಿತ ಭಾರಿ ಮಳೆಗೆ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್, ಮೈತ್ರಿ ಸರ್ಕಲ್, ವಿಧಾನಸೌಧ, ಶಿವಾನಂದ ಸರ್ಕಲ್, ಕೆ.ಆ‌ರ್. ಸರ್ಕಲ್ ಸುತ್ತಮುತ್ತ ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮಾನ್ಯತಾ ಟೆಕ್ ಪಾರ್ಕ್‌ ಬಳಿ ಬಿಎಂಟಿಸಿ ಬಸ್ ಒಳಗೆ ಮಳೆ ನೀರು ನುಗ್ಗಿದೆ. ಭಾರಿ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ರಸ್ತೆಯಿಂದ ಬಸ್‌ ಒಳಭಾಗಕ್ಕೆ ಮಳೆ ನೀರು ಹರಿದಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆ :

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಉಡುಪಿ ಜಿಲ್ಲೆಯಲ್ಲೂ ಸಿಡಿಲು, ಮಿಂಚು ಸಹಿತ ಉತ್ತಮ ಮಳೆಯಾಗಿದೆ.

Continue Reading

bangalore

ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ; ತನಿಖೆ ನಡೆಸುವಂತೆ ಸಾರಿಗೆ ಸಚಿವ ಆದೇಶ

Published

on

ಬೆಂಗಳೂರು : ಬಸ್ ತುಂಬಾ ಜನ ಇದ್ದರೂ ಚಾಲಕ​ ಬಸ್​ ನಿಲ್ಲಿಸಿ ಚಾಲಕ​ ನಮಾಜ್ ಮಾಡಿರುವ ಘಟನೆ ರಾಜ್ಯದ ರಾಜಧಾನಿಯಲ್ಲಿ ನಡೆದಿತ್ತು. ಈ ಸನ್ನಿವೇಶವನ್ನು ಮೊಬೈಲ್‌ನಲ್ಲೆ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ವಿಡಿಯೋ ಫುಲ್ ವೈರಲ್ ಆಗಿತ್ತು. ಈ ಘಟನೆ ಕುರಿತು ತನಿಖೆ ನಡೆಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಂಗ ಎಂ. ಗೆ ಸೂಚನೆ ನೀಡಿದ್ದಾರೆ.

ಏನಿದು ಘಟನೆ ?

ಏ.29 ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ.  ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ‍್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ, ಬಸ್‌ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಖಂಡನೀಯ.

‘ಬಸ್‌ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋ ಕುರಿತು ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ‌ ಕ್ರಮ ಜರುಗಿಸಿ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ’ ಎಂದು ಸಾರಿಗೆ ಸಚಿವ ಆದೇಶಿಸಿದ್ದಾರೆ.

Continue Reading

bangalore

ರಸ್ತೆ ಮಧ್ಯೆಯೇ ಕಾಲೇಜು ಪ್ರಾಧ್ಯಪಕನ ಮೇಲೆ ಹಲ್ಲೆ; ಮೂವರು ಅರೆಸ್ಟ್

Published

on

ಮಂಗಳೂರು/ಬೆಂಗಳೂರು : ಎಂಥಾ ವಿಚಿತ್ರ ಜನರಿರುತ್ತಾರೆ ಎಂದು ಹೇಳುವುದೂ ಅಸಾಧ್ಯ. ಇದು ಸರಿಯಲ್ಲ ತಪ್ಪು ಎಂದು ಹೇಳುವ ಹಾಗೆಯೂ ಇಲ್ಲ. ಬಿಸಿ ರಕ್ತ ಕುದಿಯುತ್ತೆ. ಹಲ್ಲೆ ಮಾಡಲು ಸಹ ಹಿಂಜರಿಯುವುದಿಲ್ಲ. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯ ರಾಜಧಾನಿಯಲ್ಲೂ ನಡೆದಿದೆ. ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಎಂಬವರ ಮೇಲೆ ಯುವಕರು ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ರೋಡ್ ರೇಜ್ ಪ್ರಕರಣ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಅದೇ ಸಂದರ್ಭದಲ್ಲೇ ಈ ಘಟನೆಯೂ ನಡೆದಿತ್ತು.

ಅಷ್ಟಕ್ಕೂ ನಡೆದಿದ್ದೇನು ..?

ಕುಮಾರಸ್ವಾಮಿ ಲೇಔಟ್​ನ  ಜೆಹೆಚ್ ಬಿಸಿ ಲೇಔಟ್​ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಏಪ್ರಿಲ್ 21 ರಂದು ಸಂಜೆ 6 ರಿಂದ 7 ಗಂಟೆಯ ಸಮಯದಲ್ಲಿ  ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ : ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ; ಅಂಕಪಟ್ಟಿಯಲ್ಲಿ ನಂ.1

ಸ್ಥಳೀಯರೊಬ್ಬರು ಈ ಅಮಾನುಷ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಬಳಿಕ  ಕೆಎಸ್ ಲೇಔಟ್ ಪೊಲೀರು ಈ ಘಟನೆ ಕುರಿತು ಪ್ರಕರಣ ದಾಖಲಿಸಿ ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page