Connect with us

DAKSHINA KANNADA

Udupi: ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ತೀವ್ರಗೊಂಡ ಕಡಲ್ಕೊರೆತ..!

Published

on

ಕರಾವಳಿಯಲ್ಲಿ ಸುರಿದ ಬಿರುಸಿನ ಮಳೆ, ಗಾಳಿಗೆ ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ಜು.3ರಂದು ಕಡಲ್ಕೊರೆತ ಉಂಟಾಗಿದೆ. 

ಪಡುಬಿದ್ರಿ: ಕರಾವಳಿಯಲ್ಲಿ ಸುರಿದ ಬಿರುಸಿನ ಮಳೆ, ಗಾಳಿಗೆ ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ಜು.3ರಂದು ಕಡಲ್ಕೊರೆತ ಉಂಟಾಗಿದೆ.

ಕಡಲ ತಡಿಯ ಉಸುಕಿನಲ್ಲಿ ಉಂಟಾಗಿರುವ ಭಾರಿ ಗುಳಿಯ ಪರಿಣಾಮ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಟ ಶಂಕರ ಎಂ. ಅಮೀನ್‌ ಅವರ ಮನೆ ಬಳಿ ಸುಮಾರು 50 ಮೀ. ಭಾಗದಲ್ಲಿ ಕಡಲ್ಕೊರೆತ ಉಂಟಾಗಿದೆ.

ಕಡಲಿನ ಅಬ್ಬರದ ತೆರೆಗಳಿಗೆ ಈಗಾಗಲೇ ಸುಮಾರು 4 ತೆಂಗಿನ ಮರಗಳು, ಪಡುಬಿದ್ರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ವಿದ್ಯುತ್‌ ಕಂಬ ನೆಲಕಚ್ಚಿದೆ.

ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಯಾಕ್ಸ್ ಅಂಗಳದ ಭಾಗ, ಹಲವು ತೆಂಗಿನ ಮರಗಳು ಹಾಗೂ ಕಾಡಿಪಟ್ಟ ಕೈರಂಪಣಿ ಫಂಡ್‌ಗೆ  ಹಾನಿಯಾಗಿದೆ.

ಗೋದಾಮು ಒಳಗೆ ಇದ್ದ ಬೆಲೆಬಾಳುವ ದೋಣಿಗಳ ಸಹಿತ ಸಾಮಾನು ಸರಂಜಾಮುಗಳನ್ನು ಫಂಡಿನ ಸದಸ್ಯರು ತೆರವುಗೊಳಿಸಿದ್ದಾರೆ.

ಕಳೆದ ಬಾರಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮುತುವರ್ಜಿಯಲ್ಲಿ ಪಡುಬಿದ್ರಿ ಮುಖ್ಯ ಬೀಚ್ ಹಾಗೂ ಕಾಡಿಪಟ್ಟಗಳಲ್ಲಿ ನಿರ್ಮಿಸಲಾದ ತಡೆಗೋಡೆಯ ಕಾಮಗಾರಿಯ ನಡುವೆ ಖಾಸಗಿ ವ್ಯಕ್ತಿಯೊಬ್ಬರ ಮನವಿಯಂತೆ ಸಮುದ್ರ ತೀರ ಪ್ರವೇಶಕ್ಕಾಗಿ ಕೈಬಿಡಲಾಗಿದ್ದ ಸುಮಾರು 50 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲೇ ಈ ಕಡಲ್ಕೊರೆತ ಕಾಣಿಸಿಕೊಂಡಿದೆ.

2-3 ವರ್ಷಗಳಿಂದೀಚೆಗೆ ನಡೆಸಲಾಗಿರುವ ತಡೆಗೋಡೆ ಕಾಮಗಾರಿಗಳ ಕುರಿತು ಗುತ್ತಿಗೆದಾರರಿಗೆ ಸರಕಾರದ ವತಿಯಿಂದ ಬಾಕಿಯಿರುವ ಹಣದ ಪಾವತಿಯಾಗಿಲ್ಲ.

ಪ್ರಾಕೃತಿಕ ವಿಕೋಪ ನಿಧಿಯಿಂದಲೂ ಈ ತಡೆಗೋಡೆ ಮತ್ತು  ತುರ್ತು ಕಾಮಗಾರಿಗಳನ್ನು ಹೊರತುಪಡಿಸಿರುವುದು ಸರಿಯಲ್ಲ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಕೋ ಆರ್ಡಿನೇಟರ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನ್ ಚಂದ್ರ ಜೆ. ಪಡುಬಿದ್ರೆ ಗ್ರಾಮ ಲೆಕ್ಕಾಧಿಕಾರಿ ಮಥಾಯಿ, ಪಿ.ಎಂ. ಹಾಗೂ ಗ್ರಾಮ ಸಹಾಯಕ ಜಯರಾಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿ ನೀಡಿದ್ದಾರೆ.

ಕಾಪು ತಹಸಿಲ್ದಾರ್ ಶ್ರೀನಿವಾಸ ಮೂರ್ತಿ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಗ್ರಾಮ ಲೆಕ್ಕಾಧಿಕಾರಿಗಳ ವರದಿಯ ಮೇರೆಗೆ ಬಂದರು ಮತ್ತು ಮೀನುಗಾರಿಕಾ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಿ ಈ ಪ್ರದೇಶದಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.

DAKSHINA KANNADA

ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್‌ ಆದ ಕೋಟೆಕಾರ್ ಬ್ಯಾಂಕ್ ದರೋಡೆ ಆರೋಪಿ

Published

on

ಉಳ್ಳಾಲದ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಮುರುಗನ್ ಡಿ ಇದೀಗ ಆಸ್ಪತ್ರೆಯಿಂದ ಜೈಲು ಸೇರಿದ್ದಾನೆ.

ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ವೇಳೆ ಬಾಲ ಬಿಚ್ಚಲು ಹೋಗಿ ಪೊಲೀಸರ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ. ಕರ್ನಾಟಕ ಕೇರಳ ಗಡಿ ಭಾಗದ ಗ್ರಾಮವಾಗಿರುವ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಉಳ್ಳಾಲ ಠಾಣಾಧಿಕಾರಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮುರುಗನ್ ಡಿ ಕಾಲಿಗೆ ಗುಂಡು ಹಾರಿಸಿದ್ದರು.

ಇದೀಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಆರೋಪಿ ಮುರುಗನ್ ಡಿ ಯನ್ನು ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಗಿದೆ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇನ್ನೂ ಆರೋಪಿಗಳ ಬಂಧನವಾಗಬೇಕಾಗಿದ್ದು, ಆರೋಪಿಗಳಿಗೆ ಸಹಕರಿಸಿದ ಸ್ಥಳೀಯ ವ್ಯಕ್ತಿ ಯಾರು ಎಂಬುವುದು ಕೂಡಾ ಬಯಲಾಗಬೇಕಾಗಿದೆ.

Continue Reading

DAKSHINA KANNADA

ಹರಿಪಾದೆ ಜಾರಂದಾಯ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್

Published

on

ಮುಲ್ಕಿ : ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾದರು.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು.

ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಒಪ್ಪಿಕೊಂಡರು. ಮಾದ್ಯಮದೊಂದಿಗೆ ಮಾತನಾಡಿದ ವಿಶಾಲ್ ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ.

ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ನಿಧನ

ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ ತುಂಬಾ ಖುಷಿ ನೀಡಿದೆ. ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ, ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕಥೆ ನಡೆಯುತ್ತಿದೆ ಎಂದರು.

Continue Reading

BANTWAL

ತುಂಬೆ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೇರಿದ ಲಾರಿ

Published

on

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೆ ಲಾರಿ ಹತ್ತಿ ಸುಮಾರು 100 ಮೀ ನಷ್ಟು ಚಲಿಸಿ ನಿಂತಿದ್ದು, ಬಳಿಕ ಡ್ರೈವರ್ ಸೀಟಿನಲ್ಲಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ತುಂಬೆ ಸಮೀಪ ನಡೆದಿದೆ.

ಲಾರಿ ಚಾಲಕನನ್ನು ಕೂಡಲೇ ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಡಿವೈಡರ್ ಮೇಲೆ ಹಾಕಿದ್ದ ರಸ್ತೆ ಸೂಚಕಾ ಫಲಕಕ್ಕೆ ಹಾನಿಯಾಗುವುದು ಬಿಟ್ಟರೆ ಬೇರೆ ಯಾವೂದೇ ರೀತಿಯ ತೊಂದರೆ ಆಗಲಿಲ್ಲ.

ಲಾರಿಯು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page