Connect with us

ಕೊರೊನಾದಿಂದ ಸಾವನ್ನಪ್ಪಿದ್ದ ಮಹಿಳೆಯ ಶವ ಸಂಸ್ಕಾರಕ್ಕೆ ಮಂಗಳೂರಿನ ಸ್ಮಶಾನಗಳಲ್ಲಿ ತೀವ್ರ ಆಕ್ಷೇಪ..!

Published

on

ಕೊರೊನಾದಿಂದ ಸಾವನ್ನಪ್ಪಿದ್ದ ಮಹಿಳೆಯ ಶವ ಸಂಸ್ಕಾರಕ್ಕೆ ಮಂಗಳೂರಿನ ಸ್ಮಶಾನಗಳಲ್ಲಿ ತೀವ್ರ ಆಕ್ಷೇಪ..!

ಮಂಗಳೂರು : ಬಂಟ್ವಾಳದ ಕೊರೋನಾ ಪಾಸಿಟಿವ್ ವೃದ್ದೆ ಸಾವು ಪ್ರಕರಣದಲ್ಲಿ ಮೃತದೇಹದ ಅಂತ್ಯ ಸಂಸ್ಕಾರ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಗೊಂದಲಕ್ಕೀಡಾಗಿದೆ.

ಇಂದು ಸಂಜೆ ‌ಮೃತಪಟ್ಟ ಬಂಟ್ವಾಳ ನಿವಾಸಿ ವೃದ್ದೆಯ ಶವ ಮಂಗಳೂರಿನ ಸ್ಮಶಾನಗಳಲ್ಲಿ  ಸಂಸ್ಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಮಂಗಳೂರಿನ ನಂದಿಗುಡ್ಡೆ, ಪಚ್ಚನಾಡಿ, ಬೋಳೂರು,ಶಕ್ತಿನಗರ, ಮೂಡುಶೆಡ್ಡೆ  ಸ್ಮಶಾನಗಳಲ್ಲಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಸ್ಕಾರಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೃತದೇಹ ಸುಡುವ ಕಾರಣ ವೈರಸ್ ಹರಡುವ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದು.ಶಾಸಕ ವೇದವ್ಯಾಸ್ ಕಾಮತ್ ಮತ್ತು ಭರತ್‌ ಶೆಟ್ಟಿ ಅವರ ಮನವೊಲಿಕೆಗೂ ಜನ ಒಪ್ಪದೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಗಳೂರು ನಗರದ ರುದ್ರಭೂಮಿಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.

ಇನ್ನು ಗ್ರಾಮಸ್ಥರು  ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಆಗಮಿಸಿ ಗ್ರಾಮಸ್ಥರ ಪರ ನಿಂತು ಶವದ ಅಂತ್ಯ ಸಂಸ್ಕಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನನ್ನ ಕ್ಷೇತ್ರ ವ್ಯಾಪ್ತಿಯ ರುದ್ರ ಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಬಿಡಲ್ಲ, ಇಲ್ಲಿ ಶವ ಸುಟ್ಟರೆ ಏನು ಸಮಸ್ಯೆ ಇದೆ ಅಥವಾ ಇಲ್ಲ ಅನ್ನೋದು ಬೇರೆ ವಿಷಯವಾಗಿದೆ.

ಆದರೆ ನನ್ನ ಕ್ಷೇತ್ರದಲ್ಲಿ ನಾನು ಶವ ಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು  ಸ್ಥಳದಲ್ಲಿದ್ದ ಪೊಲೀಸರಿಗೆ ಖಡಕ್  ಮಾತುಗಳಲ್ಲಿ ಶಾಸಕ ಭರತ್ ಶೆಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಕಮಿಷನರ್ ಮತ್ತು ಜಿಲ್ಲಾಧಿಕಾರಿ ಗಳಿಗೂ ಶವ ಸಂಸ್ಕಾರ ನಡೆಸದಂತೆ ತಾಕಿತು ಮಾಡಿದ ಭರತ್ ಶೆಟ್ಟಿ ಜನರು ಒಪ್ಪಿದರಷ್ಟೇ ಶವ ಸಂಸ್ಕಾರಕ್ಕೆ ಒಪ್ಪಿಗೆ ನೀಡುವುದಾಗಿ ಹೇಳಿದ್ದಾರೆ.

ಸದ್ಯ ಮೃತ ಮಹಿಳೆಯ ಶವ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಅಂತ್ಯಸಂಸ್ಕಾರಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲದೇ ಜಿಲ್ಲಾಡಳಿತ ಗೊಂದಲದಲ್ಲಿದೆ.

ಮೊನ್ನೆ ಮಹಿಳೆ ಸಾವನ್ನಪ್ಪಿದಾಗಲೂ ಬೋಳೂರು ಸ್ಮಶಾನದಲ್ಲಿ ಜನರಿಂದ ಆಕ್ಷೇಪ ವ್ಯಕ್ತವಾಗಿತ್ತು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಬಾವಿಗೆ ಹಾರಿ ಜೀವಾಂತ್ಯಗೊಳಿಸಿದ ಬಸ್ ಏಜೆಂಟ್

Published

on

ಉಡುಪಿ: ಬಸ್ ಏಜೆಂಟ್ ಓರ್ವರು ಮನೆಯ‌ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ.

ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.  ಸಮಾಜಸೇವಕ ಈಶ್ವರ್ ಮಲ್ಪೆ ತಂಡದವರು ಕಾರ್ಯಾಚರಣೆ ಮೂಲಕ ಶವವನ್ನು ಬಾವಿಯಿಂದ ಮೇಲೆತ್ತಿದರು.

ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಕರಿಸಿದರು. ನಗರ ಪೋಲಿಸ್ ಠಾಣೆಯ ಎಸ್. ಐ ನಾರಾಯಣ, ಹೆಡ್  ಕಾನ್ಸ್ಟೇಬಲ್  ನೇತಾವತಿ ಕಾನೂನು ಪ್ರಕ್ರಿಯೆ ನಡೆಸಿದರು.

Continue Reading

LATEST NEWS

ಹೆಲ್ಮೆಟ್‌ ಧರಿಸದ ಸವಾರನನ್ನು ನಿಲ್ಲಿಸಿ ದಂಡ ಹಾಕದೇ ಕಳುಹಿಸಿದ ಪೊಲೀಸ್‌ ಸಿಬ್ಬಂದಿ!

Published

on

ಶಹದೋಲ್: ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಚಾಲನೆ ಹಾಗೂ ಅಪಘಾತಗಳಾಗುವ ಸಂದರ್ಭದಲ್ಲಿ ತಲೆಗೆ ಏಟು ಬೀಳಬಾರದೆನ್ನುವ ಕಾರಣಕ್ಕೆ ಹೆಲ್ಮೆಟ್‌ ಖಡ್ಡಾಯಗೊಳಿಸಿ ಸರಕಾರವೇ ಆದೇಶ ಹೊರಡಿಸಿದೆ. ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ.

ಆದರೆ, ಮಧ್ಯಪ್ರದೇಶದ ಶಹದೋಲ್‌ನಲ್ಲಿ ಸಂಚಾರಿ ಪೊಲೀಸ್ ಹೆಲ್ಮೆಟ್ ಧರಿಸದೇ ಬಂದ ಬೈಕ್ ಸವಾರರನನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಅವರು ಹೇಳಿದ ಉತ್ತರ ಕೇಳಿ ಕಕ್ಕಾಬಿಕ್ಕಿಯಾಗಿದ್ದಾರೆ.

ತನ್ನ ದೊಡ್ಡ ತಲೆಗೆ ಚಿಕ್ಕ ಹೆಲ್ಮೆಟ್ ಸರಿಹೊಂದುವುದಿಲ್ಲ ಎಂದಾಗ ಪೊಲೀಸ್‌ ತನ್ನದೇ ಹೆಲ್ಮೆಟ್‌ ತೆಗೆದು ಸವಾರನ ತಲೆಗೆ ಇಟ್ಟು ನೋಡಿದ್ದಾರೆ. ಆದರೂ ಹೆಲ್ಮೆಟ್‌ ಅವರ ತಲೆಗೆ ಸರಿಹೊಂದಿಲ್ಲ. ಇವರಿಬ್ಬರ ನಡುವಿನ ಸಂವಾದ ಇದೀಗ ಭಾರೀ ವೈರಲ್‌ ಆಗಿದೆ.

“ದಿ ಟ್ರಾಫಿಕ್ ಕಾಪ್” ಎಂದು ಜನಪ್ರಿಯವಾಗಿರುವ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಮತ್ತು ಸೋಶಿಯಲ್ ಇನ್ಫ್ಲುಯೆನ್ಸರ್ ಆಗಿರುವ ವಿವೇಕಾನಂದ ತಿವಾರಿ, ಹೆಲ್ಮೆಟ್ ಇಲ್ಲದೆ ಮೋಟಾರ್‌ಸೈಕಲ್ ಸವಾರಿ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ತಡೆದಿದ್ದಾರೆ.

ಸುರಕ್ಷತಾ ಉಲ್ಲಂಘನೆಯ ಬಗ್ಗೆ ಪ್ರಶ್ನಿಸಿದಾಗ, ಸವಾರ ಬೈಕ್‌ನಿಂದ ಇಳಿದು ಮಾರುಕಟ್ಟೆಯಲ್ಲಿ ತನ್ನ ಗಾತ್ರದ ಹೆಲ್ಮೆಟ್ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಆರಂಭದಲ್ಲಿ ಸಂಶಯ ವ್ಯಕ್ತಪಡಿಸಿದ ತಿವಾರಿ, ಸವಾರನ ತಲೆಯ ಮೇಲೆ ತನ್ನದೇ ಆದ ಹೆಲ್ಮೆಟ್ ಹಾಕಲು ಪ್ರಯತ್ನಿಸಿದ್ದಾರೆ. ಹೆಲ್ಮೆಟ್ ಹೊಂದಿಕೆಯಾಗಲಿಲ್ಲ, ನಿಜವಾದ ಕಷ್ಟವನ್ನು ಅರಿತುಕೊಂಡ ಅಧಿಕಾರಿ, ದಂಡ ವಿಧಿಸಲ್ಲ ಎಂದರು.

ಇದನ್ನೂ ಓದಿ: ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

ಅಲ್ಲದೆ ದೊಡ್ಡ ತಲೆಗೆ ಸರಿ ಹೊಂದುವ ಹೆಲ್ಮೆಟ್‌ಗಳನ್ನು ತಯಾರಿಸಿ ಎಂದು ಕಂಪೆನಿಗಳಿಗೆ ಮನವಿ ಮಾಡಿದರು. ಈ ವಿಡಿಯೋ ವೈರಲ್‌ ಆಗಿದ್ದು, ಸ್ಟೀಲ್‌ಬರ್ಡ್ ಕಂಪೆನಿ ಹೆಲ್ಮೆಟ್ಸ್ ಕೂಡ ಪ್ರತಿಕ್ರಿಯೆ ನೀಡಿದೆ. ದೊಡ್ಡ ಹೆಲ್ಮೆಟ್‌ಗಳನ್ನು ತಯಾರಿಸುವುದಾಗಿ ಹೇಳಿದೆ.

Continue Reading

LATEST NEWS

ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

Published

on

ಕೇವಲ 10 ರೂಪಾಯಿಗೆ ಒಂದು ಬಟ್ಟೆ ಇಸ್ತ್ರಿ ಮಾಡುವ ಸಣ್ಣ ಉದ್ಯಮದಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.


ನಳಿನಿ ಉನಾಗರ್ ಎಂಬುವವರು ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಅವರ ಮನೆಯ ಬಳಿಯಿರುವ ಡ್ರೈ ಕ್ಲೀನರ್ ಅಂಗಡಿಯ ಮಾಲೀಕರು ಮತ್ತು ಅವರ ಪತ್ನಿ ಇಬ್ಬರೂ ಸೇರಿ ಸಹಾಯಕರ ನೆರವಿನೊಂದಿಗೆ ಈ ಸಾಧನೆ ಮಾಡುತ್ತಿದ್ದಾರೆ.

ಪ್ರತಿದಿನ ಸುಮಾರು 350 ಬಟ್ಟೆಗಳನ್ನು ತಲಾ 10 ರೂಪಾಯಿಯಂತೆ ಇಸ್ತ್ರಿ ಮಾಡುತ್ತಾರೆ. ಇದರಿಂದ ದಿನಕ್ಕೆ 3,500 ರೂ. ಆದಾಯ ಬರುತ್ತದೆ. ಪ್ರತಿದಿನ ಸರಿಸುಮಾರು 20 ಭಾರೀ ಬಟ್ಟೆಗಳನ್ನು ತಲಾ 350 ರೂ. ರಂತೆ ಡ್ರೈ ಕ್ಲೀನ್ ಮಾಡುತ್ತಾರೆ. ಇದರಿಂದ ದಿನಕ್ಕೆ 7,000 ರೂ. ಆದಾಯ ಬರುತ್ತದೆ. ಎಲ್ಲಾ ಸೇರಿ ದಿನಕ್ಕೆ ಸುಮಾರು 10,500 ರೂಪಾಯಿ ಗಳಿಸುತ್ತಾರೆ. ತಿಂಗಳಿಗೆ 27 ದಿನ ಕೆಲ್ಸ ಮಾಡಿದ್ರೂ ಒಟ್ಟು ಆದಾಯ ಸುಮಾರು 2.8 ಲಕ್ಷ ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

ಅಂಗಡಿ ಅವರದ್ದೇ ಆದ ಕಾರಣ ಬಾಡಿಗೆ ಇರುವುದಿಲ್ಲ. ವಿದ್ಯುತ್ ಬಿಲ್ ಸುಮಾರು 6,000 ರೂ. ಮತ್ತು ಇಬ್ಬರು ಸಹಾಯಕರ ಸಂಬಳ 40,000 ರೂ. ಕಳೆದರೆ, ಅವರಿಗೆ ತಿಂಗಳಿಗೆ ಅಂದಾಜು 2.3 ಲಕ್ಷ ರೂಪಾಯಿ ಉಳಿಯುತ್ತದೆ.

Continue Reading
Advertisement

Trending

Copyright © 2025 Namma Kudla News

You cannot copy content of this page