Connect with us

LATEST NEWS

ಶಬರಿಮಲೆ ದೇಗುಲ ಇಂದಿನಿಂದ ಓಪನ್‌: ಬಂದು ತೊಂದರೆ ಅನುಭವಿಸಬೇಡಿ ಎಂದ ದೇವಸ್ವಂ ಮಂಡಳಿ

Published

on

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ.

ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ. ಇಂದು ಬೆಳಗ್ಗೆಯಿಂದ ಭಕ್ತರೂ ದೇಗುಲಕ್ಕೆ ಪ್ರವೇಶ ಮಾಡಬಹುದಾಗಿದೆ.

ಇಂದು ಮುಂಜಾನೆ 5 ಗಂಟೆಯಿಂದಲೇ ದೇಗುಲದ ಬಾಗಿಲು ತೆರೆದಿದ್ದು, ಅಕ್ಟೋಬರ್​ 21ರವರೆಗೂ ಭಕ್ತರಿಗೆ ಪ್ರವೇಶಾವಕಾಶ ಇದ್ದು, ಪೂಜೆ ಸಲ್ಲಿಸಬಹುದಾಗಿದೆ.


ಇಂದಿನಿಂದ ಬಾಗಿಲು ತೆರೆದಿದ್ದರೂ ಭಕ್ತರು ಆನ್​ಲೈನ್​ ಮೂಲಕ ಬುಕ್​ ಮಾಡಿಕೊಂಡೇ ಬರಬೇಕಾಗಿದೆ.

ಇತ್ತೀಚೆಗೆ ಆರ್​ಟಿ-ಪಿಸಿಆರ್​ ಟೆಸ್ಟ್​ ಮಾಡಿಸಿ ನೆಗೆಟಿವ್​ ಬಂದ ರಿಪೋರ್ಟ್ ಮತ್ತು ಕೊವಿಡ್​ 19 ಲಸಿಕೆ ಎರಡೂ ಡೋಸ್​ ಆಗಿರುವ ಸರ್ಟಿಫಿಕೇಟ್​​ ತರುವುದು ಕಡ್ಡಾಯ ದೇಗುಲ ಪ್ರವೇಶಕ್ಕೂ ಮೊದಲು ಇವೆರಡೂ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಹಾಗೇ, ಕೊವಿಡ್​ 19 ಕಾರಣದಿಂದ ದೇಗುಲದಲ್ಲಿ ಒಂದು ದಿನಕ್ಕೆ 15000 ಭಕ್ತರಿಗೆ ಮಾತ್ರ ಅವಕಾಶ ಇದೆ. ಶಬರಿಮಲೆ ದೇಗುಲ ಅತ್ಯಂತ ಪ್ರಸಿದ್ಧ ಪಡೆದ ದೇವಾಲಯ.

ಆದರೆ ಇದು ಉಳಿದ ದೇವಸ್ಥಾನಗಳಂತೆ ಪ್ರತಿದಿನ ಬಾಗಿಲು ತೆರೆಯುವುದಿಲ್ಲ. ತಿಂಗಳಲ್ಲಿ 5 ದಿನಗಳು ಮಾತ್ರ ಬಾಗಿಲು ತೆರೆಯಲಾಗುತ್ತದೆ.
ಕೇರಳದಲ್ಲಿ ಸಿಕ್ಕಾಪಟೆ ಮಳೆಸುರಿಯುತ್ತಿದೆ. ಮಳೆಯಿಂದಾದ ಅವಘಡದಿಂದ ಈಗಾಗಲೇ 9ಕ್ಕೂ ಹೆಚ್ಚು ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಇನ್ನೂ ಎರಡು ದಿನ ವಿಪರೀತಿ ಮಳೆ ಸುರಿಯುವ ಕಾರಣ ಆದಷ್ಟು ಭಕ್ತರು ದೇವಾಲಯಕ್ಕೆ ಬಂದು ತೊಂದರೆ ಅನುಭವಿಸಬೇಡಿ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಹೇಳಿದೆ.

ಅದರಲ್ಲೂ ಶಬರಿಮಲೆ ದೇವಾಲಯ ಇರುವ ಪಥನಂತಿಟ್ಟ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಪಂಬಾ ನದಿಯಲ್ಲಿ ನೀರಿನ ಮಟ್ಟ ಅಪಾಯದ ಹಂತ ತಲುಪಿದೆ.

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page