Connect with us

DAKSHINA KANNADA

ರೋಹನ್ ಕಾರ್ಪೋರೇಶನ್‌ ಬ್ರ್ಯಾಂಡ್ ಅಂಬಾಸಿಡರ್ ಆಗಿ ಶಾರೂಕ್ ಖಾನ್‌

Published

on

ಮಂಗಳೂರು: ರೋಹನ್ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಶಾರುಖಾನ್ ಅವರನ್ನು ಘೋಷಿಸಿದೆ.

ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ದಿಗ್ಗಜ ಸಂಸ್ಥೆಯಾಗಿರುವ ಮಂಗಳೂರಿನ ರೋಹನ್ ಕಾರ್ಪೊರೇಷನ್ ತನ್ನ ಬ್ರಾಂಡ್ ರಾಯಭಾರಿಯಾಗಿ ಬಾಲಿವುಡ್‌ನ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಘೋಷಿಸಿದೆ. ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಶಾರುಖಾನ್ ಸಹಿ ಮಾಡುವ ಮೂಲಕ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ.

ರೋಹನ್ ಕಾರ್ಪೊರೇಷನ್ ಕಳೆದ ಮೂರು ದಶಕಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡುತ್ತಿದೆ. ರೋಹನ್ ಸಿಟಿ, ರೋಹನ್ ಸ್ಕ್ವೇರ್‌ನಂತಹ ಯೋಜನೆಗಳ ಮೂಲಕ ಆಧುನಿಕತೆ, ವಿಶ್ವಾಸ ಮತ್ತು ಗುಣಮಟ್ಟದ ಸಂಕೇತವಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಪರಿಸರ ಸಂರಕ್ಷಣೆ ಮತ್ತು ಗ್ರಾಹಕರ ತೃಪ್ತಿಗೆ ಒತ್ತು ನೀಡುವ ಮೂಲಕ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಶಾರುಖ್ ಖಾನ್‌ರಂತಹ ಜಾಗತಿಕ ಐಕಾನ್‌ನನ್ನು ತನ್ನ ಬ್ರ್ಯಾಂಡ್ ರಾಯಭಾರಿಯಾಗಿ ಆಯ್ಕೆ ಮಾಡುವ ಮೂಲಕ ರೋಹನ್ ಕಾರ್ಪೊರೇಷನ್ ತನ್ನ ಯಶಸ್ಸಿನ ಪಯಣದಲ್ಲಿ ಹೊಸ ಶಿಖರವನ್ನು ಮುಟ್ಟಿದೆ.

ಈ ಒಪ್ಪಂದದ ಬಗ್ಗೆ ಮಾತನಾಡಿದ ಶಾರುಖ್ ಖಾನ್, “ರೋಹನ್ ಕಾರ್ಪೊರೇಷನ್‌ನೊಂದಿಗೆ ಕೈಜೋಡಿಸುವುದು ನನಗೆ ಸಂತೋಷದ ಕ್ಷಣ. ಈ ಸಂಸ್ಥೆಯ ಪರಿಶ್ರಮ ಮತ್ತು ಜನರ ಜೀವನವನ್ನು ಉನ್ನತಗೊಳಿಸುವ ದೃಷ್ಟಿಕೋನ ನನ್ನನ್ನು ಆಕರ್ಷಿಸಿದೆ. ಪರಿಸರ ಸಂರಕ್ಷಣೆಯೊಂದಿಗೆ ಆಧುನಿಕ ನಗರ ಜೀವನವನ್ನು ಸಮತೋಲನಗೊಳಿಸುವ ರೋಹನ್‌ನ ಧ್ಯೇಯದಲ್ಲಿ ಭಾಗವಾಗಿರಲು ನಾನು ಉತ್ಸುಕನಾಗಿದ್ದೇನೆ” ಎಂದರು.

ರೋಹನ್ ಕಾರ್ಪೊರೇಷನ್‌ನ ಚೇರ್‌ಮ್ಯಾನ್ ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. “ಶಾರುಖ್‌ಖಾನ್‌ರಂಥ ಜಾಗತಿಕ ಸ್ಟಾರ್ ನಮ್ಮೊಂದಿಗೆ ಸೇರಿದ್ದು ನಮ್ಮ ಸಂಸ್ಥೆಗೆ ಗೌರವ. ಇದು ಕರ್ನಾಟಕ ಮತ್ತು ಇತರೆ ರಾಜ್ಯಗಳಲ್ಲಿ ನಮ್ಮ ವಿಸ್ತರಣೆಗೆ ದಾರಿ ಮಾಡಿಕೊಡುತ್ತದೆ. ನಾವು ಸುಸ್ಥಿರ ಮತ್ತು ಸಮಗ್ರ ನಗರೀಕರಣದತ್ತ ಹೆಜ್ಜೆ ಹಾಕುತ್ತಿದ್ದೇವೆ” ಎಂದು ಹೇಳಿದರು.

ಮಂಗಳೂರಿನಿಂದ ಆರಂಭವಾದ ಈ ಪಯಣವು ಇಂದು ದೇಶದಾದ್ಯಂತ ಗಮನ ಸೆಳೆಯುತ್ತಿದೆ. ಶಾರುಖ್ ಖಾನ್‌ರೊಂದಿಗಿನ ಈ ಸಹಭಾಗಿತ್ವವು ರೋಹನ್ ಕಾರ್ಪೊರೇಷನ್‌ನ ಯಶಸ್ಸಿನ ಕಥೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ. ಭವಿಷ್ಯದಲ್ಲಿ ಈ ಸಂಸ್ಥೆಯಿಂದ ಇನ್ನಷ್ಟು ಆಕರ್ಷಕ, ಆಧುನಿಕ ಮತ್ತು ಸುಸ್ಥಿರ ಯೋಜನೆಗಳನ್ನು ನಿರೀಕ್ಷಿಸಬಹುದು.

DAKSHINA KANNADA

ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ : ಗೃಹ ಸಚಿವ ಪರಮೇಶ್ವರ್

Published

on

ಮಂಗಳೂರು : ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ. ಅದರಲ್ಲಿರುವ ಸಿಬ್ಬಂದಿ ಸಂಖ್ಯೆ ಕಡಿಮೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ, ಜಿ. ಪರಮೇಶ್ವರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕೆಲವು ಕೊ*ಲೆ ಪ್ರಕರಣಗಳಿದಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು  ಸರಿದಾರಿಗೆ ತಂದು ಶಾಂತಿ ಕಾಪಾಡುವ ಉದ್ದೇಶದಿಂದ ರಚಿಸಲಾಗಿರುವ ವಿಶೇಷ ಕಾರ್ಯಪಡೆಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಇದನ್ನೂ ಓದಿ : ಬಾಂ*ಬ್ ಬೆದರಿಕೆ; ದೆಹಲಿಗೆ ಬರುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

ಸದ್ಯದ ಮಟ್ಟಿಗೆ ನಕ್ಸಲ್‌ ನಿಗ್ರಹ ದಳದ ಅಗತ್ಯತೆ ಇಲ್ಲದಿದ್ದರೂ ಯಾವುದಾದರೂ ಸಂದರ್ಭದಲ್ಲಿ ಅಗತ್ಯ ಬಂದರೆ ಬೇಕಾಗುತ್ತದೆ. ಈಗ  ನಮ್ಮ ರಾಜ್ಯದಲ್ಲಿ ನಕ್ಸಲರು ಇಲ್ಲದಿದ್ದರೂ ಒರಿಸ್ಸಾ, ಅಸ್ಸಾಂ ಮೊದಲಾದ ಕಡೆ ನಕ್ಸಲ್‌ ಚಟುವಟಿಕೆ ಇದೆ. ಅಲ್ಲಿಂದ ಇಲ್ಲಿಗೆ ಬರಲಾರರು ಎನ್ನಲಾಗದು. ಅವರು ಬಂದರೆ ತಯಾರಿರಬೇಕೆಂದು ನಕ್ಸಲ್‌ ನಿಗ್ರಹ ಪಡೆಯ ಸ್ವಲ್ಪ ಭಾಗವನ್ನು ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Continue Reading

DAKSHINA KANNADA

ಕಾಸರಗೋಡು: ಗೆಳೆಯನಿಂದಲೇ ನಡೆಯಿತು ವ್ಯಕ್ತಿಯ ಕೊಲೆ

Published

on

ಕಾಸರಗೋಡಿನ ಅಡೂರು ಚಂದನಕ್ಕಾಡ್ ನಲ್ಲಿರುವ ದೈವ ಕಲಾವಿದ, ಸತೀಶ್ (48) ಎಂಬವರ ನಿಗೂಢ ಸಾವು ಕೊಲೆ ಎಂದು ಸಾಬೀತಾಗಿದೆ. ಗೆಳೆಯನೇ ಈತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಚಿದಾನಂದ ಪೊಲೀಸ್ ವಶದಲ್ಲಿರುವ ಆರೋಪಿ. ಸತೀಶ್ ಮಂಗಳವಾರ ಸಂಜೆ ನೆರೆಮನೆಯ ಬಳಿ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಆಂತರಿಕ ಗಾಯಗಳು ಪತ್ತೆಯಾಗಿತ್ತು. ಕುತ್ತಿಗೆಯ ಎಲುಬು ಮುರಿದಿರುವುದು ಕಂಡುಬಂದಿತ್ತು. ತನಿಖೆ ನಡೆಸಿ ಚಿದಾನಂದ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂದಿಸಲಾಗಿದೆ.

ಏನಿದು ಘಟನೆ ?

ಸೋಮವಾರ ಮಧ್ಯಾಹ್ನ ಸತೀಶ್ ಹಾಗೂ ಚಿದಾನಂದ ಸಮೀಪದ ಚೋಮಣ್ಣ ನಾಯ್ಕ್ ಮನೆಯೊಂದರಲ್ಲಿ ಒಟ್ಟಿಗೆ ಸೇರಿದ್ದು, ಈ ಸಂದರ್ಭದಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ಸಂದರ್ಭದಲ್ಲಿ ತಳ್ಳಾಟ ನಡೆದಿದ್ದು, ನೆಲಕ್ಕೆ ಬಿದ್ದ ಸತೀಶ್ ರನ್ನು ಚೋಮಣ್ಣ ನಾಯ್ಕ್ ರ ಮನೆಯ ವರಾಂಡದಲ್ಲಿ ಮಲಗಿಸಿ ಪರಾರಿಯಾಗಿದ್ದನು ಎನ್ನಲಾಗಿದೆ.

READ IN ENGLISH : https://www.nammakudlaenglish.com/kasargod-man-murdered-by-his-own-friend/

ಇದನ್ನೂ ಓದಿ: ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಭೇಟಿ; ಗಾಯಾಳುಗಳನ್ನು ಸಂತೈಸಿದ ಮೋದಿ

ಸತೀಶ್ ಮನೆಗೆ ಬಾರದೆ ಇದ್ದುದರಿಂದ ಸಹೋದರಿ ಮೊಬೈಲ್ ಗೆ ಕರೆ ಮಾಡಿದರೂ ರಿಸೀವ್ ಮಾಡದೆ ಇದ್ದುದರಿಂದ ಶೋಧ ನಡೆಸಿದಾಗ ಸಮೀಪದ ಮನೆಯೊಂದರ ವರಾಂಡದಲ್ಲಿ ಬಿದ್ದಿರುವುದು ಕಂಡು ಬಂದಿದೆ. ಬಳಿಕ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಸತೀಶ್ ನ ಅಂತ್ಯಕ್ರಿಯೆ ಯಲ್ಲಿ ಚಿದಾನಂದ ಪಾಲ್ಗೊಳ್ಳದಿರುವುದು ಈತನ ಮೇಲೆ ಸಂಶಯ ಬರಲು ಕಾರಣವಾಗಿತ್ತು.

Continue Reading

DAKSHINA KANNADA

ಮಂಗಳೂರು : ವಿಶೇಷ ಕಾರ್ಯಪಡೆ ಘಟಕ ಉದ್ಘಾಟನೆ

Published

on

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋ*ಮು ಸಂ*ಘರ್ಷ ನಿಗ್ರಹಕ್ಕಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯಪಡೆ  ಕಚೇರಿ ಕಾರ್ಯಾಚರಣೆ ನಡೆಸಲಿದೆ.

READ IN ENGLISH : https://www.nammakudlaenglish.com/mangaluru-special-task-force-unit-inaugurated/

ಇದನ್ನೂ ಓದಿ : ಉಳ್ಳಾಲ: 12ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವು

ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ, ಅಪರ ಪೊಲೀಸ್ ಮಹಾ ನಿರ್ದೇಶಕ ಎಸ್.ಮುರುಗನ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಶೇಷ ಕಾರ್ಯಪಡೆ  ಘಟಕದ ಡಿಐಜಿಪಿ ಆಗಿರುವ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page