Connect with us

ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್

Published

on

ಉಳ್ಳಾಲ : ಕೊಣಾಜೆ ದೇರಳಕಟ್ಟೆ ಸಮೀಪದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಲವ- ಕುಶ ಜೋಡುಕರೆ ನರಿಂಗಾನ ಜೋಡುಕರೆ ಕಂಬಳೋತ್ಸವಕ್ಕೆ ಶನಿವಾರ ಚಾಲನೆ ದೊರಕಿದ್ದು, ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದರು.

ಸಿಎಂ ಅವರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ಆರತಿ ಬೆಳಗಿ ಸ್ವಾಗತಿಸಲಾಯಿತು. ಸ್ಪೀಕರ್ ಯು ಟಿ ಖಾದರ್ ಸಿಎಂ ಅವರನ್ನು ವೇದಿಕೆಗೆ ಕರೆದುಕೊಂಡು ಬಂದರು. ಸಭಾ ಕಾರ್ಯಕ್ರಮವನ್ನು ಸಿಎಂ ಅವರು ಉದ್ಘಾಟಿಸಿದರು.

ಇದನ್ನೂ ಓದಿ: ನರಿಂಗಾನ ಕಂಬಳದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ; ತುಳುವಿಗೆ ಎರಡನೇ ರಾಜ್ಯಭಾಷೆ ಸ್ಥಾನಮಾನದ ಭರವಸೆ 

ಇಂದಿನ ಕಂಬಳ ಕಾರ್ಯಕ್ರಮಕ್ಕೆ ಬಂದಿದ್ದ ನಟಿ ಶಾನ್ವಿ ಶ್ರೀವಾಸ್ತವ್, ಕಂಬಳದ ಓಟವನ್ನು ಬೆರಗುಗಣ್ಣಿನಿಂದ ವೀಕ್ಷಣೆ ಮಾಡಿದರು. ಮಾತ್ರವಲ್ಲದೆ ಕಂಬಳದ ಓಟವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದುಕೊಂಡರು.

Advertisement
Click to comment

Leave a Reply

Your email address will not be published. Required fields are marked *

BELTHANGADY

ಭೂತದ ಮನೆಯಲ್ಲಿ ನೀರವ ಮೌನ…! ಮನೆಬಿಟ್ಟು ಹೋದ ಕುಟುಂಬ

Published

on

ಬೆಳ್ತಂಗಡಿ: ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದ ಬೆಳ್ತಂಗಡಿಯ ಮಾಲಾಡಿ ಗ್ರಾಮದ ಭೂತದ ಮನೆಯಲ್ಲಿ ಸದ್ಯ ನೀರವ ಮೌನ ಆವರಿಸಿದೆ. ಕಳೆದ ಮೂರು ತಿಂಗಳಿನಿಂದ ಭೂತದ ಉಪಟಳದಿಂದ ಬಳಲಿ ಬೆಂಡಾಗಿರುವ ಕುಟುಂಬ ಮನೆಯನ್ನೇ ಖಾಲಿ ಮಾಡಿ ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಸಲಿಗೆ ಕಳೆದೆರಡು ದಿನಗಳಿಂದ ಈ ಮನೆಯಲ್ಲಿನ ಭೂತದ ಉಪಟಳ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಈ ಮನೆಗೆ ಪ್ರತಿ ನಿತ್ಯ ರಾತ್ರಿಯಾಗುತ್ತಿದ್ದಂತೆ ನೂರಾರು ಜನ ಬಂದು ಭೂತದ ಹುಡುಕಾಟ ನಡೆಸಿದ್ದರು. ಭೂತದ ಇರುವಿಕೆಯ ವಿಚಾರವಾಗಿ ಪರ ವಿರೋಧದ ಚರ್ಚೆಗಳು ಆರಂಭವಾಗಿ ಹಲವರು ಮನೆಯವರ ಕಥೆಯೇ ಸುಳ್ಳು ಎಂದು ಅನುಮಾನ ವ್ಯಕ್ತಪಡಿಸಿದ್ದರು.

ನಮ್ಮ ಕುಡ್ಲ ವಾಹಿನಿ ಈ ಬಗ್ಗೆ ತಜ್ಞರ ಅಭಿಪ್ರಾಯ ಸಂಗ್ರಹಿಸಿದಾಗಲೂ ಇದು ಭೂತದ ಕಾಟ ಇರಲಾರದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಖ್ಯಾತ ಮನೋರೋಗ ತಜ್ಞರು ಹಾಗೂ ಪವಾಡ ರಹಸ್ಯ ಬಯಲು ತಜ್ಞ ಡಾ. ಹುಲಿಕಲ್ ನಟರಾಜ್ ಅವರೂ ಕೂಡಾ ಮನೆಯವರ ಮಾನಸಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದರು.

ಇದೀಗ ಉಮೇಶ್ ಶೆಟ್ಟಿ ಅವರ ಇಡೀ ಕುಟುಂಬ ಭೂತದ ಭಯದಿಂದ ಮನೆಯನ್ನು ಬಿಟ್ಟು ಹೋಗಿದ್ದು, ಸಂಬಂಧಿಕರ ಮನೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ.

Continue Reading

LATEST NEWS

ಆರಿಹೋಯ್ತು 46 ವರ್ಷಗಳಿಂದ ಉರಿಯುತ್ತಿದ್ದ ದೀಪನಾಥೇಶ್ವರ ದೇವಾಲಯದ 3 ದೀಪಗಳು

Published

on

ಮಂಗಳೂರು/ಮುಂಡಗೋಡ : ಎಣ್ಣೆ, ಬತ್ತಿ ಇಲ್ಲದೇ ಸತತ 46 ವರ್ಷಗಳಿಂದ ಉರಿಯುತ್ತಿದ್ದ ಉತ್ತರಕನ್ನಡ  ಜಿಲ್ಲೆಯ ಮುಂಡಗೋಡು ತಾಲೂಕಿನ ಚಿಗಳ್ಳಿಯ ದೀಪನಾಥೇಶ್ವರ ದೇವಾಲಯದ ಮೂರು ದೀಪಗಳು ನಂದಿ ಹೋಗಿವೆ.

1979ರಲ್ಲಿ ಹಚ್ಚಿದ್ದ ದೀಪ :

ಚಿಗಳ್ಳಿ ಗ್ರಾಮದ ದೈವಜ್ಞೆ ಶಾರದಮ್ಮ ಎಂಬವರು 1979ರಲ್ಲಿ ಸೀಮೆಎಣ್ಣೆ ಹಾಕಿ ಒಂದು ಲಾಟೀನು ದೀಪವನ್ನು ಹಚ್ಚಿದ್ದರು. ಅದು ಒಂದು ದಿನ ಕಳೆದರೂ ಆರಿರಲಿಲ್ಲ. ನಿರಂತರವಾಗಿ ಉರಿಯತೊಡಗಿತು. ಒಂದು ವರ್ಷದ  ಬಳಿಕ 1980ರಲ್ಲಿ ಮತ್ತೊಂದು ದೀಪವನ್ನು ಹಚ್ಚಿದರು. 2ನೇ ದೀಪ ಕೂಡ ಆರದೇ ನಿರಂತರವಾಗಿ ಉರಿಯ ತೊಡಗಿತು.

2ನೇ ದೀಪ ಹಚ್ಚಿದ 10-15 ದಿನಗಳ ನಂತರ  3ನೇ ದೀಪ ಬೆಳಗಿಸಿದರು. ಆಶ್ವರ್ಯ ಎಂಬಂತೆ ಮೂರು ದೀಪಗಳು ನಿರಂತರವಾಗಿ ಉರಿಯ ತೊಡಗಿದವು ಎನ್ನಲಾಗಿದೆ. 1979 ರಿಂದ 2025ರ ಫೆಬ್ರವರಿ ವರೆಗೆ ನಿರಂತರವಾಗಿ ಉರಿದುಕೊಂಡು ಬಂದಿದ್ದ ದೀಪಗಳು ಈಗ ಏಕಾಏಕಿ ಆರಿ ಹೋಗಿದ್ದು ಆತಂಕ ಹುಟ್ಟಿಸಿದೆ

ಗ್ರಾಮಸ್ಥರಲ್ಲಿ ಭಯದ ಛಾಯೆ : 

ದೀಪ ಹಚ್ಚಿದ್ದ ಶಾರದಮ್ಮ ಕೆಲವು ವರ್ಷಗಳ ಬಳಿಕ ಇಹಲೋಕ ತ್ಯಜಿಸಿದರು. ಆದರೂ ದೀಪಗಳು ಇಲ್ಲಿವರೆಗೆ ಉರಿದುಕೊಂಡು ಬಂದಿದೆ. 14 ದಿನದ ಹಿಂದೆ ಈ ದೀಪದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅರ್ಚಕ ವೆಂಕಟೇಶ್ ನಿಧನರಾದರು. ಈ ಹಿನ್ನೆಲೆಯಲ್ಲಿ ಸೂತಕವಿದ್ದ ಕಾರಣ ದೇವಸ್ಥಾನದ ಗರ್ಭಗುಡಿ ಮುಚ್ಚಲಾಗಿತ್ತು. ಫೆ.5 ರಂದು ಪೂಜೆಗಾಗಿ ಗರ್ಭಗುಡಿ ತೆರೆದಾಗ ದೀಪ ಆರಿರುವುದು ಗಮನಕ್ಕೆ ಬಂದಿದೆ.

ಇದನ್ನೂ ಓದಿ : ಮಡಿಕೇರಿಯಲ್ಲಿ ಇನ್ನು ಮುಂದಕ್ಕೆ ನೀರಿನ ಬಾಟಲ್ ಸಿಗುವುದಿಲ್ಲ

ದೀಪ ಆರಿರುವುದು ಸಹಜವಾಗಿಯೇ ಭಕ್ತರಿಗೆ ನೋವುಣಿಸಿದೆ. ಇಷ್ಟು ದಿನ ಆರದ್ದು ಈಗ ಆರಿರುವುದು ಅಪಶಕುಶ ಎಂದು ಹೇಳಲಾಗುತ್ತಿದೆ. ರಾಜ್ಯ ಆಳುವವರಿಗೂ ಕೆಡುಕಾಗಲಿದೆ. ಗ್ರಾಮಕ್ಕೂ ಕೆಡುಕು ಎಂಬ ಆತಂಕ ಮನೆಮಾಡಿದೆ. ಹಾಗಾಗಿ ಸದ್ಯ ದೇವಸ್ಥಾನವನ್ನು ಮುಚ್ಚಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ.

Continue Reading

LATEST NEWS

ಗರ್ಭಿಣಿಗೆ ಲೈಂಗಿಕ ದೌರ್ಜನ್ಯ ಎಸಗಿ ಚಲಿಸುವ ರೈಲಿನಿಂದ ಎಸೆದ ಕಾಮುಕರು.. ಓರ್ವ ಆರೋಪಿ ಅರೆಸ್ಟ್

Published

on

ಚೆನ್ನೈ: 4 ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಇಬ್ಬರು ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಘಟನೆ ಚೆನ್ನೈನ ತಿರುಪತ್ತೂರು ಜಿಲ್ಲೆ ಜೋಲಾರ್‌ಪೆಟ್ಟೆಯಲ್ಲಿ ನಡೆದಿದೆ. ಈ ಘಟನೆಯ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇನ್ನೋರ್ವ ಆರೋಪಿಯನ್ನು ಪತ್ತೆ ಹಚ್ಚುತ್ತಿದ್ದಾರೆ.

ಮಹಿಳೆಯು ರೈಲಿನಲ್ಲಿ ಶೌಚಾಲಯಕ್ಕೆ ಹೋದಂತಹ ಸಂದರ್ಭದಲ್ಲಿ ಇಬ್ಬರು ಆರೋಪಿಗಳು ಆಕೆಯನ್ನು ಹಿಂಬಾಲಿಸಿ ಆತ್ಯಾಚಾರವೆಸಗಿದ್ದಾರೆ. ಬಳಿಕ ಮಹಿಳೆಯು ಜೋರು ಕಿರುಚಾಡಿದ್ದು, ಆಕೆಯನ್ನು ರೈಲಿನಿಂದ ತಳ್ಳಿದ್ದಾರೆ. ಮಹಿಳೆಯ ಕೈ-ಕಾಲು ಹಾಗೂ ತಲೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದೆ.

ಮಹಿಳೆಯು ಆಂಧ್ರಪ್ರದೇಶದಿಂದ ಚಿತ್ತೂರು ಕಡೆಗೆ ಪ್ರಯಾಣಿಸುತ್ತಿದ್ದಳು. ಜೋಲಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಒರ್ವ ಆರೋಪಿಯನ್ನು ಬಂಧಿಸಿದ್ದಾರೆ. ಹೇಮರಾಜ್ ಬಂಧಿತ ಆರೋಪಿಯಾಗಿದ್ದಾನೆ. ಇನ್ನೋರ್ವ ಆರೋಪಿಯನ್ನು ಹುಡುಕುತ್ತಿದ್ದು, ಸಿಸಿಟಿವಿ ಯಲ್ಲಿ ಪರಿಶೀಲಿಸಲಾಗುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page